Kittoor Chennammaji Vijaya Jyoti to Raichur; Jyoti given grand welcome by Tehsildar Suresh Verma
ರಾಯಚೂರಿಗೆ ಕಿತ್ತೂರ ಚೆನ್ನಮ್ಮಾಜಿ ವಿಜಯ ಜ್ಯೋತಿ; ಚೆನ್ನಮ್ಮ ಪುತ್ಥಳಿಗೆ ಪುಷ್ಪಹಾರ ಅರ್ಪಣೆ
ವಿಜಯ ಜ್ಯೋತಿಗೆ ತಹಶೀಲ್ದಾರ್ ಸುರೇಶ ವರ್ಮ ಅವರಿಂದ ಅದ್ದೂರಿ ಸ್ವಾಗತ
ರಾಯಚೂರು,ಅ.13,(ಕರ್ನಾಟಕ ವಾರ್ತೆ):- ಕಿತ್ತೂರು ಉತ್ಸವದ ಪ್ರಯುಕ್ತ ರಾಜ್ಯಾದಂತ್ಯ ಹಮ್ಮಿಕೊಂಡಿರುವ ವಿಜಯ ಜ್ಯೋತಿ ಯಾತ್ರೆಯು ಭಾನುವಾರ ರಾಯಚೂರು ನಗರ ತಲುಪಿತು.
ನಗರದ ಬಸವೇಶ್ವರ ವೃತ್ತದಲ್ಲಿ ವಿಜಯ ಜ್ಯೋತಿಗೆ ರಾಯಚೂರು ತಹಶೀಲ್ದಾರ್ ಸುರೇಶ ವರ್ಮ ಅವರು ಸ್ವಾಗತಿಸಿ, ಪೂಜೆ ಸಲ್ಲಿಸಿದರು.
ಕಿತ್ತೂರ ಚೆನ್ನಮ್ಮಾಜಿ ವಿಜಯ ಜ್ಯೋತಿಗೆ ತಹಶೀಲ್ದಾರ್ ಸ್ವಾಗತಿಸಿ, ರಥದಲ್ಲಿದ್ದ ರಾಣಿ ಚೆನ್ನಮ್ಮ ಪುತ್ಥಳಿಗೆ ಪುಷ್ಪಹಾರ ಅರ್ಪಿಸಿ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ಈ ವೇಳೆ ಮಾತನಾಡಿ, ಕಿತ್ತೂರು ರಾಣಿ ಚೆನ್ನಮ್ಮ ಅವರ ತ್ಯಾಗ, ಶೌರ್ಯ ಮತ್ತು ದೇಶ ಭಕ್ತಿಯು ಇಂದಿನ ಯುವ ಜನಾಂಗಕ್ಕೆ ಸ್ಫೂರ್ತಿಯಾಗಬೇಕು. ಬ್ರಿಟೀಷರ ವಿರುದ್ಧ ಹೋರಾಡಿದ ದಿಟ್ಟ ಮಹಿಳೆ. ರಾಯಚೂರು ನಗರದ ವಿವಿಧೆಡೆ ಯಾತ್ರೆ ಸಂಚರಿಸಲಿದೆ. ಅ.2ರಂದು ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಯಾತ್ರೆಗೆ ಚಾಲನೆ ನೀಡಿದ್ದಾರೆ. ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ ಅ.23 ರಿಂದ 25ರವರೆಗೆ ಕಿತ್ತೂರು ಉತ್ಸವ ಏರ್ಪಡಿಸಲಾಗಿದೆ ಎಂದರು.
ಕಲಾ ತಂಡಗಳೊAದಿಗೆ ಸಾಗಿದ ವಿಜಯ ಜ್ಯೋತಿ ಯಾತ್ರವು ನಗರದ ಚಂದ್ರಮೌಳೇಶ್ವರ ವೃತ್ತದ ಮಾರ್ಗವಾಗಿ ಯಾದಗಿರಿಗೆ ತಲುಪುತ್ತದೆ.
ಬೆಳಗಾವಿ ಜಿಲ್ಲೆ ಕಿತ್ತೂರಿನಲ್ಲಿ ಅ.23 ರಿಂದ 25ರವರೆಗೆ ನಡೆಯಲಿರುವ ಕಿತ್ತೂರು ಉತ್ಸವ ಪ್ರಯುಕ್ತ ರಾಜ್ಯಾದಂತ್ಯ ಸಂಚರಿಸುವ ಈ ವಿಜಯ ಜ್ಯೋತಿ ಯಾತ್ರೆ ಕೊಪ್ಪಳ ಜಿಲ್ಲೆಯಿಂದ ರಾಯಚೂರು ಜಿಲ್ಲೆಗೆ ತಲುಪಿದ್ದು, ದೇವಸೂಗೂರು ಮಾರ್ಗವಾಗಿ ಜಿಲ್ಲೆಯಿಂದ ಯಾದಗಿರಿ ಜಿಲ್ಲೆಗೆ ಬಿಳ್ಕೊಡಲಾಯಿತು.
ಇದೇ ಸಂದರ್ಭದಲ್ಲಿ ರಾಯಚೂರು ತಾಲೂಕು ಪಂಚಾಯತ್ ಕಾರ್ಯನಿರ್ವಹಕ ಅಧಿಕಾರಿ ಚಂದ್ರಶೇಖರ ಪವಾರ್, ರಾಯಚೂರು ನಗರಸಭೆಯ ಪೌರಾಯಕ್ತರಾದ ಗುರುಸಿದ್ದಯ್ಯಸ್ವಾಮಿ ಹಿರೇಮಠ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಇಸ್ಮಾಯಿಲ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಸಹಕಾರ್ಯದರ್ಶಿಯಾದ ಡಾ.ದಂಡಪ್ಪ ಬಿರಾದಾರ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಗೂ ಕಲಾ ತಂಡಗಳ ಪ್ರತಿನಿಧಿಗಳು ಇದ್ದರು.