Breaking News

ಪೂಜೆ ಮುಗಿಸಿ ಊರಿಗೆ ಹಿಂತಿರುಗುವಾಗ ಟಾಟಾ ಏಸ್ ಪಲ್ಟಿ: 25 ಮಂದಿಗೆ ಗಾಯ

Tata Ace overturns while returning home after worship: 25 injured.

ಜಾಹೀರಾತು


ವರದಿ : ಬಂಗಾರಪ್ಪ .ಸಿ .
ಹನೂರು : ಅಮವಾಸ್ಯೆ ಹಾಗೂ ದೀಪಾವಳಿ ಹಿನ್ನೆಲೆಯಲ್ಲಿ ದೇವರ ದರ್ಶನ ಮತ್ತು ಪೂಜೆ ಮುಗಿಸಿ ಹಿಂತಿರುಗುವಾಗ ಟಾಟಾ ಏಸ್ ಗೂಡ್ಸ್ ವಾಹನ ಪಲ್ಟಿಯಾದ ಪರಿಣಾಮ 25ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ಹನೂರು ತಾಲೂಕಿನ ಹುಣಸೆಪಾಳ್ಯ ಎಂಬಲ್ಲಿ ನಡೆದಿದೆ.
ಗಾಯಗೊಂಡವರು ವಿ‌.ಎಸ್‌.ದೊಡ್ಡಿ ಗ್ರಾಮದವರು ಎಂದು ಗುರುತಿಸಲಾಗಿದೆ ,ಒಟ್ಟು 25ಕ್ಕೂ ಅಧಿಕ ಮಂದಿ ಈ ಅಪಘಾತದಲ್ಲಿ ಗಾಯಗೊಂಡಿದ್ದಾರೆ ಎನ್ನಲಾಗಿದೆ .
ಹುಣಸೆಪಾಳ್ಯ ಸಮೀಪ ತಟ್ಟೆಕೆರೆ ಮಹದೇಶ್ವರಸ್ವಾಮಿ ದೇವಾಲಯವಿದ್ದು ದೀಪಾವಳಿ ಹಿನ್ನೆಲೆ ತೆರಳಿ ಪೂಜೆ ಮುಗಿಸಿ ಹಿಂತಿರುಗುವಾಗ ಈ ಅವಘಡ ಉಂಟಾಗಿದೆ. ಸದ್ಯ ಎಲ್ಲರನ್ನೂ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಹನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

About Mallikarjun

Check Also

ಕುಷ್ಟಗಿ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ: ನೋಂದಣಿಗೆ ಸೂಚನೆ

Kushtagi Taluk Level Dasara Games: Notice for registration ಕೊಪ್ಪಳ ಆಗಸ್ಟ್ 29 (ಕರ್ನಾಟಕ ವಾರ್ತೆ): 2025-26ನೇ ಸಾಲಿನ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.