Humane government bus driver operator

ಕಾನ ಹೊಸಹಳ್ಳಿ : ಬೆಂಗಳೂರಿನಿಂದ ಚಿತ್ರದುರ್ಗದ ಮಾರ್ಗವಾಗಿ ಕಾರ ಟ ಗಿಗೆ ಸರ್ಕಾರಿ ಸಂಸ್ಥೆ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯುೊಬ್ಬರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದರಿಂದ ರಾಷ್ಟ್ರೀಯ ಹೆದ್ದಾರಿ 50ರ ಕಾನ ಹೊಸಹಳ್ಳಿ ಸಮೀಪದ ಆಲೂರು ಆರೋಗ್ಯ ಕೇಂದ್ರಕ್ಕೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಂದಿಗೆ ಬಸ್ಸನ್ನು ಕೊಂಡೊಯ್ದು,ಹೆರಿಗೆ ನೋವು ಕಾಣಿಸಿಕೊಂಡ ಗರ್ಭಿಣಿ ಮಹಿಳೆಯ ನ್ನು ಆಸ್ಪತ್ರೆಗೆ ದಾಖಲೆ ಮಾಡಿ ದ ರು. ದಾಖಲಿಸಿದ 10 ನಿಮಿಷದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ ತಾಯಿ.
ಕೊಪ್ಪಳ ಜಿಲ್ಲೆಯ ಕಾರಟಗಿ ಪಟ್ಟಣದ ರಾಮನಗರ 14ನೇ ವಾರ್ಡ್ ನಿವಾಸಿ ಸುಲ್ತಾನ್ ಬಿ ಗಂಡ ರಾಜ ಭಕ್ಷಿ. ಗರ್ಭಿಣಿ ಮಹಿಳೆಯಾಗಿದ್ದಾಳೆ
ಸುಲ್ತಾನ್ ಬಿ ಅವರ ಪತಿ ರಾಜಭಕ್ಷಿಯು ಬೆಂಗಳೂರಿನ ಆಸ್ಪತ್ರೆಯಲ್ಲಿ ಕಿಡ್ನಿ ಸ್ಟೋನ್ ಚಿಕಿತ್ಸೆಗೊಳಗಾಗಿದ್ದರಿಂದ ಪ ತಿಯನ್ನು ನೋಡಿಕೊಂಡು ಶನಿವಾರ ತಮ್ಮ ಗ್ರಾಮಕ್ಕೆ ತೆರಳುವಾಗ ಚಿತ್ರದುರ್ಗದಿಂದ ಆಲೂರು ಮಧ್ಯದಲ್ಲಿ ಬಸ್ಸಿನಲ್ಲಿಪ್ರ ಯಾಣಿಸುತ್ತಿರುವಾಗ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಈ ಮಹಿಳೆಯು ಹೆ ರಿಗೆ ನೋವಿನಿಂದ ನರಳುತ್ತಿರುವುದನ್ನು ಪಯಣಕರು ನೋಡಿ ಬಸ್ ಚಾಲಕ ಮತ್ತು ನಿರ್ವಾಹಕನಿಗೆ ಸಮೀಪದ ಆರೋಗ್ಯ ಕೇಂದ್ರಕ್ಕೆ ಬಸ್ಸನ್ನು ತೆಗೆದುಕೊಂಡು ಹೋಗಲು ಹೇಳಿದರು. ಇದೇ ಬಸ್ ನಲ್ಲಿ ತುರುವನೂರಿನ ನಾಗವೇಣಿ ಎಂಬ ನರ್ಸ್ ಈ ಮಹಿಳೆಯನ್ನು ಗಮನಿಸುತ್ತಿದ್ದು ರಾಷ್ಟ್ರೀಯ ಹೆದ್ದಾರಿ 50ರ ಪಕ್ಕದಲ್ಲಿರುವ ಆಲೂರಿನ ಆರೋಗ್ಯ ಕೇಂದ್ರದ ನರ್ಸ್ ಆಗಿರುವ ಡಿಸಿ ಶಿಲ್ಪ ಅವರಿಗೆ ಫೋನ್ ಕರೆ ಮಾಡಿ ವಿಷಯ ತಿಳಿಸಿದರು. ಕೂಡಲೇ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಬರುವಂತೆ ತಿಳಿಸಿದಾಗ ಸರ್ಕಾರಿ ಬಸ್ ಚಾಲಕ ಮತ್ತು ನಿರ್ವಾಹಕ ಬಸ್ಸಿನೊಂದಿಗೆ ಆಲೂರಿನ ಆರೋಗ್ಯ ಕೇಂದ್ರಕ್ಕೆ ಕೊಂಡೊಯ್ದು ಹೆರಿಗೆ ನೋವಿನಿಂದ ನೆರಳುತ್ತಿದ್ದ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿದರು.
ಮಹಿಳೆಯು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ. ಗರ್ಭಿಣಿ ಸ್ತ್ರೀಯನ್ನು ಆಸ್ಪತ್ರೆಗೆ ದಾಖಲೆ ಮಾಡಿ ಮಾನವೀಯತೆ ಮೆರೆದಿದ್ದ ಬಸ್ ಚಾಲಕ ಮತ್ತು ನಿರ್ವಾಹಕನಿಗೆ ಸಾರ್ವಜನಿಕರು ಮಹಿಳೆಯರು ಅಭಿನಂದನೆ ಸಲ್ಲಿಸಿದ್ದಾರೆ.
Kalyanasiri Kannada News Live 24×7 | News Karnataka
