Scan and Submit Narega Work Demand : Vaijnath Saranga Math
ಉದ್ಯೋಗ ಖಾತ್ರಿ ನಡಿಗೆ ಸಬಲತೆಯಡೆಗೆ ಅಭಿಯಾನಕ್ಕೆ ಚಾಲನೆ
ಕುಕನೂರ : ತಾಲೂಕಿನ ಮಸಬಹಂಚಿನಾಳ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ, 2025-26 ನೇ ಸಾಲಿನ ಕ್ರಿಯಾ ಯೋಜನೆ ತಯಾರಿಕೆ ಪ್ರಕ್ರಿಯೆ ಪ್ರಾರಂಭಿಸಲಾಯಿತು.
ನಂತರದಲ್ಲಿ ಪಂಚಾಯತಿ ಅಭಿವೃದ್ಧಿ ಅಧಿಕಾರಿ ವೈಜನಾಥ ಸಾರಂಗಮಠ ಮಾತನಾಡಿ, ಪ್ರತಿ ವರ್ಷದಂತೆ ಇದೇ ಅಕ್ಟೋಬರ್2 ರಿಂದ ಕ್ರಿಯಾ ಯೋಜನೆ ತಯಾರಿಕೆ ಪ್ರಕ್ರಿಯೇ ಪ್ರಾರಂಭವಾಗಿದ್ದು, ಅದರಂತೆ ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಮತ್ತು ಗ್ರಾಮಸ್ಥರು ನರೇಗಾ ಕಾಮಗಾರಿ ಬೇಡಿಕೆಯನ್ನು ಕ್ಯೂ ಆರ್ ಕೋಡ್ ಸ್ಕಾನ್ ಮಾಡಿ ಸಲ್ಲಿಸಬಹುದು ಇದರ ಯೋಜನೆಯ ಸದುಪಯೋಗವನ್ನು ಅವಶ್ಯವಿರುವ ಫಲಾನುಭವಿಗಳು ಪಡೆದುಕೊಳ್ಳಬಹುದು ಎಂದರು.
ಒಬ್ಬ ಫಲಾನುಭವಿ 3 ಕಾಮಗಾರಿಗಳ ವರೆಗೆ ಅರ್ಜಿ ಸಲ್ಲಿಸಬಹುದು.
ಈ ಕಾಮಗಾರಿಯನ್ನು ಫಲಾನುಭವಿಗಳು ತಮ್ಮ ಮೋಬೈಲ್ ನಲ್ಲಿಯೇ ಅರ್ಜಿ ಸಲ್ಲಿಸಬಹುದು. ಇದರಿಂದ ಫಲಾನುಭವಿ ನೇರವಾಗಿ ಅರ್ಜಿ ಸಲ್ಲಿಸುವುದರಿಂದ ಮಧ್ಯವರ್ತಿ ಗಳ ಇಲ್ಲದೇ ಕಾಮಗಾರಿ ಕ್ರಿಯಾ ಯೋಜನೆಯಾಗುತ್ತದೆ ಎಂದು ತಿಳಿಸಿದರು.
ಈ ಎಲ್ಲಾ ಕಾಮಗಾರಿಗಳನ್ನು ಸಂಗ್ರಹಿಸಿ ಆಧ್ಯತಾ ಪಟ್ಟಿ ತಯಾರಿಸಿ ಗ್ರಾಮ ಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆಯಲಾಗುತ್ತದೆ. ಇದರಿಂದಾಗಿ ನೈಜ ಫಲಾನುಭವಿಗಳಿಗೆ ಅವಕಾಶ ಸಿಗುವಂತಾಗಿದೆ ಎಂದರು.
ನಂತರ ತಾಲೂಕ ಐ.ಇ.ಸಿ ಸಂಯೋಜಕ ಲಕ್ಷ್ಮಣ ಕೆರಳ್ಳಿ ಮಾತನಾಡಿ ಅಕ್ಟೋಬರ್ ತಿಂಗಳಾಂತ್ಯದ ವರೆಗೆ ವಿಶೇಷ ಐ.ಇ.ಸಿ ಅಭಿಯಾನದಡಿಯಲ್ಲಿ ಮನೆ ಮನೆ ಭೇಟಿ ಮಾಡಿ ಕಾಮಗಾರಿ ಬೇಡಿಕೆ ಪೆಟ್ಟಿಗೆಯಲ್ಲಿ ಕಾಮಗಾರಿಗಳನ್ನು ಸಂಗ್ರಹಿಸಲಾಗುತ್ತಿದ್ದು, ನರೇಗಾ ಫಲಾನುಭವಿಗಳು ಕಾಮಗಾರಿಗಳನ್ನು ಪೆಟ್ಟಿಗೆಯಲ್ಲಿ ಹಾಕಬಹುದು, ಸದರಿ ಕಾಮಗಾರಿಗಳನ್ನು ತಾಂತ್ರಿಕ ಸಂಯೋಜಕರು ಪೂರ್ವಭಾವಿಯಾಗಿ ವೀಕ್ಷಣೆ ಮಾಡಿ ಅಂದಾಜು ಪತ್ರಿಕೆ ತಯಾರಿಸುತ್ತಾರೆ ಎಂದರು.
ಅದೇ ಕಾಮಗಾರಿಯನ್ನು ಕ್ರಿಯಾ ಯೋಜನೆಯಲ್ಲಿ ಇಡುವುದರಿಂದ ಎಲ್ಲಾ ಕಾಮಗಾರಿಗಳು ಕಡ್ಡಾಯವಾಗಿ ಅನುಷ್ಠಾನ ಮಾಡಬಹುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಸದಸ್ಯರಾದ ಆನಂದಪ್ಪ ಮಾದಿನೂರ, ಕ್ಲಸ್ಟರ್ ಸುಪರ್ ವೈಜರ್ ಪೂಜಾ ನಾಯಕ್, ಗವಿಸಿದ್ದೇಶ್ವರ GPLF ಪದಾಧಿಕಾರಿಗಳು, MBK, LCRP, ಕೃಷಿ ಸಖಿ, ಪಶು ಸಖಿ, ಬಿಸಿ ಸಖಿ ಹಾಗೂ ಗ್ರಾಮ ಪಂಚಾಯತಿ ಸಿಬ್ಬಂದಿಗಳು ಗ್ರಾಮಸ್ಥರು ಸ್ವ ಸಹಾಯ ಸಂಘದ ಮಹಿಳೆಯರು ಹಾಜರಿದ್ದರು.