Abhayahasta program to listen to people’s problems
ಗಂಗಾವತಿ : ಜನರ ಸಮಸ್ಯೆಗಳನ್ನು ಆಲಿಸಲು ಹಾಗೂ ತ್ವರಿತವಾಗಿ ಸಮಸ್ಯೆ ಬಗೆಹರಿಸಲು ಅಭಯಹಸ್ತ ಕಾರ್ಯಕ್ರಮ ನಿರಂತರವಾಗಿ ಮಾಡಲಾಗುತ್ತಿದೆ ಎಂದು
ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಶಿವರಾಜ ಎಸ್ ತಂಗಡಗಿ ಅವರು ಹೇಳಿದರು.
ತಾಲೂಕಿನ ಚಿಕ್ಕಜಂತಕಲ್ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆ ಮೈದಾನದಲ್ಲಿ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ ಹಾಗೂ ಜಿಲ್ಲಾ ಪಂಚಾಯತ ಕೊಪ್ಪಳ, ತಾಲೂಕು ಪಂಚಾಯತ್ ವತಿಯಿಂದ ಸೋಮವಾರ ಆಯೋಜಿಸಿದ್ದ ಅಭಯಹಸ್ತ ಕಾರ್ಯಕ್ರಮದಲ್ಲಿ ಮಾತನಾಡಿದರು.
ಅಭಯಹಸ್ತ ಕಾರ್ಯಕ್ರಮದಲ್ಲಿ ತಾಲೂಕು ಅಧಿಕಾರಿಗಳು ಇರ್ತಾರೆ, ಜನರ ಸಮಸ್ಯೆಗಳನ್ನು ಸ್ಥಳದಲ್ಲೇ ಪರಿಹಾರ ಮಾಡಿಕೊಳ್ಳಲು ಸಹಕಾರಿಯಾಗಿದೆ. ಕಾನೂನು ತೊಡಕು ಇರುವ ಸಮಸ್ಯೆಗಳ ಬಗೆಹರಿಸಲು ಸ್ವಲ್ಪ ಸಮಯಾವಕಾಶ ಹಿಡಿಯುತ್ತದೆ ಎಂದರು.
ವಿದ್ಯಾರ್ಥಿಗಳ ಬಸ್ ಸಮಸ್ಯೆ, ರಸ್ತೆ ಸಮಸ್ಯೆ, ಪಡಿತರ ವಿತರಣೆ ಸಮಸ್ಯೆ, ಚರಂಡಿ ಸಮಸ್ಯೆಗಳಿಗೆ ಸಚಿವರು ಸ್ಥಳದಲ್ಲೇ ಬಗೆಹರಿಸಿದರು. ಬಸ್ ಸಮಸ್ಯೆ ಕುರಿತು ಸಚಿವರು ಕೆಎಸ್ ಆರ್ ಟಿಸಿ ಮೇಲಧಿಕಾರಿಗಳಿಗೆ ದೂರವಾಣಿಯಲ್ಲಿ ಸಂಪರ್ಕಿಸಿ ಚಿಕ್ಕಜಂತಕಲ್ ಗ್ರಾಮದಲ್ಲಿ ಬಸ್ ನಿಲುಗಡೆಗೆ ಕ್ರಮವಹಿಸುವಂತೆ ಸೂಚಿಸಿದರು.
ಸಮುದಾಯ ಭವನ, ರಸ್ತೆ ಅಗಲೀಕರಣ, ಸಿಸಿ ರಸ್ತೆ, ಶಾಲೆ ಅಭಿವೃದ್ಧಿ ಕಾಮಗಾರಿಗಳು, ಮಂಗಗಳ ಸಮಸ್ಯೆ, ಕುಡಿವ ನೀರಿನ ಸಮಸ್ಯೆ, ಸಮುದಾಯ ಶೌಚಾಲಯ, ಹಕ್ಕುಪತ್ರ ವಿತರಣೆ ಸಮಸ್ಯೆ, ಸೇತುವೆ ನಿರ್ಮಾಣ ಬೇಡಿಕೆ ಸೇರಿ ಇತರೆ ಸಮಸ್ಯೆಗಳನ್ನು ಸಾರ್ವಜನಿಕರು ಸಚಿವರ ಗಮನಕ್ಕೆ ತಂದರು. ಈ ವೇಳೆ
ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್ ತಂಗಡಗಿ ಅವರು ಮಾತನಾಡಿ, ಆಯಾ ಇಲಾಖೆ ಅಧಿಕಾರಿಗಳಿಗೆ ಸಮಸ್ಯೆಗಳನ್ನು ಬಗೆಹರಿಸಲು ಸೂಚಿಸಿದರು.
ಎಲ್ಲೆಲ್ಲಿ ಕಾರ್ಯಕ್ರಮ :
ತಾಲೂಕಿನ ಚಿಕ್ಕಜಂತಗಲ್ ಗ್ರಾಪಂ ವ್ಯಾಪ್ತಿಯ ಹಳೇ ಅಯೋಧ್ಯ, ಹೊಸ ಅಯೋಧ್ಯ ಹಾಗೂ ಚಿಕ್ಕಜಂತಕಲ್ ಗ್ರಾಮದಲ್ಲಿ ಅಭಯಹಸ್ತ ಕಾರ್ಯಕ್ರಮ ನಡೆದವು.
ಗ್ಯಾರಂಟಿ ಯೋಜನೆ ಜಿಲ್ಲಾ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ್, ಜಿಪಂ ಮಾಜಿ ಸದಸ್ಯರಾದ ಅಮರೇಶ ಗೋನಾಳ, ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷರಾದ ಶರಣೇಗೌಡ ಮಾಲಿ ಪಾಟೀಲ್, ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಲಕ್ಷ್ಮೀದೇವಿ, ಗ್ರಾಪಂ ಅಧ್ಯಕ್ಷರಾದ ನೇತ್ರಾವತಿ ವೆಂಕೋಬ ಬಂಗಿ, ಉಪಾಧ್ಯಕ್ಷರಾದ ನಾಗಪ್ಪ ಬಲ್ಕುಂದಿ, ಗ್ರಾಪಂ ಪಿಡಿಓ ಮಲ್ಲಿಕಾರ್ಜುನ ಕಡಿವಾಳ, ಗ್ರಾಪಂ ಕಾರ್ಯದರ್ಶಿ ರವೀಂದ್ರ ಕುಲಕರ್ಣಿ, ಗ್ಯಾರಂಟಿ ಸಮಿತಿ ತಾಲೂಕು ಅಧ್ಯಕ್ಷರಾದ ವೆಂಕಟೇಶ ಬಾಬು, ವಿವಿಧ ಇಲಾಖೆಗಳ ಅನುಷ್ಠಾನ ಅಧಿಕಾರಿಗಳು, ಗ್ರಾಪಂ ಎಲ್ಲ ಸದಸ್ಯರು ಹಾಗೂ ಗ್ಯಾರಂಟಿ ಯೋಜನೆ ಸಮಿತಿ ಸದಸ್ಯರು, ಸಿಬ್ಬಂದಿಗಳು, ಮುಖಂಡರು ಭಾಗವಹಿಸಿದ್ದರು.