Breaking News

ಡಿ. 6 ರಿಂದ 8 ರ ವರೆಗೆ 15 ನೇ ರಾಷ್ಟ್ರೀಯ ಮಹಿಳಾ ವಿಜ್ಞಾನ ಸಮ್ಮೇಳನ : ಕನ್ನಡ ಭಾಷೆಗೆ ವಿಜ್ಞಾನ, ತಂತ್ರಜ್ಞಾನ ತಲುಪಿಸಲು ವಿನೂತನ ಪ್ರಯತ್ನ .


D.15th National Women’s Science Conference from 6th to 8th: An innovative effort to bring science and technology to Kannada language.

ಜಾಹೀರಾತು


ಬೆಂಗಳೂರು, ಡಿ, 5; ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾನಿಲಯ, ಸ್ವದೇಶಿ ವಿಜ್ಞಾನ ಆಂದೋಲನ ಮತ್ತು ಶೇಷಾದ್ರಿಪುರಂ ಶಿಕ್ಷಣ ಸಂಸ್ಥೆ ಸಹಭಾಗಿತ್ವದಲ್ಲಿ ಡಿಸೆಂಬರ್ 6 ರಿಂದ 8 ರವರೆಗೆ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಆವರಣದಲ್ಲಿ “15ನೇ ರಾಷ್ಟ್ರೀಯ ಮಹಿಳಾ ವಿಜ್ಞಾನ ಸಮ್ಮೇಳನ”ವನ್ನು ಆಯೋಜಿಸಲಾಗಿದೆ. ವಿಜ್ಞಾನ ಕ್ಷೇತ್ರದಲ್ಲಿ ಮಹಿಳೆಯರ ಸಾಧನೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ಈ ವೈಜ್ಞಾನಿಕ ಸಮ್ಮೇಳನ ಸಹಕಾರಿಯಾಗಲಿದೆ.
ವಿಜ್ಞಾನ ಮತ್ತು ತಂತ್ರಜ್ಞಾನವನ್ನು ಜನಸಾಮಾನ್ಯರಿಗೆ ಮತ್ತು ವಿಶೇಷವಾಗಿ ವಿದ್ಯಾರ್ಥಿಗಳಿಗೆ ಕನ್ನಡ ಭಾಷೆಯಲ್ಲಿ ತಲುಪಿಸುವ ಗುರಿ ಹೊಂದಲಾಗಿದೆ. ಆಧುನಿಕ ವಿಜ್ಞಾನದ ಜೊತೆಗೆ ಪಾರಂಪರಿಕ ವಿಜ್ಞಾನಗಳಾದ ಮನೋ ಆಧ್ಯಾತ್ಮಿಕ, ಸಾಮಾಜಿಕ, ಸಾಂಸ್ಕೃತಿಕ, ಯೋಗ, ಭಾರತೀಯ ಪಾರಂಪರಿಕ ವೈದ್ಯಕೀಯ ಪದ್ಧತಿ, ಕಲೆ, ಸಾಹಿತ್ಯ ಮತ್ತು ಆಧುನಿಕ ವಿಜ್ಞಾನಗಳನ್ನೊಳಗೊಂಡ ಸ್ವದೇಶಿ ವಿಜ್ಞಾನವನ್ನು ಉತ್ತೇಜಿಸಲು ಈ ವಿಜ್ಞಾನ ಮೇಳವನ್ನು ಆಯೋಜಿಸಲಾಗಿದೆ ಎಂದು ಕರ್ನಾಟಕ ಸಂಸ್ಕೃತ ವಿ.ವಿ. ಕುಲಪತಿ ಡಾ. ಎಸ್. ಅಹಲ್ಯ, ಮಾತೃವೇದಿಕೆ ಸ್ವದೇಶಿ ವಿಜ್ಞಾನ ಆಂದೋಲನದ ಸಂಚಾಲಕರಾದ ಡಾ ವೈ. ಎಸ್. ಗಾಯತ್ರಿರವರು ತಿಳಿಸಿದ್ದಾರೆ.
ರಾಜ್ಯದಲ್ಲಿ ಸ್ವದೇಶಿ ವಿಜ್ಞಾನ ಆಂದೋಲನ 25 ಜಿಲ್ಲಾ ಘಟಕಗಳನ್ನು ಹೊಂದಿದ್ದು, ಮಹಿಳಾ ವಿಜ್ಞಾನ ಸಮ್ಮೇಳನದಲ್ಲಿ ರಾಜ್ಯದ ವಿಶ್ವವಿದ್ಯಾನಿಲಯ ಮತ್ತು ಪ್ರಾಧ್ಯಾಪಕರು, ಶಿಕ್ಷಕರು, ಸಂಶೋಧನಾ ವಿದ್ಯಾರ್ಥಿಗಳು, ಅನ್ವೇಷಣಾಭಿವೃದ್ಧಿ ಸಂಸ್ಥೆಗಳ ಮಹಿಳಾ ವಿಜ್ಞಾನಿಗಳು ಭಾಗಹಿಸಲಿದ್ದಾರೆ. ಭಾರತರತ್ನ ಸರ್ ಸಿ. ವಿ. ರಾಮನ್ ಮಹಿಳಾ ವಿಜ್ಞಾನ ಪುರಸ್ಕಾರವನ್ನು ನಿರ್ಮಯಿ ಹೆಲ್ಸ್ ಅನಲೆಟಿಕ್ಸ್ ಸಂಸ್ಥೆಯ ಸಂಸ್ಥಾಪಕರಾದ ಡಾ. ಗೀತಾ ಮಂಜುನಾಥ ಮತ್ತು ಮೇಡಂ ಕ್ಯೂರಿ ಮಹಿಳಾ ವಿಜ್ಞಾನ ಪುರಸ್ಕಾರವನ್ನು ಬೆಂಗಳೂರಿನ ನಿಯಾಸ್ ಸಂಸ್ಥೆಯ ಪ್ರಾಧ್ಯಾಪಕರಾದ ಡಾ. ದೀಪ್ತಿ ನವರತ್ನ ರವರಿಗೆ ನೀಡಿ ಗೌರವಿಸಲಾಗುವುದು ಎಂದು ಹೇಳಿದ್ದಾರೆ.
ದೇಶದ 200 ಕ್ಕೂ ಹೆಚ್ಚು ಮಹಿಳಾ ವಿಜ್ಞಾನಿಗಳು, ಪ್ರಾಧ್ಯಾಪಕರು, ಸಂಶೋಧಕರು ಮತ್ತು ವಿದ್ಯಾರ್ಥಿಗಳು ವೈಜ್ಞಾನಿಕ ಲೇಖನ, ಪ್ರಬಂಧಗಳನ್ನು ಇಂಗ್ಲೀಷ್, ಕನ್ನಡ, ಹಿಂದಿ ಮತ್ತು ಸಂಸ್ಕೃತ ಭಾಷೆಯಲ್ಲಿ ಮಂಡಿಸಲಿದ್ದಾರೆ. ಸಾಹಿತ್ಯ ಪರಿಷತ್ ನ ಶ್ರೀ ಕೃಷ್ಣರಾಜ ಪರಿಷತ್ ಮಂದಿರದಲ್ಲಿ ಡಿ. 6 ರಂದು ಬೆಳಿಗ್ಗೆ 10 ಗಂಟೆಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರಾದ ಸಿಂಧೂ ಬಿ. ರೂಪೇಶ್ ರವರು ಸಮ್ಮೇಳನ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಸಂಸ್ಕೃತ ವಿ.ವಿ. ಕುಲಪತಿ ಡಾ. ಎಸ್. ಅಹಲ್ಯ, ಮಹಿಳಾ ವಿಜ್ಞಾನಿಗಳಾದ ಡಾ. ವಿ. ಶುಭಾ ಪಾಲ್ಗೊಳ್ಳಲಿದ್ದು, ಕೊಚ್ಚಿಯ ಚಿನ್ಮಯಿ ಅಂತರರಾಷ್ಟ್ರೀಯ ಪ್ರತಿಷ್ಠಾನದ ನಿರ್ದೇಶಕರಾದ ಡಾ. ಗೌರಿ ಮಹುಲಿಕರ್ ಪ್ರಧಾನ ಭಾಷಣ ಮಾಡಲಿದ್ದಾರೆ. ಸ್ವದೇಶಿ ವಿಜ್ಞಾನ ಆಂದೋಲನ- ಕರ್ನಾಟಕ ಘಟಕದ ರಾಜ್ಯಾಧ್ಯಕ್ಷ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಶೇಷಾದ್ರಿಪುರಂ ಶಿಕ್ಷಣ ಸಂಸ್ಥೆಯ ಗೌರವ ಪ್ರಧಾನ ಕಾರ್ಯದರ್ಶಿ ನಾಡೋಜ ಡಾ. ವೊಡೇ ಪಿ. ಕೃಷ್ಣ, ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಕುಲಸಚಿವರಾದ ವಿಶ್ವನಾಥ ಪಿ. ಹಿರೇಮಠ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.

About Mallikarjun

Check Also

ಕೊಪ್ಪಳಗದಗರಾಷ್ಟ್ರೀಯ ಹೆದ್ದಾರಿಯಲ್ಲಿ,,! ಟ್ರ್ಯಾಕ್ಟರ್ ಹಾಗೂ ಲಾರಿ ಮದ್ಯೆ ಡಿಕ್ಕಿ ಓರ್ವ ಸಾವು,,,

On Koppal Gadag National Highway,,! A collision between a tractor and a lorry resulted in …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.