ಕಲ್ಯಾಣಸಿರಿ ವಿಶೇಷ

ಆನ್‌ ಲೈನ್ ಗೇಮಿಂಗ್ ನಿಷೇಧಕ್ಕೆ ಬೆಳ್ಳೆಪ್ಪ ಬೂದುಗುಂಪಿ ಒತ್ತಾಯ

Belleppa Graygumpy urges ban on online gaming

ಕೊಪ್ಪಳ ಡಿಸೆಂಬರ್ 10: ರಮ್ಮಿ, ಪೋಕರ್ ಸೇರಿ ಆನ್‌ಲೈನ್ ಗೇಮಿಂಗ್ ಎಂಬ ಜೂಜಾಟದ ವ್ಯಸನಕ್ಕೆ ಹಲವು ಯುವಕರು ಬಲಿಯಾಗುತ್ತಿರುವ ಬಗ್ಗೆ ಪ್ರಕರಣಗಳು ಬರುತ್ತಿವೆ. ಹಾಗಾಗಿ ಇಂತಹ ಆನ್ಲೈನ್ ಗೇಮ್‌ಗಳ ನಿಷೇಧ ಮಾಡಬೇಕು ಎಂದು ಬೆಳ್ಳೆಪ್ಪ ಬೂದುಗುಂಪಿ ಒತ್ತಾಯಿಸಿದ್ದಾರೆ.

ಅವರು ಮಂಗಳವಾರ ಕೊಪ್ಪಳ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ನಮ್ಮ ಕರ್ನಾಟಕ ಸೇನೆ ವತಿಯಿಂದ ಆನ್ಲೈನ್ ಗೇಮ್ ನಿಷೇಧ ಮಾಡುವಂತೆ ಒತ್ತಾಯಿಸಿ ಮನವಿ ಸಲ್ಲಿಸಿ ನಂತರ ಮಾತನಾಡಿ, ರಾಜ್ಯದಲ್ಲಿ ಯುವಕರು ಈ ಆನ್‌ಲೈನ್ ಜೂಜಾಟದಲ್ಲಿ ವ್ಯಸ್ತರಾಗಿದ್ದಾರೆ. ಎಷ್ಟೋ ಬಡ ಕುಟುಂಬಗಳು ಇದರಿಂದ ನಾಶವಾಗಿ ಹೋಗಿದೆ. ಕೆಲ ಚಿತ್ರರಂಗದ ನಟರು ಹಾಗೂ ಕೆಲವರು ಆನ್ಲೈನ್ ಗೇಮ್ ಪ್ರಮೋಟ್ ಮಾಡುತ್ತಿದ್ದಾರೆ. ಆನ್ಲೈನ್ ಗೇಮ್ ನಿಂದ ವಂಚನೆಗೆ ಒಳಗಾದ ವ್ಯಕ್ತಿಗಳಿಗೆ ಇವರಿಂದ ಪರಿಹಾರ ಕೊಡಿಸಿದಾಗ ಮಾತ್ರ ಅವರಿಗೆ ಅರ್ಥವಾಗುತ್ತದೆ. ಆನ್ಲೈನ್ ಜೂಜಾಟದ ಗೇಮ್ ಪ್ರಮೋಟ್ ಮಾಡುವ ಚಿತ್ರರಂಗದ ನಟರಿಗೆ ಹಾಗೂ ಪ್ರಮೋಟ್ ಮಾಡುವ ವ್ಯಕ್ತಿಗಳು ಈಗಲಾದರೂ ಅರ್ಥ ಮಾಡಿಕೊಂಡು ಆನ್ಲೈನ್ ಗೇಮ್ ಪ್ರಮೋಟ್ ಮಾಡುವುದನ್ನು ನಿಲ್ಲಿಸಬೇಕು. ರಾಜ್ಯ ಸರ್ಕಾರ ಈ ಮನೆಹಾಳು ಆನ್ ಲೈನ್ ಗೇಮಿಂಗ್‌ಗಳ ಮೇಲೆ ನಿಷೇಧ ಹೇರಬೇಕು ಎಂದು ನಮ್ಮ ಕರ್ನಾಟಕ ಸೇನೆ ಪ್ರಚಾರ ಸಮಿತಿ ಜಿಲ್ಲಾಧ್ಯಕ್ಷರಾದ ಬೆಳ್ಳೆಪ್ಪ ಬೂದುಗುಂಪಿ ರವರು ಒತ್ತಾಯಿಸಿದರು. ನಂತರ ಜಿಲ್ಲಾಧ್ಯಕ್ಷರಾದ ಬಂದೇ ನವಾಜ್ ಮಾತನಾಡಿ, ಕಾಲೇಜು ಯುವಕರು ಆನ್ಲೈನ್ ಜೂಜಾಟದಲ್ಲಿ ತೊಡಗಿ ಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ. ಕೆಲವರು ಹಣ, ಆಸ್ತಿಯನ್ನು ಕಳೆದುಕೊಂಡು ಸಾಲ ಸಾಲಬಾಧೆ ತಾಳಲಾರದೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ರಾಜ್ಯದಲ್ಲಿ ಜೂಜಾಟ ನಿಷೇಧ ಮಾಡಲಾಗಿದೆ. ಆದರೆ ಆನ್ಲೈನ್ ಜೂಜಾಟಕ್ಕೆ ಅವಕಾಶ ಇದು ನಿಜಕ್ಕೂ ದುರಂತ. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಹಾಗೂ ಸರ್ಕಾರ ಕೂಡಲೇ ಸಿಕ್ಕಿಂ ಮತ್ತು ಮಣಿಪಾಲ್ ರಾಜ್ಯಗಳಲ್ಲಿ ಆನ್ಲೈನ್ ಗೇಮ್ ನಿಷೇಧಿಸಿದಂತೆ, ಕರ್ನಾಟಕ ರಾಜ್ಯದಲ್ಲಿ ನಿಷೇಧ ಮಾಡಬೇಕು ಎಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ಯುವ ಘಟಕ ಅಧ್ಯಕ್ಷರಾದ ಬಸವರಾಜ್ ಹಂದ್ರಾಳ, ತಾಲೂಕ ಅಧ್ಯಕ್ಷರಾದ ರಮೇಶ್ ನರೇಗಲ್, ಉಪಾಧ್ಯಕ್ಷರಾದ ಭೂಪತಿ ರೆಡ್ಡಿ, ಸೇರಿದಂತೆ ಇತರೆ ಪದಾಧಿಕಾರಿಗಳು ಉಪಸ್ಥಿತರಿದ್ದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

16 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

16 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

16 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

17 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

17 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

17 hours ago