Presentation of various bills including CAG report
ಬೆಳಗಾವಿ ಸುವರ್ಣಸೌಧ,ಡಿ.12(ಕರ್ನಾಟಕ ವಾರ್ತೆ):
ವಿಧಾನ ಸಭೆಯಲ್ಲಿ ಭಾರತದ ಲೆಕ್ಕ ನಿಯಂತ್ರಕರು ಮತ್ತು ಮಹಾ ಲೆಕ್ಕ ಪರಿಶೋಧಕರ ವರದಿಗಳು ಹಾಗೂ ವಿವಿಧ 11 ವಿಧೇಯಕಗಳನ್ನು ಸಚಿವರುಗಳು ಮಂಡಿಸಿದರು.
2024ನೇ ಸಾಲಿನ ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ (ಎರಡನೇ ತಿದ್ದುಪಡಿ) ವಿಧೇಯಕ, 2024ನೇ ಸಾಲಿನ ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ (ತಿದ್ದುಪಡಿ) ವಿಧೇಯಕ, 2024ನೇ ಸಾಲಿನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಎರಡನೇ ತಿದ್ದುಪಡಿ) ವಿಧೇಯಕ, 2024ನೇ ಸಾಲಿನ ಕರ್ನಾಟಕ ಪ್ರವಾಸೋದ್ಯಮ ರೋಪ್‌ವೇಗಳ ವಿಧೇಯಕ, 2024ನೇ ಸಾಲಿನ ಕರ್ನಾಟಕ ಮೋಟಾರು ವಾಹನಗಳ ತೆರಿಗೆ ನಿರ್ಧರಣೆ (ಎರಡನೇ ತಿದ್ದುಪಡಿ) ವಿಧೇಯಕ, 2024ನೇ ಸಾಲಿನ ಬಸವನಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ, 2024ನೇ ಸಾಲಿನ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ (ತಿದ್ದುಪಡಿ) ವಿಧೇಯಕ, 2024ನೇ ಸಾಲಿನ ಕರ್ನಾಟಕ ಕಾರ್ಮಿಕ ಕಲ್ಯಾಣ ನಿಧಿ (ತಿದ್ದುಪಡಿ) ವಿಧೇಯಕ, 2024ನೇ ಸಾಲಿನ ಕರ್ನಾಟಕ ವಿಶ್ವವಿದ್ಯಾನಿಲಯಗಳ (ತಿದ್ದುಪಡಿ) ವಿಧೇಯಕ, 2024ನೇ ಸಾಲಿನ ಚಾಣಕ್ಯ ವಿಶ್ವವಿದ್ಯಾಲಯ (ತಿದ್ದುಪಡಿ) ವಿಧೇಯಕ, 2024ನೇ ಸಾಲಿನ ಕರ್ನಾಟಕ ಅಂತರ್ಜಲ (ಅಭಿವೃದ್ಧಿ ಮತ್ತು ನಿರ್ವಹಣೆಯ ವಿನಿಮಯನ ಹಾಗೂ ನಿಯಂತ್ರಣ (ತಿದ್ದುಪಡಿ) ವಿಧೇಯಕಗಳನ್ನು ಮಂಡಿಸಲಾಯಿತು.
ಸಚಿವರುಗಳಾದ ಜಿ.ಪರಮೇಶ್ವರ, ಕೃಷ್ಣ ಭೈರೇಗೌಡ, ಪ್ರೀಯಾಂಕ ಖರ್ಗೆ, ಸಂತೋಷ ಲಾಡ್, ಡಾ.ಎಂ.ಸಿ.ಸುಧಾಕರ್ ಅವರುಗಳು ಮಂಡಿಸಿದರು.
ಕಾಡಾನೆ ದಾಳಿ ತಡೆಗೆ ಕ್ರಮ
ಆನೆ ಕಾರ್ಯ ಪಡೆ ಹಾಗೂ ಕ್ಷಿಪ್ರ ಸ್ಪಂದನ ತಂಡಗಳ ರಚನೆ-ಸಚಿವ ಈಶ್ವರ ಬಿ.ಖಂಡ್ರೆ
ಬೆಳಗಾವಿ ಸುವರ್ಣಸೌಧ,ಡಿ.12(ಕರ್ನಾಟಕ ವಾರ್ತೆ):
ಕಾಡಾನೆಗಳು ಹಿಂಡು ಹಿಂಡಾಗಿ ಜನವಸತಿ ಪ್ರದೇಶಗಳಿಗೆ ಬಂದು ರೈತರ ಬೆಳಗಳನ್ನು ನಾಶ ಮಾಡುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿರುತ್ತದೆ. ಇದನ್ನು ತಡೆಯಲು ಆನೆ ಕಾರ್ಯ ಪಡೆ, ಕ್ಷಿಪ್ರ ಸ್ಪಂದನ ತಂಡ ಮತ್ತು ಹಿಮ್ಮೆಟಿಸುವ ಶಿಬಿರ ತಂಡಗಳನ್ನು ರಚನೆ ಮಾಡಲಾಗಿದೆ ಎಂದು ಅರಣ್ಯ, ಜೀವಿಶಾಸ್ತç ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದರು.
ಅವರು ಬೆಳಗಾವಿ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಗುರುವಾರ ಶಾಸಕರುಗಳ ಚುಕ್ಕೆ ಗುರುತಿನ ಪ್ರಶ್ನೆಗಳಿಗೆ ಉತ್ತರಿಸಿ ಮಾತನಾಡಿದರು.
ಹಾಸನ, ಚಿಕ್ಕಮಗಳೂರು, ಮೈಸೂರು, ಕೊಡಗು, ಚಾಮರಾಜನಗರ, ರಾಮನಗರ ಹಾಗೂ ಬೆಂಗಳೂರು ಜಿಲ್ಲೆಗಳಲ್ಲಿ ಕಾಡಾನೆ ಹಾವಳಿ ತಡೆಯಲು ಪ್ರತಿ ಜಿಲ್ಲೆಗೆ ಒಂದರAತೆ ಅಧಿಕಾರಿ ಹಾಗೂ ಸಿಬ್ಬಂದಿನ್ನೊಳಗೊAಡ 8 ಆನೆ ಕಾರ್ಯಪಡೆ ರಚಿಸಲಾಗಿದೆ. ಇತರೆ ವನ್ಯಪ್ರಾಣಿಗಳ ಹಾವಳಿಯನ್ನು ನಿಯಂತ್ರಿಸಲು ತಲಾ 04 ಜನರ ತಂಡದAತೆ 95 ಹಿಮ್ಮೆಟ್ಟಿಸುವ ತಂಡ ಹಾಗೂ 33 ಕ್ಷಿಪ್ರ ಸ್ಪಂದನೆ ತಂಡಗಳು ರಚಿಸಲಾಗಿದೆ. ಈ ತಂಡಗಳು ರಾತ್ರಿ ಗಸ್ತು ಕಾರ್ಯಕೈಗೊಂಡು ಪ್ರತಿನಿತ್ಯ ಕಾಡಾನೆಗಳಿರುವ ಪ್ರದೇಶಗಳಿಗೆ ಭೇಟಿ ನೀಡಿ, ಸ್ಥಳೀಯ ಸಾರ್ವಜನಿಕರನ್ನು ಸಂಪರ್ಕಿಸಿ, ಆನೆಗಳ ಚಲನ-ವಲನಗಳ ಮಾಹಿತಿಯನ್ನು ನೀಡಿ, ಎಚ್ಚರಿಕೆಯಿಂದ ಇರುವಂತೆ ಧ್ವನಿವರ್ಧಕ ಮೂಲಕ ಮಾಹಿತಿ ನೀಡುವ ಕಾರ್ಯ ಮಾಡಲಾಗುತ್ತಿದೆ ಎಂದು ತಿಳಿಸಿದರು.
ತಂತ್ರಜ್ಞಾನ ಬಳಕೆ:
ರೇಡಿಯೋ ಕಾಲರ್ ಅಳವಡಿಸಿರುವ ಕಾಡಾನೆಗಳ ಚಲನವಲನಗಳನ್ನು ಗಮನಿಸಲು ‘ಹೆಜ್ಜೆ’ ಎಂಬ ಡ್ಯಾಶ್ ಬೋರ್ಡ್ನ್ನು ಅರಣ್ಯ ಇಲಾಖೆ ರೂಪಿಸಿದೆ. ಕಾಡಂಚಿನ ಗ್ರಾಮಗಳಲ್ಲಿ ವನ್ಯಪ್ರಾಣಿಗಳು ಎಚ್ಚರಿಕೆ ಹಾಗೂ ಮಾಹಿತಿ ನೀಡಲು ಅಡ್ವಾನ್ಸ್ ಅಲರ್ಟ್ ಸಿಸ್ಟಂ ರಚಿಸಲಾಗಿದೆ. ಕಾಡಾನೆಗಳು ಸಂಚರಿಸುವ ಪ್ರದೇಶಗಳಲ್ಲಿ ಡಿಜಿಟಲ್ ಸೂಚನಾ ಫಲಕಗಳನ್ನು ಅಳವಡಿಸಲಾಗಿದೆ. ಅರಣ್ಯ ಅಂಚಿನ ಪ್ರದೇಶಗಳಲ್ಲಿ ಕೃತಕ ಬುದ್ದಿಮತ್ತೆ (ಎಐ) ಆಧಾರಿತ ಕ್ಯಾಮೆರಾಗಳನ್ನು ಹಾಗೂ ಡ್ರೋಣ್ ಕ್ಯಾಮೆರಾಗಳನ್ನು ಬಳಸಲಾಗುತ್ತಿದೆ. ಆಕಾಶವಾಣಿ ಮುಖಾಂತರ ಹಾಗೂ ವಾಟ್ಸಾಪ್ ಗ್ರೂಪ್‌ಗಳಲ್ಲಿ ಸಂದೇಶಗಳನ್ನು ರವಾನಿಸಲಾಗುತ್ತಿದೆ ಎಂದು ಸಚಿವ ಈಶ್ವರ ಬಿ ಖಂಡ್ರೆ ಮಾಹಿತಿ ನೀಡಿದರು.
ಪರಿಹಾರ ಧನ ವಿತರಣೆ:
ಕಾಡಾನೆ ದಾಳಿ ಸೇರಿದಂತೆ ಯಾವುದೇ ವನ್ಯಪ್ರಾಣಿ ದಾಳಿಯಿಂದ ಮೃತಪಟ್ಟವರ ಕುಟುಂಬಗಳಿಗೆ ಈ ಹಿಂದೆ ಸರ್ಕಾರ ನೀಡುತ್ತಿದ್ದ ಪರಿಹಾರ ಧನವನ್ನು ರೂ.7.5 ಲಕ್ಷದಿಂದ 15 ಲಕ್ಷಕ್ಕೆ ಏರಿಸಲಾಗಿದೆ. ಇದರೊಂದಿಗೆ ಮೃತಪಟ್ಟ ಹಾಗೂ ಶಾಶ್ವತ ಅಂಗವಿಕಲತೆ ಹೊಂದಿದ ಕುಟುಂಬದವರಿಗೆ 5 ವರ್ಷಗಳವರೆಗೆ ಪ್ರತಿಗಳು ರೂ.4 ಸಾವಿರ ಮಾಸಾಶÀನ ನೀಡಲಾಗುವುದು. ಶಾಶ್ವತ ಅಂಗವಿಕಲತೆ ಉಂಟಾದರೆ ರೂ.10 ಲಕ್ಷ, ಭಾಗಶಃ ಅಂಗವಿಕಲತೆಗೆ ರೂ.5 ಲಕ್ಷ, ಗಾಯಗೊಂಡರೆ ರೂ.60 ಸಾವಿರ, ಆಸ್ತಿ ನಷ್ಟಕ್ಕೆ ರೂ.20 ಸಾವಿರ ಪರಿಹಾರ ಧನ ವಿತರಣೆ ಮಾಡಲಾಗುತ್ತಿದೆ. ಇದರೊಂದಿಗೆ ಬೆಳೆಹಾನಿಯಾದರೆ ನಿಯಾಮನುಸಾರ ಪರಿಹಾರ ವಿತರಿಸಲಾಗುವುದು ಎಂದು ಸಚಿವ ಈಶ್ವರ ಬಿ ಖಂಡ್ರೆ ಹೇಳಿದರು.
ಬೇಲೂರು ಕ್ಷೇತ್ರ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಗೆ 4 ಜನರು ಬಳಿಯಾಗಿದ್ದು, ಸರ್ಕಾರದ ಆದೇಶದಂತೆ 2021-22ನೇ ಸಾಲಿನ ಪ್ರಕರಣಗಳಿಗೆ ರೂ.7.5 ಲಕ್ಷ ಹಾಗೂ 2023-24ನೇ ಸಾಲಿನ ಪ್ರಕರಣಗಳಿಗೆ ರೂ.15 ಲಕ್ಷದಂತೆ ಒಟ್ಟು ರೂ.45 ಲಕ್ಷ ಪರಿಹಾರ ವಿತರಿಸಲಾಗಿದೆ. ಇದೇ ಅವಧಿಯಲ್ಲಿ ಘಟಿಸಿದ 1468 ಬೆಳೆ ಹಾನಿ ಪ್ರಕರಣದಲ್ಲಿ ಒಟ್ಟು ರೂ.2.10 ಕೋಟಿ ಪರಿಹಾರ ನೀಡಲಾಗಿದೆ ಎಂದು ಶಾಸಕ ಸುರೇಶ್ ಹೆಚ್.ಕೆ. ಅವರ ಚುಕ್ಕೆ ಗುರುತಿನ ಪ್ರಶ್ನೆ 1098ಕ್ಕೆ ಸಚಿವರು ಸದನದಲ್ಲಿ ಸಚಿವ ಈಶ್ವರ ಖಂಡ್ರೆ ಉತ್ತರಿಸಿದರು.
ರೈಲ್ವೆ ಬ್ಯಾರಿಕೇಡ್ ನಿರ್ಮಾಣಕ್ಕೆ 500 ಕೋಟಿ ರೂ. ಪ್ರಸ್ತಾವ:
ಕಾಡಾನೆಗಳು ರೈತರ ಜಮೀನುಗಳಿಗೆ ನುಗ್ಗಿ ಬೆಳೆ ಹಾನಿಯಾಗದಂತೆ ತಡೆಯಲು ರೈಲ್ವೇ ಹಳಿ ಬ್ಯಾರಿಕೇಡ್ ಅಳವಡಿಸಲಾಗುತ್ತಿದೆ. 08-ಆನೆಕಾರ್ಯಪಡೆ ರಚಿಸಿ, ಆನೆ ಕಾರ್ಯಾಚರಣೆ ಕೈಗೊಳ್ಳಲಾಗುತ್ತಿದೆ. ಆನೆಗಳನ್ನು ಹಿಮ್ಮೆಟ್ಟಿಸಲು ಎಸ್‌ಒಪಿ ರೂಪಿಸಿ, ಅದರನ್ವಯವೇ ಕಾರ್ಯಾಚರಣೆ ಮಾಡಲಾಗುತ್ತಿದೆ. ಈಗಾಗಲೆ ರಾಜ್ಯದಲ್ಲಿ 369 ಕಿ.ಮೀ. ರೈಲ್ವೆ ಹಳಿ ಬ್ಯಾರಿಕೇಡ್ ನಿರ್ಮಿಸಿದ್ದು, 60 ಕಿ.ಮೀ. ನಿರ್ಮಾಣ ಪ್ರಗತಿಯಲ್ಲಿದೆ. ಇನ್ನೂ 350 ಕಿ.ಮೀ. ರೈಲ್ವೆ ಬ್ಯಾರಿಕೇಡ್ ನಿರ್ಮಾಣ ಮಾಡಬೇಕಿದ್ದು, ಇದಕ್ಕಾಗಿ 500 ಕೋಟಿ ರೂ. ಗಳ ಬಿಡುಗಡೆಗೆ ಸರ್ಕಾರ ಪ್ರಸ್ತಾವನೆ ಸಲ್ಲಿಸಲಾಗಿದೆ. ಆನೆಗಳ ಚಲನ-ವಲನದ ಬಗ್ಗೆ ಅಧ್ಯಯನ ಕೈಗೊಂಡು ವರದಿ ಸಲ್ಲಿಸಲು ತಜ್ಞರ ಸಮಿತಿ ರಚಿಸಲಾಗಿದ್ದು, ವರದಿಯ ಆಧಾರದಲ್ಲಿ ಸರ್ಕಾರ ಮುಂಬರುವ ದಿನಗಳಲ್ಲಿ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಸಚಿವ ಈಶ್ವರ ಖಂಡ್ರೆ ಸದನಕ್ಕೆ ಈ ಸಂದರ್ಭದಲ್ಲಿ ಮಾಹಿತಿ ನೀಡಿದರು.
ಕಲ್ಲುಕ್ವಾರಿಗಳಿಗೆ ಯಾವುದೇ ತೊಂದರೆ ನೀಡಿಲ್ಲ:
ಮೀಸಲಿಟ್ಟ ಅರಣ್ಯ ಪ್ರದೇಶದಲ್ಲಿ ಕಲ್ಲು ಕ್ವಾರಿಗಳನ್ನು ನಡೆಸಲು ವನ ಸಂರಕ್ಷಣಾ ಮತ್ತು ಸಂವರ್ಧನೆ ಅಧಿನಿಯಮ-1980 ಹಾಗೂ 2023ರ ನಿಯಮಾನಸಾರ ತಿತಿತಿ.ಠಿಚಿಡಿivesh.ಟಿiಛಿ ವೆಬ್ ಪೋರ್ಟಲ್ ಮೂಲಕ ಪ್ರಸ್ತಾವನೆಯನ್ನು ಅಗತ್ಯ ದಾಖಲೆಗಳ ಮೂಲಕ ಸಲ್ಲಿಸಬೇಕು. ಮೀಸಲು ಅರಣ್ಯದಲ್ಲಿ ಗಣಿಗಾರಿಕೆ ಅವಕಾಶವಿಲ್ಲ. ಒಂದು ವೇಳೆ ಪರವಾನಿಗೆ ಪರ್ಯಾಯವಾಗಿ ಬೇರೆ ಭೂಮಿಯನ್ನು ಅರಣ್ಯ ಮೀಸಲು ಇಡಬೇಕು. ಈ ನಿಯಮಗಳ ಅನುಸಾರ ಪ್ರಸ್ತಾವನೆ ಸಲ್ಲಿಸಿ ಸಕ್ಷಮ ಪ್ರಾಧಿಕಾರದಿಂದ ಅನುಮೋದನೆ ಪಡೆದು ಕಲ್ಲುಕ್ವಾರಿಗಳನ್ನು ನಡೆಸುತ್ತಿರುವವರಿಗೆ ಯಾವುದೇ ತೊಂದರೆ ನೀಡಿಲ್ಲ ಎಂದು ಬದಾಮಿ ಶಾಸಕ ಚಿಮ್ಮನಕಟ್ಟಿ.ಬಿ.ಬಿ ಅವರ ಚುಕ್ಕೆ ಗುರುತಿನ ಪ್ರಶ್ನೆ 1450ಕ್ಕೆ ಸಚಿವ ಈಶ್ವರ ಖಂಡ್ರೆ ಉತ್ತರಿಸಿದರು.
2 ಸಾವಿರ ಹೆ. ನಲ್ಲಿ ಆನೆಗಳ ವಿಹಾರಧಾಮ
ಕೊಡಗು ಮತ್ತು ಹಾಸನದಲ್ಲಿ ಕಾಡಾನೆಗಳ ಕಾಟ ನಿಯಂತ್ರಿಸಲು ಕೊಡಗು ಮತ್ತು ಹಾಸನ ಬಳಿ 2 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಆನೆಗಳ ವಿಹಾರಧಾಮ (ಎಲಿಫೆಂಟ್ ಸಾಫ್ಟ್ ರಿಲೀಸ್ ಸೆಂಟರ್) ಮಾಡುವ ಬಗ್ಗೆ ಚಿಂತನೆ ನಡೆದಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ವಿಧಾನಸಭೆಗೆ ತಿಳಿಸಿದರು. ಬೇಲೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಾಡಾನೆಗಳ ದಾಳಿಯಿಂದ ಹಾನಿಗೊಳಗಾದ ಮಾನವ ಪ್ರಾಣಹಾನಿ ಮತ್ತು ಮಾನವ ಗಾಯ ಪ್ರಕರಣಗಳಿಗೆ ಪರಿಹಾರ ಧನ ನೀಡಲಾಗುತ್ತಿದೆ ಎಂದರು. ಹಾಸನ ಜಿಲ್ಲಾ ವ್ಯಾಪ್ತಿಯ ಬೇಲೂರು ತಾಲ್ಲೂಕಿನ ಬಿಕ್ಕೋಡು ಹೋಬಳಿ ಗ್ರಾಮಗಳಲ್ಲಿ ಕಳೆದ 03 ತಿಂಗಳಿನಿAದ ಕಾಡಾನೆಗಳು ಹಿಂಡು ಹಿಂಡಾಗಿ ಬಂದು ರೈತರ ಬೆಳೆಗಳನ್ನು ನಾಶ ಮಾಡುತ್ತಿವೆ, ಈ ಕಾಡಾನೆಗಳನ್ನು ಅರಣ್ಯ ಪ್ರದೇಶಗಳ ಕಡೆಗೆ ಹಿಮ್ಮೆಟಿಸಲು ಇಲಾಖಾ ವತಿಯಿಂದ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಶಾಸಕರ ಹೇಳಿಕೆ ದುರದೃಷ್ಟಕರ:
ಆನೆಗಳಿಂದ ಕಾಡಿನಂಚಿನ ಜನರಿಗೆ ತೊಂದರೆ ಆಗುತ್ತಿದ್ದು, ರೈತರಿಗೆ ಕೋವಿ ಪಡೆಯಲು ಪರವಾನಗಿ ನೀಡಿ, ಆನೆಗಳನ್ನು ಕೊಲ್ಲಲು ಅನುಮತಿ ನೀಡಿ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ನೀಡಿದ ಹೇಳಿಕೆ ದುರದೃಷ್ಟಕರ. ಜವಾಬ್ದಾರಿಯುತ ಸ್ಥಾನದಲ್ಲಿರುವವರು ಈ ರೀತಿ ಮಾತನಾಡುವುದು ಸರಿಯಲ್ಲ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದರು. ಮನುಷ್ಯರಿಗೆ ಬದುಕುವ ಹಕ್ಕಿರುವಂತೆಯೇ ವನ್ಯಜೀವಿಗಳಿಗೂ ಬದುಕುವ ಹಕ್ಕಿದೆ ಎಂದು ಸಭಾಧ್ಯಕ್ಷ ಯು.ಟಿ. ಖಾದರ್ ಹೇಳಿದರು. ರಾಜ್ಯ ಸರ್ಕಾರ ಆನೆಗಳ ಹಾವಳಿ ತಡೆಗೆ ಕಳೆದ 2 ವರ್ಷಗಳಲ್ಲಿ 489.46 ಮೀ. ಸೌರಬೇಲಿ, 284.82 ಆನೆ ತಡೆ ಕಂದಕ ನಿರ್ಮಾಣ ಮತ್ತು ನಿರ್ವಹಣೆ ಮಾಡಲಾಗುತ್ತಿದೆ, ಜೊತೆಗೆ ಹಾಸನ, ಚಿಕ್ಕಮಗಳೂರು, ಮೈಸೂರು, ಕೊಡಗು, ರಾಮನಗರ, ಚಾಮರಾಜನಗರ, ಬೆಂಗಳೂರು ನಗರ ಜಿಲ್ಲೆಯಲ್ಲಿ ಒಟ್ಟು 8 ಆನೆ ಕಾರ್ಯಪಡೆಗಳು ಕಾರ್ಯ ನಿರ್ವಹಿಸುತ್ತಿವೆ ಎಂದು ತಿಳಿಸಿದರು.
ಶೀಘ್ರ ಜವಳಿ ನೀತಿ ರೂಪಿಸಲು ಕ್ರಮ
ಬಂಡವಾಳ ಹೂಡಿಕೆ, ಉದ್ಯೋಗ ಸೃಷ್ಟಿಗೆ ನೂತನ ನೀತಿ: ಜವಳಿ ಸಚಿವ ಶಿವಾನಂದ ಪಾಟೀಲ
ನೂತನ ಜವಳಿ ನೀತಿ ಸಿದ್ಧಪಡಿಸಲು ಖಾಸಗಿ ಕಂಪನಿಯನ್ನು ನೇಮಕ ಮಾಡಲಾಗಿದ್ದು, ಜವಳಿ ನೀತಿಯ ಕರಡು ಸಿದ್ದಪಡಿಸಲು ಪೂರ್ವಭಾವಿ ಕ್ರಮ ಕೈಗೊಳ್ಳಲಾಗಿದೆ ಎಂದು ಜವಳಿ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ.
ಬೆಳಗಾವಿ ದಕ್ಷಿಣ ವಿಧಾನ ಸಭೆ ಕ್ಷೇತ್ರದ ಶಾಸಕರಾದ ಅಭಯ ಪಾಟೀಲ ಅವರ ಗಮನ ಸೆಳೆಯುವ ಸೂಚನೆ ವಿಷಯಕ್ಕೆ ಜವಳಿ ಸಚಿವರ ಪರವಾಗಿ ಉತ್ತರಿಸಿದ ಸಚಿವ ಪ್ರಿಯಾಂಕ ಖರ್ಗೆ ಅವರು, ರಾಜ್ಯದಲ್ಲಿ ಜವಳಿ ಉದ್ಯಮ ಹಾಗೂ ನೇಕಾರರಿಗೆ ಪ್ರೋತ್ಸಾಹ ನೀಡಲು, ಬಂಡವಾಳ ಹೂಡಿಕೆ ಹಾಗೂ ಉದ್ಯೋಗ ಸೃಷ್ಟಿಗೆ ೨೦೨೪-೨೯ರ ಅವಧಿಗೆ ನೂತನ ಜವಳಿ ನೀತಿ ಜಾರಿಗೆ ತರಲು ಉನ್ನತ ಮಟ್ಟದ ತಜ್ಞರ ಸಮಿತಿ ಆಗಸ್ಟ್‌ನಲ್ಲಿ ಸಭೆ ಸೇರಿ ನೀತಿ ತಯಾರಿಸಲು ಟರ್ಮ್ಸ್ ಆಫ್ ರೆಪರೆನ್ಸ್ ನಿಗದಿಪಡಿಸಿದೆ ಎಂದು ತಿಳಿಸಿದರು.
೨೦೨೪-೨೯ರ ಅವಧಿಗೆ ಹತ್ತು ಸಾವಿರ ಕೋಟಿ ರೂ.ಗಳ ಬಂಡವಾಳ ಹೂಡಿಕೆ ಹಾಗೂ ಎರಡು ಲಕ್ಷ ಉದ್ಯೋಗ ಸೃಷ್ಟಿಯ ಗುರಿಯೊಂದಿಗೆ ಹೊಸ ಜವಳಿ ನೀತಿ ಜಾರಿಗೊಳಿಸಲು ನಿರ್ಧರಿಸಲಾಗಿದೆ ಎಂದರು.
ಜವಳಿ ನೀತಿಯ ಅವಧಿಯಲ್ಲಿ ಸಿದ್ಧ ಉಡುಪಿ, ಜವಳಿ ಘಟಕಗಳಿಗೆ ಉತ್ತೇಜನ ನೀಡಲು ಸಾಲಾಧಾರಿತ ಬಂಡವಾಳ ಸಹಾಯಧನ, ಬಡ್ಡಿ ಸಹಾಯಧನ, ವಿದ್ಯುಚ್ಛಕ್ತಿ ಮರುಪಾವತಿ ಸಹಾಯಧನ, ವೇತನ ಸಹಾಯಧನ, ತ್ಯಾಜ್ಯ ಸಂಸ್ಕರಣಾ ಘಟಕಕ್ಕೆ ಸಹಾಯಧನ, ಮುದ್ರಾಂಕ ಶುಲ್ಕ ವಿನಾಯಿತಿ ಮತ್ತು ನೋಂದಣಿ ಶುಲ್ಕ ವಿನಾಯಿತಿ ನೀಡಲಾಗುತ್ತಿದೆ ಎಂದು ವಿವರಿಸಿದರು. ನಾಲ್ಕನೇ ಕೈಮಗ್ಗ ಜನಗಣತಿಯ ಪ್ರಕಾರ ರಾಜ್ಯದಲ್ಲಿ ೫೪,೭೯೧ ಕೈಮಗ್ಗ ನೇಕಾರರನ್ನು ಗುರುತಿಸಿ ನೇಕಾರರ ಸೇವಾ ಕೇಂದ್ರದ ಮೂಲಕ ೪೭,೮೮೩ ಕೈಮಗ್ಗ ನೇಕಾರರಿಗೆ ಪೆಹಚಾನ್ ಕಾರ್ಡ್‌ಗಳನ್ನು ಹಾಗೂ ೧,೧೭,೦೯೯ ವಿದ್ಯತ್ ಮಗ್ಗ ನೇಕಾರರು, ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್‌ಗಳನ್ನು ವಿತರಿಸಲಾಗಿದೆ ಎಂದು ವಿವರಿಸಿದರು.
ನೇಕಾರರು ಆರ್ಥಿಕ ಹೊರೆ ಮತ್ತು ಇತರೆ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಅವರನ್ನು ಸ್ವಾವಲಂಬಿಗಳನ್ನಾಗಿ ಮಾಡಲು ಜವಳಿ ಇಲಾಖೆ ಹಲವು ಸೌಲಭ್ಯಗಳನ್ನು ಒದಗಿಸುತ್ತಿದೆ. ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರರಿಗೆ ನೇಕಾರರ ಸಮ್ಮಾನ್ ಯೋಜನೆಯಲ್ಲಿ ವಾರ್ಷಿಕ ತಲಾ ಐದು ಸಾವಿರ ರೂ. ಆರ್ಥಿಕ ನೆರವು, ನೇಕಾರರ ಮಕ್ಕಳ ವ್ಯಾಸಂಗಕ್ಕೆ ವಿದ್ಯಾರ್ಥಿ ವೇತನ, ಕೈಮಗ್ಗ ಉಪಕರಣ ಖರೀದಿಗೆ ಘಟಕ ವೆಚ್ಚದಲ್ಲಿ ಪ್ರತಿಶತ ೫೦ರಷ್ಟು ಸಹಾಯಧನ ನೆರವು, ಕಚ್ಚಾ ನೂಲು ಖರೀದಿ ಮೇಲೆ ಪ್ರತಿ ಕೆಜಿಗೆ ೧೫ ರೂ. ಸಹಾಯಧನ ನೀಡಲಾಗುತ್ತಿದೆ ಎಂದು ತಿಳಿಸಿದರು.
ನೇಕಾರರು ನೇಕಾರಿಗೆ ಉದ್ದೇಶಕ್ಕೆ ಎನ್‌ಎಚ್‌ಡಿಸಿ ವತಿಯಿಂದ ಪ್ರತಿಶತ ೧೫ರಷ್ಟು ಸಹಾಯಧನದೊಂದಿಗೆ ರೇಷ್ಮೆ, ಹತ್ತಿ, ಉಣ್ಣೆ ಮತ್ತು ಲೆನಿನ್ ನೂಲನ್ನು ನೀಡಲಾಗುತ್ತಿದೆ.
ನೇಕಾರಿಕೆ ಉದ್ದೇಶಕ್ಕೆ ಸಹಕಾರಿ ಬ್ಯಾಂಕುಗಳಿಂದ ಪಡೆಯುವ ಸಾಲಕ್ಕೆ ಶೂನ್ಯ ಹಾಗೂ ಶೇ. ೧ರ ಬಡ್ಡಿ ದರದಲ್ಲಿ ೨ ಲಕ್ಷ ರೂ.ವರೆಗೆ, ಶೇ ೩ರ ಬಡ್ಡಿ ದರದಲ್ಲಿ ಐದು ಲಕ್ಷ ರೂವರೆಗೆ ಪಡೆಯುವ ಸಾಲಕ್ಕೆ ಬಡ್ಡಿ ಸಹಾಯಧನ ನೀಡಲಾಗುತ್ತದೆ ಎಂದು ತಿಳಿಸಿದರು.
ಕೈಮಗ್ಗ ನೇಕಾರರಿಗೆ ಮಾರುಕಟ್ಟೆ ಒದಗಿಸಲು ರಾಷ್ಟ್ರೀಯ ಕೈಮಗ್ಗ ಮೇಳ, ರಾಜ್ಯಮಟ್ಟದ ಕೈಮಗ್ಗ ಮೇಳ, ಜಿಲ್ಲಾ ಮಟ್ಟದ ಕೈಮಗ್ಗ ಮೇಳ ಆಯೋಜಿಸಲಾಗುತ್ತಿದೆ. ಮಿನಿ ಪವರ್‌ಲೂಮ್ ಪಾರ್ಕ್ ಸ್ಥಾಪನೆಗೆ ಹಾಗೂ ಪ್ರೊಸೆಸಿಂಗ್ ಘಟಕ ಸ್ಥಾಪನೆಗೆ ಸಹಾಯ ಧನ ವಿತರಿಸಲಾಗುತ್ತಿದೆ. ಹತ್ತು ಅಶ್ವಶಕ್ತಿವರೆಗಿನ ವಿದ್ಯುತ್ ಮಗ್ಗ ಹಾಗೂ ಮಗ್ಗಪೂರ್ವ ಘಟಕಗಳಿಗೆ ಉಚಿತವಾಗಿ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ. ೧೦.೧ ಅಶ್ವಶಕ್ತಿಯಿಂದ ೨೦ ಅಶ್ವಶಕ್ತಿ ಸಾಮರ್ಥ್ಯದ ವಿದ್ಯುತ್ ಮಗ್ಗಗಳು ಬಳಸಿದ ಒಟ್ಟು ಯೂನಿಟ್‌ಗೆ ಪ್ರತಿ ಯೂನಿಟ್‌ಗೆ ೧.೨೫ ರೂ. ಮಾತ್ರ ಸಂಗ್ರಹ ಮಾಡಲಿದ್ದು, ಉಳಿದ ಹಣವನ್ನು ಸರ್ಕಾರ ಭರಿಸಲಿದೆ. ೧೫೦ ಅಶ್ವಶಕ್ತಿವರೆಗಿನ ವಿದ್ಯುತ್ ಸಂಪರ್ಕ ಹೊಂದಿರುವ ರೇಪಿಯರ್ ಮತ್ತು ಲಾಳಿರಹಿತ ವಿದ್ಯುತ್ ಮಗ್ಗ ಘಟಕಗಳಿಗೆ ಪ್ರತಿಶತ ೫೦ರಷ್ಟು ವಿದ್ಯುತ್ ಸಹಾಯಧನ ನೀಡಲಾಗುತ್ತಿದೆ ಎಂದು ತಿಳಿಸಿದರು.
ಅರ್ಹರ ಬಿಪಿಎಲ್ ಪಡಿತರ ಚೀಟಿ ರದ್ದು ಪಡಿಸಿಲ್ಲ:ಸಚಿವ ಕೆ.ಹೆಚ್.ಮುನಿಯಪ್ಪ ಸ್ಪಷ್ಟನೆ
ಬೆಳಗಾವಿ ಸುವರ್ಣಸೌಧ, ಡಿ.12(ಕರ್ನಾಟಕ ವಾರ್ತೆ):
ಸರ್ಕಾರ ಯಾವುದೇ ಅರ್ಹ ಬಿಪಿಎಲ್ ಕುಟುಂಬದವರ ಪಡಿತರ ಚೀಟಿ ರದ್ದು ಪಡಿಸಿಲ್ಲ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳು ಹಾಗೂ ಕಾನೂನು ಮಾಪನಶಾಸ್ತç ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ ಸ್ಪಷ್ಟಪಡಿಸಿದರು.
ಬೆಳಗಾವಿ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಗುರುವಾರ ಬಂಟ್ವಾಳ ಕ್ಷೇತ್ರದ ಶಾಸಕ ರಾಜೇಶ್ ನಾಯಕ್ ರವರು ಕೇಳಿದ ಚುಕ್ಕೆ ಗುರುತಿನ ಪ್ರಶ್ನೆಗೆ ಸಚಿವ ಕೆ.ಹೆಚ್.ಮುನಿಯಪ್ಪ ನವರು ಸದನದಲ್ಲಿ ಉತ್ತರಿಸಿದರು.
ರಾಜ್ಯದಲ್ಲಿ ಬಿಪಿಎಲ್ ಪಡಿತರ ಚೀಟಿಗಳನ್ನು ಪಡೆಯುವ ಬಗ್ಗೆ 2017 ರಲ್ಲಿ ಮಾನದಂಡಗಳನ್ನು ರೂಪಿಸಲಾಗಿದೆ. ಇದರ ಅನ್ವಯ ಸರ್ಕಾರದ ಅಥವಾ ಸರ್ಕಾರದಿಂದ ಅನುದಾನವನ್ನು ಪಡೆಯುತ್ತಿರುವ ಸಂಸ್ಥೆಗಳು ಅಥವಾ ಸರ್ಕಾರಿ ಪ್ರಾಯೋಜಿತ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು, ಮಂಡಳಿ, ನಿಗಮ, ಸ್ವಾಯತ್ತ ಸಂಸ್ಥೆಗಳ ನೌಕರರು ಬಿಪಿಎಲ್ ಕಾರ್ಡ ಪಡೆಯುವಂತಿಲ್ಲ. ಇದರೊಂದಿಗೆ ಆದಾಯ ತೆರಿಗೆ, ಸೇವಾ ತೆರಿಗೆ, ಜಿಎಸ್‌ಟಿ, ವೃತ್ತಿ ತೆರಿಗೆ ಪಾವತಿಸುವ ಎಲ್ಲಾ ಕುಟುಂಬಗಳು ಸಹ ಬಿಪಿಎಲ್ ನಡಿ ಬರುವುದಿಲ್ಲ. ಗ್ರಾಮೀಣ ಪ್ರದೇಶಗಳಲ್ಲಿ 3 ಹೆಕ್ಟರ್ ಒಣಭೂಮಿ ಅಥವಾ ತತ್ಸಮಾನ ನೀರಾವರಿ ಭೂಮಿ, ನಗರ ಪ್ರದೇಶಗಳಲ್ಲಿ 1,000 ಚದರ ಅಡಿಗಿಂತಲೂ ಹೆಚ್ಚಿನ ವಿಸ್ತೀರ್ಣದ ಪಕ್ಕಾ ಮನೆ ಹೊಂದಿರುವವರು, ಜೀವನೋಪಾಯಕ್ಕಾಗಿ ಸ್ವತಃ ಓಡಿಸುವ ಒಂದು ವಾಣಿಜ್ಯ ವಾಹನವನ್ನು ಅಂದರೆ ಟ್ರಾಕ್ಟರ್, ಮ್ಯಾಕ್ಸಿಕ್ಯಾಬ್, ಟ್ಯಾಕ್ಸಿ ಇತ್ಯಾದಿಗಳನ್ನು ಹೊಂದಿದ ಕುಟುಂಬವನ್ನು ಹೊರತುಪಡಿಸಿ, ನಾಲ್ಕು ಚಕ್ರದ ವಾಹನಗಳನ್ನು ಹೊಂದಿರುವವರು, ಕುಟುಂಬದ ವಾರ್ಷಿಕ ಆದಾಯವು ರೂ. 1.20 ಲಕ್ಷಗಳಿಗಿಂತಲೂ ಹೆಚ್ಚು ಇರುವ ಕುಟುಂಬಗಳನ್ನು ಬಿಪಿಎಲ್ ಪಡಿತರ ಚೀಟಿಯಿಂದ ಹೊರಗಿಡಲಾಗುವುದು ಎಂದು ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದರು.
ಆರೋಗ್ಯಕ್ಕೆ ಸಂಬAದಿಸಿದ ಕಾರ್ಡ್ನ್ನು ಆಯಾ ಜಿಲ್ಲೆಯ ಅಧಿಕಾರಿಗಳು ನೀಡುತ್ತಾರೆ. ಕೇಂದ್ರ ಸರ್ಕಾರದ ಮಾನದಂಡಗಳ ಅಡಿಯಲ್ಲಿಯೇ ಕಾರ್ಡ್ ಗಳನ್ನು ಪರಿಷ್ಕರಣೆ ಮಾಡಲಾಗಿದೆ. ಯಾವುದೇ ಅನಗತ್ಯ ಗೊಂದಲ ಬೇಡ. ರದ್ದಾದ ಆರೋಗ್ಯ ಸಂಬAಧ ಬಿಪಿಎಲ್ ಕಾರ್ಡುಗಳನ್ನು ತಕ್ಷಣ ಪುನರ್ ಸ್ಥಾಪಿಸಲಾಗಿದೆ. ಯಾವುದೇ ಅರ್ಹರಿಗೆ ಗೊಂದಲವಾಗದAತೆ ಕಾರ್ಡ್ಗಳನ್ನು ವಿತರಿಸಲು ಅಧಿಕಾರಿಗಳಿಗೆ ವಿತರಿಸಲು ಸೂಚನೆ ನೀಡಿದ್ದೇನೆ ಎಂದು ಸಚಿವ ಕೆ.ಹೆಚ್ ಮುನಿಯಪ್ಪ ತಿಳಿಸಿದರು.
ಹೊಸ ಬಿಪಿಎಲ್ ಕಾರ್ಡ ವಿತರಿಸಲು ಕ್ರಮ:
ಪೋಷಕರ ಆದಾಯ ಹೆಚ್ಚಿದ್ದರೂ, ಕುಟುಂಬದ ಸದಸ್ಯರು ಪ್ರತ್ಯೇಕವಾಗಿ ವಾಸವಿದ್ದು ಬಿಪಿಎಲ್ ಪಡಿತರ ಚೀಟಿ ಪಡೆಯಲು ಅರ್ಹರಿದ್ದಲ್ಲಿ ಪಡಿತರ ಚೀಟಿ ನೀಡಲು ಕ್ರಮವಹಿಸಲಾಗುವುದು. ಅರ್ಹ ಕುಟುಂಬ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ರಾಜ್ಯದಲ್ಲಿ 03 ಲಕ್ಷ ಕಾರ್ಡ್ಗಳನ್ನು ಪುನರ್ ಸ್ಥಾಪಿಸುವ ಕಾರ್ಯ ಮಾಡಲಾಗಿದೆ. ಆದಾಯ ತೆರಿಗೆ ಪಾವತಿಸುವ 98473 ಪಡಿತರ ಚೀಟಿಗಳು ಹಾಗೂ 4036 ಸರ್ಕಾರಿ ನೌಕರರು ಪಡೆದಿದ್ದ ಬಿಪಿಎಲ್ ಕಾರ್ಡ್ಗಳನ್ನು ರದ್ದುಪಡಿಸಲಾಗಿದೆ. ಯಾವುದೇ ಅರ್ಹ ಬಿಪಿಎಲ್ ಕಾರ್ಡ್ದಾರರಿಗೆ ತೊಂದರೆಯಾಗದAತೆ ಈಗಾಗಲೆ ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ತಹಶೀಲ್ದಾರ್ ನೀಡುವ ಆದಾಯ ಪ್ರಮಾಣ ಪತ್ರ ಮತ್ತು ಇನ್ನಿತರೆ ದಾಖಲೆಗಳನ್ನು ಪಡೆದು ಸ್ಥಳ ಪರಿಶೀಲನೆ ಮಾಡಿ, ಹೊಸ ಬಿಪಿಎಲ್ ಕಾರ್ಡು ವಿತರಿಸಲು ಕ್ರಮ ವಹಿಸಲಾಗವುದು ಎಂದು ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದರು.
ಭಾರತೀಯ ರೈಲ್ವೆಯೊಂದಿಗೆ ಕೊಂಕಣ್ ರೈಲ್ವೆ ವಿಲೀನಕ್ಕೆ ಸಹಮತವಿದೆ- ಸಚಿವ ಕೆ.ಜೆ. ಜಾರ್ಜ್
ಬೆಳಗಾವಿ, ಸುವರ್ಣ ವಿಧಾನಸೌಧ, ಡಿ.12 (ಕರ್ನಾಟಕ ವಾರ್ತೆ):
ಮಂಗಳೂರು-ಮುAಬೈ ನಡುವೆ ನಿರ್ಮಿಸಿರುವ ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆಯಲ್ಲಿ ವಿಲೀನಗೊಳಿಸಲು ರಾಜ್ಯ ಸರ್ಕಾರದ ಸಂಪೂರ್ಣ ಸಹಮತವಿದ್ದು, ಈ ನಿಟ್ಟಿನಲ್ಲಿ ಪತ್ರ ವ್ಯವಹಾರ ನಡೆಸಲಾಗಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಹೇಳಿದರು.
ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಗುರುವಾರ ವಿಧಾನಸಭೆಯ ಗಮನಸೆಳೆಯುವ ಸೂಚನೆಗಳಡಿ ಶಾಸಕರುಗಳಾದ ಕಿರಣ್ ಕುಮಾರ್ ಕೊಡ್ಗಿ ಮತ್ತು ವಿ. ಸುನೀಲ್‌ಕುಮಾರ್ ಅವರ ಗಮನಸೆಳೆಯುವ ಸೂಚನೆಗೆ ರಾಜ್ಯ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರ ಪರವಾಗಿ ಉತ್ತರ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು, ಕೊಂಕಣ ರೈಲ್ವೆ ಈ ಹಿಂದೆಯೇ ಭಾರತೀಯ ರೈಲ್ವೆಯೊಂದಿಗೆ ವಿಲೀನವಾಗಬೇಕಿತ್ತು. ಆದರೆ ನಷ್ಟದಲ್ಲಿ ನಡೆಯುತ್ತಿರುವ ಕಾರಣ, ಈ ಭಾಗದ ಯಾವುದೇ ರೈಲ್ವೆ ನಿಲ್ದಾಣಗಳು ಕೂಡ ಅಭಿವೃದ್ಧಿಯಾಗಲಿಲ್ಲ. ಕರ್ನಾಟಕದ ಪಾಲಿನ 270 ಕೋಟಿ ರೂ. ಗಳ ಶೇರು ಮೊತ್ತವನ್ನು ಯಾವ ರೀತಿ ಹೊಂದಾಣಿಕೆ ಮಾಡಬೇಕು ಎಂಬುದರ ಬಗ್ಗೆ ಈಗಾಗಲೆ ಪತ್ರ ವ್ಯವಹಾರ ನಡೆಸಲಾಗಿದೆ. ಭಾರತೀಯ ರೈಲ್ವೆಯೊಂದಿಗೆ ವಿಲೀನ ಆದಲ್ಲಿ, ಹೊಸ ರೈಲುಗಳು ಕೂಡ ಬರಲಿದ್ದು, ರೈಲು ನಿಲ್ದಾಣಗಳು ಕೂಡ ಸುಧಾರಣೆ ಕಾಣಲಿವೆ ಎಂದರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿ, ವಿಲೀನ ಪ್ರಕ್ರಿಯೆ ಬಗ್ಗೆ ರಾಜ್ಯ ಸರ್ಕಾರ ಕೊಂಕಣ ರೈಲ್ವೆಗೆ ಪತ್ರ ವ್ಯವಹಾರ ಮಾಡಿದ್ದು, ಅವರಿಂದ ಉತ್ತರ ಬರುವ ನಿರೀಕ್ಷೆಯಲ್ಲಿದ್ದೇವೆ ಎಂದರು.