Madiga Reservation Struggle Committee: Massive protest demanding internal reservation.




ಕೊಪ್ಪಳ : ಪರಿಶಿಷ್ಟ ಜಾತಿ ಜನಾಂಗದ ಒಳ ಮೀಸಲಾತಿಗಾಗಿ ಆಗ್ರಹಿಸಿ. ಮಾನ್ಯ ಸುಪ್ರೀಂ ಕೋರ್ಟ್ ಆದೇಶದ ಅನ್ವಯ ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ವಿಳಂಬ ನೀತಿಯನ್ನು ಅನುಸರಿಸುತ್ತಿರುವುದನ್ನು ಖಂಡಿಸಿ ಪ್ರತಿಭಟಿಸಲಾಯಿತು.
ಬುಧವಾರದಂದು ಕರ್ನಾಟಕ ರಾಜ್ಯ ಒಳ ಮೀಸಲಾತಿ ಹೋರಾಟ ಸಮಿತಿ ಕರೆ ನೀಡಿದ ಹಿನ್ನೆಲೆ ಮಾದಿಗ ಮೀಸಲಾತಿ ಹೋರಾಟ ಸಮಿತಿಯ ರಾಜ್ಯಾಧ್ಯಕ್ಷ ಹುಸೇನಪ್ಪ ಸ್ವಾಮಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ನಗರದ ಬಾಬು ಜಗಜೀವನ್ ರಾಮ್ ವೃತ್ತದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿತು.
ಬಳಿಕ ಒಳಗಡೆ ಅವಕಾಶ ಕಲ್ಪಿಸಿದ ಪೊಲೀಸ್ ಅಧಿಕಾರಿಗಳು ಗೇಟಿನ ಮುಂಭಾಗ ತಡೆ ಹಿಡಿದರು ಕೊನೆಗೆ ಜಿಲ್ಲಾಧಿಕಾರಿಗಳ ಸೂಚನೆಯ ಮೇರೆಗೆ ಹೋರಾಟ ಸಮಿತಿಯ ಕೆಲವು ಮುಖಂಡರು ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.
ಬಳಿಕ ಮಾತನಾಡಿದ ಬಿ. ಹುಸೇನಪ್ಪ ಸ್ವಾಮಿ ಮಾದಿಗ ಮಾತನಾಡಿ ಅಹಿಂದ್ ಹೆಸರು ಹೇಳಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷದ ರಾಜ್ಯದ ಮುಖ್ಯಮಂತ್ರಿ ಸುಪ್ರೀಂ ಕೋರ್ಟ್ ಆದೇಶವನ್ನು ಅನುಷ್ಠಾನಗೊಳಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ.
ಸಾಮಾಜಿಕ ನ್ಯಾಯದ ಅಡಿಯಲ್ಲಿ ಪರಿಶಿಷ್ಟ ಜಾತಿಯ ಒಳ ಮೀಸಲಾತಿಯನ್ನು ರಾಜ್ಯ ಸರ್ಕಾರ ಜಾರಿಗೆ ತರಬೇಕು ಇಲ್ಲವೇ ಮುಖ್ಯಮಂತ್ರಿಗಳು ಖುರ್ಚಿ ಖಾಲಿ ಮಾಡಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಹಂಪೇಶ ಹರಿ ಗೋಲ್, ಪರಶುರಾಮ ಸೇರಿದಂತೆ ಗಂಗಾವತಿ ಕನಕಗಿರಿ, ಕಾರಟಗಿ ಕುಷ್ಟಗಿ ಯಲಬುರ್ಗಾ, ಕುಕನೂರು ಭಾಗಗಳಿಂದ ಅಪಾರ ಸಂಖ್ಯೆಯ ಸಮಾಜ ಬಾಂಧವರು ಪಾಲ್ಗೊಂಡಿದ್ದರು.