Breaking News

2024ನೇ ಸಾಲಿನ ಸಂಸ್ಕೃತಿ – ಸಂಗಮ ಪ್ರಶಸ್ತಿ ಪ್ರದಾನ ಸಮಾರಂಭ

Culture 2024 – Confluence Award Ceremony

ಜಾಹೀರಾತು


ಬೆಂಗಳೂರು, ಅ,16; 2024 ನೇ ಸಾಲಿನ ಸಂಸ್ಕೃತಿ – ಸಂಗಮ ಪ್ರಶಸ್ತಿ ಪ್ರದಾನ ಸಮಾರಂಭ ಈ ತಿಂಗಳ 20 ರಂದು ಗಾಂಧಿ ಭವನದಲ್ಲಿ ನಡೆಯಲಿದೆ ಎಂದು ನಿವೃತ್ತ ಐಎಎಸ್ ಅಧಿಕಾರಿ ಡಾ. ಸಿ. ಸೋಮಶೇಖರ್ ತಿಳಿಸಿದ್ದಾರೆ.


ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಚನ ಸಾಹಿತ್ಯ ಕ್ಷೇತ್ರದಲ್ಲಿನ ಜೀವಮಾನ ಸಾಧನೆಗಾಗಿ ಡಾ. ಬಸವರಾಜ ಸಬರದ, ದಾಸ ಸಾಹಿತ್ಯ ಕ್ಷೇತ್ರದಲ್ಲಿನ ಜೀವಮಾನ ಸಾಧನೆಗಾಗಿ ಡಾ. ಕೃಷ್ಣ ಕೊಲ್ಹಾರ ಕುಲಕರ್ಣಿ, ಜಾನಪದ ಸಾಹಿತ್ಯ ಕ್ಷೇತ್ರದಲ್ಲಿನ ಜೀವಮಾನ ಸಾಧನೆಗಾಗಿ ಡಾ. ಬಸವರಾಜ ನೆಲ್ಲಿಸ, ಸಂಗೀತ ಕ್ಷೇತ್ರದಲ್ಲಿನ ಜೀವಮಾನ ಸಾಧನೆಗಾಗಿ ಡಾ. ಜಯದೇವಿ ಜಂಗಮಶೆಟ್ಟಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದರು.


ನಗರದ ಗಾಂಧಿ ಭವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರತಿಷ್ಠಿತ ” ಸಂಸ್ಕೃತಿ – ಸಂಗಮ” ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಬೆಳಗಾವಿ ಜಿಲ್ಲೆಯ ನಾಗನೂರು ಶ್ರೀ ರುದ್ರಾಕ್ಷಿ ಮಠದ ಡಾ. ಅಲ್ಲಮ ಪ್ರಭು ಮಹಾ ಸ್ವಾಮೀಜಿ, ಕೇಂದ್ರದ ಜಲ ಶಕ್ತಿ ಹಾಗೂ ರೈಲ್ವೆ ಖಾತೆಯ ರಾಜ್ಯ ಸಚಿವ ವಿ.ಸೋಮಣ್ಣನವರು ಈ ಸಮಾರಂಭದ ಉದ್ಘಾಟನೆ ನೆರವೇರಿಸಿ ಪ್ರತಿಷ್ಠಿತ ಸಂಸ್ಕೃತಿ ಸಂಗಮ ಪ್ರಶಸ್ತಿಗಳನ್ನು ಪ್ರದಾನ ಮಾಡಲಿದ್ದಾರೆ.
ಹಿರಿಯ ಸಾಹಿತಿ ನಾಡೋಜ ಡಾ. ಹಂ.ಪ.ನಾಗರಾಜಯ್ಯ ಭಾಗವಹಿಸಲಿರುವ ಕಾರ್ಯಕ್ರಮದಲ್ಲಿ ಪರಿಚಯಾತ್ಮಕ ಸಂಸ್ಕೃತಿ ಸಂಗಮ ವಿಶೇಷ ಸಂಚಿಕೆಯನ್ನು ಕಿರುತರೆ ನಿರ್ದೇಶಕ ಟಿ. ಎನ್. ಸೀತಾರಂಬಿಡುಗಡೆ ಮಾಡಲಿದ್ದಾರೆ. ಕಾರ್ಯಕ್ರಮಕ್ಕೂ ಮುನ್ನ ಬೆಳಗ್ಗೆ 10 ಗಂಟೆಗೆ ಪ್ರಖ್ಯಾತ ಹಿಂದುಸ್ತಾನಿ ಗಾಯಕರಾದ ಡಾ. ಜಯದೇವಿ ಜಂಗಮ ಶೆಟ್ಟಿ ಅವರಿಂದ ವಚನ ಗಾಯನ ಕಾರ್ಯಕ್ರಮ ನಡೆಯಲಿದೆ ಎಂದರು.

About Mallikarjun

Check Also

ಸುಳ್ವಾಡಿ ವಿಷ ಪ್ರಸಾದ ಪ್ರಕರಣ ಸಾವಿಗೆ ಕಾರಣರಾದ :ಇಮ್ಮಡಿ ಮಹದೇವಸ್ವಾಮಿ ಜಾಮೀನು ಅರ್ಜಿ ಮತ್ತೆ ವಜಾ.

Sulvadi Visha Prasad case: Cause of death: Immadi Mahadevaswamy’s bail application dismissed again. ವರದಿ : …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.