Let there be conducive environment for learning: Rayardi
ಕುಕನೂರು ತಾಲೂಕಿನ ಕದ್ರಳ್ಳಿಯಲ್ಲಿ ಅಂಗನವಾಡಿ ಉದ್ಘಾಟಿಸಿದ ಸಿಎಂ ಆರ್ಥಿಕ ಸಲಹೆಗಾರ,,,
ವರದಿ : ಪಂಚಯ್ಯ ಹಿರೇಮಠ,,
ಕೊಪ್ಪಳ : ಅಂಗನವಾಡಿಯಲ್ಲಿ ಮಕ್ಕಳ ಕಲಿಕೆಗೆ ಪೂರಕ ವಾತಾವರಣ ಸೃಷ್ಟಿಸಬೇಕು ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಹೇಳಿದರು.
ತಾಲೂಕಿನ ಕದ್ರಳ್ಳಿ ಗ್ರಾಮದಲ್ಲಿ ಅಂಗನವಾಡಿ ಕೇಂದ್ರ ಉದ್ಘಾಟಿಸಿ ಮಾತನಾಡಿದ ಅವರು, ಅಂಗನವಾಡಿಯಲ್ಲಿ ಮಕ್ಕಳಿಗೆ ಸರಿಯಾಗಿ ಪೌಷ್ಠಿಕ ಆಹಾರ ನೀಡಬೇಕು, ಅಂಗನವಾಡಿಗಳ ಸ್ವಚ್ಛತೆ ಬಗ್ಗೆ ಕಾಳಜಿ ವಹಿಸುವದರ ಜೊತೆಗೆ ಇಲ್ಲಿನ ಮಕ್ಕಳನ್ನು ತಮ್ಮ ಸ್ವಂತ ಮಕ್ಕಳು ಎಂದು ಭಾವಿಸಬೇಕು ಎಂದರು.
ಕುದರಿಮೋತಿ, ಚಿಕ್ಕಬೀಡನಾಳ ಗ್ರಾಮದಲ್ಲಿ ಬೆಳೆ ಹಾನಿ ವೀಕ್ಷಣೆ ಮಾಡಿ ಹಾನಿಯಾದ ಬೆಳೆಗಳನ್ನು ಕಂದಾಯ ಇಲಾಖೆ ಅಧಿಕಾರಿಗಳು ಕೂಡಲೇ ಸಮೀಕ್ಷೆ ಮಾಡಿ ವರದಿ ಸಲ್ಲಿಸಬೇಕು ಎಂದು ತಿಳಿಸಿದರಲ್ಲದೇ. ಬೆಳೆ ಹಾನಿಯಾದ ರೈತರಿಗೆ ಪರಿಹಾರ ನೀಡಲು ಅದಕ್ಕೆ ಪೂರಕ ಮಾಹಿತಿ ಪಡೆದು ಬೆಳೆ ಹಾನಿ ನೀಡುವಂತೆ ಸೂಚಿಸಿದರು.
ಯಲಬುರ್ಗಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳು ಸುನಾಮಿಯಂತೆ ಜರುಗುತ್ತಿವೆ. ಕ್ಷೇತ್ರಕ್ಕೆ ಬೇಕಾದ ಕೆಲಸಗಳನ್ನು ಮಂಜೂರು ಮಾಡಿಸಿದ್ದೇನೆ, ಜನರು ಸಹ ತಾಲೂಕಿನ ವಿವಿಧ ಅಭಿವೃದ್ಧಿ ಕಾರ್ಯಕ್ಕೆ ಸಹಕಾರ ನೀಡಬೇಕು. ಜನರಿಗೆ ಅವಶ್ಯಕವಾದ ಯಾವುದೇ ಸಾರ್ವಜನಿಕ ಕಾರ್ಯವಿದ್ದಲ್ಲಿ ನನ್ನ ಗಮನಕ್ಕೆ ತನ್ನಿ ತಾಲೂಕಿನ ಅಭಿವೃದ್ಧಿ ಕಾರ್ಯಗಳನ್ನು ಸಮರ್ಪಕವಾಗಿ ಕೈಗೊಳ್ಳೋಣ.
ಕ್ಷೇತ್ರದಲ್ಲಿ ಅತಿ ಹೆಚ್ಚು ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿವೆ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳನ್ನು ಮಂಜೂರು ಮಾಡಿಸಿ ಆರಂಭಿಸಿದ್ದೇನೆ, ಶೈಕ್ಷಣಿಕವಾಗಿ ಕ್ಷೇತ್ರದ ಮಕ್ಕಳು ಅಭಿವೃದ್ಧಿ ಆಗಬೇಕು ಎಂಬ ಉದ್ದೇಶದಿಂದ ಶೈಕ್ಷಣಿಕ ರಂಗಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದೇನೆ ಎಂದರು.
ಈ ಸಂದರ್ಭದಲ್ಲಿ ತಾಪಂ ಇಒ ಸಂತೋಷ ಬಿರಾದಾರ, ತಹಸೀಲ್ದಾರ ಎಚ್. ಪ್ರಾಣೇಶ, ಸಿಡಿಪಿಒ ಬೆಟದೇಶ ಮಾಳೇಕೊಪ್ಪ ಇನ್ನಿತರರು ಇದ್ದರು.