Kadai Morehoda farmer of the house for the protection of Fengal.
ವರದಿ : ಬಂಗಾರಪ್ಪ .ಸಿ.
ಹನೂರು.:ಫೆಂಗಲ್ ಚಂಡಮಾರುತದ ಪರಿಣಾಮವಾಗಿ ಹನೂರಿನ ಖಾಸಾಗಿ ಬಸ್ ನಿಲ್ದಾಣದಲ್ಲಿ ಸಂಚಾರ ಮಾಡಲು ಮನೆಯ ಅಂಡೆ(ಕಡಾಯಿಯನ್ನೆ ) ತನಗೆ ಆಸರೆ ಮಾಡಿಕೊಂಡ ಘಟನೆ ನಡೆದಿದೆ .
ಹನೂರು ತಾಲ್ಲೂಕಿನ ಹೂಗ್ಯ ಗ್ರಾಮದ ರೈತರೊಬ್ಬರು ಚಾಮರಾಜನಗರ ಜಿಲ್ಲೆಯಲ್ಲಿ ಸತತವಾಗಿ ಮಳೆಯಾಗುತ್ತಿದ್ದರ ಪರಿಣಾಮವಾಗಿ ತನ್ನ ರಕ್ಷಣೆ ಮಾಡಿಕೊಂಡಿರುವ ಘಟನೆ ನಡೆದಿದೆ. ಜಿಲ್ಲೆಯಲ್ಲಿ ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ ಮಳೆ ಮುಂದುವರೆಯುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ಡಿಸೆಂಬರ್ 3ರ ಮಂಗಳವಾರವು ಸಹ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ತಿಳಿಸಿದ್ದಾರೆ.ಪರೀಕ್ಷೆ ನಡೆಯುತ್ತಿರುವ ಪದವಿ ಕಾಲೇಜುಗಳಿಗೆ ಹೊರತುಪಡಿಸಿ ರಜೆ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ತಿಳಿಸಿದ್ದಾರೆ.