Naming after Maharshi Valmiki for Raichur University is welcome: Minister Bosaraju Harsha

ಬೆಂಗಳೂರು ಅಕ್ಟೋಬರ್ 17: ಕಲ್ಯಾಣ ಕರ್ನಾಟಕ
ಭಾಗದ ಪ್ರಮುಖ ಜಿಲ್ಲೆಯಾಗಿರುವ ರಾಯಚೂರು ವಿಶ್ವವಿದ್ಯಾಲಯಕ್ಕೆ ಮಹರ್ಷಿ ವಾಲ್ಮೀಕಿ ಹೆಸರು ಇಡುವ ನಿರ್ಧಾರ ಸ್ವಾಗತರ್ಹ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಬೋಸರಾಜು ಪ್ರತಿಕ್ರಿಯಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನು ನೀಡಿರುವ ಅವರು, ಈಗಾಗಲೇ ಬೇರೆ ಬೇರೆ ಜಿಲ್ಲೆಗಳ ವಿಶ್ವವಿದ್ಯಾಲಯಗಳಿಗೆ ಮಹನೀಯರುಗಳು ಹಾಗೂ ಇತಿಹಾಸ ಸೃಷ್ಟಿಸಿದ ಗಣ್ಯ ವ್ಯಕ್ತಿಗಳ ಹೆಸರನ್ನು ನಾಮಕರಣ ಮಾಡಲಾಗಿದೆ.ಈ ದೀಷೆಯಲ್ಲಿ ನಮ್ಮ ರಾಯಚೂರು ಜಿಲ್ಲಾ ಕೇಂದ್ರದಲ್ಲಿರುವ ವಿಶ್ವವಿದ್ಯಾಲಯಕ್ಕೆ ಶ್ರೀ ಮಹರ್ಷಿ ವಾಲ್ಮೀಕಿ ಅವರ ಹೆಸರು ನಾಮಕರಣ ಮಾಡುವ ನಮ್ಮ ಸರ್ಕಾರದ ನಿರ್ಧಾರ ಸ್ವಾಗತಾರ್ಹವಾಗಿದೆ ಎಂದು ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Kalyanasiri Kannada News Live 24×7 | News Karnataka
