Yalaburga: Job Guaranteed Walkability Program Launched

ವರದಿ : ಪಂಚಯ್ಯ ಹಿರೇಮಠ,,
ಕೊಪ್ಪಳ : ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ 2025 -26 ನೇ ಸಾಲಿನ ಕ್ರಿಯಾ ಯೋಜನೆ ತಯಾರಿಕೆ ಪೂರ್ವಭಾವಿ ತಾಂತ್ರಿಕ ತರಬೇತಿ ಹಾಗೂ ಸಭೆಯನ್ನು ಯಲಬುರ್ಗಾ ತಾಲೂಕ ಪಂಚಾಯತಿ ಸಭಾಂಗಣದಲ್ಲಿ ಅನುಷ್ಟಾನ ಇಲಾಖೆ ಅಧಿಕಾರಿಗಳು, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ತಾಂತ್ರಿಕ ಸಹಾಯಕರು, ಬಿ.ಎಫ್.ಟಿ ಮತ್ತು ಗ್ರಾಮ ಕಾಯಕ ಮಿತ್ರರಿಗೆ ತರಬೇತಿ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತಿ ಎ.ಡಿ.ಪಿ.ಸಿ ಸಂಯೋಜಕರು ಪ್ರಾಸ್ತಾವಿಕವಾಗಿ ಮಾತನಾಡಿ, ನರೇಗಾ ಯೋಜನೆಯ ಕೃಷಿ, ಜೀವನೋಪಾಯ ಮತ್ತು ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ಪಡಿಸುವ ಕಾಮಗಾರಿಗಳು ಮಾಡಿಕೊಳ್ಳುವಂತ ಕಾಮಗಾರಿಗಳ ಬಗ್ಗೆ ಮಾಹಿತಿ ಒದಗಿಸಬೇಕು.
ವಿವಿಧ ಅನುಷ್ಠಾನ ಇಲಾಖೆಗಳು ಗ್ರಾಮ ಪಂಚಾಯತಿಯ ಜವಾಬ್ದಾರಿಯನ್ನು ಕಡಿಮೆ ಮಾಡಬೇಕು. ಅಂದರೆ ಅನುಷ್ಠಾನ ಇಲಾಖೆಗಳು ಹೆಚ್ಚಿನ ಮಟ್ಟದಲ್ಲಿ ಕಾಮಗಾರಿಗಳನ್ನು ಅನುಷ್ಠಾನ ಮಾಡಬೇಕು ಅಂದಾಗ ಮಾತ್ರ ಯೋಜನೆ ರೈತರ ಫಲಾನುಭವಿಗಳ ಮನೆ ಬಾಗಿಲಿಗೆ ಮುಟ್ಟಬೇಕು ಎಂದು ಸಲಹೆ ನೀಡಿದರು.
ನಂತರ ಯಲಬುರ್ಗಾ ತಾಲೂಕು ಪಂಚಯತಿ ಸಹಾಯಕ ನಿರ್ದೇಶಕ ಹನಮಂತಗೌಡ ಪೊಲೀಸ್ ಪಾಟೀಲ್ ಮಾತನಾಡಿ, ನರೇಗಾ ಯೋಜನೆಯನ್ನು ಅನುಷ್ಠಾನ ಹಂತದಲ್ಲಿ ಇರುವ ನಾವೇಲ್ಲರೂ ಜವಾಬ್ದಾರರು ಅದಕ್ಕಾಗಿ ಎಲ್ಲರೂ 2025 -26 ನೇ ಸಾಲಿನ ಕ್ರಿಯಾ ಯೋಜನೆ ತಯಾರಿಕೆ ಪ್ರಕ್ರಿಯೆಯನ್ನು ಅರಿತುಕೊಂಡು ಈ ವರ್ಷದ ಕ್ರಿಯಾ ಯೋಜನೆಯನ್ನು ಯಶಸ್ವಿಯಾಗಿ ಮಾಡೋಣ ಎಂದರು.
ಕಾರ್ಯಕ್ರಮದಲ್ಲಿ ಸಹಾಯಕ ನಿರ್ದೇಶಕ ಪಂಚಾಯತ್ ರಾಜ್ ಫಕೀರಪ್ಪ ಕಟ್ಟಿಮನಿ, ಜಿಲ್ಲಾ ಪಂಚಾಯತಿ ಎಮ್.ಐ.ಎಸ್ ಸಂಯೋಜಕ ಮೈನುದ್ಧಿನ್ ಕಾರಟಗಿ ಎಮ್.ಐ.ಎಸ್ ಸಂಯೋಜಕ ಚೆನ್ನಬಸಪ್ಪ, ಎಫ್.ಇ.ಎಸ್ ಸಂಸ್ಥೆಯ ಜಿಲ್ಲಾ ಸಂಯೋಜಕ ವಾಸುದೇವ್ ಮೂರ್ತಿ, ಅವಳಿ ತಾಲೂಕಿನ ಎಲ್ಲಾ ಗ್ರಾಮ ಪಂಚಾಯತಿಯ ಅಭಿವೃದ್ಧಿ ಅಧಿಕಾರಿಗಳು, ಅನುಷ್ಠಾನ ಇಲಾಖೆ ಅಧಿಕಾರಿಗಳು, ತಾಂತ್ರಿಕ ಸಂಯೋಜಕರು, ಎಮ್ ಐ.ಎಸ್ ಸಂಯೋಜಕರು, ಐ.ಇ.ಸಿ ಸಂಯೋಜಕರು, ತಾಂತ್ರಿಕ ಸಹಾಯಕರು, ಕಂಪ್ಯೂಟರ್ ಅಪರೇಟರ್ ಗಳು, ಬಿ.ಎಫ್.ಟಿ ಗಳು, ಗ್ರಾಮ ಕಾಯಕ ಮಿತ್ರರು ಹಾಜರಿದ್ದರು.