In the town of Kushtagi. Interfaith mass wedding program on 29th
ವರದಿ : ಪಂಚಯ್ಯ ಹಿರೇಮಠ,,
ಕೊಪ್ಪಳ : ಕುಷ್ಟಗಿ ಪಟ್ಟಣದ ಬನ್ನಿ ಮಹಾಂಕಾಳಿ ದೇವಿಯ ಮಹಾಭಿಷೇಕದ ಪ್ರಯುಕ್ತ ನ. 29ರ ಶುಕ್ರವಾರದಂದು ಬೆಳಗ್ಗೆ ಸರ್ವಧರ್ಮದ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಸಮಾಜ ಸೇವಕ ವಜೀರ ಅಲಿ ಗೋನಾಳ ಇವರ ನೇತೃತ್ವದಲ್ಲಿ ನಡೆಯಲಿವೆ.
ವೇದಿಕೆಯ ಕಾರ್ಯಕ್ರಮದ ಸಾನಿಧ್ಯವನ್ನು ವಿವಿಧ ಮಠಾಧೀಶರು ವಹಿಸುವರು, ಕಾರ್ಯಕ್ರಮವನ್ನು ಸಂಸದ ರಾಜಶೇಖರ ಹಿಟ್ನಾಳ ಉದ್ಘಾಟಿಸುವರು, ಅಧ್ಯಕ್ಷತೆಯನ್ನು ಶಾಸಕ ದೊಡ್ಡನಗೌಡ ಪಾಟೀಲ ವಹಿಸುವರು, ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಅಮರೇಗೌಡ ಬಯ್ಯಾಪೂರ, ಚಿತ್ರ ನಿರ್ಮಾಪಕ ಸುರೇಶಗೌಡ್ರು, ಕಾಡಾ ನಿಗಮದ ಅಧ್ಯಕ್ಷ ಹಸನಸಾಬ ದೋಟಿಹಾಳ, ಪ್ರಭಾಕರ ಚಿಣಿ, ಡಾ. ಕೆ. ಬಸವರಾಜ ಸೇರಿದಂತೆ ಅನೇಕರು ಭಾಗವಹಿಸಲಿದ್ದಾರೆ.
ಈ ವೇಳೆ ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ ಸಮಾರಂಭ ಹಾಗೂ ಸಂಗೀತ ಕಾರ್ಯಕ್ರಮ ನಡೆಯಲಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.