Breaking News

ಮಹಾ ವಿಕಾಸ್ ಅಘಾಡಿಮೈತ್ರಿಕೂಟದಿಂದ ಸರ್ಕಾರ ರಚನೆ-ಗೃಹ ಸಚಿವಡಾ.ಜಿ.ಪರಮೇಶ್ವರ ಹೇಳಿಕೆ

Government formation by Maha Vikas Aghadi alliance – Home Minister G. Parameshwara’s statement

ಜಾಹೀರಾತು


-ಮುಂಬೈ ಮತ್ತು ಕೊಂಕಣ್‌ನಲ್ಲಿ ಗೃಹ ಸಚಿವ ಜಿ.ಪರಮೇಶ್ವರ ಅವರಿಂದ ಚುನಾವಣಾ‌ ಪ್ರಚಾರ ಸಭೆ

ಮುಂಬೈ, ನವೆಂಬರ್ 16:- ಚುನಾವಣೆಯಲ್ಲಿ ಮಹಾ ವಿಕಾಸ್ ಅಘಾಡಿ ಮೈತ್ರಿಕೂಟವು ಹೆಚ್ಚು ಸ್ಥಾನಗಳನ್ನು ಗೆದ್ದು, ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಮಾಡಲಿದೆ ಎಂದು ಕರ್ನಾಟಕ ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು.

ಕರ್ನಾಟಕದಲ್ಲಿ ಎಲ್ಲ ವರ್ಗದ ಜನರಿಗೆ ಐದು ಗ್ಯಾರಂಟಿ ಯೋಜನೆಗಳನ್ನು ಸಮರ್ಪವಾಗಿ ಅನುಷ್ಟಾನಗೊಳಿಸಿರುವುದನ್ನು ಸಹಿಸಲಾಗದ ಪ್ರಧಾನಿ ನರೇಂದ್ರ ಮೋದಿಯವರು ಕರ್ನಾಟಕ ಸರ್ಕಾರದ ವಿರುದ್ಧ ಸುಳ್ಳು ಆಪಾದನೆಗಳನ್ನು ಮಾಡುತ್ತಿದ್ದಾರೆ ಎಂದು ಗೃಹ ಸಚಿವ ಪರಮೇಶ್ವರ ಅವರು ಹೇಳಿದರು‌.

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಮುಂಬೈ ಮತ್ತು ಕೊಂಕಣ್ ಭಾಗದಲ್ಲಿ ಮುಖಂಡರೊಂದಿಗೆ ಪ್ರಚಾರ ಸಭೆಗಳನ್ನು ನಡೆಸಿದರು. ಬಳಿಕ ಮುಂಬೈ ಪ್ರದೇಶ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಿ, ಸಮೀಕ್ಷೆಯ ಪ್ರಕಾರ ಮಹಾರಾಷ್ಟ್ರ ಚುನಾವಣೆಯಲಿ ಮಹಾವಿಕಾಸ್ ಅಘಾಡಿ ಮೈತ್ರಿಕೂಟವು 162ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ. ನಾವೇ ಸರ್ಕಾರ ರಚನೆ ಮಾಡಲಿದ್ದೇವೆ ಎಂದರು.

ಏಕನಾಥ್ ಶಿಂಧೆ ಹಾಗೂ ದೇವೇಂದ್ರ ಫಡ್ನಾವಿಸ್ ಅವರು ಮಹಾರಾಷ್ಟ್ರದಲ್ಲಿ ಕಾನೂನು ಸುವ್ಯವಸ್ಥೆಯನ್ನು ಸಂಪೂರ್ಣವಾಗಿ ಹಾಳು ಮಾಡಿದ್ದಾರೆ. ಡ್ರಗ್ಸ್ ದಂಧೆ, ಮಹಿಳೆಯರ ನೇಲಿನ ದೌರ್ಜನ್ಯ, ಕೊಲೆ ಹೆಚ್ಚಾಗಿವೆ. ಮುಂಬೈ ನಗರದಲ್ಲಿ ಮಹಿಳಾ ಸುರಕ್ಷತೆಗೆ ಒತ್ತು ನೀಡಿಲ್ಲ. ಕೇಂದ್ರ ಸರ್ಕಾರ ನಿರ್ಭಯಾ ಯೋಜನೆಯಡಿ ನೀಡಿದ ಅನುದಾನವನ್ನು ಸಮರ್ಪಕವಾಗಿ ಬಳಸಿಲ್ಲ. ಹೀಗಾಗಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಮಹಾರಾಷ್ಟ್ರವನ್ನು ಎರಡನೇ ಸ್ಥಾನಕ್ಕೆ ತಂದು ನಿಲ್ಲಿಸಿದ್ದಾರೆ ಎಂದರು.

ಡ್ರಗ್ ದಂಧೆಯನ್ನು ನಿಯಂತ್ರಿಸುವಲ್ಲಿ ಮಹಾರಾಷ್ಟ್ರ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ಯುವಕರು ದೊಡ್ಡಮಟ್ಟದಲ್ಲಿ ಮಾದಕ ದ್ರವ್ಯ ವ್ಯಸನಕ್ಕೆ ಬಲಿಯಾಗುತ್ತಿದ್ದಾರೆ. ಬಾಬಾ ಸಿದ್ಧಿಕಿ ಹತ್ಯೆ ಪ್ರಕರಣವು ಜನರ ಸುರಕ್ಷತೆಯ ಪ್ರಶ್ನೆಯನ್ನು ಹುಟ್ಟುಹಾಕಿದೆ. ಮುಂಬೈನಲ್ಲಿ ನಡೆಯುವ ಹಿಂಸಾತ್ಮಕ ಅಪರಾಧಗಳು ಜನರಲ್ಲಿ ಆತಂಕ ಹುಟ್ಟಿಸಿದೆ. ಮಹಾರಾಷ್ಟ್ರದ ಈ ದುಸ್ಥಿತಿಗೆ ಕಾರಣರಾದ ಬಿಜೆಪಿ ನಾಯಕರು ತಕ್ಕ ಪ್ರತಿಫಲ ಅನುಭವಿಸಲಿದ್ದಾರೆ ಎಂದು ಎಚ್ಚರಿಸಿದರು.

ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಘೊಷಣೆಯಾದ ಬಳಿಮ ಮುಂಬೈ ಮತ್ತು ಕೊಂಕಣದಲ್ಲಿ ನಾನು ಪ್ರವಾಸ ಕೈಗೊಂಡು ಕೆಲವು ಅವಲೋಕನಗಳನ್ನು ಮಾಡಿದ್ದೇನೆ. ಹಿಂದಿನ ಸರ್ಕಾರವು ಮಹಾರಾಷ್ಟ್ರದ ಅತ್ಯಂತ ಭ್ರಷ್ಟ ಸರ್ಕಾರವಾಗಿದೆ ಎಂಬುದು ಸ್ಥಳೀಯ ಜನರ ಮಾತಾಗಿದೆ. ಏಕ್‌ನಾಥ್ ಶಿಂಧೆ, ಉಪಮುಖ್ಯಮಂತ್ರಿ ದೇವೇಂದ್ರ ಫಡ್ನಾವಿಸ್ ಅವರು ಬಡವರ ಪರವಾಗಿ ಆಡಳಿತವನ್ನು ನೀಡಿಲ್ಲ. ಉಳ್ಳವರ‌ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಿದ್ದಾರೆ ಎಂದು ಹರಿಹಾಯ್ದರು.

ದೇವೇಂದ್ರ ಫಡ್ನವಿಸ್ ಅವರು ಆಂಬ್ಯುಲೆನ್ಸ್‌ ಖರೀದಿಗೆ ರೂ. 8 ಸಾವಿರ ಕೋಟಿಯನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. 5 ಲಕ್ಷ ಯುವಕರಿಗೆ ಉದ್ಯೋಗ ನೀಡುವ ಭರವಸೆವನ್ನು ಈಡೇರಿಸಿಲ್ಲ. ಮಹಾರಾಷ್ಟ್ರದ ಅಭಿವೃದ್ಧಿಯ ಅನುದಾನವನ್ನು ಗುಜುರಾತ್‌ಗೆ ಸಾಗಿಸುತ್ತಿದ್ದಾರೆ. ಮಹಾರಾಷ್ಟ್ರದ ನಾಗರಿಕರ ಸುರಕ್ಷತೆಯ ಬಗ್ಗೆ ಸರ್ಕಾರಕ್ಕೆ ಕಿಂಚಿತ್ತು ಕಾಳಜಿ ಇಲ್ಲ‌‌ ಎಂದು ಕಿಡಿಕಾರಿದರು.

ಪ್ರಧಾನಿ ಮೋದಿ ಸುಳ್ಳು ಆಪಾದನೆ:-
2023ರ ಕರ್ನಾಟಕ ವಿಧಾನಸಭಾ ಚುನಾವಣೆ ಪ್ರಣಾಳಿಕೆಯಲ್ಲಿ ಮಹಿಳೆಯರು, ಬಡವರ ಅಭಿವೃದ್ಧಿಗೆ ಐದು ಗ್ಯಾರಂಟಿ ಯೋಜ‌ನೆಗಳನ್ನು ನೀಡುವುದಾಗಿ ಭರವಸೆ ನೀಡಿದ್ದೆವು. ಸರ್ಕಾರ ಅಸ್ಥಿತ್ವಕ್ಕೆ ಬಂದ‌ ಕೂಡಲೇ ಗೃಹಲಕ್ಷ್ಮೀ ಯೋಜನೆಯಡಿ ಮಹಿಳೆಯರಿಗೆ 2000 ರೂ, 200 ಯೂನಿಟ್ ಉಚಿತ ವಿದ್ಯುತ್, ಸಾರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣ, ಅನ್ನಭಾಗ್ಯ ಯೋಜನೆಯಡಿ 10 ಕೆ.ಜಿ. ಅಕ್ಕಿ ಹಾಗೂ ನಿರುದ್ಯೋಗಿ ಯುವಕರಿಗೆ ಯುವನಿಧಿ ಯೋಜನೆಯಡಿ 3 ಸಾವಿರ ರೂ. ನೀಡುತ್ತಿದ್ದೇವೆ. ಕಳೆದ ಬಜೆಟ್‌ನಲ್ಲಿ ಗ್ಯಾರಂಟಿ ಯೋಜನೆಗಳಿಗೆ ರೂ. 56 ಸಾವಿರ ಕೋಟಿ ಮೀಸಲಿಟ್ಟಿದ್ದೇವೆ ಎಂದು ತಿಳಿಸಿದರು.

ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ:-
ಗ್ಯಾರಂಟಿ ಯೋಜನೆಗಳ ಅನುಷ್ಟಾನದ ಜೊತೆಗೆ ಎಲ್ಲಾ ರೀತಿಯ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೊಂಡಿದ್ದೇವೆ. ರಾಜ್ಯದಲ್ಲಿ ಯಾವುದೇ ರೀತಿಯ ಹಣಕಾಸಿನ ತೊಂದರೆ ಇಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ಕಾರ್ಯವೈಖರಿಯನ್ನು ಸಹಿಸದ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರದ ಗೃಹ ಸಚಿವ ಅಮಿತ್ ಷಾ ಹಾಗೂ ಇತರೆ ಬಿಜೆಪಿ ನಾಯಕರು ಸತ್ಯಕ್ಕೆ ದೂರವಾದ ಆರೋಪಗಳನ್ನು ಮಾಡುತ್ತಿದ್ದಾರೆ. ಯಾವುದೇ ಕಾರಣಕ್ಕು ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ಸುರೇಶ್ ಶೆಟ್ಟಿ, ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ರಮೇಶ್ ಶೆಟ್ಟಿ, ಕಾಂಗ್ರೆಸ್ ವಕ್ತಾರ ಸುರೇಂದ್ರ ರಜಪೂತ್ ಅವರು ಇದ್ದರು

About Mallikarjun

Check Also

ಮತದಾರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಿಕೊಳ್ಳಿ,ಶಿರಸ್ತೇದಾರ ರವಿಕುಮಾರ್ ನಾಯಕವಾಡಿ ಸಲಹೆ

Include the name in the voter list, Chief Ravikumar suggested ಜಿಎಚ್ ಎನ್ ಕಾಲೇಜಿನಲ್ಲಿ ಮತದಾರ ಪಟ್ಟಿಯ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.