Breaking News

ಪಂಚಮಸಾಲಿ ಹೋರಾಟದಲ್ಲಿ ಸರ್ಕಾರ ಜವಾಬ್ದಾರಿಯುತವಾಗಿ ನಡೆದುಕೊಂಡಿದೆ : ಗೃಹ ಸಚಿವಡಾ.ಜಿ.ಪರಮೇಶ್ವರ್

The government has acted responsibly in the Panchmasali struggle: Home Minister Dr. G. Parameshwar

ಜಾಹೀರಾತು

ಬೆಳಗಾವಿ ಸುವರ್ಣಸೌಧ,ಡಿ.12(ಕರ್ನಾಟಕ ವಾರ್ತೆ): ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ ಹಿಂದುಳಿದ ವರ್ಗಗಳ ಪ್ರವರ್ಗ 2ಎ ಅಡಿಯಲ್ಲಿ ಮೀಸಲಾತಿಗೆ ಆಗ್ರಹಿಸಿ ಬೆಳಗಾವಿಯ ಸುವರ್ಣ ವಿಧಾನಸೌಧದ ಬಳಿ ಪಂಚಮಸಾಲಿ ಪೀಠಾದಿಪತಿ ಜಯಮೃತ್ಯಂಜಯಸ್ವಾಮಿ ಮತ್ತಿತರರ ನೇತೃತ್ವದಲ್ಲಿ ನಡೆದ ಪ್ರತಿಭಟನೆ ಸಂದರ್ಭದಲ್ಲಿ ಸರ್ಕಾರ ಮತ್ತು ಪೊಲೀಸ್ ಇಲಾಖೆ ಜವಾಬ್ದಾರಿಯುತವಾಗಿ ನಡೆದುಕೊಂಡಿದೆ ಎಂದು ರಾಜ್ಯದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.
ವಿಧಾನ ಪರಿಷತ್‌ನಲ್ಲಿ ಶೂನ್ಯ ಅವಧಿಯಲ್ಲಿ ಅವರು ಮಾತನಾಡಿ, ಪ್ರತಿಭಟನಾಕಾರರಿಗೆ ಶಾಂತಿಯುತವಾಗಿ ಪ್ರತಿಭಟನೆ ನಡೆಸಲು ಎಲ್ಲಾ ರೀತಿಯ ಅವಕಾಶಗಳನ್ನು ನೀಡಲಾಗಿತ್ತು. ಆದರೆ ಪ್ರತಿಭಟನಾಕಾರರು ಕಾನೂನು ಮತ್ತು ಸುವ್ಯವಸ್ಥಗೆ ಭಂಗ ತರುವ ರೀತಿಯಲ್ಲಿ ಆದೇಶಗಳನ್ನು ಉಲ್ಲಂಘಿಸಿ ಸುವರ್ಣ ವಿಧನಸೌಧಕ್ಕೆ ಮುತ್ತಿಗೆ ಹಾಕಲು ಪ್ರಯತ್ನಿಸಿದ ಕಾರಣ ಲಘು ಲಾಠಿ ಪ್ರಹಾರ ನಡೆಸಲಾಗಿದ್ದು, ಪ್ರತಿಭಟನಾಕಾರರನ್ನು ಮುಂಜಾಗ್ರತಾ ಬಂಧನ ಮಾತ್ರ ನಡೆಸಲಾಗಿತ್ತು ಎಂದರು.

About Mallikarjun

Check Also

ಕೋಟ್ಯಾಂತರ ರೂ ತೆರಿಗೆ ಪಾವತಿಸುವಂತೆ ನೋಟೀಸ್‌ ನೀಡುತ್ತಿರುವ ಕೇಂದ್ರದ ವಿರುದ್ಧ ಜು. 23 ರಿಂದ ಎರಡು ದಿನ ರಾಜ್ಯ ವ್ಯಾಪಿ ಹಾಲು, ಬೇಕರಿ ಉತ್ಪನ್ನಗಳ ಮಾರಾಟ ಬಂದ್‌ : ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್‌ ಎಚ್ಚರಿಕೆ

ತೆರಿಗೆ  ನೋಟೀಸ್‌  ವಿರುದ್ಧ- ಜು. 23 ರಿಂದ ಹಾಲು, ಬೇಕರಿ ಉತ್ಪನ್ನಗಳು, ಬೀಡಿ, ಸಿಗರೇಟು ಮಾರಾಟವನ್ನು ಬಂದ್‌ ಮಾಡುವುದಾಗಿ ಎಚ್ಚರಿಕೆ  ಬೆಂಗಳೂರು,ಜು.15: ವಾರ್ಷಿಕ …

Leave a Reply

Your email address will not be published. Required fields are marked *