Breaking News

ಕೂಡ್ಲಿಗಿ ಸಾರ್ವಜನಿಕ ಆಸ್ಪತ್ರೆ,ಮೇಲ್ದರ್ಜೆಗೇರಿಸಿ ಸಕಲ ಸೌಲಭ್ಯಗಳನ್ನು ಕಲ್ಪಿಸಲಾಗುವುದು ವೈದ್ಯಕೀಯ ಸಚಿವ ದಿನೇಶ್ ಗುಂಡೂರಾವ್

Kudligi Public Hospital will be upgraded and all facilities will be provided Medical Minister Dinesh Gundurao

ಜಾಹೀರಾತು

ಕೂಡ್ಲಿಗಿ ಸಾರ್ವಜನಿಕ ಆಸ್ಪತ್ರೆ,ಮೇಲ್ದರ್ಜೆಗೇರಿಸಿ ಸಕಲ ಸೌಲಭ್ಯಗಳನ್ನು ಕಲ್ಪಿಸಲಾಗುವುದು ವೈದ್ಯಕೀಯ ಸಚಿವ ದಿನೇಶ್ ಗುಂಡೂರಾವ್

ಕೂಡ್ಲಿಗಿ:ಹಿಂದುಳಿದ ತಾಲೂಕಿನ ಬಡ ಜನರಿಗೆ ಅಗತ್ಯ ವೈದ್ಯಕೀಯ ಸೇವೆ ಕಲ್ಪಿಸಲು ಬೇಕಾದ ಸಕಲ ಸೌಲಭ್ಯಗಳನ್ನು ಒದಗಿಸುತ್ತೇನೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭರವಸೆ ನೀಡಿದರು. ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮಂಗಳವಾರ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಡಯಾಲೀಸೀಸ್ ಕೇಂದ್ರ ಉದ್ಘಾಟನಾ ಕಾರ್ಯಕ್ರಮ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. ಈಗಾಗಲೇ ಆಸ್ಪತ್ರೆಯ ಸುಸಜ್ಜಿತ ವ್ಯವಸ್ಥೆಗೆ ಸುಮಾರು 8 ಕೋಟಿ ಅನುದಾನದಲ್ಲಿ ಟ್ರಾಮ ಸೆಂಟರ್, ಶಸ್ತ್ರಚಿಕಿತ್ಸಾ ಕೊಠಡಿ, ವೈದ್ಯರ ವಸತಿ ಗೃಹ, ದೋಬಿ ಕೇಂದ್ರ ಸೇರಿದಂತೆ ಅಗತ್ಯ ಸೌಲಭ್ಯಗಳ ಕಾಮಗಾರಿ ಭರದಿಂದ ಸಾಗಿದೆ. ಅದರಂತೆ ಈಗ ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ಅವರ ಮನವಿಯಂತೆ ಈಗಿರುವ 100 ಹಾಸಿಗೆಯ ಆಸ್ಪತ್ರೆಯನ್ನು 150 ಹಾಸಿಗೆಗಳ ಆಸ್ಪತ್ರೆಯಾಗಿ ಮೇಲ್ದರ್ಜೆಗೆ ಏರಿಸಲು ಅನುಮತಿ ನೀಡುವೆ. ತಾಲೂಕಿನ ಗ್ರಾಮೀಣ ಸೇವೆಗಾಗಿ 6 ಪ್ರಾಥಮಿಕ ಆರೋಗ್ಯ ಕೇಂದ್ರಗಳ ಬೇಡಿಕೆ ಇಟ್ಟಿದ್ದು ಅದನ್ನು ಮಂಜೂರು ಮಾಡುವುದಾಗಿ ತಿಳಿಸಿದರು. ತಾಲೂಕಿನ ಗುಡೇಕೋಟೆ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು 14 ಕೋಟಿ ವೆಚ್ಚದಲ್ಲಿ ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮಾಡಿ ಮೇಲ್ದರ್ಜೆಗೆ ಏರಿಸುವ ಬೇಡಿಕೆಗೂ ಕೂಡ ನಾನು ಸಂಪೂರ್ಣ ಸಹಕಾರ ನೀಡುವುದಾಗಿ ಘೋಷಿಸಿದರು. ಈಗಾಗಲೇ ಗ್ರಾಮೀಣ ಜನರ ಆರೋಗ್ಯ ಸೇವೆಗಾಗಿ ತಾಲೂಕು ಕೇಂದ್ರಗಳತ್ತ ಬರುತ್ತಾರೆ. ಅವರಿಗೆ ಅಗತ್ಯ ಆರೋಗ್ಯ ಸೌಲಭ್ಯಗಳನ್ನು ಒದಗಿಸುವುದು ನಮ್ನ ಜವಾಬ್ದಾರಿ. ಆ ನಿಟ್ಟಿನಲ್ಲಿ ಈಗಾಗಲೇ ತಜ್ಞ ಸಿಬ್ಬಂದಿಗಳೊಂದಿಗೆ ಚರ್ಚಿಸಿದ್ದೇನೆ‌. ಈ ಆಸ್ಪತ್ರೆ ಬೇಕಾದ ವೈದ್ಯಕೀಯ ಸಲಕರಣೆಗಳನ್ನು ನೀಡುವುದಾಗಿ ತಿಳಿಸಿದರು. ಆದರೆ ತಜ್ಞ ವೈದ್ಯರು ಶ್ರಮ ವಹಿಸಿ ಸೇವೆ ಮಾಡುವ ಮನಸ್ಸು ಮಾಡಬೇಕು ಎಂದು ತಿಳಿಸಿದರು. ಒಟ್ಟಾರೆ ಜಿಲ್ಲಾಸ್ಪತ್ರೆ ಯನ್ನು ಮೀರಿಸುವಷ್ಟು ಎಲ್ಲಾ ಆರೋಗ್ಯ ಸೇವೆಗಳು ಈ ತಾಲೂಕಿನಲ್ಲಿ ಸಿಗುವಂತೆ ಮಾದರಿ ತಾಲೂಕು ಆಸ್ಪತ್ರೆಗೆ ನಾನು ಅವಶ್ಯ ಅನುದಾನ ನೀಡುವುದಾಗಿ ವಾಗ್ದಾನ ನೀಡಿದರು.
ಶಾಸಕ ಎನ್.ಟಿ. ಶ್ರೀನಿವಾಸ್ ಮಾತನಾಡಿ, ಪರಿಶಿಷ್ಟ ಪಂಗಡ ಹಾಗೂ ಪರಿಶಿಷ್ಟ ಜಾತಿ ಮತ್ತು ಹಿಂದುಳಿದ ಜನಾಂಗದ ಅಭ್ಯುದಯಕ್ಕೆ ಸರ್ಕಾರ ಹಾಗೂ ಶಾಸಕನಾಗಿ ನಾನು ಸಂಪೂರ್ಣವಾಗಿ ಸೇವೆ ಸಲ್ಲಿಸವೆ, ಅದಕ್ಕೆ ಪೂರಕವಾಗಿ ಸಚಿವರು ಸಹ ಅವಶ್ಯ ಅನುದಾನ ನೀಡುತ್ತಿರುವುದು ಸ್ವಾಗತಾರ್ಹ. ಈಗಾಗಲೇ ಶಿಕ್ಷಣ, ಆರೋಗ್ಯ ಮತ್ತು ನೀರಾವರಿ ಯೋಜನೆಗಳಿಗೆ ಒತ್ತು ನೀಡಿ ಅನೇಕ ಜನಪರ ಕಾರ್ಯಕ್ರಮ ರೂಪಿಸಿದ್ದೇನೆ. ಮುಂಬರುವ ದಿನಗಳಲ್ಲಿ ಬಡವರ ಕಲ್ಯಾಣ ಹಾಗೂ ಪದವಿಧರ ಯುವಕರಿಗೆ ಅನುಕೂಲ ಕಲ್ಪಿಸಲು ಮುಂದಾಗುವುದಾಗಿ ತಿಳಿಸಿದರು. ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷಾಗುಪ್ತ,
ಆರೋಗ್ಯ ಇಲಾಕೆ ಆಯುಕ್ತ ಶಿವಕುಮಾರ್, ಡಿಸಿ ಎಂ.ಎಸ್.ದಿವಾಕರ, ಡಿಎಚ್ಒ ಡಾ.ಶಂಕರ್ ನಾಯ್ಕ್, ಆರ್ಸಿಎಚ್ಒ ಡಾ.ಜಂಬಯ್ಯ, ಡಿಎಸ್ಒ ಎಂ.ಷಣ್ಮುಖ ನಾಯ್ಕ್, ಟಿಎಚ್ಒ ಡಾ‌.ಎಸ್.ಪಿ.ಪ್ರದೀಪ್ ಕುಮಾರ್, ಆಡಳಿತ ವೈದ್ಯಾಧಿಕಾರಿ ಡಾ.ಮಧು, ಪಪಂ ಅಧ್ಯಕ್ಷ ಕಾವಲಿ ಶಿವಪ್ಪನಾಯಕ, ಸದಸ್ಯೆ ಲಕ್ಷ್ಮೀದೇವಿ, ಕೆ.ಈಶಪ್ಪ,ಬಾಸೂ ನಾಯ್ಕ್, ಮುಖಂಡರಾದ ನಾಗಮಣಿ ಜಿಂಕಾಲ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಗುರುಸಿದ್ದನ ಗೌಡ, ಎಸ್.ರಾಜೇಂದ್ರ ಪ್ರಸಾದ್, ಕೆ.ಎಂ.ಶಶಿಧರ, ಹಿರೇಕುಂಬಳಗುಂಟೆ ಉಮೇಶ್, ಟಿ.ಜಿ.ಮಲ್ಲಿಕಾರ್ಜುನ ಗೌಡ, ರಾಘವೇಂದ್ರ ಸೇರಿದಂತೆ ಅನೇಕರು ಇದ್ದರು.

About Mallikarjun

Check Also

ವಾರ್ಡ್ ಶಿಬಿರಗಳಲ್ಲಿ ಆನ್‌ಲೈನ್ ತಂತ್ರಾಂಶದ ಮೂಲಕ ನಮೂನೆ-3ನ್ನು ಪಡೆದುಕೊಳ್ಳಿ:ನಾಗೇಶ್,

Obtain form-3 through online software in ward camps : Nagesh,, ಯಲಬುರ್ಗಾ : ಇ-ಆಸ್ತಿ ತಂತ್ರಾಶವನ್ನು ಸರಳೀಕರಣಗೊಳಿಸಿ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.