2nd District Conference of AICCT was a success
ಕೊಪ್ಪಳ ಜಿಲ್ಲೆ ಗಂಗಾವತಿ ನಗರದ ಮಹಾ ಲಕ್ಷ್ಮಿ ಕಲ್ಯಾಣ ಮಂಟಪದಲ್ಲಿ ಆಲ್ ಇಂಡಿಯಾ ಸೆಂಟ್ರಲ್ ಕೌನ್ಸಿಲ್ ಆಫ್ ಟ್ರೇಡ್ ಯೂನಿಯನ್ಸ್ (ಎಐಸಿಸಿಟಿಯು) ಕೊಪ್ಪಳ ಜಿಲ್ಲಾ 2ನೇ ಜಿಲ್ಲಾ ಸಮ್ಮೇಳನ ನಡೆಯಿತು.
ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಹಿರಿಯ ಕಾರ್ಮಿಕ ಮುಖಂಡ ಜೆ. ಭಾರದ್ವಾಜ್ ಮಾತನಾಡಿ 44 ಕಾರ್ಮಿಕ ಕಾನೂನುಗಳ ಬದಲಾಗಿ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಜಾರಿಗೊಳಿಸಿ, ಕಾರ್ಪೊರೇಟ್ ಬಂಡವಾಳಕ್ಕೆ ದೇಶದ ಸಂಪನ್ಮೂಲವನ್ನು ಧಾರೆ ಎರೆಯುತ್ತಾ, ಕಾರ್ಮಿಕ ವರ್ಗದ ವಿನಾಶಕ್ಕೆ ಹಾದಿಯನ್ನು ಸುಗಮಗೊಳಿಸುತ್ತಲಿದೆ. ಕಾರ್ಮಿಕರು ತನ್ನ ವರ್ಗ ಮತ್ತು ಹಕ್ಕುಗಳು ಹಾಗೂ ಕಾನೂನುಗಳನ್ನು ರಕ್ಷಿಸಿಕೊಳ್ಳಲು ಜೀವನ್ಮರಣದ ಹೋರಾಟಗಳಿಗೆ ಹೆಗಲೊಡ್ಡಬೇಕೆಂದು ಕಾರ್ಯಕರ್ತರಿಗೆ ಕರೆ ನೀಡಿದರು.
ಎಐಸಿಸಿಟಿಯು ರಾಜ್ಯ ಉಪಾಧ್ಯಕ್ಷೆ , ಮೈತೀಯಿ ಕೃಷ್ಣನ ಮಾತನಾಡಿ ಕೇಂದ್ರದ ಆರ್‌ಎಸ್‌ಎಸ್ ನೇತೃತ್ವದ ಫ್ಯಾಸಿಸ್ಟ್ ಆಳ್ವಿಕೆಯಿಂದ ಕಾರ್ಮಿಕ ವರ್ಗದ ಹಕ್ಕುಗಳು, ಕಾನೂನುಗಳನ್ನು ಮರೆ ಮಾಚುತ್ತಿವೆ. ಕಾರ್ಮಿಕರನ್ನು ಗುಲಾಮಗಿರಿಗೆ ತಳ್ಳುವ ಏರ್ಪಾಡನ್ನು ಮೋದಿ ಆಡಳಿತ ಸಿದ್ದಮಾಡಿಕೊಳ್ಳುತ್ತಿದೆ. ಕಾರ್ಮಿಕರ ಹಕ್ಕುಗಳಿಗಾಗಿ ಐಕ್ಯದಿಂದ ಹೋರಾಟ ತೀವ್ರಗೊಳಿಸಬೇಕೆಂದು ಎಂದರು.
ಎಐಸಿಸಿಟಿಯು ರಾಜ್ಯ ಸಮಿತಿ ಸದಸ್ಯರಾದ , ವಿಜಯ್ ದೊರರಾಜ್, ನಾಗರಾಜ ಪೂಜಾರ್ ಇತರರು ಮಾತನಾಡಿದರು.
ಪೌರಕಾರ್ಮಿಕರು, ಘನ ತ್ಯಾಜ್ಯ ವಿಲೇವಾರಿ ವಾಹನ ಚಾಲಕರು, ಕಟ್ಟಡ ಕಾರ್ಮಿಕರು, ಆಟೋ, ಹಮಾಲಿ, ಬೀದಿಬದಿ ವ್ಯಾಪಾರಿ, ಸೇರಿದಂತೆ ಕಾರ್ಮಿಕರನ್ನೊಳಗೊಂಡು ಜಿಲ್ಲೆಯ ಏಳು ತಾಲೂಕುಗಳ ಕಾರ್ಮಿಕ, ಕಾರ್ಮಿಕರ ಪ್ರತಿನಿಧಿಗಳು ಸಮ್ಮೇಳನದಲ್ಲಿ ಪಾಲ್ಗೊಂಡಿದ್ದರು.
ಸಮ್ಮೇಳನದಲ್ಲಿ 22 ಜನರ ಎಐಸಿಸಿಟಿಯು ಕೊಪ್ಪಳ ಜಿಲ್ಲಾ ಸಮಿತಿ ರಚಿಸಿ, ಭಾರದ್ವಜ್ ಜಿಲ್ಲಾ ಗೌರವ ಅಧ್ಯಕ್ಷರಾಗಿ, ದೊರರಾಜ್, ಜಿಲ್ಲಾ ಅಧ್ಯಕ್ಷರಾಗಿ, ಕೇಶವ ನಾಯಕ್ ಕಾರ್ಯದರ್ಶಿಯಾಗಿ ಆಯ್ಕೆಗೊಂಡರು.
ಇದೆ ಸಂದರ್ಭದಲ್ಲಿ ಸಣ್ಣ ಹನುಮಂತಪ್ಪ ಹುಲಿಹೈದರ, ಪರುಶುರಾಮ, ಚಂದಾ ಪಾಷಾ, ಮಾಯಮ್ಮ,ಪಾರ್ವತಮ್ಮ,ಬುರಾನ್ನುದ್ದಿನ್,ರೇಣುಕಮ್ಮ,ಕೆ.ದುರುಗಪ್ಪ,ಹುಲ್ಲೇಶ,ಮಂಜುನಾಥ, ಜಡಿಯಪ್ಪ ಇನ್ನಿತರರು ಇದ್ದರು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…