Breaking News

ಉದ್ಯೋಗ ಖಾತರಿ ನಡಿಗೆ, ಸಬಲತೆಯಡೆಗೆ ಅಭಿಯಾನಕ್ಕೆ ಪಂಚಾಯತಿ ಅಭಿವೃದ್ಧಿ ಅಧಿಕಾರಿ ವೀರನಗೌಡ ಚೆನ್ನವೀರನಗೌಡ್ರ ಚಾಲನೆ

Panchayat Development Officer Veerana Gowda Chennaveerana Gowda drives for job guarantee walk, empowerment campaign

ಜಾಹೀರಾತು

ವರದಿ : ಪಂಚಯ್ಯ ಹಿರೇಮಠ,,
ಕೊಪ್ಪಳ : ಕುಕನೂರ ತಾಲೂಕಿನ ತಳಕಲ್ ಗ್ರಾ.ಪಂ ವ್ಯಾಪ್ತಿಯ ತಳಕಲ್ ಗ್ರಾಮದಲ್ಲಿ ಇಂದು ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ 2025-26 ನೇ ಸಾಲಿನ ಕಾರ್ಮಿಕ ಆಯವ್ಯಯ ತಯಾರಿಸಲು ಉದ್ಯೋಗ ಖಾತರಿ ನಡಿಗೆ ಸಬಲತೆಯಡೆಗೆ ಅಭಿಯಾನದಡಿ ಐಇಸಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು‌.

ಈ ವೇಳೆ ಗ್ರಾಮದ ಮನೆ-ಮನೆಗೆ ಭೇಟಿ ನೀಡಿ ಸಾರ್ವಜನಿಕರು ತಮ್ಮ ಫೋನಿನ ಮೂಲಕ ಸ್ಕ್ಯಾನ್ ಮಾಡಿ ಬೇಡಿಕೆ ಸಲ್ಲಿಸುವ ಬಗ್ಗೆ, ಪ್ರತಿ ದಿನಕ್ಕೆ 349 ರೂಪಾಯಿ ಕೂಲಿ, ಯೋಜನೆಯಡಿ ದೊರಕುವ ವಯಕ್ತಿಕ ಮತ್ತು ಸಮುದಾಯ ಕಾಮಗಾರಿಗಳ ಹಾಗೂ ಯೋಜನೆಗಳ ಬಗ್ಗೆ ಮಾಹಿತಿ ತಿಳಿಸಲಾಯಿತು.

ನಂತರ ವಾರ್ಡ್ ಸಭೆ ಮತ್ತು ಗ್ರಾಮ ಸಭೆಯಲ್ಲಿ ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡಿ ಸಲ್ಲಿಸಿದ ಬೇಡಿಕೆಗಳನ್ನು ಪರಿಶೀಲನೆ ಮಾಡಿ ಪಟ್ಟಿ ತಯಾರಿಸಲಿದ್ದು, ಎಲ್ಲರೂ ಭಾಗವಹಿಸುವಂತೆ ತಿಳಿಸಲಾಯಿತು.

ಗ್ರಾಮದ ಕಿರಾಣಿ ಅಂಗಡಿ, ಹಾಲಿನ ಕೇಂದ್ರ ಸೇರಿ ಇನ್ನಿತರ ಸಾರ್ವಜನಿಕ ಸ್ಥಳಗಳಲ್ಲಿ ಬೇಡಿಕೆ ಸಲ್ಲಿಸಲು ಕ್ಯೂ ಆರ್ ಕೋಡ್ ಪ್ರತಿ ಅಂಟಿಸಿ ಜಾಗೃತಿ ಮೂಡಿಸಲಾಯಿತು.

ಈ ವೇಳೆ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಜಹಿರಾ ಬೇಗಂ, ಗ್ರಾಮ ಪಂಚಾಯತಿ ಕಾರ್ಯದರ್ಶಿಗಳಾದ ಆದಿಬಸಯ್ಯ ಹಿರೇಮಠ, ತಾ.ಪಂ ಐಇಸಿ ಸಂಯೋಜಕ ಲಕ್ಷ್ಮಣ ಕೆರಳ್ಳಿ , ಗ್ರಾ.ಪಂ ಗಣಕಯಂತ್ರ ನಿರ್ವಾಹಕರು, ಗ್ರಾ.ಪಂ ಇನ್ನಿತರ ಸಿಬ್ಬಂದಿಗಳು, ಸಾರ್ವಜನಿಕರು ಇದ್ದರು.

About Mallikarjun

Check Also

ಜಂಬೂರ್ ಬಸಮ್ಮನವರಿಗೆ ಶತಮಾನೋತ್ಸವದ ಸಂಭ್ರಮ

Centenary celebrations for Jambur Bassam ಕೊಟ್ಟರು,: ಇತ್ತೀಚೆಗೆ ಮನುಷ್ಯನ ಒತ್ತಡದ ಕಾರಣಕ್ಕಾಗಿ ಹಲವಾರು ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಈಗ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.