Get help from Narega and change your life: Basavaraja
ಮಾನ್ವಿ : ಮಹಾತ್ಮ ಗಾಂಧಿ ನರೇಗಾ ಯೋಜನೆಯ 2025-26 ನೇ ಸಾಲಿನ ಕಾರ್ಮಿಕ ಆಯವ್ಯಯ ತಯಾರಿಸುವ ಉದ್ದೇಶದಿಂದ ಹಾಗೂ ಕ್ರಿಯಾಯೋಜನೆ ತಯಾರಿಸುವ ಉದ್ದೇಶದಿಂದ ಗಾಂಧಿ ಜಯಂತಿ ದಿನಾಚರಣೆ ಅಂಗವಾಗಿದ್ದು.
ತಾಲೂಕಿನ ಪೋತ್ನಾಳ ಗ್ರಾಮ ಪಂಚಾಯಿತಿಯಲ್ಲಿ “ಉದ್ಯೋಗ ಖಾತರಿ ನಡಿಗೆ ಸಬಲತೆಯೆಡೆಗೆ “ಅಭಿಯಾನಕ್ಕೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಬಸವರಾಜ ರವರು ಮೂಲಕ ಚಾಲನೆ ನೀಡಿ ಮಾತನಾಡಿದ ಅವರು ಗ್ರಾಮೀಣ ಪ್ರದೇಶದ ಕೂಲಿಕಾರರು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ವೈಯಕ್ತಿಕ ಕಾಮಗಾರಿಗಳಿಗೆ ಹೆಚ್ಚು ಒತ್ತು ನೀಡಿ,ಆರ್ಥಿಕ ನೆರವು ಪಡೆದು ಬದುಕು ಬದಲಾಯಿಸಿಕೊಳ್ಳುವ ಮೂಲಕ ಆರ್ಥಿಕ ವಾಗಿ ಸದೃಢ ಆಗಬೇಕು ಮತ್ತು ಗ್ರಾಮೀಣ ಪ್ರದೇಶದ ಕುಟುಂಬಕ್ಕೆ ವರ್ಷದಲ್ಲಿ 100 ದಿನಗಳ ಕೆಲಸ ಖಾತ್ರಿ , ಗಂಡು – ಹೆಣ್ಣಿಗೆ ಸಮಾನ ಕೂಲಿ ಪ್ರತಿ ದಿನಕ್ಕೆ -349,ಸರಕಾರ ನಿಗದಿ ಪಡಿಸಿದ ಕೆಲಸದ ಅಳತೆ ನಿಗದಿ ,ಒಂದು ದಿನದ ಕೂಲಿ ಪಡೆಯಲು ಮಾಡಬೇಕಾದ ಕೆಲಸದ ಪ್ರಮಾಣ ಮತ್ತು ಕೆಲಸದ ಅವಧಿ, ಯೋಜನೆಯಡಿಯಲ್ಲಿ ದೊರೆಯುವ ವಯಕ್ತಿಕ ಸೌಲಭ್ಯಗಳು ಮತ್ತು ಅರ್ಹತೆಗಳು,ಕಾಮಗಾರಿ ಪ್ರಮಾಣದಲ್ಲಿ ಹಿರಿಯ ನಾಗರಿಗರಿಗೆ ಮತ್ತು ವಿಶೇಷ ಚೇತನರಿಗೆ ಶೇ. 50 ರಷ್ಟು ರಿಯಾಯಿತಿ. ಕಾಮಗಾರಿ ಸ್ಥಳದಲ್ಲಿ ಒದಗಿಸಬೇಕಾದ ಸೌಲಭ್ಯಗಳು.. ಹಾಗೂ ಇತರೆ ವಿಷಯಗಳ ವಿಶೇಷ ಗ್ರಾಮ ಸಭೆಯಲ್ಲಿ ಮಾಹಿತಿಯನ್ನು ನೀಡಿದರು,
ನಂತರದಲ್ಲಿ ಮಾತನಾಡಿದ ಈರೇಶ ತಾಲ್ಲೂಕು ಐಇಸಿ ಸಂಯೋಜರು ತಾಲ್ಲೂಕು ಪಂಚಾಯತ ಮಾನವಿ ರವರು ಮನೆ-ಮನೆ ಬೇಟಿ,ವಾಹನದ ಮೂಲಕ ಪ್ರಚಾರ,ಹಾಗೂ ವೈಯುಕ್ತಿಕ ಕಾಮಗಾರಿಗಳು ಬೇಡಿಕೆ ಪೆಟ್ಟಿಗೆಯಲ್ಲಿ ತಮ್ಮಗೆ ಬೇಕಾದ ಕಾಮಗಾರಿ ಬರೆದು ಸಲ್ಲಿಸಲು ದಿನಾಂಕ: 31-10-2024 ರ ವರೆಗೆ ಅವಕಾಶ ನೀಡಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕಾರ್ಯದರ್ಶಿ ಬಸವರಾಜ,ರಮೇಶ ಎಸ್,ಡಿ,ಎ, ಬಿಎಪ್ಟಿ ಯಲ್ಲಪ್ಪ,ಡಿಇಒ ರಂಜಿತ ಹಾಗೂ ನಾಗರಾಜ,ಗ್ರಾಮ ಪಂಚಾಯತಿ ಸಿಬ್ಬಂದಿಗಳು, ಗ್ರಾಮಸ್ಥರು ಹಾಜರಿದ್ದರು,