Breaking News

ಮುಖ್ಯಮಂತ್ರಿಗಳ ಕಚೇರಿಯಿಂದ ಮಾಧ್ಯಮ ಪ್ರಕಟಣೆ

Media release from Chief Minister’s Office

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಪಲಕನಮರಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ವಂದಲಿ ಗ್ರಾಮದಲ್ಲಿನ ಶುದ್ಧ ಕುಡಿಯುವ ನೀರಿನ ಘಟಕ ದುರಸ್ತಿಯಲ್ಲಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿತ್ತು. ಇದನ್ನು ಗಮನಿಸಿದ ಮುಖ್ಯಮಂತ್ರಿಗಳ ಕಚೇರಿಯ ಕುಂದುಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದರು.

ಸದರಿ ಶುದ್ಧ ಕುಡಿಯುವ ನೀರಿನ ಘಟಕದ ಕಾರ್ಯಾಚರಣೆ ಮತ್ತು ನಿರ್ವಹಣೆಯನ್ನು ಗ್ರಾಮ ಪಂಚಾಯಿತಿಯವರು ನಿರ್ವಹಿಸುತ್ತಿದ್ದಾರೆ. ಈ ನೀರಿನ ಘಟಕವನ್ನು ತ್ವರಿತವಾಗಿ ದುರಸ್ತಿಗೊಳಿಸಿ ಕಾರ್ಯಾಚರಣೆಯಲ್ಲಿಡಲು ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ರಾಯಚೂರು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಅಭಿಯಂತರರು ತಿಳಿಸಿದ್ದಾರೆ.

About Mallikarjun

Check Also

ಜಿಲ್ಲಾ ಕಾಂಗ್ರೆಸ್‌ಗೆ ಕಾರ್ಯದರ್ಶಿಯಾಗಿ ವಿಶಾಲಾಕ್ಷಿ ನೇಮಕ

Vishalakshi appointed as secretary of District Congress ಕೊಪ್ಪಳ: ತಾಲೂಕಿನ ಕಿನ್ನಾಳ ಗ್ರಾಮದ ವಿಶಾಲಾಕ್ಷಿ ವಿರೇಶ ತಾವರಗೇರಿ ಅವರನ್ನು …

Leave a Reply

Your email address will not be published. Required fields are marked *