Breaking News

ಐದುಗ್ಯಾರಂಟಿಯೋಜನೆ ಸಮರ್ಪಕವಾಗಿ ತಲುಪಲಿರಾಜ್ಯ ಗ್ಯಾಂರಟಿ ಯೋಜನೆಗಳ ಅನುಷ್ಠಾನ ಜಿಲ್ಲಾಧ್ಯಕ್ಷ ಕುರಿ ಶಿವಮೂರ್ತಿ ಹೇಳಿಕೆ

District President Kuri Shivamurthy’s statement that the implementation of state guarantee schemes should reach the five guarantee scheme adequately

ಜಾಹೀರಾತು



ಕೊಟ್ಟೂರು: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪಿಸುವ ನಿಟ್ಟಿನಲ್ಲಿ ಸಂಬಂಧಿಸಿದ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ರಾಜ್ಯ ಗ್ಯಾಂರಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ವಿಜಯನಗರ ಜಿಲ್ಲಾಧ್ಯಕ್ಷರಾದ ಶ್ರೀ ಕುರಿ ಶಿವಮೂರ್ತಿ ಅವರು ಹೇಳಿದರು.
ಕೊಟ್ಟೂರು ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ತಾಲೂಕು ಮಟ್ಟದ ಐದು ಗ್ಯಾಂರಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
ಅನ್ನಭಾಗ್ಯ, ಗಹಲಕ್ಷ್ಮೀ, ಮಹಿಳೆಯರ ಉಚಿತ ಬಸ್ ಪ್ರಯಾಣ ಸೇರಿದಂತೆ ಐದು ಗ್ಯಾರಂಟಿ ಯೋಜನೆಗಳು ಶೇ.100% ಪ್ರಗತಿ ಸಾಧಿಸಬೇಕು. ಈ ನಿಟ್ಟಿನಲ್ಲಿ ಜನಪ್ರತಿನಿಧಿಗಳು, ಅಧಿಕಾರಿ ವರ್ಗದವರು ಶ್ರಮವಹಿಸುವುದು ಅಗತ್ಯವಾಗಿದೆ ಎಂದರು.
ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದಂತೆ ಪ್ರತಿ ತಿಂಗಳು ಎರಡು ಸಭೆಗಳನ್ನು ನಡೆಸಿ ಮಾಹಿತಿ ನೀಡುವಂತೆ ಅಧಿಕಾರಿಗಳಿಗ ಸೂಚಿಸಿದರು.
ಯೋಜನೆ ಜಾರಿಯಾದಾಗಿಬಿಂದ ಇಲ್ಲಿಯ ವರೆಗಿನ ಪ್ರಗತಿಯ ಸಮಗ್ರ ವರದಿಯನ್ನು ಸಲ್ಲಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ ಅವರು ಸರ್ಕಾರದ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪಿಸಲು ಕ್ರಮವಹಿಸಬೇಕು ಎಂದು ತಿಳಿಸಿದರು.
ತಾಲೂಕು ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ಬಿ.ಆನಂದಕುಮಾರ್, ಸಹಾಯಕ ನಿರ್ದೇಶಕರು (ಗ್ರಾ.ಉ) ಶ್ರೀ ಎಚ್.ವಿಜಯಕುಮಾರ್,
ಗ್ಯಾಂರಟಿ ಯೋಜನೆಗಳ ಜಿಲ್ಲಾ ಉಪಾಧ್ಯಕ್ಷರಾದ ಸೊನ್ನದ ಗುರಬಸವರಾಜ, ಸಮಿತಿಯ ಸದಸ್ಯರಾದ, ಪರಶುರಾಮ, ಬಸವರಾಜ ಗೌಡರ, ಜೀಲಾನ ಅವರು, ಐದು ಗ್ಯಾಂರಟಿ ಯೋಜನೆಗಳ ತಾಲ್ಲೂಕು ಸಂಬಂಧಪಟ್ಟ ಅಧಿಕಾರಿಗಳು, ತಾಪಂ ವ್ಯವಸ್ಥಾಪಕರಾದ ಶ್ರೀಮತಿ ಪುಷ್ಪಲತಾ ಅವರು ಪಾಲ್ಗೊಂಡಿದ್ದರು.

About Mallikarjun

Check Also

ಸುಳ್ವಾಡಿ ವಿಷ ಪ್ರಸಾದ ಪ್ರಕರಣ ಸಾವಿಗೆ ಕಾರಣರಾದ :ಇಮ್ಮಡಿ ಮಹದೇವಸ್ವಾಮಿ ಜಾಮೀನು ಅರ್ಜಿ ಮತ್ತೆ ವಜಾ.

Sulvadi Visha Prasad case: Cause of death: Immadi Mahadevaswamy’s bail application dismissed again. ವರದಿ : …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.