Breaking News

ಶೃಂಗೇರಿ ಭಾರತೀತೀರ್ಥ ಸ್ವಾಮೀಜಿ ಸನ್ಯಾಸ ದೀಕ್ಷೆ ಸ್ವೀಕರಿಸಿ 50 ವರ್ಷ : ಅ.26 ರ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಉಪರಾಷ್ಟ್ರಪತಿ ಜಗದೀಪ್ ಧನ್ ಕರ್

50 years of Sringeri Bharatithirtha Swamiji’s monastic initiation: Vice President Jagdeep Dhankar will participate in the program on 26



ಜಾಹೀರಾತು
IMG 20241017 WA0373


ಬೆಂಗಳೂರು, ಅ, 17; ವೇದಾಂತಭಾರತಿಯ ಮಹಾಸಂರಕ್ಷಕರು, ಶೃಂಗೇರಿ ಜಗದ್ಗುರು ಶಂಕರಾಚಾರ್ಯ ಭಾರತೀತೀರ್ಥ ಮಹಾಸ್ವಾಮೀಜಿ ಅವರು ಸಂನ್ಯಾಸ ದೀಕ್ಷೆ ಸ್ವೀಕರಿಸಿ 50ನೇ ವರ್ಷದ ಸ್ಮರಣಾರ್ಥ ಈ ತಿಂಗಳ 26 ರಂದು ನಗರದ ಅರಮನೆ ಮೈದಾನದಲ್ಲಿ ಕಲ್ಯಾಣವೃಷ್ಟಿಸ್ತವ ಮಹಾಭಿಯಾನ ನಡೆಯಲಿದ್ದು, ಉಪರಾಷ್ಟ್ರಪತಿ ಜಗದೀಪ್ ಧನ್ ಕರ್ ಭಾಗವಹಿಸಲಿದ್ದಾರೆ.
ಉಪರಾಷ್ಟ್ರಪತಿಯವರು ವೇದಾಂತಭಾರತಿಯು ಗ್ರಂಥಮಾಲೆಯ ಪುಸ್ತಕವನ್ನು ಇದೇ ಸಂದರ್ಭದಲ್ಲಿ ಲೋಕಾರ್ಪಣೆ ಮಾಡಲಿದ್ದು, ಉಪಮುಖ್ಯಮಂತ್ರಿ ಮತ್ತು ಕಾರ್ಯಕ್ರಮದ ಸ್ವಾಗತಸಮಿತಿಯ ಅಧ್ಯಕ್ಷರೂ ಆದ ಡಿ.ಕೆ. ಶಿವಕುಮಾರ್, ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ ಹಾಗೂ ವಿ. ಸೋಮಣ್ಣ ಮತ್ತಿತರ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಈ ಕುರಿತು ವೇದಾಂತ ಭಾರತಿ ಸಂಸ್ಥೆಯು ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದು, ಸುವರ್ಣಭಾರತೀ ಶೀರ್ಷಿಕೆಯಡಿ ಮಿಥಿಕ್ ಸೊಸೈಟಿ ಆಶ್ರಯದಲ್ಲಿ ವೇದಾಂತಭಾರತೀ, ಶಾಂಕರ ತತ್ತ್ವಪ್ರಸಾರಕ್ಕಾಗಿ ರಾಜ್ಯಾದ್ಯಂತ ಕಲ್ಯಾಣವೃಷ್ಟಿ ಅಭಿಯಾನವನ್ನು ಹಮ್ಮಿಕೊಂಡಿದೆ. ಶ್ರೀ ಶಂಕರಭಗವತ್ಪಾದರು ರಚಿಸಿದ ಕಲ್ಯಾಣವೃಷ್ಟಿಸ್ತವ, ಶಿವಪಂಚಾಕ್ಷರ, ನಕ್ಷತ್ರಮಾಲಾಸ್ತೋತ್ರ ಹಾಗೂ ಲಕ್ಷ್ಮೀನೃಸಿಂಹಕರುಣಾರಸಸ್ತೋತ್ರ ಎಂಬ ಮೂರು ಸ್ತೋತ್ರಗಳನ್ನು ಹೇಳಿಕೊಡಲಾಗುತ್ತಿದೆ. ವೇದಾಂತಭಾರತಿಯ ಸಂರಕ್ಷಕರಾದ ಶಂಕರಭಾರತೀ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಈಗಾಗಲೇ ಬೆಂಗಳೂರಿನ ಸಹಸ್ರಾರು ಪಾರಾಯಣಕೇಂದ್ರಗಳು ಹಾಗೂ ವಿದ್ಯಾಸಂಸ್ಥೆಗಳಲ್ಲಿ ಎರಡು ಲಕ್ಷಕ್ಕೂ ಹೆಚ್ಚಿನ ಜನರಿಗೆ ಈ ಸ್ತೋತ್ರಗಳನ್ನು ಅಭ್ಯಾಸ ಮಾಡಿಸಲಾಗಿದೆ ಎಂದು ತಿಳಿಸಿದೆ.
ಬೆಂಗಳೂರಿನಲ್ಲಿ ಈ ಕಲ್ಯಾಣವೃಷ್ಟಿಸ್ತವ ಮಹಾಭಿಯಾ ಶನಿವಾರ ಬೆಳಿಗ್ಗೆ 10.30ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಬೆಂಗಳೂರಿನ ಅರಮನೆ ಮೈದಾನದ ಕೃಷ್ಣವಿಹಾರದಲ್ಲಿ ಶೃಂಗೇರಿ ಜಗದ್ಗುರು ಶಂಕರಾಚಾರ್ಯ ವಿಧುಶೇಖರಭಾರತೀ ಸ್ವಾಮೀಜಿ ಸಮ್ಮುಖದಲ್ಲಿ ನಡೆಯಲಿದೆ. ಯಡತೊರೆ ಮಠದ ಶಂಕರಭಾರತೀ ಮಹಾಸ್ವಾಮೀಜಿ, ಬ್ರಹ್ಮಾನಂದಭಾರತೀ ಸ್ವಾಮೀಜಿ ಉಪಸ್ಥಿತಿಯಲ್ಲಿ ವಿದ್ಯಾರ್ಥಿಗಳು, ಪೌರ ಕಾರ್ಮಿಕರು, ದಿವ್ಯಾಂಗರು, ಹಿರಿಯ ನಾಗರಿಕರು ಹಾಗೂ ರಾಜ್ಯದ ಬೇರೆ ಬೇರೆ ಊರುಗಳಿಂದ ಆಗಮಿಸುವ ಪಾರಾಯಣಕರ್ತರು ಸೇರಿದಂತೆ ಎಲ್ಲಾ ಜನ ವರ್ಗ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದೆ ಎಂದು ತಿಳಿಸಿದೆ.

About Mallikarjun

Check Also

screenshot 2025 10 25 17 53 12 59 6012fa4d4ddec268fc5c7112cbb265e7.jpg

ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳ ಶತೋತ್ತರ ದಶಮಾನೋತ್ಸವದ ಪೂರ್ವಭಾವಿ ಸಭೆ

Preparatory meeting for the centenary celebrations of Shivaratri Rajendra Mahaswamy. ವರದಿ: ಬಂಗಾರಪ್ಪ .ಸಿ .ಹನೂರು : …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.