ಕಲ್ಯಾಣಸಿರಿ ವಿಶೇಷ

ಎನ್ ಕೆ ಪಿ ಎಂ ಶಾಲೆಯಲ್ಲಿ ಸಂಭ್ರಮದ ಮಕ್ಕಳ ದಿನಾಚರಣೆ ; ಚಾಚಾ ಸ್ಮರಣೆ

NKPM School celebrates Children’s Day; Chacha memory

ಕೊಪ್ಪಳ : ನಗರದ ಕುಷ್ಟಗಿ ರಸ್ತೆಯಲ್ಲಿರುವ ಎನ್ ಕೆ ಪಿ ಎಂ ಶಾಲೆಯಲ್ಲಿ ಸಂಭ್ರಮದ ಮಕ್ಕಳ ದಿನಾಚರಣೆ ಹಾಗೂ ಚಾಚಾ ಸ್ಮರಣೆಯನ್ನು ಮಕ್ಕಳು, ಶಿಕ್ಷಕರು ಮತ್ತು ಆಡಳಿತ ಮಂಡಳಿಯವರು ಸೇರಿ ಆಚರಿಸಿ ಸಂಭ್ರಮಿಸಿದರು.
ಭಾರತದ ಮೊದಲ ಪ್ರಧಾನಮಂತ್ರಿ ನೆಹರು ಅವರ ಜನ್ಮ ದಿನದ ಅಂಗವಾಗಿ ದೇಶಾದ್ಯಂತ ನಡೆಯುವ ಮಕ್ಕಳ ದಿನಾಚರಣೆಯನ್ನು ಶಾಲೆಯಲ್ಲಿ ವಿಶಿಷ್ಟವಾಗಿ ಆಚರಿಸಲಾಯಿತು. ಮಕ್ಕಳಿಗೆ ಶಿಕ್ಷಕರು ಸಿಹಿ ಕೊಟ್ಟು ಶುಭ ಕೋರಿದರು. ಈ ಸಂದರ್ಭದಲ್ಲಿ ಮಕ್ಕಳಿಗೆ ವಿವಿದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿದ್ದರು. ಮಕ್ಕಳು ನೆಹರು ಅವರ ಕುರಿತು ಭಾಷಣ ಮಾಡಿ ಮೆಚ್ಚುಗೆ ಗಳಿಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿಗಳಾದ ಮಧುಮತಿ ಪಟ್ಟಣಶೆಟ್ಟರ್,
ಮುಖ್ಯೋಪಾಧ್ಯಾಯರಾದ ಸವಿತಾ ಗೌಡರ್, ಶಿಕ್ಷಕರಾದ ಲಕ್ಷ್ಮೀ, ಸವಿತಾ ಸಾಕರೆ, ರಂಗಮ್ಮ, ಜುಲೇಖ ಬೇಗಂ, ಲಕ್ಷ್ಮೀ ವ್ಯಾಸಮುದ್ರೆ, ರೇಣುಕಾ ಬೇಡವಟಿಗಿ, ಶರಣವ್ವ ಎಂ. ಪಿ., ಸುಜಾತಾ, ನಿರ್ಮಲಾ ಹಿರೇಮಠ ಮಕ್ಕಳು ಇದ್ದರು.
ಸಂಸ್ಥೆಯ ಕಾರ್ಯದರ್ಶಿ ಮಧುಮತಿ ಪಟ್ಟಣಶೆಟ್ಟರ್ ಮಾತನಾಡಿ, ಮಕ್ಕಳು ಮುಂದಿನ ನಾಯಕರು ಎನ್ನುತ್ತೇವೆ ಆದರೆ ಮಕ್ಕಳೇ ನಿಜವಾದ ಭವಿಷ್ಯ ರೂಪಿಸುವ ನಾಯಕರು, ಇಂದಿನ ಪ್ರಜೆಗಳು. ಮಕ್ಕಳ ಮನಸ್ಸು ಬಿಳಿ ಹಾಳೆಯ ರೀತಿ ಅಲ್ಲಿ ಏನು ಬರೆಯಬೇಕು ಎಂಬುದನ್ನು ಪೋಷಕರು ಮತ್ತು ಶಿಕ್ಷಕರು ಆಲೋಚಿಸಿ ಬರೆಯಬೇಕು, ದೇಶವನ್ನು ಕಟ್ಡುವ ನಾಡನ್ನು ಉತ್ತಮವಾಗಿ ನಡೆಸುವ ಹಾದಿಯನ್ನು ಕಲಿಸಬೇಕು, ಸಂಸ್ಕಾರಯುತರನ್ನಾಗಿ ಮಾಡಬೇಕು ಎಂದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

7 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

7 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

8 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

8 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

8 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

8 hours ago