
Didier visit to Sindhnoor city by District Collector, inspection at various places
ರಾಯಚೂರು,ಅ.16,(:- ಜಿಲ್ಲೆಯ ಸಿಂಧನೂರು ನಗರದ ಇಂದಿರಾ ಕ್ಯಾಂಟಿನ್ ಗೆ ಬುಧುವಾರ ಜಿಲ್ಲಾಧಿಕಾರಿಗಳಾದ ನಿತೀಶ್ ಕೆ., ಅವರು ದಿಢೀರ್ ಭೇಟಿ ನೀಡಿ ಪರಿಶೀಲನೆ ಮಾಡಿದರು.
ಸ್ವಚ್ಚತೆ, ಶುಚಿ, ರುಚಿಯ ಬಗ್ಗೆ ಪರಿಶೀಲನೆ ನಡೆಸಿ ಸ್ವಚ್ಚತೆ ಕಾಪಾಡಲು ಅಧಿಕಾರಿಗಳಿಗೆ ಸೂಚನೆ ನೀಡಿ. ಜಿಲ್ಲೆಯಲ್ಲಿರುವ ಇಂದಿರಾ ಕ್ಯಾಟೀನ್‌ಗಳಲ್ಲಿ ಗುಣಮಟ್ಟದ ಆಹಾರ ನೀಡುವುದರ ಜೊತೆಗೆ ಸ್ವಚ್ಚತೆಗೆ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ, ಸಿಬ್ಬಂದಿಗಳಿಗೆ ಸೂಚನೆ ನೀಡಿದರು.

ನಂತರ ಮಾತನಾಡಿದ ಅವರು ಬಡವರಿಗೆ ಕಡಿಮೆ ದರದಲ್ಲಿ ತಿಂಡಿ ಮತ್ತು ಊಟಗಳು ದೊರೆಯಬೇಕೆಂಬುದು ಸರ್ಕಾರದ ಆಶಯವಾಗಿದೆ. ಇಂದಿರಾ ಕ್ಯಾಂಟೀನ್‌ನಲ್ಲಿ ಸ್ವಚ್ಚತೆ, ಶುಚಿ, ರುಚಿಯ ಬಗ್ಗೆ ಪರಿಶೀಲಿಸಲು ಕ್ಯಾಂಟೀನ್ಗಳಿಗೆ ದಿಢೀರ್ ಭೇಟಿ ನೀಡಿ, ಪರಿಶೀಲಿಸಲಾಗುತ್ತಿದೆ ಎಂದರು.
ಗ್ರಾಹಕರಿಂದ ಮಾಹಿತಿ ಪಡೆದ ಜಿಲ್ಲಾಧಿಕಾರಿ:
ಸಿಂಧನೂರು ನಗರದ ಕೇಂದ್ರ ಬಸ್ ನಿಲ್ದಾಣದ ಹರತ್ತಿರುವ ಇಂದಿರಾ ಕ್ಯಾಂಟಿನ್ಗೆ ಭೇಟಿಕೊಟ್ಟಂತಹ ಸಮಯದಲ್ಲಿ ಗ್ರಾಹಕರನ್ನು ವಿಚಾರಿಸಿ ಅವರಿಂದ ಮಾಹಿತಿ ಪಡೆದುಕೊಂಡರು. ತಿಂಡಿ, ಊಟ ಉತ್ತಮ ಎನ್ನುವ ಅಭಿಪ್ರಾಯ ಗ್ರಾಹಕರಿಂದ ವ್ಯಕ್ತವಾಯಿತು ಎಂದರು.
ನೀರು ಶುದ್ಧೀಕರಣ ಘಟಕಕ್ಕೆ ಭೇಟಿ;
ಸಿಂಧನೂರು ನಗರಕ್ಕೆ ಕುಡಿಯುವ ನೀರು ಸರಬರಾಜಾಗುವ ನೀರು ಶುದ್ಧೀಕರಣ ಘಟಕಕ್ಕೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ ಮಾಡಿದರು.
ಈ ವೇಳೆ ಮಾತನಾಡಿ, ಸಿಂಧನೂರು ನಗರಕ್ಕೆ ಶುದ್ಧ ಕುಡಿಯುವ ನೀರು ಪೂರೈಸಬೇಕು. ನೀರು ಪೂರೈಸುವ ಮೊದಲು ನೀರಿನ ಟ್ಯಾಂಕ್‌ಗಳನ್ನು ಪರಿಶೀಲಿಸಬೇಕು. ಸ್ವಚ್ಛತೆಗೆ ಆದ್ಯತೆ ನೀಡಬೇಕು. ನೀರಿನ ಶುದ್ದೀಕರಣ ಘಟಕಗಳ ನೀರನ್ನು ಪರೀಕ್ಷಿಸಿ ಕುಡಿಯಲು ಸೂಕ್ತವಾಗಿದೆ ಎಂಬುದನ್ನು ಖಾತ್ರಿಪಡಿಸಿಕೊಂಡ ಬಳಿಕ ಪೂರೈಸಬೇಕು. ಯಾವುದೇ ಕಾರಣಕ್ಕೂ ಕಲುಷಿತ ನೀರು ಪೂರೈಕೆಯಾಗದಂತೆ ಎಚ್ಚರಿಕೆ ವಹಿಸಬೇಕು. ಅಲ್ಲದೆ ಕಾಲಕಾಲಕ್ಕೆ ಬೀಚಿಂಗ್ ಪೌಡರ್ ಮತ್ತು ಅಲಂ ಗಳನ್ನು ಬಳಸಿಕೊಂಡು ನೀರನ್ನು ಶುದ್ಧೀಕರಣ ಮಾಡಿ ಸರಬರಾಜು ಮಾಡಬೇಕೆಂದು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ವೇಳೆ ಸಿಂಧನೂರು ಸ್ಥಳೀಯ ನಗರಸಭೆಯ ವ್ಯಾಪ್ತಿಯ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿ ನಿತೀಶ್ ಕೆ., ಅವರು ಭೇಟಿ ನೀಡಿ, ಪರಿಶೀಲನೆ ಮಾಡಿದರು.
ಇದೇ ಸಂದರ್ಭದಲ್ಲಿ ನಗರಸಭೆಯ ಪೌರಾಯುಕ್ತರಾದ ಮಂಜುನಾಥ, ಕಾರ್ಯನಿರ್ವಹಾಕ ಅಭಿಯಂತರರು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸ್ಥಳದಲ್ಲಿ ಇದ್ದರು.