ಕಲ್ಯಾಣಸಿರಿ ವಿಶೇಷ

ಪತ್ರಿಕೋದ್ಯಮ ಪದವೀಧರರಿಂದ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

Applications invited for Apprentice Training from Journalism Graduates


ಬೆಂಗಳೂರು ನಗರ ಜಿಲ್ಲೆ, ಅಕ್ಟೋಬರ್ 13(ಕರ್ನಾಟಕ ವಾರ್ತೆ): ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2024-25 ನೇ ಸಾಲಿಗೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ವೃತ್ತಿಯಲ್ಲಿ ತೊಡಗಿಸಿಕೊಳ್ಳಲು ಪ್ರೋತ್ಸಾಹಿಸುವ ನಿಟ್ಟಿನಲ್ಲಿ 12 ತಿಂಗಳ ಅಪ್ರೆಂಟಿಸ್ ತರಬೇತಿಯನ್ನು ಹಮ್ಮಿಕೊಂಡಿದೆ.
ಬೆಂಗಳೂರು ನಗರ ಜಿಲ್ಲಾ ಕಚೇರಿಯಲ್ಲಿ ಪರಿಶಿಷ್ಟ ಜಾತಿಯ ಒಬ್ಬ ಅಭ್ಯರ್ಥಿಯನ್ನು ಹಾಗೂ ಪರಿಶಿಷ್ಟ ಪಂಗಡದ ಒಬ್ಬರನ್ನು ಮೆರಿಟ್ ಹಾಗೂ ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುವುದು. ಆಯ್ಕೆಯಾದ ಪ್ರತಿ ಅಪ್ರೆಂಟಿಸ್ ಗೆ ಮಾಹೆಯಾನ ರೂ 15,000ಗಳ ಸ್ಟೈಪೆಂಡ್ ನೀಡಲಾಗುವುದು. ಇಲಾಖೆಯ ಕ್ಷೇತ್ರ ಪ್ರಚಾರ ಕಾರ್ಯಗಳಲ್ಲಿ, ಸುದ್ದಿ ಸಂಗ್ರಹ, ರಚನೆ ಹಾಗೂ ವಿಶೇಷ ಲೇಖನ ರಚನೆಗಳಲ್ಲಿ ತರಬೇತಿ ನೀಡಲಾಗುವುದು. ಅಭ್ಯರ್ಥಿಗಳು ಕರ್ನಾಟಕದಲ್ಲಿ ಕಾನೂನಾತ್ಮಕವಾಗಿ ಸ್ಥಾಪಿತಗೊಂಡ ವಿಶ್ವವಿದ್ಯಾನಿಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ/ ಸ್ನಾತಕೋತ್ತರ ಪದವಿ ಪಡೆದಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿದ್ದು, ಕನ್ನಡ ಭಾಷಾ ಬಳಕೆಯಲ್ಲಿ ಪ್ರಬುದ್ಧತೆ ಇರಬೇಕು.
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳ ವಯಸ್ಸು 35 ವರ್ಷ ಮೀರಿರಬಾರದು. ಅರ್ಜಿಯೊಂದಿಗೆ ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಪದವಿ ಮತ್ತು ಸ್ನಾತಕೋತ್ತರ ಪದವಿ ಪ್ರಮಾಣ ಪತ್ರ, ಪಾಸ್ ಪೋರ್ಟ್ ಅಳತೆಯ ಎರಡು ಭಾವಚಿತ್ರ, ಕಂಪ್ಯೂಟರ್ ತರಬೇತಿ ಪ್ರಮಾಣ ಪತ್ರ ಹಾಗೂ ಇನ್ನಿತರ ಪೂರಕ ದಾಖಲೆಗಳನ್ನು ದ್ವಿ-ಪ್ರತಿಯಲ್ಲಿ ನವೆಂಬರ್ 15 ರೊಳಗಾಗಿ ಉಪನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆಂಗಳೂರು ನಗರ ಜಿಲ್ಲೆ, ವಾರ್ತಾ ಸೌಧ, 2ನೇ ಮಹಡಿ, ನಂ.17, ಭಗವಾನ್ ಮಹಾವೀರ್ ರಸ್ತೆ, ಬೆಂಗಳೂರು- 560001, ಇಲ್ಲಿಗೆ ಸಲ್ಲಿಸಬೇಕು. ತಡವಾಗಿ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಅರ್ಜಿ ಲಕೋಟೆಯ ಮೇಲೆ ಕಡ್ಡಾಯವಾಗಿ “ವಿಶೇಷ ಘಟಕ ಯೋಜನೆಯಡಿ ಹಾಗೂ ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ನೀಡುವ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ” ಎಂದು ನಮೂದಿಸಬೇಕು.
ಅರ್ಹ ಆಸಕ್ತರು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಮೇಲೆ ತಿಳಿಸಿರುವ ಇಲಾಖೆ ಕಚೇರಿಯ ದೂರವಾಣಿ ಸಂಖ್ಯೆ: 080-22028059, ಇ-ಮೇಲ್ – urbaninformation2016@gmail.com ಹಾಗೂ ಮೊ.ಸಂ: 9480841219 ಅನ್ನು ಸಂರ್ಪಕಿಸಬಹುದಾಗಿದೆ ಎಂದು ಬೆಂಗಳೂರು ನಗರ ಜಿಲ್ಲೆಯ ಉಪನಿರ್ದೇಶಕರಾದ ಪಲ್ಲವಿ ಹೊನ್ನಾಪುರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

15 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

15 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

15 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

15 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

15 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

15 hours ago