From Adduri to Rajyotsava decision Grade-2 Tehsildar Horpet,,,

*ಕನ್ನಡ ರಾಜ್ಯೋತ್ಸವ ಪೂರ್ವಭಾವಿ ಸಭೆ,,,
ಕೊಪ್ಪಳ : ಕನ್ನಡ ರಾಜ್ಯೋತ್ಸವನ್ನು ನವೆಂಬರ್ 1 ರಂದು ತಾಲೂಕಾಡಳಿತ ವತಿಯಿಂದ ಅರ್ಥಪೂರ್ಣವಾಗಿ, ಅದ್ದೂರಿಯಾಗಿ ಆಚರಿಸೋಣ ಎಂದು ಗ್ರೇಡ್ – 2 ತಹಶೀಲ್ದಾರ ವೀರಪ್ಪ ಹೊರಪೇಟೆ ಹೇಳಿದರು.
ಯಲಬುರ್ಗಾ ಪಟ್ಟಣದ ತಹಶೀಲ್ದಾರ ಸಭಾಂಗಣದಲ್ಲಿ ಕನ್ನಡ ರಾಜ್ಯೋತ್ಸವ ನಿಮಿತ್ಯ ಕರೆದಿದ್ದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿ, ಪ್ರತಿ ವರ್ಷದಂತೆ ಈ ವರ್ಷವು ಕೂಡ ಕನ್ನಡ ರಾಜ್ಯೋತ್ಸವನ್ನು ಸಂಭ್ರಮದಿಂದ ಆಚರಿಸೋಣ.ರಾಜ್ಯೋತ್ಸವನ್ನು ವಿಶಿಷ್ಟ ರೀತಿಯಲ್ಲಿ ಇಲ್ಲಿಯ ಬಯಲು ರಂಗಮಂದಿರ,ಜ್ಯೂನಿಯರ್ ಕಾಲೇಜ ಮೈದಾನದಲ್ಲಿ ಆಚರಿಸೋಣವೆಂದರು.
ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದವರಿಗೆ ಸನ್ಮಾನ, ಉಪನ್ಯಾಸ, ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಕನ್ನಡ ರಾಜ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತದೆ, ತಾಲೂಕಿನಾದ್ಯಂತ ಎಲ್ಲಾ ಅಂಗಡಿ, ವಾಣಿಜ್ಯ ಮಳಿಗೆಯಲ್ಲಿ ಕಡ್ಡಾಯವಾಗಿ ಕನ್ನಡ ನಾಮಫಲಕವನ್ನು ಬರೆಸಬೇಕು. ಒಂದು ವೇಳೆ ಬೇರೆ ಭಾಷೆ ಕಂಡು ಬಂದರೆ ಅಂತವರ ಮೇಲೆ ಕ್ರಮ ಕೈಗೊಳ್ಳಲಾಗುವುದು.
ತಾಲೂಕಿನ ಎಲ್ಲಾ ಅಧಿಕಾರಿಗಳಿಗೆ ವಹಿಸಿರುವ ಕೆಲಸವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಕಡ್ಡಾಯವಾಗಿ ಎಲ್ಲರೂ ಭಾಗವಹಿಸುವ ಮೂಲಕ ಯಶಸ್ವಿಗೆ ಮುಂದಾಗುವಂತೆ ಸಲಹೆ ನೀಡಿದರು.
ಈ ಕಾರ್ಯಕ್ರಮದಲ್ಲಿ ಕ್ಷೇತ್ರದ ಶಾಸಕ ಬಸವರಾಜ ರಾಯರೆಡ್ಡಿ ಸೇರಿದಂತೆ ಮತ್ತಿತರರು ಭಾಗವಹಿಸುವರು ಎಂದರು.
ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ನಾಗೇಶ ಮಾತನಾಡಿ, ಪ್ರತಿ ವರ್ಷದಂತೆ ಈ ವರ್ಷ ಕೂಡಾ ಕನ್ನಡ ಹಬ್ಬವನ್ನು ಅತ್ಯಂತ ಸಂತೋಷದಾಯಕವಾಗಿ ಆಚರಿಸುವಲ್ಲಿ ಪ್ರತಿಯೊಬ್ಬರು ಮುಂದಾಗಬೇಕು. ವಾಣಿಜ್ಯ ಅಂಗಡಿಗಳ ಮಾಲಿಕರ ತಮ್ಮ ಅಂಗಡಿ ನಾಮಫಲಕವನ್ನು ಕಡ್ಡಾಯವಾಗಿ ಕನ್ನಡ ಭಾಷೆಯಲ್ಲಿ ಬರೆಯಿಸಬೇಕು ಇಲ್ಲದಿದ್ದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.
ಕಸಾಪ ಮಾಜಿ ಅಧ್ಯಕ್ಷ ಶಿವಮೂರ್ತಿ ಇಟಗಿ, ಪಪಂ ಸದಸ್ಯ ಅಮರೇಶ ಹುಬ್ಬಳ್ಳಿ, ಕನ್ನಡಪರ ಸಂಘಟನೆಗಳ ಮುಖಂಡರಾದ ರಾಜಶೇಖರ ಶ್ಯಾಗೋಟಿ, ಶಿವಕುಮಾರ ನಾಗನಗೌಡ್ರ, ಸೇರಿದಂತೆ ಮತ್ತಿತರರು ಮಾತನಾಡಿದರು. ಪಪಂ ಅಧ್ಯಕ್ಷ ಅಂದಯ್ಯ ಕಳ್ಳಿಮಠ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪಪಂ ಸದಸ್ಯರಾದ ಕಳಕಪ್ಪ ತಳವಾರ, ಹನಮಂತಪ್ಪ ಭಜಂತ್ರಿ ಸೇರಿದಂತೆ ಕನ್ನಡಪರ ಸಂಘಟನೆಗಳ ಮುಖಂಡರು ತಾಲೂಕಿನ ವಿವಿಧ ಇಲಾಖೆಯ ಅಧಿಕಾರಿಗಳು ಸೇರಿದಂತೆ ಮತ್ತಿತರರು ಇದ್ದರು.