Kumati: Heavy rain: tree fell and house completely damaged
ಕಾನಹೊಸಹಳ್ಳಿ: ನಿರಂತರವಾಗಿ ಸುರಿಯುವ ಭಾರೀ ಮಳೆಯಿಂದಾಗಿ ಮನೆಯೊಂದರ ಮೇಲೆ ಮರ ಬಿದ್ದು ಹಾನಿ ಸಂಭವಿಸಿದ ಘಟನೆ ಕೂಡ್ಲಿಗಿ ತಾಲೂಕಿನ ಕುಮತಿ ಗ್ರಾಮದಲ್ಲಿ ನಡೆದಿದೆ.
ಭಾನುವಾರ ರಾತ್ರಿ ಭಾರೀ ಗಾಳಿ-ಮಳೆ ಬಂದ ಪರಿಣಾಮ ಜುಮ್ಮೋಬನಹಳ್ಳಿ ಗ್ರಾ.ಪಂ ವ್ಯಾಪ್ತಿಯ ಕುಮತಿ ಗ್ರಾಮದ ವಾಲ್ಮೀಕಿ ಸಮುದಾಯದ ಮಾರಕ್ಕ ತಂದೆ ಕಾಟೇಮಲ್ಲಯ್ಯ ಎಂಬುವರ ಮನೆಯ ಮೇಲೆ ಸಿಬ್ಲು ಮರ ಬಿದ್ದು ಮನೆ ಸಂಪೂರ್ಣ ಹಾನಿಯಾಗಿದೆ.
ಮರ ಬಿದ್ದ ರಭಸಕ್ಕೆ ಮನೆಯ ಹಿಂದಿನ ಗೋಡೆ ಸಂಪೂರ್ಣ ಕುಸಿದು ಬಿದ್ದು ಪರಿಣಾಮ ಮನೆಯೊಳಗಿದ್ದ ಗೃಹ ಬಳಕೆ ಸಾಮಾಗ್ರಿಗಳು ಅಕ್ಕಿ,ಜೋಳ, ಮನೆಯ ಟಿವಿ ಇನ್ನಿತರ ಇಲೆಕ್ಟ್ರಾನಿಕ್ ವಸ್ತುಗಳು ಮಳೆ ನೀರಿಗೆ ಹಾನಿಯಾಗಿದೆ, ನಾವು ಹೊಟ್ಟೆ ಪಾಡಿಗಾಗಿ ದೂರದ ಬೆಂಗಳೂರಿಗೆ ದುಡಿಯಲು ಹೋಗಿದ್ದು ಮೊನ್ನೆ ಸುರಿದ ಭಾರಿ ಮಳೆಗೆ ಮರಬಿದ್ದು ನಾವು ವಾಸದ ಮನೆಗೆ ಹಾನಿಯಾಗಿದೆ ಕೂಡಲೇ ಸಂಬಂಧಪಟ್ಟ ಜನಪ್ರತಿನಿಧಿಗಳು, ಮತ್ತು ಕಂದಾಯ ನಿರೀಕ್ಷಕರು, ಸ್ಥಳಕ್ಕೆ ಬಂದು ಪರಿಶೀಲಿಸಿ ನನಗೊಂದು ವಸತಿ ವ್ಯವಸ್ಥೆ ಕಲ್ಪಿಸಿಕೋಡಿ ಎಂದು ಮಾರಕ್ಕ ಪತ್ರಿಕಾ ಮುಖಾಂತರ ಮನವಿ ಮಾಡುತ್ತಿದ್ದಾರೆ.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…