Breaking News

ಸಚಿವರಿಂದ ಭಾರತ್ ನಿರ್ಮಾಣ ಸೇವಾ ಕೇಂದ್ರ ಉದ್ಘಾಟನೆ

Bharat Nirman Seva Kendra inaugurated by the Minister

ಜಾಹೀರಾತು

ಗಂಗಾವತಿ : ತಾಲೂಕಿನ ಚಿಕ್ಕಜಂತಗಲ್ ಗ್ರಾಮದಲ್ಲಿ ನಿರ್ಮಾಣಗೊಂಡ ಭಾರತ್ ನಿರ್ಮಾಣ ಸೇವಾ ಕೇಂದ್ರ ಹಾಗೂ ಗ್ರಾಮ ಪಂಚಾಯತ್ ಗ್ರಂಥಾಲಯ ಅರಿವು ಕೇಂದ್ರವನ್ನು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಶಿವರಾಜ ಎಸ್ ತಂಗಡಗಿ ಅವರು ಉದ್ಘಾಟನೆ ಸೋಮವಾರ ನೆರವೇರಿಸಿದರು.

ಉದ್ಯೋಗ ಖಾತರಿ ಯೋಜನೆಯ 28 ಲಕ್ಷ ರೂ. ಅನುದಾನದಲ್ಲಿ ಗ್ರಾಮ ಪಂಚಾಯತಿ ಆವರಣದಲ್ಲಿ ಭಾರತ್ ನಿರ್ಮಾಣ ಸೇವಾ ಕೇಂದ್ರ ನಿರ್ಮಿಸಲಾಗಿದೆ. ತಾಲೂಕು ಪಂಚಾಯತ್ ಅನಿರ್ಭಂದಿತ 13 ಲಕ್ಷ ರೂ. ಅನುದಾನದಲ್ಲಿ ಗ್ರಾಪಂ ಗ್ರಂಥಾಲಯ ಅರಿವು ಕೇಂದ್ರ ನಿರ್ಮಾಣ ಮಾಡಲಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಶಿವರಾಜ ಎಸ್ ತಂಗಡಗಿ ಅವರು ಮಾತನಾಡಿ, ಗ್ರಾಪಂ ಕಾರ್ಯಾಲಯಕ್ಕೆ ಹೊಸ ಕಟ್ಟಡ ನಿರ್ಮಾಣವಾಗಿದೆ. ಜೊತೆಗೆ ಹೊಸ ಗ್ರಂಥಾಲಯ ಕಟ್ಟಡ ಉದ್ಘಾಟನೆಗೊಂಡಿದ್ದು, ಎಲ್ಲರೂ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಗ್ಯಾರಂಟಿ ಯೋಜನೆ ಜಿಲ್ಲಾ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ್, ಜಿಪಂ ಮಾಜಿ ಸದಸ್ಯರಾದ ಅಮರೇಶ ಗೋನಾಳ, ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷರಾದ ಶರಣೇಗೌಡ ಮಾಲಿ ಪಾಟೀಲ್, ತಾಪಂ ಕಾರ್ಯನಿರ್ವಾಹಕ ಅಧಿಕಾರೊಗಳಾದ ಲಕ್ಷ್ಮೀದೇವಿ, ಗ್ರಾಪಂ ಅಧ್ಯಕ್ಷರಾದ ನೇತ್ರಾವತಿ ವೆಂಕೋಬ ಬಂಗಿ,  ಉಪಾಧ್ಯಕ್ಷರಾದ ನಾಗಪ್ಪ ಬಲ್ಕುಂದಿ, ಗ್ರಾಪಂ ಪಿಡಿಓ ಮಲ್ಲಿಕಾರ್ಜುನ ಕಡಿವಾಳ, ಗ್ರಾಪಂ ಕಾರ್ಯದರ್ಶಿ ರವೀಂದ್ರ ಕುಲಕರ್ಣಿ,
ವಿವಿಧ ಇಲಾಖೆಗಳ ಅನುಷ್ಠಾನ ಅಧಿಕಾರಿಗಳು, ಗ್ರಾಪಂ ಎಲ್ಲ ಸದಸ್ಯರು ಹಾಗೂ ಗ್ಯಾರಂಟಿ ಯೋಜನೆ ಸಮಿತಿ ಸದಸ್ಯರು, ಸಿಬ್ಬಂದಿಗಳು, ಗ್ರಾಮದ ಮುಖಂಡರು ಇದ್ದರು.

About Mallikarjun

Check Also

ಎರಡು ತಿಂಗಳ ಅನಾಥ ಮಗುವನ್ನು ರಕ್ಷಿಸಿ ನಿಯಮಾನುಸಾರ ಇಲಾಖೆಗೆ ಒಪ್ಪಿಸಿದ ಕಾರುಣ್ಯಾಶ್ರಮ.

Karunyashram rescued a two-month-old orphan and handed it over to the department as per rules. …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.