Breaking News

ಕರ್ನಾಟಕ ವಿಧಾನಮಂಡಲದ ಎಸ್ಸಿ ಎಸ್ಟಿ ಕಲ್ಯಾಣ ಸಮಿತಿಯ ಮೊದಲನೇ ವರದಿ ಸರ್ಕಾರಕ್ಕೆ ಸಲ್ಲಿಕೆ: ಪಿ.ಎಂ.ನರೇಂದ್ರಸ್ವಾಮಿ

SC ST Welfare Committee of Karnataka Legislature submits first report to Govt.: PM Narendraswamy

ಜಾಹೀರಾತು
ಜಾಹೀರಾತು


ಬೆಳಗಾವಿ ಸುವರ್ಣಸೌಧ ಡಿ.13 (ಕ.ವಾ.):
ಕರ್ನಾಟಕ ವಿಧಾನಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ 2024-25ನೇ ಸಾಲಿನ ಮೊದಲನೇ ವರದಿಯನ್ನು ಡಿಸೆಂಬರ್ 12ರಂದು ವಿಧಾನಸಭೆ ಮತ್ತು ವಿಧಾನ ಪರಿಷತ್ ಎರಡೂ ಸದನಗಳಲ್ಲಿ ಮಂಡಿಸಿ ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದು ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ ಅಧ್ಯಕ್ಷರು ಆಗಿರುವ ವಿಧಾನಸಭೆ ಸದಸ್ಯರಾದ ಪಿ.ಎಂ. ನರೇಂದ್ರಸ್ವಾಮಿ ಅವರು ಹೇಳಿದರು.
ಸುವರ್ಣಸೌಧದ ಪಶ್ಚಿಮದ್ವಾರದ ಬಳಿ ಸಮಿತಿಯ ಸದಸ್ಯರೊಂದಿಗೆ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿ ಅವರು ಈ ಮಾಹಿತಿ ನೀಡಿದರು.
ಸಮಿತಿಯು ಕಲಬುರಗಿ, ಯಾದಗಿರಿ, ಬೀದರ್, ಕೊಪ್ಪಳ, ರಾಯಚೂರು, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ಗದಗ, ಧಾರವಾಡ, ವಿಜಯಪುರ, ಬಾಗಲಕೋಟೆ ಹಾಗೂ ಬೆಳಗಾವಿ ಸೇರಿ ಒಟ್ಟು 14 ಜಿಲ್ಲೆಗಳಲ್ಲಿ ಅಧ್ಯಯನ ಪ್ರವಾಸ ಮಾಡಿ ಅನೇಕ ಲೋಪದೋಷಗಳನ್ನು ಪರಿಶೀಲಿಸಿದೆ. ಒಂದೇ ಮನೆಯ ಮಕ್ಕಳಂತೆ ಎಲ್ಲ ಪಕ್ಷದವರು ಒಗ್ಗೂಡಿ ಈ ವರದಿಯನ್ನು ಸಿದ್ಧಪಡಿಸಿದ್ದೇವೆ. ರಾಜ್ಯದ ಹಿತದೃಷ್ಟಿಯಿಂದ ಮತ್ತು ಎಸ್ಸಿ ಎಸ್ಟಿ ಸಮುದಾಯದ ಅಭಿವೃದ್ಧಿಗೆ ಹಾಗೂ ಅವರ ಭವಿಷ್ಯತ್ತನ್ನು ರೂಪಿಸುವುದಕ್ಕೆ ಸರ್ಕಾರದ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನ ಆಗುವುದಕ್ಕೆ ಎಲ್ಲೆಲ್ಲಿ ಲೋಪಗಳಿದ್ದಾವೆ ಎಂಬುದನ್ನು ಪತ್ತೆ ಮಾಡಿ ಸಾಕಷ್ಟು ಶ್ರಮವಹಿಸಿ ಈ ವರದಿಯನ್ನು ತಯಾರಿ ಮಾಡಿದ್ದೇವೆ ಎಂದು ಅವರು ತಿಳಿಸಿದರು.
ಎಸ್‌ಸಿಎಸ್‌ಪಿ ಮತ್ತು ಟಿಎಸ್ಪಿ ಅನುದಾನವನ್ನು ಕಡ್ಡಾಯವಾಗಿ ಈ ಸಮುದಾಯವರಿಗೆ ಬಳಸಬೇಕು. ಹೊರಗುತ್ತಿಗೆಯಲ್ಲಿ ಮೀಸಲಾತಿಯನ್ನು ಕಡ್ಡಾಯ ಪಾಲಿಸಬೇಕು., ಎಲ್ಲಾ ಜಿಲ್ಲೆಗಳಲ್ಲಿ ಕಡ್ಡಾಯವಾಗಿ ಎಸ್ಸಿ ಮತ್ತು ಎಸ್ಟಿ ಸಮುದಾಯವರಿಗೆ 100 ದಿನಗಳ ಉದ್ಯೋಗ ಖಾತ್ರಿ ನೀಡಬೇಕು. ಸ್ಮಶಾನಭೂಮಿ ಇಲ್ಲದಿರುವ ಕಡೆಗಳಲ್ಲಿ ಕೂಡಲೇ ಒದಗಿಸಬೇಕು. ಭೂ ಒಡೆತನ ಯೋಜನೆಯಡಿ ಜಮೀನು ನೀಡಬೇಕು. ನಿವೇಶನ ವಸತಿ ರಹಿತರಿಗೆ ಕೂಡಲೇ ಸೌಕರ್ಯ ಒದಗಿಸಬೇಕು. ಪ್ರಾಧಿಕಾರಗಳಿಂದ ಬರುವ ಆದಾಯದಲ್ಲಿ ಎಸ್ಸಿ ಎಸ್ಟಿ ಹಾಸ್ಟೇಲಗಳಿಗೆ ಬೆಡ್, ಕಾಟ, ದಿಂಬು ಒದಗಿಸಬೇಕು., ಹೌಸಿಂಗ್ ಸೊಸೈಟಿಗಳ ಬಡಾವಣೆಗಳಲ್ಲಿ ಸೈಟಗಳ ಮೀಸಲಾತಿ ನೀಡಬೇಕು ಎಂಬುದು ಸೇರಿದಂತೆ ನಾನಾ ವಿಷಯಗಳ ಬಗ್ಗೆ ಸಮಿತಿಯು ಪರಿಶೀಲಿಸಿ ವರದಿ ನೀಡಿದೆ ಎಂದು ಅವರು ತಿಳಿಸಿದರು.
ಸಮಿತಿಯ ಅಧ್ಯಕ್ಷರಾದ ತಾವು ಮತ್ತು ಸಮಿತಿಯ ಎಲ್ಲ ಸದಸ್ಯರು ಸೇರಿ ಹಲವಾರು ತನಿಖೆಗಳನ್ನು ನಡೆಸಿ, ಹಲವಾರು ಜಿಲ್ಲೆಗಳ ಪ್ರವಾಸ ನಡೆಸಿ ಹಲವಾರು ಇಲಾಖೆಗಳನ್ನು ವಿಮರ್ಶೆ ಮಾಡಿ ಅಲ್ಲಿರುವ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಆಗಿರುವ ಲೋಪ ಮತ್ತು ಎಸ್ಸಿ ಎಸ್ಟಿ ಕಾಯ್ದೆಯನ್ನು ಸದ್ಬಳಕೆ ಮಾಡುವ ಜವಾಬ್ದಾರಿಯನ್ನು ನಿರ್ವಹಿಸುವಲ್ಲಿ ಆಗಿರುವ ಲೋಪಗಳನ್ನು ಹಾಗೂ ವಿಶೇಷವಾಗಿ ಹಾಸ್ಟೇಲ್ ಮತ್ತು ವಸತಿ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳಿಗೆ ದೊರಕಬೇಕಾದ ಸೌಲಭ್ಯಗಳಲ್ಲಿ ಆಗಿರುವಂತಹ ಕೊರತೆ ಬಗ್ಗೆ ಸಮಿತಿಯು ವಿಶೇಷವಾಗಿ ಈ ವರದಿಯನ್ನು ತಯಾರಿ ಮಾಡಿ ಹಲವಾರು ಮಾರ್ಪಾಟುಗಳನ್ನು ಸೂಚಿಸಿದೆ.
ಎಸ್ಸಿಪಿ ಟಿಎಸ್ಪಿ ಕಾಯ್ದೆಯಡಿ ಬರುವ ರೀತಿಯಲ್ಲಿ ಹೊರಗುತ್ತಿಗೆ ಮೀಸಲಾತಿ ಇರಬೇಕು, ಹೊರಗುತ್ತಿಗೆ ಸಿಬ್ಬಂದಿಗೆ ನೀಡುವ ವೇತನದ ಬಗ್ಗೆ ಜೊತೆಗೆ ಹಾಸ್ಟೇಲ್ ಮತ್ತು ವಸತಿ ಶಿಕ್ಷಣ ಸಂಸ್ಥೆಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಇರುವುದನ್ನು ಸಮಿತಿಯು ತೀಕ್ಷ÷್ಣವಾಗಿ ಪರಿಶೀಲನೆ ನಡೆಸಿ ಮಾರ್ಗೋಪಾಯ ಕಂಡು ಹಿಡಿದು ವರದಿಯಲ್ಲಿ ನೀಡಿದೆ ಎಂದು ಅವರು ತಿಳಿಸಿದರು.
ವಿಶೇಷವಾಗಿ ಉತ್ತರ ಕರ್ನಾಟಕ ಏಳೆಂಟು ಜಿಲ್ಲೆಗಳಲ್ಲಿ ಪ್ರವಾಸ ಮಾಡಿದಾಗ ಶೋಚನೀಯ ಅಂಶವೊAದು ಸಮಿತಿಯ ಗಮನಕ್ಕೆ ಬಂದಿತು. ಮಾಜಿ ದೇವದಾಸಿಯರಿಗೆ ಪೂರ್ಣ ಪ್ರಮಾಣದಲ್ಲಿ ಪುನರ್ವಸತಿಯನ್ನು ಕಲ್ಪಿಸದೇ ಇರುವುದನ್ನು ಗಮನಿಸಿ ಈ ಬಗ್ಗೆ ತೀಕ್ಷ÷್ಣವಾಗಿ ಪ್ರತಿಕ್ರಿಯೆ ನೀಡಿ ಜಿಲ್ಲಾಡಳಿತ ಮತ್ತು ಸರ್ಕಾರಕ್ಕೆ ಸೂಕ್ತವಾದ ಮಾರ್ಗದರ್ಶನವನ್ನು ಮಾಡಿದ್ದೇವೆ. ಸಾವಿರಾರು ಜನ ಮಾಜಿ ದೇವದಾಸಿಯರು ವಸತಿ ಇಲ್ಲದೇ ನಿವೇಶನ ಇಲ್ಲದೇ ಹಳೆಯ ಪದ್ಧತಿಯಂತೆಯೇ ಬದುಕುತ್ತಿರುವುದರ ಬಗ್ಗೆ ನಾವು ವರದಿಯಲ್ಲಿ ಬೆಳಕು ಚೆಲ್ಲಿದ್ದೇವೆ. ಈ ಬಗ್ಗೆ ಸ್ಪಷ್ಟವಾದ ವಿಚಾರಗಳನ್ನು ಮತ್ತು ದತ್ತಾಂಶಗಳನ್ನು ಕ್ರೋಢೀಕರಿಸಿ ವರದಿಯಲ್ಲಿ ನೀಡಿದ್ದೇವೆ ಎಂದರು.
ವಸತಿ ಶಿಕ್ಷಣ ಸಂಸ್ಥೆಗಳಲ್ಲಿ ಉತ್ತಮ ಗುಣಮಟ್ಟವನ್ನು ಇನ್ನಷ್ಟು ಉನ್ನತೀಕರಿಸುವುದಕ್ಕೆ ಸಮಿತಿಯು ಸಲಹೆ ಮಾಡಿದೆ. ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿನ ವ್ಯವಸ್ಥೆಗೂ ಮತ್ತು ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿನ ವ್ಯವಸ್ಥೆಗೂ ಅಂತರ ಇರಬಾರದು. ಈ ನಿಟ್ಟಿನಲ್ಲಿ ಇನ್ಮುಂದೆ ಕಂಪ್ಯೂಟರ್ ಶಿಕ್ಷಣ ಮತ್ತು ಪ್ರಾಥಮಿಕ ಶಿಕ್ಷಣದಲ್ಲಿ ಎಸ್‌ಡಿಎಂಸಿಗಳ ಭಾಗವಹಿಸುವಿಕೆಯ ಜೊತೆಗೆ ಸ್ಥಳೀಯ ಅನುದಾನವನ್ನು ಕ್ರೋಢೀಕರಿಸಿ ಟ್ಯಾಬ್ ಗಳನ್ನು ನೀಡುವುದು ಮತ್ತು ಸಿಎಸ್‌ಆರ್ ಅನುದಾನ ಲಭ್ಯತೆವಿರುವ ಕಡೆಗಳಲ್ಲಿ ಅದನ್ನು ಬಳಸಿಕೊಂಡು ಗ್ರಾಮೀಣ ಶಿಕ್ಷಣವನ್ನು ಮೇಲೆತ್ತಬೇಕು ಎಂದು ಸಮಿತಿಯು ಸಲಹೆ ಮಾಡಿದೆ ಎಂದರು.
ಸಮಿತಿಯ ಸದಸ್ಯರು ಜಿಲ್ಲೆಗಳಿಗೆ ಭೇಟಿ ನೀಡಿದಂತಹ ಸಂದರ್ಭದಲ್ಲಿ ಪ್ರಾಥಮಿಕ ಶಿಕ್ಷಣದ ಬಗ್ಗೆ ಮಾಹಿತಿ ಪಡೆದಾಗ ಅಲ್ಲಿ ವಿದ್ಯಾಭ್ಯಾಸ ಮಾಡುವ ಒಟ್ಟು ಮಕ್ಕಳ ಪೈಕಿ ಶೇ.50ಕ್ಕಿಂತ ಹೆಚ್ಚು ಮಕ್ಕಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದವರಿದ್ದಾರೆಂಬ ಅಂಶ ತಿಳಿದು ಬಂದಿರುವುದರಿAದ ಸೌಲಭ್ಯ ಕಲ್ಪಿಸುವುದರ ಬಗ್ಗೆ ಸಮಿತಿಯು ಕೆಲವು ಮಾರ್ಪಾಟುಗಳಿಗೆ ವರದಿಯಲ್ಲಿ ಅವಕಾಶ ಮಾಡಿದೆ ಎಂದು ತಿಳಿಸಿದರು.
ಹೊರಗುತ್ತಿಗೆ ಆಧಾರದ ಮೇಲೆ ನೌಕರರನ್ನು ಪಡೆದುಕೊಳ್ಳುವ ವ್ಯವಸ್ಥೆಯ ಬಗ್ಗೆ ಸಮಿತಿಯು ಪರಿಶೀಲಿಸಿದೆ. ಸಿಬ್ಬಂದಿಗೆ ಸಿಗಬೇಕಾದ ಮೊತ್ತಕ್ಕಿಂತ ಹೆಚ್ಚಿನ ಹಣವನ್ನು ಏಜೆನ್ಸಿಯವರು ಉಳಿಸಿಕೊಳ್ಳುವುದು ತಪ್ಪಬೇಕು. ಹೊರಗುತ್ತಿಗೆ ನೌಕರರಿಗೆ ಏಜೆನ್ಸಿ ಮೂಲಕ ಹಣ ನೀಡುವ ಬದಲು ನೇರವಾಗಿ ಇಲಾಖೆಗಳೇ ಸಿಬ್ಬಂದಿಯನ್ನು ನೇಮಿಸಿಕೊಂಡು ವೇತನ ಪಾವತಿಸುವುದರಿಂದ ನೌಕರರಿಗೆ ಹೆಚ್ಚುವರಿ ಹಣ ಸಿಗುತ್ತದೆ ಎಂಬುದಾಗಿ ಸಮಿತಿಯು ವರದಿಯಲ್ಲಿ ತಿಳಿಸಿದೆ ಎಂದರು.
ನಾನು ಅಧ್ಯಕ್ಷರಾದಂತಹ ಪ್ರತಿಯೊಂದು ಸಂದರ್ಭದಲ್ಲಿ ನೀಡಿದ ವರದಿಗಳು ಪರಿಣಾಮಕಾರಿಯಾಗಿ ಜಾರಿಯಾಗಿವೆ. ಬಜೆಟ್‌ನಲ್ಲಿ ಮತ್ತು ಕಾರ್ಯಕ್ರಮ ಅನುಷ್ಠಾನದಲ್ಲಿ ಸರ್ಕಾರವು ಜವಾಬ್ದಾರಿಯುತವಾಗಿ ನಡೆದುಕೊಂಡಿದೆ. 2013ರ ಎಸ್ಸಿಪಿ ಟಿಎಸ್ಪಿ ಕಾಯ್ದೆಯಡಿ ಅನುದಾನವನ್ನು ಬಜೆಟ್‌ನಲ್ಲಿ ಮೀಸಲಿಡುವಂತಹ ಶಿಫಾರಸ್ಸನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಥಾವತ್ತಾಗಿ ಜಾರಿಗೊಳಿಸಿದ್ದೇ ಇದಕ್ಕೆ ಸಾಕ್ಷಿಯಾಗಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಸಮಿತಿಯ ಸದಸ್ಯರು ಮತ್ತು ಶಾಸಕರಾದ ದುರ್ಯೋದನ ಎಂ ಐಹೊಳೆ, ಕೃಷ್ಣ ನಾಯ್ಕ ಸೇರಿದಂತೆ ಇನ್ನೀತರ ಸದಸ್ಯರು ಇದ್ದರು.

ಸ್ಥಳೀಯ ಸಂಸ್ಥೆಗಳ ಮೇಲ್ದರ್ಜೆಗೆ ಏರಿಸಲು ಪ್ರಸ್ತಾವನೆ ಸ್ವೀಕಾರ
ಹಂತ ಹಂತವಾಗಿ ಮೇಲ್ದರ್ಜೆಗೆ ಏರಿಸಲು ಕ್ರಮ
-ಸಚಿವ ಬಿ.ಎಸ್.ಸುರೇಶ್


ಬೆಳಗಾವಿ ಸುವರ್ಣಸೌಧ,ಡಿ.13(ಕರ್ನಾಟಕ ವಾರ್ತೆ):
ರಾಜ್ಯದ ವಿವಿಧ ಕಡೆಗಳಿಂದ ಗ್ರಾಮ ಪಂಚಾಯಿತಿಗಳನ್ನು ಪಟ್ಟಣ ಪಂಚಾಯಿತಿಗಳನ್ನಾಗಿ, ಪಟ್ಟಣ ಪಂಚಾಯಿತಿಗಳನ್ನು ಪುರಸಭೆಗಳನ್ನಾಗಿ, ಪುರಸಭೆಗಳನ್ನು ನಗರಸಭೆಗಳನ್ನಾಗಿ ಮೇಲ್ದರ್ಜೆಗೆ ಏರಿಸುವಂತೆ ಕೋರಿ 50ಕ್ಕೂ ಹೆಚ್ಚು ಪ್ರಸ್ತಾವನೆಗಳನ್ನು ರಾಜ್ಯ ಸರ್ಕಾರ ಸ್ವೀಕರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಣಕಾಸು ಇಲಾಖೆಯೊಂದಿಗೆ ಚರ್ಚಿಸಿ ಹಂತ ಹಂತವಾಗಿ ಮೇಲ್ದರ್ಜೆಗೆ ಏರಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ್ ಹೇಳಿದರು.
ಬೆಳಗಾವಿ ಸುವರ್ಣಸೌಧಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದಲ್ಲಿ ಶುಕ್ರವಾರ ಪ್ರಶ್ನೋತ್ತರ ಕಲಾಪದ ವೇಳೆ ಅವರು ಸದನಕ್ಕೆ ಮಾಹಿತಿ ನೀಡಿದರು.
20,000 ಸಾವಿರಕ್ಕೂ ಅಧಿಕ ಜನಸಂಖ್ಯೆ ಇದ್ದರೆ ಮಾತ್ರ ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೆ ಏರಿಸಬಹುದು. ಇದರೊಂದಿಗೆ ಪಟ್ಟಣ ಪಂಚಾಯಿತಿಯಾಗಿ ಪರಿವರ್ತನೆಯಾದ ಮೇಲೆ ಅಗತ್ಯ ಅಧಿಕಾರಿ, ಸಿಬ್ಬಂದಿಗಳನ್ನು ನೇಮಿಸಿ ಸೂಕ್ತ ಅನುದಾನವನ್ನು ಸಹ ನೀಡಬೇಕು. ಸ್ವೀಕೃತವಾದ ಎಲ್ಲ ಪ್ರಸ್ತಾವನೆಗಳನ್ನು ಆದ್ಯತೆಯ ಮೇರೆಗೆ ಪರಿಗಣಿಸಲಾಗುವುದು ಎಂದು ಸಚಿವ ಬಿ.ಎಸ್.ಸುರೇಶ್ ಭರವಸೆ ನೀಡಿದರು.
ಗೋಕರ್ಣ ಪಟ್ಟಣ ಪಂಚಾಯಿತಿ ರಚನೆಗೆ ಮನವಿ
ಕುಮುಟ ಕ್ಷೇತ್ರದ ಶಾಸಕ ದಿನಕರ್ ಕೇಶವ್ ಶೆಟ್ಟಿಯವರು ಧಾರ್ಮಿಕ ಶ್ರದ್ಧಾ ಕ್ಷೇತ್ರವಾದ ಗೋಕರ್ಣ ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿ ಅಥವಾ ಪುರಸಭೆಯನ್ನಾಗಿ ಮೇಲ್ದರ್ಜೆ ಏರಿಸುವಂತೆ ಕೋರಿ ಪೌರಾಡಳಿತ ಹಾಗೂ ಹಜ್ ಸಚಿವ ರಹೀಂ ಖಾನ್ ಅವರಲ್ಲಿ ಕೋರಿದರು.
ಶಾಸಕ ದಿನಕರ್ ಕೇಶವ್ ಶೆಟ್ಟಿ ಅವರ ಮಾತಿಗೆ ಧ್ವನಿಗೂಡಿಸಿದ ಶಾಸಕರುಗಳಾದ ವಿಜಯೇಂದ್ರ, ಡಾ.ಅಶ್ವತ್ ನಾರಾಯಣ, ಸುನೀಲ್ ಕುಮಾರ್, ಭೈರತಿ ಬಸವರಾಜ್ ಅವರು ಗೋಕರ್ಣ ಪ್ರಕರಣವನ್ನು ವಿಶೇಷ ಎಂದು ಪರಿಗಣಿಸಿ, ಸರ್ಕಾರ ಕೂಡಲೇ ಮೇಲ್ದರ್ಜೆಗೆ ಏರಿಸಲು ಕ್ರಮ ಕೈಗೊಳ್ಳಬೇಕು. ಲಕ್ಷಾಂತರ ಪ್ರವಾಸಿಗರು ಗೋಕರ್ಣಕ್ಕೆ ಆಗಮಿಸುತ್ತಾರೆ. ಆದ್ದರಿಂದ ಸರ್ಕಾರ ಸ್ವಚ್ಛತೆ, ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಮನವಿ ಮಾಡಿದರು.
ಉತ್ತರ ಕನ್ನಡ ಜಿಲ್ಲಾಧಿಕಾರಿಗಳು ಗೋಕರ್ಣವನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೆ ಏರಿಸಲು ಪ್ರಸ್ತಾವನೆಯನ್ನು ಸಲ್ಲಿಸಿದ್ದಾರೆ. 2011 ರ ಜನಗಣತಿಯಂತೆ ಗೋಕರ್ಣದಲ್ಲಿ 13,539 ಜನಸಂಖ್ಯೆ ಇದೆ. ವಿಸ್ತೀರ್ಣ 33.1 ಚದರ ಕಿ.ಮೀ. ಇದ್ದು, ಜನಸಾಂದ್ರತೆ ಪ್ರತೀ ಚದರ ಕಿ.ಮೀ.ಗೆ 409 ಇದೆ. 2015ರಲ್ಲಿ ಸಚಿವ ಸಂಪುಟ ಸಭೆಯಲ್ಲಿ 2011ರ ಜನಗಣತಿಯಲ್ಲಿ 15,000ಕ್ಕಿಂತ ಹೆಚ್ಚು ಜನಸಂಖ್ಯೆ ಇರುವ ಪಂಚಾಯಿತಿಗಳನ್ನು ಮಾತ್ರ ಮೇಲ್ದರ್ಜೆಗೆ ಏರಿಸಲು ಪರಿಗಣಿಸಲು ನಿರ್ಧರಿಸಲಾಗಿದೆ. ಆದಾಗ್ಯೂ ಗೋಕರ್ಣದ ಪ್ರಕರಣವನ್ನು ವಿಶೇಷ ಎಂದು ಪರಿಗಣಿಸಿ, ಶಾಸಕರು, ಅಧಿಕಾರಿಗಳೊಂದಗೆ ಸಭೆ ನಡೆಸಿ ಸಕಾರಾತ್ಮವಾಗಿ ಕ್ರಮ ಕೈಗೊಳ್ಳುವುದಾಗಿ ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಭರವಸೆ ನೀಡಿದರು.
ಇದೇ ವೇಳೆ ಶಾಸಕ ಪ್ರಭು ಚವ್ಹಾಣ್ ಔರಾದ್ ಪಟ್ಟಣ ಪಂಚಾಯಿತಿಯನ್ನು ಪುರಸಭೆಯಾಗಿ ಹಾಗೂ ಕಮಲ್‌ನಗರವನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೆ ಏರಿಸಬೇಕು ಎಂದು ಸಚಿವ ರಹೀಂ ಖಾನ್ ಅವರಲ್ಲಿ ಮನವಿ ಮಾಡಿದರು.

ಗ್ರಾಮ ಪಂಚಾಯತ್ ಸದಸ್ಯರ ಮಾಸಿಕ ಗೌರವ ಧನ ಹೆಚ್ಚಳ ಬಗ್ಗೆ ಸಿಎಂ ಬಳಿ ಚರ್ಚೆ: ಸಚಿವ ಪ್ರಿಯಾಂಕ್ ಖರ್ಗೆ


ಬೆಳಗಾವಿ ಸುವರ್ಣಸೌಧ,ಡಿ.13(ಕರ್ನಾಟಕ ವಾರ್ತೆ):
ರಾಜ್ಯದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ರು, ಉಪಾಧ್ಯಕ್ಷರು ಹಾಗೂ ಸದಸ್ಯರುಗಳಿಗೆ ಮಾಸಿಕ ಗೌರವ ಧನವನ್ನು ಹೆಚ್ಚಳ ಮಾಡುವ ಕುರಿತ ಬೇಡಿಕೆಯನ್ನು ಮುಖ್ಯಮಂತ್ರಿ ಅವರ ಗಮನಕ್ಕೆ ತರಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಅವರು ಇಂದು ವಿಧಾನ ಪರಿಷತ್ತಿನಲ್ಲಿ ಸದಸ್ಯ ಡಾ. ಧನಂಜಯ ಸರ್ಜಿ ಹಾಗೂ ಡಿ.ಎಸ್ ಅರುಣ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು.
ರಾಜ್ಯದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರುಗಳಿಗೆ ಕೇರಳ ರಾಜ್ಯದಲ್ಲಿರುವಂತೆ ಮಾಸಿಕ ಗೌರವ ಧನವನ್ನು ಹೆಚ್ಚಳ ಮಾಡಲು ಸಾಧ್ಯವಿಲ್ಲ.ಆದರೆ ಹೆಚ್ಚಳ ಮಾಡುವ ಕುರಿತ ಮನವಿಯನ್ನು ಮುಖ್ಯಮಂತ್ರಿ ಅವರ ಗಮನಕ್ಕೆ ತರಲಾಗುವುದು ಎಂದರು.
ಗ್ರಾಮ ಪಂಚಾಯತ್ ಸದಸ್ಯ ರಿಗೆ ಪಿಂಚಣಿ,ಉಚಿತ ಬಸ್ ಪಾಸ್ ಮತ್ತು ಆರೋಗ್ಯ ವಿಮೆ ನೀಡುವ ಪ್ರಸ್ತಾವನೆ ಸರ್ಕಾರದ ಮುಂದೆ ಇರುವುದಿಲ್ಲ ಎಂದು ತಿಳಿಸಿದರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಎಲ್ಲಾ ವೃಂದ ಸಂಘಗಳು ಹಾಗೂ ಗ್ರಾಮ ಪಂಚಾಯತಿ ಸದಸ್ಯರ ಒಕ್ಕೂಟಗಳು ಸಲ್ಲಿಸಿರುವ ಬೇಡಿಕೆಗಳ ಕುರಿತು ಪರಿಶೀಲಿಸಲಾಗಿರುತ್ತದೆ.
ಅಧಿಕಾರಿ/ ಕೆಲವು ಸಿಬ್ಬಂದಿಗಳ ಸೇವಾ ವಿಷಯ/ ಬೇಡಿಕೆಗಳನ್ನು ಪರಿಶೀಲಿಸಲು ಆಯುಕ್ತರು, ಪಂಚಾಯತ್ ರಾಜ್ ಆಯುಕ್ತಾಲಯ ರವರ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ಮಾಡಲಾಗಿದ್ದು, ಸದರಿ ಸಮಿತಿಗೆ ಪರಿಶೀಲಿಸಿ ವರದಿಯನ್ನು ಸಲ್ಲಿಸಲು 3 ತಿಂಗಳ ಕಾಲಾವಕಾಶ ನೀಡಲಾಗಿದೆ. ಸಮಿತಿ ವರದಿ ಸಲ್ಲಿಸಿದ ನಂತರ ಬೇಡಿಕೆಗಳ ಕುರಿತು ಪರಿಶೀಲಿಸಿ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.


ಬೆಂಗಳೂರಿನಲ್ಲಿ ಮಳೆಯಿಂದಾಗುವ ಹಾನಿ ತಡೆಗಟ್ಟಲು 5000 ಕೋಟಿ ರೂ. ಗಳ ಶಾಶ್ವತ ಯೋಜನೆ-ಸಚಿವ ಕೃಷ್ಣ ಭೈರೇಗೌಡ


ಬೆಳಗಾವಿ ಸುವರ್ಣಸೌಧ ಡಿ.13 (ಕ.ವಾ.):
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಪ್ರದೇಶಗಳಲ್ಲಿ ಅತಿಹೆಚ್ಚು ಮಳೆಯಿಂದ ಪ್ರವಾಹ ರೀತಿಯಲ್ಲಿ ಉಂಟಾಗುವ ಅತಿವೃಷ್ಟಿಯ ಹಾನಿಯನ್ನು ತಡೆಗಟ್ಟಲು ಒಟ್ಟು 5000 ಕೋಟಿ ರೂ. ಗಳ ಶಾಶ್ವತ ಯೋಜನೆಯನ್ನು ರೂಪಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಹೇಳಿದರು.
ಪ್ರಸಕ್ತ ವರ್ಷ ರಾಜ್ಯದಲ್ಲಿ ಅಧಿಕ ಮಳೆಯಿಂದ ಉಂಟಾದ ಹಾನಿ ಕುರಿತಂತೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಶುಕ್ರವಾರ ಸರ್ಕಾರದ ಪರವಾಗಿ ಹೇಳಿಕೆ ನೀಡಿದರು.
ಬೆಂಗಳೂರು ವ್ಯಾಪ್ತಿಯಲ್ಲಿ ಅತಿಹೆಚ್ಚು ಮಳೆ ಸುರಿದಾಗ ಪದೇ ಪದೇ ಹಾನಿಗೊಳಗಾಗುವ ಪ್ರದೇಶಗಳನ್ನು ಗುರುತಿಸಲಾಗಿದೆ. ಮಳೆ ಸುರಿದಂತಹ ಸಂದರ್ಭದಲ್ಲಿ ನೀರು ಸರಾಗವಾಗಿ ಹರಿಯುವಂತೆ ರಾಜಕಾಲುವೆ ಹಾಗೂ ವಸತಿ ಪ್ರದೇಶದಲ್ಲಿನ ಕಾಲುವೆಗಳನ್ನು ಪರಿಪಕ್ವವಾಗಿ ಸುಧಾರಿಸಲು ಕ್ರಮ ವಹಿಸಲಾಗಿದೆ. ಈ ವ್ಯಾಪ್ತಿಯಲ್ಲಿ 856 ಕಿ.ಮೀ. ರಾಜಕಾಲುವೆಗಳಿದ್ದು, ರಾಜಕಾಲುವೆ ಇಲ್ಲದ ಕಡೆ 200 ಕಿ.ಮೀ. ಕಿರು ಕಾಲುವೆಗಳು ಸೇರಿದಂತೆ ಒಟ್ಟು 1100 ಕಿ.ಮೀ. ಕಾಲುವೆಗಳಲ್ಲಿ ಹೆಚ್ಚಿನ ಮಳೆ ನೀರು ಸರಾಗವಾಗಿ ಹರಿಯುವಂತೆ ಮಾಡಲು ಶಾಶ್ವತ ಯೋಜನೆಯನ್ನು ರೂಪಿಸಲಾಗಿದೆ. ಈಗಾಗಲೆ 700 ಕಿ.ಮೀ. ಅಭಿವೃದ್ಧಿಪಡಿಸಲಾಗಿದ್ದು ಇನ್ನೂ 300 ಕಿ.ಮೀ. ರಾಜಕಾಲುವೆಯನ್ನು ಬರುವ ಒಂದು ವರ್ಷದ ಅವಧಿಯಲ್ಲಿ ಅಭಿವೃದ್ಧಿಪಡಿಸಲಾಗುವುದು, ಇದಕ್ಕಾಗಿ ಡಿಸಾಸ್ಟರ್ ಮಿಟಿಗೇಶನ್ ಫಂಡ್ ನಡಿ 240 ಕೋಟಿ ರೂ. ಒದಗಿಸಲಾಗುತ್ತಿದೆ ಎಂದರು.
ರಾಜಕಾಲುವೆಗಳ ಅಭಿವೃದ್ದಿಗೆ 03 ಸಾವಿರ ಕೋಟಿ :
ಬೆಂಗಳೂರಿನಲ್ಲಿ ಮಳೆ ಬಂದಾಗ ಪ್ರವಾಹ ತಡೆಗಟ್ಟುವ ನಿಟ್ಟಿನಲ್ಲಿ 5 ಸಾವಿರ ಕೋಟಿ ರೂ.ವೆಚ್ಚದಲ್ಲಿ ಶಾಶ್ವತ ಪರಿಹಾರ ಕ್ರಮಗಳನ್ನು ಸರಕಾರ ಕೈಗೊಳ್ಳುತ್ತಿದೆ.
ಬೃಹತ್ ಬೆಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಮಳೆಯಿಂದಾಗುವ ಹಾನಿ ತಡೆಗಟ್ಟಲು ಒಂದು ಬಾರಿಯ ಶಾಶ್ವತ ಕಾಮಗಾರಿ ಕೈಗೊಳ್ಳಲು ವಿಶ್ವಬ್ಯಾಂಕ್ ನೆರವು ಪಡೆಯುವ ನಿಟ್ಟಿನಲ್ಲಿ ಈಗಾಗಲೆ 10 ಸುತ್ತಿನ ಸಭೆಗಳನ್ನು ನಡೆಸಲಾಗಿದೆ. ವಿಶ್ವಬ್ಯಾಂಕ್‌ನಿAದ 3000 ಕೋಟಿ ರೂ. ಸಾಲ ಪಡೆದು, ಬಿಬಿಎಂಪಿ ಮೂಲಕ 2000 ಕೋಟಿ ರೂ. ವೆಚ್ಚದಲ್ಲಿ ಎಲ್ಲ ರಾಜಕಾಲುವೆಗಳನ್ನು ಅಭಿವೃದ್ಧಿಪಡಿಸಲು ಯೋಜಿಸಲಾಗಿದೆ.
ಬಿಬಿಎಂಪಿಗೆ ಹೊಸದಾಗಿ ಸೇರ್ಪಡೆಯಾಗಿರುವ 110 ಹಳ್ಳಿಗಳಲ್ಲಿ ಒಳಚರಂಡಿ ವ್ಯವಸ್ಥೆ ಇರದ ಕಡೆ ಒಳಚರಂಡಿ ವ್ಯವಸ್ಥೆಯನ್ನು ಸಮರ್ಪಕವಾಗಿ ರೂಪಿಸಿ ಸದರಿ ಒಳಚರಂಡಿ ನೀರು ನೇರವಾಗಿ ಸೀವೆಜ್ ಟ್ರೀಟ್‌ಮೆಂಟ್ ವಾಟರ್ ಲೈನ್‌ಗೆ ಸೇರ್ಪಡೆಯಾಗುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗಿದ್ದು, ಈ ಕಾರ್ಯಕ್ಕೆ ಬೆಂಗಳೂರು ಜಲಮಂಡಳಿಗೆ 01 ಸಾವಿರ ಕೋಟಿ ರೂ.ಗಳನ್ನು ಒದಗಿಸಲಾಗುತ್ತಿದೆ. ಇನ್ನಿತರೆ ಕಾಮಗಾರಿಗಳಿಗಾಗಿ 02 ಸಾವಿರ ಕೋಟಿ ರೂ. ಗಳನ್ನು ವೆಚ್ಚ ಮಾಡಲು ನಿರ್ಧರಿಸಲಾಗಿದೆ ಎಂದು ಸಚಿವರು ವಿವರಿಸಿದರು.
ಇನ್ನುಳಿದ 2000 ಕೋಟಿ ರೂ. ಗಳನ್ನು ರಾಜ್ಯ ಸರ್ಕಾರ ಭರಿಸಲು ನಿರ್ಧರಿಸಲಾಗಿದೆ. ಬೆಂಗಳೂರಿನಲ್ಲಿ ಮಳೆಯಿಂದ ಪದೇ ಪದೇ ಹಾನಿಗೀಡಾಗುವ ಪ್ರಮುಖ ರಸ್ತೆಗಳನ್ನು ಗುರುತಿಸಲಾಗಿದ್ದು, ಇಂತಹ ರಸ್ತೆಗಳನ್ನು ದುರಸ್ತಿಪಡಿಸಿ, ಡಾಂಬರೀಕರಣಗೊಳಿಸಲು 695 ಕೋಟಿ ರೂ. ಗಳ ಯೋಜನೆ ರೂಪಿಸಿ, ಸಚಿವ ಸಂಪುಟದ ಅನುಮೋದನೆ ಪಡೆದು ಈಗಾಗಲೆ ಟೆಂಡರ್ ಪ್ರಕ್ರಿಯೆ ಪ್ರಾರಂಭಿಸಲಾಗಿದೆ. ಒಟ್ಟಾರೆ ಬೆಂಗಳೂರಿನಲ್ಲಿ ಅತಿಯಾದ ಮಳೆಯಾದಾಗ ಹಾನಿಯಾಗುವುದನ್ನು ತಡೆಗಟ್ಟಲು ಸರ್ಕಾರ ಶಾಶ್ವತವಾದ ಯೋಜನೆಗಳನ್ನು ರೂಪಿಸಿದ್ದು, ಹಂತ ಹಂತವಾಗಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಸಚಿವ ಕೃಷ್ಣ ಭೈರೇಗೌಡ ಹೇಳಿದರು.


ಗ್ರಾಮ ಪಂಚಾಯತ್ ಆಸ್ತಿಗಳ ಸಮೀಕ್ಷೆ: ಸಚಿವ ಪ್ರಿಯಾಂಕ್ ಖರ್ಗೆ


ಬೆಳಗಾವಿ ಸುವರ್ಣಸೌಧ,ಡಿ.13(ಕರ್ನಾಟಕ ವಾರ್ತೆ):
ರಾಜ್ಯದ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೃಷಿ ತೆರಿಗೆ ನಿರ್ಧರಣೆಗೆ ಒಳಪಟ್ಟಿರದ ಎಲ್ಲಾ ಭೂಮಿ ಮತ್ತು ಕಟ್ಟಡಗಳ ಮ್ಯಾನ್ಯುಯಲ್ ಸಮೀಕ್ಷೆ ನಡೆಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಅವರು ಇಂದು ವಿಧಾನ ಪರಿಷತ್ತಿನಲ್ಲಿ ಸದಸ್ಯ ಎನ್. ರವಿಕುಮಾರ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು.
ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೃಷಿ ತೆರಿಗೆ ನಿರ್ಧರಣೆಗೆ ಒಳಪಟ್ಟಿರದ ಎಲ್ಲಾ ಭೂಮಿ ಮತ್ತು ಕಟ್ಟಡಗಳ ಮ್ಯಾನ್ಯೂಯಲ್ ಸಮೀಕ್ಷೆ ನಡೆಸಿ ತೆರಿಗೆ ವ್ಯಾಪ್ತಿಗೆ ಒಳಪಡಿಸಿ ವಂಚತಂತ್ರ 2.0 ತಂತ್ರಾಂಶದಲ್ಲಿ ಅಳವಡಿಸುವ ಬಗ್ಗೆ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಇಲ್ಲಿಯವರೆಗೆ ಮ್ಯಾನ್ಯೂಯಲ್ ಸಮೀಕ್ಷೆ ಮೂಲಕ 1,41,42,124 ಆಸ್ತಿ ಗಳನ್ನು ಸಮೀಕ್ಷೆ ಮಾಡಿ ಈ ಎಲ್ಲಾ ಆಸ್ತಿಗಳ ವಿವರಗಳನ್ನು ನಮೂನೆ-9ಎ ರಿಜಿಸ್ಟರ್ ನಲ್ಲಿ ನಮೂದಿಸಲಾಗಿದೆ ಎಂದರು.
ಗ್ರಾಮ ಪಂಚಾಯತ್ ಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ತೆರಿಗೆ ಸಂಗ್ರಹ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
[13/12, 5:10 pm] +91 94806 54365: ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ:
ಬಂಡವಾಳ ಒದಗಿಸುವ ಪ್ರಸ್ತಾವನೆ ಇಲ್ಲ
-ಸಚಿವ ಶಿವಾನಂದ ಎಸ್ ಪಾಟೀಲ್
ಬೆಳಗಾವಿ ಸುವರ್ಣಸೌಧ,ಡಿ.13(ಕರ್ನಾಟಕ ವಾರ್ತೆ):
ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಗೆ ಸರ್ಕಾರದ ವತಿಯಿಂದ ರೂ.50 ಕೋಟಿ ಷೇರು ಬಂಡವಾಳ ಒದಗಿಸುವ ಯಾವುದೆ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಎಸ್ ಪಾಟೀಲ್ ಸ್ಪಷ್ಟ ಪಡಿಸಿದರು.
ಬೆಳಗಾವಿ ಸುವರ್ಣಸೌಧಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದಲ್ಲಿ ಶುಕ್ರವಾರ ಪ್ರಶ್ನೋತ್ತರ ಕಲಾಪದಲ್ಲಿ ಕಿತ್ತೂರು ಶಾಸಕ ಬಾಬಾ ಸಾಹೇಬ್ ಪಾಟೀಲ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಮೇಲಿಂತೆ ಸಚಿವರು ಉತ್ತರಿಸಿದರು.
ರಾಜ್ಯ ಸರ್ಕಾರ ಸರ್ಕಾರಿ ಸ್ವಾಮ್ಯದ ದಿ ಮೈಸೂರು ಷುಗರ್ ಕಂಪನಿ ಹೊರತು ಪಡಿಸಿ ಯಾವುದೇ ಸಹಕಾರಿ ಸಕ್ಕರೆ ಕಾರ್ಖಾನೆಗಳಿಗೆ ರಾಜ್ಯ ಸರ್ಕಾರದಿಂದ ಷೇರು ಬಂಡವಾಳ ಅಥವಾ ಅನುದಾನ ನೀಡುವ ನೀತಿ ಸರ್ಕಾರದ ಮುಂದೆ ಇರುವುದಿಲ್ಲ. ಮಲಪ್ರಭಾ ಸಕ್ಕರೆ ಕಾರ್ಖಾನೆಯು ಚುನಾಯಿತ ಆಡಳಿತ ಮಂಡಳಿಯನ್ನು ಹೊಂದಿದೆ. ಕಾರ್ಖಾನೆಯ ಕಾರ್ಯನಿರ್ವಹಣೆಗೆ ಅಗತ್ಯವಾದ ಸಂಪನ್ಮೂಲ ಕ್ರೋಢಿಕರಿಸುವುದು ಆಡಳಿತ ಮಂಡಳಿ ಜವಬ್ದಾರಿಯಾಗಿದೆ. ಆರ್ಥಿಕ ಸಂಕಷ್ಟದಿAದ ಹಾಗೂ ಇತರೆ ಆಡಳಿತಾತ್ಮಕ ಕಾರಣಗಳಿಂದ ಸ್ಥಗಿತಗೊಂಡಿರುವ ಸಹಕಾರಿ ಸಕ್ಕರೆ ಕಾರ್ಖಾನೆಗಳನ್ನು ದೀರ್ಘಾವಧಿಯ ಮೆಲೆ ಖಾಸಗಿಯವರಿಗೆ ಗುತ್ತಿಗೆ ನೀಡಿ ಪುನಶ್ಚೇತನಗೊಳಿಸಬಹುದು. ಈ ಬಗ್ಗೆ ಕಾರ್ಖಾನೆ ಸಾಮಾನ್ಯ ಸಭೆ ಮತ್ತು ಆಡಳಿತ ಮಂಡಳಿ ಸಭೆ ಸೂಕ್ತ ತೀರ್ಮಾನ ಕೈಗೊಂಡು ಪ್ರಸ್ತಾವನೆ ಸಲ್ಲಿಸಿದರೆ ಸರ್ಕಾರ ಪರಿಶೀಲನೆ ನಡೆಸುವುದು ಎಂದು ಸಚಿವ ಶಿವಾನಂದ ಎಸ್ ಪಾಟೀಲ್ ಹೇಳಿದರು.


ಕೋಲ್ಡ್ ಸ್ಟೋರೇಜ್ ನಿರ್ಮಾಣ: ಎ.ಪಿ.ಎಂ.ಸಿ ಸ್ಥಳ ಲೀಜಿಗೆ-ಸಚಿವ ಶಿವಾನಂದ ಎಸ್ ಪಾಟೀಲ್


ಬೆಳಗಾವಿ ಸುವರ್ಣಸೌಧ,ಡಿ.13(ಕರ್ನಾಟಕ ವಾರ್ತೆ):
ಅರಸೀಕೆರೆಯ ಹಬ್ಬನಘಟ್ಟ ಕಾವಲ್(ಗೀಜಿಹಳ್ಳಿ) ಉಪ ಮಾರುಕಟ್ಟೆ ಪ್ರಾಂಗಣದಲ್ಲಿ ಖಾಸಗಿಯವರು ಕೋಲ್ಡ್ ಸ್ಟೋರೇಜ್ ನಿರ್ಮಿಸಿ, ನಿರ್ವಹಣೆ ಮಾಡಲು ಮುಂದೆ ಬಂದರೆ ಕೃಷಿ ಮಾರುಕಟ್ಟೆ ಸ್ಥಳವನ್ನು ಲೀಜಿಗೆ ನೀಡುವುದಾಗಿ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಎಸ್ ಪಾಟೀಲ್ ಸದನದಲ್ಲಿ ಹೇಳಿದರು.
ಬೆಳಗಾವಿ ಸುವರ್ಣಸೌಧಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದಲ್ಲಿ ಶುಕ್ರವಾರ ಪ್ರಶ್ನೋತ್ತರ ಕಲಾಪದಲ್ಲಿ, ಅರಸಿಕೆರೆ ಶಾಸಕ ಶಿವಲಿಂಗೇಗೌಡ.ಕೆ.ಎA ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಅವರು ಉತ್ತರಿಸಿದರು.
ಹಬ್ಬನಘಟ್ಟ ಕಾವಲ್ ಉಪ ಮಾರುಕಟ್ಟೆ ಪ್ರಾಂಗಣದಲ್ಲಿ ರೂ.5 ಕೋಟಿ ವೆಚ್ಚದಲ್ಲಿ ಕೋಲ್ಡ್ ಸ್ಟೋರೇಜ್ ಸ್ಥಾಪಿಸಲು ಹೆಚ್ಚುವರಿ ಅನುದಾನ ಕೋರಿ ಹಣಕಾಸು ಇಲಾಖೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಇದರ ಮಧ್ಯಯೇ ಖಾಸಗಿಯವರು ಮುಂದೆ ಬಂದರೆ ಸ್ಥಳ ನೀಡುವುದಾಗಿ ಸಚಿವ ಶಿವಾನಂದ ಎಸ್ ಪಾಟೀಲ್ ತಿಳಿಸಿದರು.
2024-25ನೇ ಸಾಲಿನಲ್ಲಿ ಆರ್ಥಿಕ ಇಲಾಖೆ ಎ.ಪಿ.ಎಂ.ಸಿಗಳಲ್ಲಿ ಕೋಲ್ಡ್ ಸ್ಟೋರೇಜ್ ಮತ್ತು ಇನ್ನಿತರ ಮೂಲಭೂತ ಸೌಕರ್ಯ ಒದಗಿಸಲು ರೂ.144.75 ಕೋಟಿ ಅನುದಾನ ಒದಗಿಸಿತ್ತು. ಆದರೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಸದಸ್ಯರು, ಸಚಿವರು, ಶಾಸಕರುಗಳಿಂದ ರೈತರ ಬೆಳೆದ ಬೆಳಗೆ ಯೋಗ್ಯ ದರ ಮತ್ತು ಮಾರುಕಟ್ಟೆ ಒದಗಿಸಲು, ಮಾರುಕಟ್ಟೆಗೆ ಬರುವ ಹೆಚ್ಚಿನ ಆವಕಗಳನ್ನು ಶೇಖರಿಸಲು ಹೆಚ್ಚಿನ ಕೋಲ್ಡ್ ಸ್ಟೋರೇಜ್ ನಿರ್ಮಾಣಕ್ಕೆ ಬೇಡಿಕೆ ಸಲ್ಲಿಸಿದ್ದರು. ಆದ್ದರಿಂದ ರೂ.354.75 ಕೋಟಿಗಳ ಹೆಚ್ಚುವರಿ ಅನುದಾನ ಮಂಜೂರು ಮಾಡುವಂತೆ ಆರ್ಥಿಕ ಇಲಾಖೆ ಕೋರಲಾಗಿದೆ ಎಂದು ಸಚಿವ ಶಿವಾನಂದ ಎಸ್ ಪಾಟೀಲ್ ಮಾಹಿತಿ ನೀಡಿದರು.
ಶಾಸಕ ಶಿವಲಿಂಗೇಗೌಡ.ಕೆ.ಎA ಮಾತನಾಡಿ ಪದವಿ ಪಡೆದ ಹಲವು ಜನರು ಇಂದು ಪಶುಸಂಗೋಪನೆ ಹಾಗೂ ತೋಟಗಾರಿಕೆ ಕಡೆಗೆ ಮುಖ ಮಾಡುತ್ತಿದ್ದಾರೆ. ಇವರು ಉತ್ಪಾದಿಸಿದ ತೋಟಗಾರಿಕೆ ಬೆಳೆಗಳಿಗೆ ಸೂಕ್ತ ಬೆಳೆ ಲಭಿಸಿದೇ ನಿರಾಶೆ ಹೊಂದುತ್ತಿದ್ದಾರೆ. ಮಾರುಕಟ್ಟೆಗಳಲ್ಲಿ ಒಮ್ಮೆಗೆ ಹೆಚ್ಚಿನ ದಾಸ್ತಾನು ಬಂದರೆ ಸಂಗ್ರಹಿಸಿ ಇಡಲು ಯಾವುದೇ ವ್ಯವಸ್ಥೆಗಳು ಇಲ್ಲ. ಆದ್ದರಿಂದ ಕೋಲ್ಡ್ ಸ್ಟೋರೇಜ್ ನಿರ್ಮಾಣ ಮಾಡುವುದು ಅಗತ್ಯವಾಗಿದೆ ಎಂದು ಸಚಿವ ಶಿವಾನಂದ ಎಸ್ ಪಾಟೀಲ್ ಮನವಿ ಮಾಡಿದರು.

ಗಾಜನೂರು ನೀರು ಶುದ್ಧೀಕರಣ ಘಟಕ ನಿರ್ಮಾಣಅರಣ್ಯ ಇಲಾಖೆ ಎನ್.ಓ.ಸಿ ಪಡೆಯಲು ಪ್ರಯತ್ನ-ಸಚಿವ ಬಿ.ಎಸ್.ಸುರೇಶ್


ಬೆಳಗಾವಿ ಸುವರ್ಣಸೌಧ,ಡಿ.13(ಕರ್ನಾಟಕ ವಾರ್ತೆ):
ಶಿವಮೊಗ್ಗ ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡಲು ಗಾಜನೂರು ಬಳಿ ಹೊಸದಾಗಿ ನೀರು ಶುದ್ಧೀಕರಣ ಘಟಕ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಈ ಸ್ಥಳ ಅರಣ್ಯ ಪ್ರದೇಶದಲ್ಲಿ ಇರುವುದರಿಂದ ಶೀಘ್ರವೇ ಅರಣ್ಯ ಇಲಾಖೆಯಿಂದ ಎನ್.ಓ.ಸಿ ಪಡೆದು ಕಾಮಗಾರಿ ಪ್ರಾರಂಭಿಸಲು ಪ್ರಯತ್ನಿಸಲಾಗುತ್ತಿದೆ. ಒಂದು ವೇಳೆ ಎನ್.ಓ.ಸಿ ಲಭಿಸದಿದ್ದರೆ, ಸೂಕ್ತವಾದ ಬದಲಿ ಜಾಗವನ್ನು ಸಹ ಗುರುತಿಸಲು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ್ ಹೇಳಿದರು.
ಬೆಳಗಾವಿ ಸುವರ್ಣಸೌಧಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದಲ್ಲಿ ಶುಕ್ರವಾರ ಪ್ರಶ್ನೋತ್ತರ ಕಲಾಪದಲ್ಲಿ ಶಾಸಕ ಚನ್ನಬಸಪ್ಪ ಅವರ ಚುಕ್ಕೆ ಗುರುತಿನ ಪ್ರಶ್ನಗೆ ಅವರು ಉತ್ತರಿಸಿದರು.
ಶಿವಮೊಗ್ಗ ನಗರಕ್ಕೆ ನೀರು ಸರಬರಾಜು ಮಾಡುತ್ತಿರುವ ಕೃಷ್ಣ ರಾಜೇಂದ್ರ ನೀರು ಸರಬರಾಜು ಕೇಂದ್ರದಲ್ಲಿ 1976ರಲ್ಲಿ 13.62 ಎಂ.ಎಲ್.ಡಿ, 1996ರಲ್ಲಿ 13.38 ಎಂ.ಎಲ್.ಡಿ ಹಾಗೂ 2009 ರಲ್ಲಿ 57 ಎಂ.ಎಲ್.ಡಿ ಸೇರಿ ಒಟ್ಟು 84 ಎಂ.ಎಲ್.ಡಿ ಸಾಮರ್ಥ್ಯದ ನೀರು ಶುದ್ಧೀಕರಣ ಘಟಕಗಳನ್ನು ಸ್ಥಾಪಿಸಲಾಗಿದೆ. ಇದರಲ್ಲಿ 1976 ಮತ್ತು 1996ರಲ್ಲಿ ನಿರ್ಮಿಸಿರುವ ಶುದ್ಧೀಕರಣ ಘಟಕಗಳು ಶಿಥಿಲಾವಸ್ಥೆಯಲ್ಲಿವೆ. ಇವುಗಳ ಬದಲು ಹೊಸದಾಗಿ ಶುದ್ಧೀಕರಣ ಘಟಕ ನಿರ್ಮಿಸಲು ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಸ್ಥಳಾವಕಾಶ ಇಲ್ಲದ ಕಾರಣ, ಗಾಜನೂರು ಅರಣ್ಯ ಪ್ರದೇಶದಲ್ಲಿ ಸ್ಥಳ ಗುರುತಿಸಲಾಗಿದೆ. ಈ ಸ್ಥಳದಿಂದ ಗುರುತ್ವಾಕರ್ಷಣೆ ಮೂಲಕ ಶಿವಮೊಗ್ಗ ನೀರು ಸರಬರಾಜು ಮಾಡಬಹುದು. ಈ ಸಂಬAಧ ಸರ್ವೆ ಕಾರ್ಯ ಹಾಗೂ ವಿಸ್ತೃತ ಯೋಜನಾ ವರದಿಯನ್ನು ಸಿದ್ದಪಡಿಸಲಾಗಿದೆ ಎಂದು ಸಚಿವ ಬಿ.ಎಸ್.ಸುರೇಶ ತಿಳಿಸಿದರು.
ಶಿವಮೊಗ್ಗ ನಗರದಲ್ಲಿ ಶೇ.74 ರಷ್ಟು ಒಳಚರಂಡಿ ವ್ಯವಸ್ಥೆ ಇದೆ. ರೂ.115 ಕೋಟಿ ವೆಚ್ಚದಲ್ಲಿ 3ನೇ ಹಂತದ ಸಮಗ್ರ ಒಳಚರಂಡಿ ಯೋಜನೆಯಡಿ, ಏರೇಟೆಡ್ ಲಗೂನ್ ತಂತ್ರಜ್ಞಾನ ಆಧರಿಸಿ 35.58 ಎಂ.ಎಲ್.ಡಿ ತ್ಯಾಜ್ಯ ನೀರು ಶುದ್ದೀಕರಣ ಘಟಕ, 03 ವೆಟ್‌ವೆಲ್, 262 ಕಿ.ಮೀ ಉದ್ದದ ಗ್ರಾಮಸಾರ ಕೊಳವೆ ಮಾರ್ಗವನ್ನು ನಿರ್ಮಿಸಲಾಗಿದೆ. ಅಮೃತ್ ಯೋಜನೆಯಡಿ ರೂ.58 ಕೋಟಿ ಹಾಗೂ ರೂ.7 ಕೋಟಿ ಹೆಚ್ಚುವರಿ ಅನುದಾನದಡಿ ಮಹಾನಗರ ವ್ಯಾಪ್ತಿಯ ವಿವಿಧ ಪ್ರದೇಶದಲ್ಲಿ ಗೃಹ ಸಂಪರ್ಕಿತ ಒಳಚರಂಡಿ ಕೊಳವೆ ಮಾರ್ಗ, ಹಳೆ ಕೊಳವೆ ಮಾರ್ಗಗಳ ಪುನರುಜ್ಜೀವನ, 4 ವೆಟ್‌ವಲ್, 6 ಪಂಪಿAಗ್ ಮೆಷನರಿ, ಡಿ.ಜಿ. ರೂಮ್, ಡಿ.ಜೆ.ಸೆಟ್ ಮತ್ತು ಟ್ರಾನ್ಸ್ ಫಾರ್ಮರ್ ಸಬ್ ಸ್ಟೇಷನ್, 11 ಕೆ.ವಿ. ಎಕ್ಸ್ ಪ್ರೆಸ್ ಫೀಡರ್ ವಿದ್ಯುತ್ ಲೈನ್, 5.13 ಎಂ.ಎಲ್.ಡಿ ಸಾಮರ್ಥ್ಯದ ತ್ಯಾಜ್ಯ ನೀರಿನ ಶುದ್ದೀಕರಣ ಘಟಕ ನಿರ್ಮಿಸಲಾಗಿದೆ. ಈ ಎಲ್ಲಾ ಕಾಮಗಾರಿಗಳು ಸುಸ್ಥಿತಿಯಲ್ಲಿದ್ದು, ಶಿವಮೊಗ್ಗ ಮಹಾನಗರ ಪಾಲಿಕೆಗೆ ಹಸ್ತಾಂತರಿಸಲಾಗಿದೆ. ನಗರದಲ್ಲಿ ಹಾದುಹೋಗಿರುವ ತುಂಗಾ ನದಿಗೆ ಕೊಳಚೆ ನೀರು ಸೇರೆದಂತೆ ತಡೆಯಲು ಒಳಚರಂಡಿ ವ್ಯವಸ್ಥೆಯಲ್ಲಿನ ಮಿಸಿಂಗ್ ಲಿಂಕ್ಸ್ ಸ್ಥಳಗಳಲ್ಲಿಯೂ ರಾಷ್ಟಿçÃಯ ಹಸಿರು ನ್ಯಾಯಮಂಡಳಿಯ ರೂ.40 ಕೋಟಿ ಅನುದಾನದಲ್ಲಿ ಒಳಚರಂಡಿ ವ್ಯವಸ್ಥೆಯನ್ನು ನಿರ್ಮಿಸಿ, ತ್ಯಾಜ್ಯ ನೀರು ಸಂಸ್ಕರಣ ಘಟಕ ನಿರ್ಮಿಸುವುದಾಗಿ ಸಚಿವ ಬಿ.ಎಸ್.ಸುರೇಶ್ ಹೇಳಿದರು.
ಮಹಾನಗರಗಳಿಗೆ ರೂ.2000 ಕೋಟಿ ಅನುದಾನ:
ಸರ್ಕಾರ ರಾಜ್ಯ ಹಣಕಾಸು ನಿಗಮದಿಂದ ಬೃಹತ್ ಬೆಂಗಳೂರು ಸೇರಿ ಇತರೆ 10 ಮಹಾನಗರ ಪಾಲಿಕೆಗಳಿಗೆ ಒಟ್ಟು ರೂ.2000 ಕೋಟಿ ಅನುದಾನ ನೀಡಿದೆ. ಇದರಲ್ಲಿ ಶಿವಮೊಗ್ಗ ನಗರಕ್ಕೆ ರೂ.140 ಕೋಟಿ ಅನುದಾನವನ್ನು ಒದಗಿಸಲಾಗಿದೆ ಎಂದು ಸಚಿವ ಬಿ.ಎಸ್.ಸುರೇಶ್ ಸದನದಲ್ಲಿ ಮಾಹಿತಿ ನೀಡಿದರು.
ಶಾಸಕ ಚನ್ನಬಸಪ್ಪ ನವರು ರಾಜ್ಯ ಹಣಕಾಸು ನಿಗಮದಿಂದ ನೀಡಿದ ಅನುದಾನದಲ್ಲಿ ಶೇ.20 ರಷ್ಟು ಮಾತ್ರ ಕುಡಿಯುವ ನೀರಿನ ಕಾಮಗಾರಿಗಳಿಗೆ ಬಳಸಿಕೊಳ್ಳಲು ಅವಕಾಶವಿದೆ. ಈ ಮಿತಿಯನ್ನು ಸಡಿಲಗೊಳಿಸಿ ಹೆಚ್ಚಿನ ಅನುದಾನವನ್ನು ಕುಡಿಯುವ ನೀರಿನ ಕಾಮಗಾರಿಗಳಿಗೆ ಬಳಸಿಕೊಳ್ಳಲು ಸರ್ಕಾರ ಅನುಮತಿ ನೀಡುವಂತೆ ಕೋರಿದರು.

ಅತಿವೃಷ್ಟಿಯಿಂದಾದ ಹಾನಿಗೆ 297 ಕೋಟಿ ರೂ. ಪರಿಹಾರ:ಕೃಷ್ಣ ಭೈರೇಗೌಡ


ಬೆಳಗಾವಿ ಸುವರ್ಣ ವಿಧಾನಸೌಧ.ಡಿ.13:
ಈ ವರ್ಷ ರಾಜ್ಯದಲ್ಲಿ ಅತಿವೃಷ್ಟಿಯಿಂದಾಗಿ ಉಂಟಾದ ಬೆಳೆ, ಜೀವಹಾನಿ, ಮನೆ ಹಾನಿ ಸೇರಿದಂತೆ ವಿವಿಧ ಹಾನಿಗೆ ಸಂಬAಧಿಸಿದAತೆ ಒಟ್ಟು 297 ಕೋಟಿ ರೂ. ಪರಿಹಾರ ಪಾವತಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದರು.
ಬೆಳಗಾವಿ ಸುವರ್ಣ ಸೌಧದಲ್ಲಿ ಜರುಗುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಶುಕ್ರವಾರ ವಿಧಾನಸಭೆಯಲ್ಲಿ ಶೂನ್ಯವೇಳೆ ಚರ್ಚೆಯ ಸಂದರ್ಭದಲ್ಲಿ ರಾಜ್ಯದಲ್ಲಿ ಉಂಟಾದ ಮಳೆಹಾನಿ ಹಾಗೂ ಸರ್ಕಾರ ತೆಗೆದುಕೊಂಡ ಕ್ರಮಗಳ ಬಗ್ಗೆ ಸದನಕ್ಕೆ ಸರ್ಕಾರದ ಪರವಾಗಿ ಹೇಳಿಕೆ ನೀಡಿದರು.
ರಾಜ್ಯದಲ್ಲಿ ಈ ವರ್ಷ ಅತಿವೃಷ್ಟಿಯಿಂದ ಕೃಷಿ ಮತ್ತು ತೋಟಗಾರಿಕೆ ಬೆಳೆ, ಮನುಷ್ಯ ಹಾಗೂ ಜಾನುವಾರುಗಳ ಜೀವ ಹಾನಿ, ರಸ್ತೆ-ಸೇತುವೆ, ಇತರೆ ಮೂಲಭೂತ ಸೌಕರ್ಯಗಳಿಗೆ ಹಾನಿ ಉಂಟಾಗಿದೆ. ಕಳೆದ 20 ವರ್ಷಗಳಲ್ಲಿ ಸುಮಾರು 10 ರಿಂದ 15 ವರ್ಷ ಒಂದಲ್ಲ ಒಂದು ರೀತಿಯ ಪ್ರಕೃತಿ ವಿಕೋಪವನ್ನು ರಾಜ್ಯ ಎದುರಿಸಿದೆ. 2000 ರಿಂದ ಈವರೆಗೆ ಸುಮಾರು 17 ವರ್ಷ ಬರ ಪರಿಸ್ಥಿತಿಯನ್ನು ಎದುರಿಸಿದ್ದರೆ, 2019, 2022 ಹಾಗೂ 2024 ರಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ರಾಜ್ಯದಲ್ಲಿ ಆಗಿದೆ.
ರಾಜ್ಯದಲ್ಲಿ ಕೇವಲ ಮಳೆಯಿಂದ ಮಾತ್ರವಲ್ಲ, ಆಲಿಕಲ್ಲು ಮಳೆ, ಸಿಡಿಲು, ಮನೆ ಕುಸಿತ ಸಂದರ್ಭದಲ್ಲಿಯೂ ಹಾನಿ ಉಂಟಾಗಿದೆ, ಇದರ ಜೊತೆಗೆ 2018, 2019 ಮತ್ತು 2024 ರಲ್ಲಿ ಭೂ ಕುಸಿತ ಕೂಡ ಸಂಭವಿಸಿ ಹಾನಿಯಾಗಿದೆ. ಹೀಗಾಗಿ ಸರ್ಕಾರ ಇದನ್ನು ತಡೆಗಟ್ಟಲು ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುತ್ತಿದ್ದೇವೆ. ತೀವ್ರ ಬರ ಪರಿಸ್ಥಿತಿ ಬಂದರೂ, ಎನ್‌ಡಿಆರ್‌ಎಫ್ ನಿಂದ ನಿಗದಿತ ಪ್ರಮಾಣದಲ್ಲಿ ಕೇಂದ್ರದಿAದ ಪರಿಹಾರ ಹಣ ಬಾರದೇ ಇದ್ದಾಗ ನ್ಯಾಯಾಲಯದ ಮೊರೆ ಹೋಗಿ ಪರಿಹಾರ ಹಣ ಕೂಡ ಪಡೆದು, ಸುಮಾರು 45 ಲಕ್ಷ ರೈತರಿಗೆ 4200 ಕೋಟಿ ರೂ. ಪರಿಹಾರ ಕೊಟಿದ್ದೇವೆ ಎಂದರು.
ರೈತರಿಗೆ ಬೆಳೆ ನಷ್ಟ ಪರಿಹಾರ ಪಾವತಿ :

ಈ ವರ್ಷ 852 ಮಿ.ಮೀ. ಮುಂಗಾರು ವಾಡಿಕೆ ಮಳೆ ಬದಲಿಗೆ 978 ಮಿ.ಮೀ. ಅಂದರೆ ಶೇ. 20 ರಷ್ಟು ಹೆಚ್ಚು ಮಳೆಯಾಗಿದೆ. ಹೀಗಾರಿನಲ್ಲಿ ಕೂಡ 173 ಮಿ.ಮೀ. ವಾಡಿಕೆ ಮಳೆ ಬದಲಿಗೆ 213 ಮಿ.ಮೀ. ಅಂದರೆ ಶೇ. 23 ರಷ್ಟು ಹೆಚ್ಚು ಮಳೆಯಾಗಿದೆ. ಕೆಲವು ಜಿಲ್ಲೆಗಳಲ್ಲಿ ವಾಡಿಕೆಗಿಂತಲೂ ಕಡಿಮೆ ಮಳೆ ಆಗಿದೆ. ಪ್ರಸಕ್ತ ಮುಂಗಾರು ಅವಧಿಯಲ್ಲಿ 1,59,718 ಹೆಕ್ಟೇರ್ ಪ್ರದೇಶದಲ್ಲಿ ಬೆಳೆಹಾನಿಯಾಗಿದ್ದು, ಒಟ್ಟು ರೂ.94.94 ಕೋಟಿ ಪರಿಹಾರ ವಿತರಿಸಲಾಗಿದೆ. ಹಿಂಗಾರು ಹಂಗಾಮಿನಲ್ಲಿ 1,45,254 ಹೆಕ್ಟೇರ್ ಪ್ರದೇಶದಲ್ಲಿ ಬೆಳೆಹಾನಿಯಾಗಿದ್ದು, ರೂ.01.12 ಕೋಟಿ ಹಣವನ್ನು ರೈತರಿಗೆ ಪರಿಹಾರವಾಗಿ ಮಂಜೂರು ಮಾಡಲಾಗಿದೆ. ಕೆಲವು ಭಾಗದಲ್ಲಿ ರೈತರಿಗೆ ಪರಿಹಾರ ಹಣ ಖಾತೆಗೆ ಜಮಾ ಆಗಿದೆ. ಮುಂದಿನ ಒಂದೆರಡು ವಾರದಲ್ಲಿ ಎಲ್ಲಾ ರೈತರ ಖಾತೆಗಳಿಗೂ ಪರಿಹಾರ ಹಣ ಸಂದಾಯವಾಗಲಿದೆ” ಎಂದರು.
133 ಮೃತ ಕುಟುಂಬಕ್ಕೆ 6.64 ಕೋಟಿ ರೂ. ಪರಿಹಾರ :
ನಮ್ಮ ರಾಜ್ಯದಲ್ಲಿ 10 ಹವಾಮಾನ ವಲಯಗಳಿವೆ (ಆಗ್ರೋ ಕ್ಲೈಮ್ಯಾಟಿಕ್ ಝೋನ್). ಇಲ್ಲಿ 450 ಮಿ.ಮೀ ರಿಂದ 4,000 ಮಿ.ಮೀ ವರೆಗೆ ವಾಡಿಕೆ ಮಳೆಯಾಗುವ ವೈವಿಧ್ಯತೆಯ ಪ್ರದೇಶಗಳು ಕರ್ನಾಟಕದಲ್ಲಿದೆ. ದೇಶದ ಯಾವ ರಾಜ್ಯದಲ್ಲೂ ಈ ವೈವಿಧ್ಯತೆ ಇಲ್ಲ. ಇದರಿಂದ ರಾಜ್ಯದಲ್ಲಿ ಕೆಲ ಪ್ರಾಣಹಾನಿಯೂ ಸಂಭವಿಸಿದೆ. ಕೆಲವರು ಹೊಳೆ ಉಕ್ಕಿಹರಿಯುವ ಸಂದರ್ಭದಲ್ಲಿ ನೀರಿನಲ್ಲಿ ಇಳಿದು ಕೊಚ್ಚಿಹೋಗಿದ್ದಾರೆ. ಕೆರೆ ತುಂಬಿದೆ ಎಂದು ಗೊತ್ತಿದ್ದರೂ ಈಜಲು ಹೋಗಿ ಕೆಲವರು ಪ್ರಾಣ ಕಳೆದುಕೊಂಡಿದ್ದಾರೆ. ಸಿಡಿಲು ಬಡಿತದಿಂದ ಮೃತಪಟ್ಟವರೂ ಸೇರಿ ಈ ವರ್ಷ ಒಟ್ಟಾರೆ 133 ಜನ ಪ್ರಾಣ ಕಳೆದುಕೊಂಡಿದ್ದಾರೆ. ಸರ್ಕಾರದ ಕಡೆಯಿಂದ ಇಂತಹ ಘಟನೆಗಳಿಗೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ. ಅಲ್ಲದೆ, ಈ ಎಲ್ಲಾ 133 ಮೃತರ ಕುಟುಂಬಗಳಿಗೆ ಈಗಾಗಲೇ ತಲಾ 5 ಲಕ್ಷ ದಂತೆ 6.64 ಕೋಟಿ ರೂ. ಪಾವತಿಸಲಾಗಿದೆ ಎಂದರು.
ಎಲ್ಲೆಲ್ಲಿ ಮಳೆಹಾನಿ..?:

ಈ ವರ್ಷ ಮಹಾರಾಷ್ಟ್ರದಲ್ಲಿ ಹೆಚ್ಚು ಮಳೆಯಾದ ಕಾರಣ ಕೃಷ್ಣಾ ನದಿ ಉಕ್ಕಿ ಹರಿದು ನದಿಪಾತ್ರದ ಜನರಿಗೆ ಹಾನಿಯಾಗಿತ್ತು. ತುಂಗಭದ್, ಭೀಮಾ, ಕಬಿನಿ ಕಾವೇರಿಯಲ್ಲೂ ಹೆಚ್ಚು ನೀರು ಬಂದು ಹಾನಿಯಾಗಿತ್ತು. ಧಾರವಾಡದ ಬೆಣ್ಣೆಹಳ್ಳ ಬಾಗಲಕೋಟೆ ಬಳ್ಳಾರಿ, ದಾವಣಗೆರೆ, ಶಿವಮೊಗ್ಗ ಭಾಗದಲ್ಲೂ ಮಳೆಯಿಂದಾಗಿ ನದಿಗಳು ಉಕ್ಕಿಹರಿದು ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಹಾನಿಯಾಗಿದೆ. ರಸ್ತೆ, ಸೇತುವೆ, ಶಾಲಾ ಕೊಠಡಿ, ಅಂಗನವಾಡಿ, ಆರೋಗ್ಯ ಕೇಂದ್ರ ಸೇರಿದಂತೆ ಮಲೆನಾಡು ಪ್ರದೇಶಗಳಲ್ಲಿ ಕೆಲ ವಿದ್ಯುತ್ ಸಂಪರ್ಕ ಕಟ್ಟಡಗಳಿಗೆ ಹಾನಿ ಉಂಟಾಗಿದೆ. ರಿಪೇರಿ ಕೆಲಸಗಳಿಗೆ ರೂ.80.47 ಕೋಟಿ ಅನುಧಾನ ನೀಡಲಾಗಿದೆ. ಈ ಪೈಕಿ ರೂ. 60.16 ಕೋಟಿ ಹಣ ಈಗಾಗಲೇ ಬಿಡುಗಡೆ ಮಾಡಿದ್ದು, ಪ್ರಸ್ತುತ ಜಿಲ್ಲಾಧಿಕಾರಿಗಳು ಹಾಗೂ ತಹಶೀಲ್ದಾರರ ಖಾತೆಯಲ್ಲಿ ಮುಂದಿನ ತುರ್ತು ಪರಿಹಾರಕ್ಕಾಗಿ ಸುಮಾರು ರೂ 579 ಕೋಟಿ ಅನುದಾನ ಲಭ್ಯವಿದೆ ಎಂದರು.
ಭೂ ಕುಸಿತ ತಡೆಗೆ ಶಾಶ್ವತ ಪರಿಹಾರ ಯೋಜನೆ:
ಈ ವರ್ಷ ಭೂ ಕುಸಿತ ಪ್ರಕರಣ ನಿರೀಕ್ಷೆಗಿಂತ ಹೆಚ್ಚಾಗಿದೆ. ಕಾರವಾರದ ಘಟನೆ ಆಘಾತಕಾರಿಯಾಗಿದೆ. ಮಲೆನಾಡು ಭಾಗದಲ್ಲೂ ಸಣ್ಣಪುಟ್ಟ ಭೂ ಕುಸಿತದ ಘಟನೆ ಸಂಭವಿಸಿದೆ. ಈ ನಿಟ್ಟಿನಲ್ಲಿ ಭೂ ಕುಸಿತವನ್ನು ತಡೆಗಟ್ಟಲು ಶಾಶ್ವತ ಯೋಜನೆ ರೂಪಿಸಲಾಗಿದೆ ಎಂದು ಸದನಕ್ಕೆ ಸಚಿವ ಕೃಷ್ಣ ಬೈರೇಗೌಡ ಅವರು ಮಾಹಿತಿ ನೀಡಿದರು. "ಭೂ ಕುಸಿತ ತಡೆಗೆ ಶಾಶ್ವತ ಪರಿಹಾರ ನೀಡುವ ನಿಟ್ಟಿನಲ್ಲಿ ಸಿಎಂ ಜೊತೆ ಚರ್ಚಿಸಿ ಅವರ ಸೂಚನೆ ಹಿನ್ನೆಲೆ ಎರಡೂವರೆ ವರ್ಷದ ಅವಧಿಗೆ ರೂ.400 ಕೋಟಿ ರೂಪಾಯಿ ವೆಚ್ಚದಲ್ಲಿ ಭೂ ಕುಸಿತ ತಡೆಗಟ್ಟುವ ಕಾಮಗಾರಿ ಕೈಗೆತ್ತಿಕೊಳ್ಳಬೇಕು ಎಂದು ತೀರ್ಮಾನಿಸಿದ್ದೇವೆ. ಭೂ ಕುಸಿತಕ್ಕೆ ಒಳಗಾಗಬಹುದಾದ ಪ್ರದೇಶಗಳ ಬಗ್ಗೆ ನ್ಯಾಷನಲ್ ಜಿಯೋಲಾಜಿಕಲ್ ಸರ್ವೇ ಎಂಬ ಕೇಂದ್ರ ಸರ್ಕಾರದ ಸಂಸ್ಥೆಯಿAದ ವರದಿ ತರಿಸಲಾಗಿದೆ. ಆ ವರದಿಯಲ್ಲಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಸೇರಿದಂತೆ 06 ಜಿಲ್ಲೆಗಳ 863 ಗ್ರಾಮ ಪಂಚಾಯಿತಿಗಳನ್ನು ಭೂ ಕುಸಿತ ಉಂಟಾಗಬಹುದಾದ ಪ್ರದೇಶಗಳು ಎಂದು ಗುರುತಿಸಲಾಗಿದೆ. ಈ ಜಿಲ್ಲೆಗಳಲ್ಲಿ ಭೂ ಕುಸಿತ ತಡೆಯುವ ಸಂಬAಧಿ ಯೋಜನೆಗಳ ಕುರಿತು ಈಗಾಗಲೇ ಎಲ್ಲಾ ಜಿಲ್ಲಾಧಿಕಾರಿಗಳಿಂದ ವರದಿ ತರಿಸಿಕೊಳ್ಳಲಾಗಿದೆ. ರೂ. 425 ಕೋಟಿ ವೆಚ್ಚದ ಯೋಜನೆಗಳಿಗೆ ಜಿಲ್ಲಾಧಿಕಾರಿಗಳು ಪ್ರಸ್ತಾವನೆ ಸಲ್ಲಿಸಿದ್ದಾರೆ. ಭೂ ಕುಸಿತ ತಡೆಗಟ್ಟುವ ಕಾಮಗಾರಿಗೆ ಹಣ ನೀಡಲು ಸರ್ಕಾರ ಒಪ್ಪಿಗೆ ಸೂಚಿಸಿದೆ. ಅದರ ಭಾಗವಾಗಿ ತಕ್ಷಣ ರೂ.152 ಕೋಟಿ ಹಣವನ್ನು ವಿವಿಧ ಕಾಮಗಾರಿಗಳಿಗೆ ಮಂಜೂರು ಮಾಡಲಾಗಿದೆ. ಇದಲ್ಲದೆ, ಮಳೆ ಹೆಚ್ಚಾದಾಗ ನಗರ ಪ್ರದೇಶಗಳಲ್ಲಿ ನೀರನ್ನು ಹೊರಹಾಕುವ ಮೂಲಭೂತ ವ್ಯವಸ್ಥೆ ಇಲ್ಲ. ಇದೂ ಸಹ ಪ್ರವಾಹಕ್ಕೆ ಕಾರಣವಾಗಿದ್ದು, ಇದಕ್ಕೆ ಸಂಬAಧಿಸಿದAತೆ ರೂ. 184 ಕೋಟಿ ಮೌಲ್ಯದ 259 ಕಾಮಗಾರಿಗಳಿಗೆ ತಕ್ಷಣ ಅನುಮೋದನೆ ನೀಡಲಿದ್ದೇವೆ ಎಂದು ಸಚಿವ ಕೃಷ್ಣ ಭೈರೇಗೌಡ ತಿಳಿಸಿದರು.


ಅರಸೀಕೆರೆಯಲ್ಲಿ ಶೀತಲ ಗೃಹ: ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ
ಆರ್ಥಿಕ ಇಲಾಖೆ ಅನುಮೋದನೆ ದೊರೆತ ನಂತರ ಅರಸೀಕೆರೆ ತರಕಾರಿ ಮಾರುಕಟ್ಟೆಯಲ್ಲಿ ಶೀತಲಗೃಹ ನಿರ್ಮಾಣ ಮಾಡಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.
ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ಕೆ.ಎಂ. ಶಿವಲಿಂಗೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ತೋಟಗಾರಿಕೆ ಬೆಳೆ, ಪುಷ್ಪೋದ್ಯಮ, ಮೆಣಸಿನಕಾಯಿ ಆವಕ ಹೆಚ್ಚು ಇರುವ ಮಾರುಕಟ್ಟೆಗಳಲ್ಲಿ ಶೀತಲಗೃಹ ನಿರ್ಮಾಣ ಮಾಡಬೇಕು ಎಂಬುದು ಸರ್ಕಾರದ ಆಶಯವಾಗಿದೆ.
೨೦೨೪-೨೫ನೇ ಸಾಲಿನ ಆರ್‌ ಐಡಿಎಫ್‌ -೩೦ ಯೋಜನೆ ಅಡಿಯಲ್ಲಿ ೨೫೪.೫೦ ಕೋಟಿ ರೂ. ಅನುದಾನ ಮಂಜೂರು ಮಾಡಲು ಆರ್ಥಿಕ ಇಲಾಖೆಗೆ ಕೋರಿಕೆ ಸಲ್ಲಿಸಲಾಗಿದ್ದು, ೧೪೪.೭೫ ಕೋಟಿ ರೂ. ವೆಚ್ಚದಲ್ಲಿ ಶೀತಲ ಗೃಹ ಮತ್ತಿತರ ಸೌಕರ್ಯ ನಿರ್ಮಾಣಕ್ಕೆ ಅನುಮೋದನೆ ನೀಡಿತ್ತು.
ಆದರೆ ಬಹುತೇಕ ಸಚಿವರು ಮತ್ತು ಶಾಸಕರಿಂದ ಶೀತಲಗೃಹ ನಿರ್ಮಾಣದ ಕೋರಿಕೆಗಳು ಬಂದಿರುವ ಹಿನ್ನೆಲೆಯಲ್ಲಿ ೩೫೪.೭೫ ಕೋಟಿ ರೂ. ಹೆಚ್ಚುವರಿ ಅನುದಾನ ಕೋರಿ ಆರ್ಥಿಕ ಇಲಾಖೆಗೆ ಪುನಃ ಕೋರಿಕೆ ಸಲ್ಲಿಸಲಾಗಿದೆ. ಅನುಮೋದನೆ ದೊರೆತ ನಂತರ ಕಾಮಗಾರಿ ಆರಂಭಿಸಲಾಗುವುದು ಎಂದು ತಿಳಿಸಿದರು.

ನಷ್ಟದ ಸಹಕಾರಿ ಸಕ್ಕರೆ ಕಾರ್ಖಾನೆ ಖಾಸಗಿ ಗುತ್ತಿಗೆಗೆ: ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ
ಆರ್ಥಿಕ ಸಂಕಷ್ಟ ಹಾಗೂ ಇತರ ಆಡಳಿತಾತ್ಮಕ ಕಾರಣಗಳಿಂದ ಸ್ಥಗಿತಗೊಂಡಿರುವ ಸಹಕಾರಿ ಸಕ್ಕರೆ ಕಾರ್ಖಾನೆಗಳನ್ನು ಖಾಸಗಿಯವರಿಗೆ ಗುತ್ತಿಗೆ ಆಧಾರದ ಮೇಲೆ ನೀಡುವ ಮೂಲಕ ಪುನಶ್ಚೇತನಗೊಳಿಸುವುದು ಸರ್ಕಾರ ಉದ್ದೇಶವಾಗಿದೆ ಎಂದು ಕಬ್ಬು ಅಭಿವೃದ್ಧಿ, ಸಕ್ಕರೆ ಸಚಿವ ಶಿವಾನಂದ ಪಾಟೀಲ ಹೇಳಿದರು.
ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಬಾಬಾ ಸಾಹೇಬ್‌ ಪಾಟೀಲ್‌ (ಕಿತ್ತೂರು) ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ಆರ್ಥಿಕ ಸಂಕಷ್ಟದಲ್ಲಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಈ ಕಾರ್ಖಾನೆಗೆ ಸರ್ಕಾರದಿಂದ ಬಂಡವಾಳ ಅಥವಾ ಅನುದಾನ ನೀಡುವ ನೀತಿ ಸರ್ಕಾರದ ಮುಂದೆ ಇಲ್ಲ. ಸಾಲ ಪಡೆದು ಪುನಶ್ಚೇತನಗೊಳಿಸುವ ಪ್ರಯತ್ನ ಮಾಡಿದರೆ ಸರ್ಕಾರ ನೆರವಿಗೆ ಬರಲಿದೆ ಎಂದು ತಿಳಿಸಿದರು.
ಕಾರ್ಖಾನೆಯ ಕಾರ್ಯನಿರ್ವಹಣೆಗೆ ಅಗತ್ಯ ಸಂಪನ್ಮೂಲ ಕ್ರೋಢೀಕರಣ ಮಾಡುವುದು ಆಡಳಿತ ಮಂಡಳಿಯ ಜವಾಬ್ದಾರಿಯಾಗಿದ್ದು, ಸಾಮಾನ್ಯ ಸಭೆ ಮತ್ತು ಆಡಳಿತ ಮಂಡಳಿ ಸಭೆಗಳಲ್ಲಿ ಸೂಕ್ತ ತೀರ್ಮಾನ ಕೈಗೊಂಡು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದರೆ ನಿಯಮಾನುಸಾರ ಪರಿಶೀಲನೆ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದರು.
[13/12, 5:10 pm] +91 94806 54365: ಎಲೆ ಚುಕ್ಕೆ ರೋಗ : 53,977 ಹೆಕ್ಟೇರ್ ಅಡಿಕೆ ಬೆಳೆ ಹಾನಿ
ರೋಗ ನಿಯಂತ್ರಣ ಸಂಶೋಧನೆಗೆ ರೂ.50 ಲಕ್ಷ ಅನುದಾನ
-ಸಚಿವ ಎಸ್.ಎಸ್.ಮಲ್ಲಿಕಾರ್ಜುನ್
ಬೆಳಗಾವಿ ಸುವರ್ಣಸೌಧ,ಡಿ.13(ಕರ್ನಾಟಕ ವಾರ್ತೆ): ಎಲೆ ಚುಕ್ಕೆ ರೋಗದಿಂದ ರಾಜ್ಯದಲ್ಲಿ ಸುಮಾರು 53,977 ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿರುವ ಅಡಿಕೆ ಬೆಳೆಗೆ ಹಾನಿಯಾಗಿದೆ. ರೋಗ ಹರಡದಂತೆ ನಿಯಂತ್ರಣ ಮಾಡಲು ಸರ್ಕಾರ ಶಿವಮೊಗ್ಗ ತೋಟಗಾರಿಕೆ ವಿಶ್ವ ವಿದ್ಯಾಲಯದ ತಜ್ಞರ ನೇತೃತ್ವದ ತಂಡ ರಚನೆ ಮಾಡಿದ್ದು, ಸಂಶೋಧನೆಗೆ ರೂ.50 ಲಕ್ಷ ಅನುದಾನ ಒದಗಿಸಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಮಾಹಿತಿ ನೀಡಿದರು.
ಬೆಳಗಾವಿ ಸುವರ್ಣಸೌಧಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದಲ್ಲಿ ಶುಕ್ರವಾರ ವಿಧಾನ ಸಭೆ ಪ್ರಶ್ನೋತ್ತರ ಕಲಾಪದಲ್ಲಿ ಚುಕ್ಕೆ ಗುರುತಿನ ಪ್ರಶ್ನೆಗಳಿಗೆ ಅವರು ಉತ್ತರಿಸಿದರು.
ಎಲೆಚುಕ್ಕೆ ರೋಗವು 3 ವಿಧದ ಶಿಲೀಂಧ್ರಗಳಿAದ ಹರಡುತ್ತಿದೆ. ನೆಲಕ್ಕೆ ಬಿದ್ದ ಗರಿಗಳಲ್ಲಿ ಶಿಲೀಂದ್ರ ಬೆಳವಣಿಯಾಗುತ್ತದೆ. ಮಳೆ ಹನಿಗಳ ಚಿಮ್ಮುವಿಕೆಯಿಂದ ಶಿಲೀಂಧ್ರದ ಕಣಗಳು ಗಾಳಿಯಲ್ಲಿ ಸೇರಿ ಇತರೆ ಗಿಡಗಳು ಹಾಗೂ ತೋಟಗಳಿಗೆ ಹರಡುತ್ತವೆ. ತೇವ ಭರಿತ ಬಿಸಿಲಿನ ವಾತಾವರಣ, 18 ಡಿಗ್ರಿ ಸೆಲಿಯಸ್ ನಿಂದ 24 ಡಿಗ್ರಿ ಕಡಿಮೆ ಉಷ್ಣಾಂಶ ಹಾಗೂ ಹೆಚ್ಚಿನ ಆದ್ರತೆಯ ವಾತಾವರಣದಲ್ಲಿ ರೋಗ ತೀವ್ರವಾಗಿ ಹರಡುತ್ತಿದೆ ಎಂದು ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ತಿಳಿಸಿದರು.
ಸರ್ಕಾರ ಎಲೆಚುಕ್ಕೆ ರೋಗದಿಂದ ಹಾನಿಯಾದ ಅಡಿಕೆ ಬೆಳೆಯುವ ರೈತರಿಗೆ ಸಸ್ಯ ಸಂರಕ್ಷಣಾ ಔಷಧಿಗಳಾದ ರೋಗ ನಿಯಂತ್ರಣಕ್ಕಾಗಿ ಹೆಕ್ಸೋಕೋನೊಜೋಲ್, ಟೆಬುಕೊನೊಜೋಲ್ ಮತ್ತು ಪ್ರೋಪಿಕೊನೊಜೋಲ್ ನೀಡಲಾಗುತ್ತಿದೆ. ಇದಕ್ಕಾಗಿ 2023-24ನೇ ಸಾಲಿನಲ್ಲಿ 6,250 ಹೆಕ್ಟೇರ್ ಪ್ರದೇಶದ 12,300 ಅಡಿಕೆ ಬೆಳೆಗಾರರಿಗೆ ರೂ.2.50 ಕೋಟಿ ಅನುದಾನವನ್ನು ನೀಡಲಾಗಿದೆ. ಸಂಪ್ರದಾಯಕವಾಗಿ ಅಡಿಕೆ ಬೆಳೆಯುವ ಪ್ರದೇಶದಲ್ಲಿ ಅಡಿಕೆ ಬೆಳೆ ಕಟಾವು ಹಾಗೂ ಸಿಂಪರಣೆಗಾಗಿ ದೋಟಿ ಖರೀದಿಸಲು ಕೃಷಿ ಯಾಂತ್ರೀಕರಣ ಯೋಜನೆಯಡಿ ಸಾಮಾನ್ಯ ವರ್ಗದವರಿಗೆ ಶೇ.40 ರಷ್ಟು ಹಾಗೂ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗೆ ಶೇ.50 ರಷ್ಟು ಸಹಾಯಧನ ನೀಡಲಾಗುತ್ತಿದೆ. ಈ ಯೋಜನೆಯಡಿ 2023-24ನೇ ಸಾಲಿಗೆ 1,201 ಫಲಾನುಭವಿಗಳಿಗೆ ರೂ.3.66 ಕೋಟಿ ಸಹಾಯಧನ ನೀಡಲಾಗಿದೆ. ರೋಗದ ನಿಯಂತ್ರಣ ಕುರಿತು ಕೃಷಿ ಮತ್ತು ತೋಟಗಾರಿಕೆ ವಿಜ್ಞಾನ ವಿಶ್ವ ವಿದ್ಯಾಲಯದ ತಜ್ಞರ ಸಹಯೋಗದಲ್ಲಿ ರೈತರಿಗೆ ತರಬೇತಿ, ಪ್ರಾತ್ಯಕ್ಷತೆಗಳನ್ನು ನೀಡಿ, ಮಾಹಿತಿ ಹಾಗೂ ಪ್ರಚಾರ ಕಾರ್ಯ ಮಾಡಲಾಗುತ್ತಿದೆ. ರೋಗದ ಅಧ್ಯಯನಕ್ಕಾಗಿ ಕೇಂದ್ರ ಸರ್ಕಾರ ನೇಮಿಸಿರುವ ವೈಜ್ಞಾನಿಕ ತಂಡ ಚಿಕ್ಕಮಗಳೂರು, ಶಿವಮೊಗ್ಗ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಭೇಟಿ ನೀಡಿ ಅಧ್ಯಯನ ನಡೆಸಿ, ತಾಂತ್ರಿಕ ಸಲಹೆಗಳನ್ನು ನೀಡಿದೆ. ಕೇಂದ್ರೀಯ ತೋಟದ ಬೆಳೆಗಳ ಸಂಶೋಧನಾ ಸಂಸ್ಥೆ ಅವರ ಮೂಲಕ ಕೇಂದ್ರ ಸರ್ಕಾರಕ್ಕೆ ರೂ.225.73 ಕೋಟಿ ಪರಿಹಾರ ನೀಡಲು ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಹೇಳಿದರು.
ಶಾಸಕರಾದ ಭೀಮಣ್ಣ ಟಿ ನಾಯಕ್, ಆರಗ ಜ್ಞಾನೇಂದ್ರ ಸೇರಿದಂತೆ ಮಲೆನಾಡು ಹಾಗೂ ಕರಾವಳಿ ಭಾಗದ ಇತರೆ ಶಾಸಕರು, ಸರ್ಕಾರ ರೋಗ ತಡೆಗೆ ಉಚಿತವಾಗಿ ಔಷಧೋಪಚಾರಗಳನ್ನು ನೀಡಬೇಕು. ಅಡಕೆ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಸರ್ಕಾರವನ್ನು ಒತ್ತಾಯಿಸಿದರು.
ಹರಿಹರ ನಗರದ ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ ಹೊಸ ಕಟ್ಟ ನಿರ್ಮಾಣಕ್ಕೆ ರೂ.45 ಲಕ್ಷ ಅನುದಾನ ನೀಡಲಾಗಿದೆ ಎಂದು ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಶಾಸಕ ಹರೀಶ್.ಬಿ.ಪಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು.
ಶಾಸಕ ಅವಿನಾಶ್ ಉಮೇಶ್ ಜಾದವ್ ಅವರು, ಕೇಂದ್ರ ಪುರಸ್ಕೃತ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ತೋಟಗಾರಿಕೆ ಇಲಾಖೆಯಿಂದ 2 ಹೆಕ್ಟೇರ್ ಭೂಮಿ ಹೊಂದಿರುವ ಎಲ್ಲಾ ವರ್ಗದ ರೈತರಿಗೆ ಶೇ.90 ರಷ್ಟು ಹಾಗೂ 2 ಹೆಕ್ಟೇರ್ ನಿಂದ 5 ಹೆಕ್ಟೇರ್ ವರೆಗಿನ ಜಮೀನು ಹೊಂದಿರುವ ರೈತರಿಗೆ ಶೇ.45 ರಷ್ಟು ಸಹಾಯಧನ ನೀಡುತ್ತಿರುವುದಕ್ಕೆ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದರು. ಶಾಸಕ ರವಿಕುಮಾರ್ ಗೌಡ ತೋಟಗಾರಿಕೆ ಇಲಾಖೆಯಿಂದ ರೈತರಿಗೆ ಉಚಿತವಾಗಿ ತೆಂಗಿನ ಸಸಿಗಳನ್ನು ನೀಡುವಂತೆ ಮನವಿ ಮಾಡಿದರು.
[13/12, 5:10 pm] +91 94806 54365: ಗ್ರಾಮ ಪಂಚಾಯತ್ ಗಳ 5,257.70 ಕೋಟಿ ರೂ ವಿದ್ಯುತ್ ಶುಲ್ಕ ತೀರುವಳಿ: ಸಚಿವ ಪ್ರಿಯಾಂಕ್ ಖರ್ಗೆ*
ಬೆಳಗಾವಿ ಸುವರ್ಣಸೌಧ, ಡಿ.13(ಕರ್ನಾಟಕ ವಾರ್ತೆ): ರಾಜ್ಯದ ಗ್ರಾಮ ಪಂಚಾಯತ್ ಗಳು ಏಪ್ರಿಲ್ 2015 ರಿಂದ ಮಾರ್ಚ್ 2023 ರ ವರೆಗೆ ವಿದ್ಯುತ್ ಸರಬರಾಜು ಕಂಪೆನಿಗಳಿಗೆ ಪಾವತಿಸಬೇಕಾಗಿರುವ ಕುಡಿಯುವ ನೀರು ಮತ್ತು ಬೀದಿ ದೀಪ ಸ್ಥಾವರಗಳ ಬಾಕಿ ವಿದ್ಯುತ್ ಶುಲ್ಕದ ಒಟ್ಟು ಮೊ ತ್ತ ರೂ.6,509,90 ಕೋಟಿಗಳಲ್ಲಿ ಅಸಲು ಮೊತ್ತ ರೂ.5,257.70 ಕೋಟಿಗಳನ್ನು ಸರ್ಕಾರದ ಖಾತರೀಕರಣ ಮೂಲಕ ತೀರುವಳಿ ಮಾಡಿ ಹಾಗೂ ಬಡ್ಡಿ ಮೊತ್ತ ರೂ.1,252.20 ಕೋಟಿಗಳನ್ನು ಮನ್ನಾ ಮಾಡಿ ಆದೇಶ ಹೊರಡಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಅವರು ಇಂದು ವಿಧಾನ ಪರಿಷತ್ತಿನಲ್ಲಿ ಸದಸ್ಯ ಡಾ.ತಿಮ್ಮಯ್ಯ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು.
ಎಪ್ರಿಲ್ 2023 ರಿಂದ ಸೆಪ್ಟೆಂಬರ್ 2024 ರ ವರೆಗೆ ಗ್ರಾಮ ಪಂಚಾಯತಿಗಳ ಕುಡಿಯುವ ನೀರು ಮತ್ತು ಬೀದಿ ದೀಪ ಸ್ಯಾವರಗಳ ವಿದ್ಯುತ್ ಶುಲ್ಕದ ಒಟ್ಟು ಮೊತ್ತ ರೂ.3,719.20 ಕೋಟಿಗಳು ಬಾಕಿ ಇರುತ್ತದೆ. ಈ ಮೊತ್ತದಲ್ಲಿ ಅಸಲು ಮೊತ್ತ ರೂ.2,749.54 ಕೋಟಿಗಳು ಮತ್ತು ಬಡ್ಡಿ ಮೊತ್ತ ರೂ.969.66 ಕೋಟಿಗಳು ಒಳಗೊಂಡಿದ್ದು, ಸದರಿ ಮೊತ್ತವನ್ನು ಸಂಬಂಧಿಸಿದ ವಿದ್ಯುತ್ ಸರಬರಾಜು ಕಂಪನಿಗಳಿಗೆ ಪಾವತಿಸಬೇಕಾಗಿರುತ್ತದೆ.
ಗ್ರಾಮ ಪಂಚಾಯತಿಗಳಿಗೆ ರಾಜ್ಯ ಹಣಕಾಸು ಆಯೋಗದ ಅಭಿವೃದ್ಧಿ ಅನುದಾನ / ಗ್ರಾಮ ಪಂಚಾಯತಿಗಳಿಗೆ ಸಹಾಯ ಹೆಸರಿನಲ್ಲಿ ಒಟ್ಟು 1202.18 ಕೋಟಿಗಳ ಅನುದಾನವನ್ನು 2024-25 ನೇ ಸಾಲಿನಲ್ಲಿ ಒದಗಿಸಿದ್ದು, ಈ ಪೈಕಿ ರೂ. 391.79 ಕೋಟಿಗಳ ಅನುದಾನವನ್ನು ಗ್ರಾಮ ಪಂಚಾಯತಿಗಳ ವಿದ್ಯುತ್ ಶುಲ್ಕದ ಮೊತ್ತ ಭರಿಸಲು ಬಿಡುಗಡೆ ಮಾಡಲಾಗುತ್ತಿದೆ. ಅಲ್ಲದೆ, గామే ಪಂಚಾಯತಿಗಳು ಸ್ವಂತ ಸಂಪನ್ಮೂಲದಿಂದ ವಿದ್ಯುತ್ ಶುಲ್ಕದ ಮೊತ್ತವನ್ನು ಭರಿಸಬಹುದಾಗಿದೆ ಎಂದರು.
2024-25ನೇ ಸಾಲಿನ ಗ್ರಾಮ ಪಂಚಾಯತಿ ಚುನಾಯಿತ ಪ್ರತಿನಿಧಿಗಳ ಗೌರವ ಧನಕ್ಕಾಗಿ 273.78 ಕೋಟಿಗಳ ಅನುದಾನ ಒದಗಿಸಲಾಗಿದ್ದು, ಡಿಸೆಂಬರ್ 2024 ರವರೆಗಿನ ಗೌರವಧನವನ್ನು ಬಿಡುಗಡೆ ಮಾಡಲಾಗಿದೆ . ಗ್ರಾಮಾಂತರದಲ್ಲಿರುವ ಪಂಚಾಯತ್ ಗಳಿಗೆ ಅನುದಾನ ಹೆಚ್ಚಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿರುವುದಿಲ್ಲ ಎಂದರು.


ರೋಗನಿರೋಧಕ ಶಕ್ತಿ ಹೆಚ್ಚಿಸಲು ಸಿರಿಧಾನ್ಯ ಸಹಕಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯ


ಬೆಳಗಾವಿ, ಡಿಸೆಂಬರ್ 13 (ಕರ್ನಾಟಕ ವಾರ್ತೆ):- ಜನರಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಹಾಗೂ ಸಕ್ಕರೆ ಕಾಯಿಲೆಯನ್ನು ನಿಯಂತ್ರಿಸಲು ಸಿರಿಧಾನ್ಯದ ಬಳಕೆ ಸಹಕಾರಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಬೆಳಗಾವಿ ಸುವರ್ಣಸೌಧದಲ್ಲಿ ಅಂತರರಾಷ್ಟ್ರೀಯ ಸಾವಯವ ಮತ್ತು ಸಿರಿಧಾನ್ಯ ವಾಣಿಜ್ಯ ಮೇಳದ ಪೂರ್ವಭಾವಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿರಿಧಾನ್ಯದಲ್ಲಿ ಪ್ರೊಟೀನ್ ಹಾಗೂ ನಾರಿನ ಅಂಶ ಹೆಚ್ಚಾಗಿದ್ದು, ರೈತರು ಹೆಚ್ಚಿನ ಸಂಖ್ಯೆಯಲ್ಲಿ ಸಿರಿಧಾನ್ಯ ಕೃಷಿಯನ್ನು ತೊಡಗಿಕೊಳ್ಳಬೇಕು ಎಂದರು.
ದೇಶದಲ್ಲಿ ಕರ್ನಾಟಕ ರಾಜ್ಯ ಸಿರಿಧಾನ ಉತ್ಪಾದನೆಯಲ್ಲಿ ಮೂರನೇ ಸ್ಥಾನದಲ್ಲಿದೆ. ಸುಮಾರು 18.38 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ 22.16 ಲಕ್ಷ ಟನ್ ಗಳಷ್ಟು ಸಿರಿಧಾನ್ಯವನ್ನು ರಾಜ್ಯದಲ್ಲಿ ಬೆಳೆಯಲಾಗುತ್ತಿದೆ ಎಂದು ತಿಳಿಸಿದರು.
ದೇಶ ವಿದೇಶಗಳಲ್ಲಿ ಸಿರಿಧಾನ್ಯಗಳ ಬೇಡಿಕೆ ಹೆಚ್ಚಾಗುತ್ತಿದ್ದು, ವಿಶ್ವದಲ್ಲಿ 903.61 ಲಕ್ಷ ಟನ್ ಗಳಷ್ಟು ಸಿರಿಧಾನ್ಯವನ್ನು ಬೆಳೆಯಲಾಗುತ್ತಿದೆ. ಭಾರತದಲ್ಲಿ 31.50 ರಷ್ಟು ಸಿರಿಧಾನ್ಯವನ್ನು
ಬೆಳೆಯುತ್ತಿದ್ದು, ವಿಶ್ವದಲ್ಲಿ ಅತ್ಯಂತ ಹೆಚ್ಚು ಸಿರಿಧಾನ್ಯ ಬೆಳೆಯುವ ದೇಶವಾಗಿದೆ ಎಂದರು.
ಬೆಂಗಳೂರಿನ ನಗರದ ತ್ರಿಪುರವಾಸಿನಿ ಅರಮನೆ ಮೈದಾನದಲ್ಲಿ ಅಂತರರಾಷ್ಟ್ರೀಯ ಸಾವಯವ ಮತ್ತು ಸಿರಿಧಾನ್ಯ ವಾಣಿಜ್ಯ ಮೇಳವನ್ನು ಡಿಸೆಂಬರ್ 23, 24 ಮತ್ತು 25 ರಂದು ಹಮ್ಮಿಕೊಳ್ಳಲಾಗಿದ್ದು, ಮೇಳದ ಪೂರ್ವಭಾವಿ ಕಾರ್ಯಕ್ರಮಕ್ಕೆ ಚಾಲನೆ ನೀಡಿರುವುದಾಗಿ ತಿಳಿಸಿದರು.
ಈ ಕಾರ್ಯಕ್ರಮದಲ್ಲಿ, ವಿಧಾನ ಪರಿಷತ್ತು ಸಭಾಪತಿ ಬಸವರಾಜ ಹೊರಟ್ಡಿ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೃಷಿ ಸಚಿವ ಎನ್.ಚಲುವರಾಯಸ್ವಾಮಿ, ಅರಣ್ಯ ಸಚಿವ ಈಶ್ವರ ಖಂಡ್ರೆ, ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜು, ಮಾಜಿ ಸಚಿವ ಆರ್.ವಿ. ದೇಶಪಾಂಡೆ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.

ಉತ್ತರ ಕರ್ನಾಟಕ ಭಾಗದಲ್ಲಿ 432 ನವೋದ್ಯಮಗಳ ನೋಂದಣಿ: ಸಚಿವ ಪ್ರಿಯಾಂಕ್ ಖರ್ಗೆ


ಬೆಳಗಾವಿ ಸುವರ್ಣಸೌಧ, ಡಿ.13(ಕರ್ನಾಟಕ ವಾರ್ತೆ): ಉತ್ತರ ಕರ್ನಾಟಕ ಭಾಗದಲ್ಲಿ ಉದ್ಯೋಗ ಸೃಷ್ಟಿಯ ಉದ್ದೇಶದಿಂದ ಬಿಯಾಂಡ್ ಬೆಂಗಳೂರು ಕಾರ್ಯಕ್ರಮದಡಿಯಲ್ಲಿ 432 ನವೋದ್ಯಮ ಉದ್ದಿಮೆಗಳು ಆರಂಭಕ್ಕೆ ನೋಂದಣಿಯನ್ನು ಮಾಡಿಕೊಂಡಿವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಅವರು ಇಂದು ವಿಧಾನ ಪರಿಷತ್ತಿನಲ್ಲಿ ನಡೆದ ಉತ್ತರ ಕರ್ನಾಟಕ ಭಾಗದ ಜ್ವಲಂತ ಸಮಸ್ಯೆಗಳ ಬಗ್ಗೆ ನಡೆದ ವಿಶೇಷ ಚರ್ಚೆ ಸಂದರ್ಭದಲ್ಲಿ ಉತ್ತರಿಸಿದರು.
ಎಲೆಕ್ಟ್ರಾನಿಕ್ ವಸ್ತುಗಳ ತಯಾರಿಕೆ , ಹೊಸ ಆವಿಷ್ಕಾರಗಳನ್ನು ಮಾಡುವ ನಿಟ್ಟಿನಲ್ಲಿ 432 ನವೋದ್ಯಮ ಉದ್ದಿಮೆಗಳ ಆರಂಭಕ್ಕೆ ನೋಂದಣಿ ಮಾಡಿಕೊಂಡಿದ್ದು ಆ ಮೂಲಕ ಈ ಭಾಗದಲ್ಲಿ ಹೆಚ್ಚಿನ ಉದ್ಯೋಗ ಸೃಷ್ಟಿ ಯಾಗಲಿದ್ದು, ನಿಪುಣ ಕರ್ನಾಟಕ ಯೋಜನೆಯಡಿ ಕೂಡಾ ಈ ಭಾಗಕ್ಕೆ ಹೆಚ್ಚಿನ ಅವಕಾಶಗಳನ್ನು ನೀಡಲಾಗುತ್ತಿದೆ ಎಂದರು.
ಸದಸ್ಯ ಕೇಶವ ಪ್ರಸಾದ್ ಮಾತನಾಡಿ, ಉತ್ತರ ಕರ್ನಾಟಕ ಭಾಗದಲ್ಲಿ ಹಲವು ಐತಿಹಾಸಿಕ ಪ್ರಸಿದ್ಧ ದೇವಾಲಯಗಳಿದ್ದು ಇಲ್ಲಿ ಟೆಂಪಲ್ ಟೂರಿಸಮ್ ಅಭಿವೃದ್ಧಿ ಪಡಿಸಬಹುದು ಅಲ್ಲದೆ ಹೆಚ್ಚಿನ ಸಂಖ್ಯೆಯ ಅಣೆಕಟ್ಟುಗಳಿದ್ದು ಅವುಗಳ ಹಿನ್ನೀರಿನಲ್ಲಿ ಜಲ ಸಾಹಸ ಕ್ರೀಡೆಗಳನ್ನು ಆಯೋಜಿಸಬಹುದಾಗಿದೆ. ಕರಡಿಧಾಮ, ಪಕ್ಷಿಧಾಮ ಗಳಿದ್ದು , ರೋಪ್ ವೇ ಮೂಲಕ ಆಕರ್ಷಿಸಬಹುದಾದ ಸ್ಥಳಗಳಿದ್ದು,ರಸ್ತೆ, ರೈಲು ಮಾತ್ತು ವಾಯು ಮಾರ್ಗದ ವ್ಯವಸ್ಥೆಯಿದ್ದು ಇವೆಲ್ಲವುಗಳನ್ನು ಬಳಸಿಕೊಂಡು ಈ ಭಾಗವನ್ನು ಅಭಿವೃದ್ಧಿಗೊಳಿಸಬೇಕು ಎಂದರು.
ಸದಸ್ಯ ಎಂ. ನಾಗರಾಜ್ ಮಾತನಾಡಿ, ಈ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೈಗಾರಿಕೆ ಗಳ ಸ್ಥಾಪನೆ ಆಗಬೇಕು, ನೀರಾವರಿ ಸಮಸ್ಯೆಗಳ ಬಗ್ಗೆ ಕೇಂದ್ರದ ಮೇಲೆ ಒತ್ತಡ ತಂದು ಬಗೆಹರಿಸಿಕೊಳ್ಳಬೇಕು ಎಂದರು.
ಸದಸ್ಯರಾದ ಡಿ.ಟಿ.ಶ್ರೀನಿವಾಸ್ , ಪ್ರತಾಪ್ ಸಿಂಹ ನಾಯಕ್ ಮಾತನಾಡಿದರು.
[13/12, 5:10 pm] +91 94806 54365: ಬೆಂಗಳೂರು ಉಚ್ಛ ನ್ಯಾಯಾಲಯದ ಪ್ರಧಾನ ಪೀಠದಲ್ಲಿಯೇ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳ ಸಾರ್ವಜನಿಕರ ವ್ಯಾಜ್ಯಗಳ ನಿರ್ವಹಣೆ
ಬೆಳಗಾವಿ ಸುವರ್ಣಸೌಧ ಡಿ.13 (ಕ.ವಾ.): ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳ ಸಾರ್ವಜನಿಕರ ವ್ಯಾಜ್ಯಗಳನ್ನು ಕರ್ನಾಟಕ ಉಚ್ಚ ನ್ಯಾಯಾಲಯ, ಬೆಂಗಳೂರು ಇಲ್ಲಿನ ಪ್ರಧಾನ ಪೀಠದಲ್ಲಿ ನಿರ್ವಹಿಸಲಾಗುತ್ತಿದೆ. ಪ್ರಸ್ತುತ ಈಗ ಇರುವ ವ್ಯವಸ್ಥೆಯಲ್ಲಿಯೇ ಈ ಭಾಗದ ವ್ಯಾಜ್ಯಗಳನ್ನು ಸಮರ್ಥವಾಗಿ ಸದರಿ ಪೀಠದಲ್ಲಿಯೇ ನಿರ್ವಹಿಸಲಾಗುತ್ತಿದೆ ಎಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ವಿಧಾನ ಪರಿಷತ್ತನಲ್ಲಿ
ಸದಸ್ಯರಾದ ಐವಾನ್ ಡಿ’ಸೋಜಾ ಅವರು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳ ವ್ಯಾಪ್ತಿಗೆ ಬರುವ ಉಚ್ಚ ನ್ಯಾಯಾಲಯ ಪೀಠವನ್ನು ಮಂಗಳೂರಿನಲ್ಲಿ ಸ್ಥಾಪಿಸಲು ಸರ್ಕಾರ ಉಚ್ಛ ನ್ಯಾಯಾಲಯದೊಂದಿಗೆ ಚರ್ಚಿಸಿ ಕ್ರಮಕೈಗೊಳ್ಳಬೇಕೆಂಬ ಬೇಡಿಕೆಯ ಬಗ್ಗೆ ನಿಯಮ 72ರಡಿ ಮಂಡಿಸಿರುವ ಗಮನ ಸೆಳೆಯುವ ಸೂಚನೆಗೆ ಮುಖ್ಯಮಂತ್ರಿಗಳು ಲಿಖಿತ ಉತ್ತರ ನೀಡಿದ್ದಾರೆ.
ಭಾರತ ಸಂವಿಧಾನದ ಅನುಚ್ಛೇದ 214ರಲ್ಲಿ ಪ್ರತಿ ರಾಜ್ಯಕ್ಕೆ ಒಂದು ಉನ್ನತ ನ್ಯಾಯಾಲಯ ಇರಬೇಕೆಂದು ಆಸ್ಪದ ಕಲ್ಪಿಸಲಾಗಿದೆ.
ರಾಜ್ ಪುನರ್ ವಿಂಗಡಣಾ ಕಾಯ್ದೆ 1956 (The State Re-organisation Act, 1956)ರ ಕಲಂ 51(3)ರನ್ವಯ, ಆಯಾ ರಾಜ್ಯಗಳ ಉಚ್ಚ ನ್ಯಾಯಾಲಯಗಳ ಮುಖ್ಯ ನ್ಯಾಯಮೂರ್ತಿಗಳು ಮಾನ್ಯ ರಾಜ್ಯಪಾಲರ ಅನುಮೋದನೆಯೊಂದಿಗೆ ರಾಜ್ಯದ ಇತರೆ ಯಾವುದೇ ಸ್ಥಳದಲ್ಲಿ ಸಂಚಾರಿ ಪೀಠವನ್ನು ವ್ಯವಸ್ಥೆಗೊಳಿಸಲು (sittings) ಅಧಿಕಾರ ಹೊಂದಿರುತ್ತಾರೆ. ಅದರಂತೆ, ರಾಜ್ಯ ಉಚ್ಚ ನ್ಯಾಯಾಲಯದ 19.10.2004ರ ಅಧಿಸೂಚನೆಯನ್ವಯ ಕರ್ನಾಟಕ ರಾಜ್ಯದಲ್ಲಿ ಧಾರವಾಡ ಹಾಗೂ ಕಲಬುರಗಿಯಲ್ಲಿ ಉಚ್ಚ ನ್ಯಾಯಾಲಯದ ಸಂಚಾರಿ ಪೀಠಗಳನ್ನು ಆರಂಭಿಸಲಾಗಿದೆ.
ತರುವಾಯ, ಭಾರತದ ರಾಷ್ಟ್ರಪತಿಯವರ ದಿನಾಂಕ: 8.8.2013ರ ಆದೇಶದನ್ವಯ ಹಾಗೂ ಕರ್ನಾಟಕ ಉಚ್ಚ ನ್ಯಾಯಾಲಯದ ದಿನಾಂಕ:23.08.2013ರ ಅಧಿಸೂಚನೆಯನ್ವಯ ರಾಜ್ಯದ ಗುಲ್ಬರ್ಗಾ ಹಾಗೂ ಧಾರವಾಡದ ಸಂಚಾರಿ ಪೀಠಗಳನ್ನು ಖಾಯಂ ಪೀಠಗಳನ್ನಾಗಿ ಸ್ಥಾಪಿಸಲಾಗಿದೆ ಎಂದು ಮುಖ್ಯಮಂತ್ರಿಗಳು ಲಿಖಿತ ಉತ್ತರ ನೀಡಿದ್ದಾರೆ.


ಪ್ರವಾಸೋದ್ಯಮ ನೀತಿ 2020-26 ರಡಿ ಬಾಗಲಕೋಟೆ,ವಿಜಯಪುರ ಜಿಲ್ಲೆಯಲ್ಲಿ 44 ಪ್ರವಾಸಿ ತಾಣಗಳ ಗುರುತು: ಸಚಿವ ಎಚ್.ಕೆ.ಪಾಟೀಲ್


ಬೆಳಗಾವಿ ಸುವರ್ಣಸೌಧ, ಡಿ.13(ಕರ್ನಾಟಕ ವಾರ್ತೆ):
ಪ್ರವಾಸೋದ್ಯಮ ನೀತಿ 2020-26 ರನ್ವಯ ರಾಜ್ಯದಲ್ಲಿ 810 ಪ್ರವಾಸಿ ತಾಣಗಳನ್ನು ಗುರುತಿಸಲಾಗಿದ್ದು, ಬಾಗಲಕೋಟೆ, ವಿಜಯಪುರ ಜಿಲ್ಲೆಯಲ್ಲಿ 44 ಪ್ರವಾಸಿ ತಾಣಗಳು ಗುರುತಿಸಲಾಗಿದೆ ಎಂದು ಕಾನೂನು,ನ್ಯಾಯ,ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ಹೇಳಿದರು.
ಅವರು ಇಂದು ವಿಧಾನ ಪರಿಷತ್ತಿನಲ್ಲಿ ಸದಸ್ಯರಾದ ನಿರಾಣಿ ಹನುಮಂತ ರುದ್ರಪ್ಪ ಹಾಗೂ ಕೇಶವ ಪ್ರಸಾದ್ ಅವರ ಗಮನ ಸೆಳೆಯುವ ಸೂಚನೆಗೆ ಉತ್ತರಿಸಿದರು.
ಪ್ರವಾಸೋದ್ಯಮವನ್ನು ಉತ್ತೇಜಿಸಿ ಅಭಿವೃದ್ಧಿಪಡಿಸುವ ದೃಷ್ಟಿಯಿಂದ ವಿಜಯಪುರ ಪೂರ್ಣ ಜಿಲ್ಲೆಯನ್ನು ಹಾಗೂ ಬಾಗಲಕೋಟೆ ಜಿಲ್ಲೆಯ ಐಹೊಳೆ, ಬದಾಮಿ, ಪಟ್ಟದಕಲ್ಲು, ಕೂಡಲಸಂಗಮ, ಬೀಳಗಿ ತಾಣಗಳನ್ನು ಆದ್ಯತಾ ಪ್ರವಾಸಿ ತಾಣಗಳಾಗಿ ಗುರುತಿಸಿ, ಈ ತಾಣಗಳ ತಾಲ್ಲೂಕುಗಳಲ್ಲಿ ಬಂಡವಾಳ ಹೂಡಲು ಮುಂದೆ ಬರುವ ಖಾಸಗಿ ಹೂಡಿಕೆದಾರರಿಗೆ ಸಹಾಯಧನ, ರಿಯಾಯಿತಿ ಮತ್ತು ಉತ್ತೇಜನಗಳನ್ನು ನೀಡಲು ಅವಕಾಶ ಕಲ್ಪಿಸಲಾಗಿತ್ತು ಎಂದರು.
ಪ್ರಸ್ತುತ ಜಾರಿಗೆ ತಂದಿರುವ 2024-29ರ ನೂತನ ಕರ್ನಾಟಕ ಪ್ರವಾಸೋದ್ಯಮ ನೀತಿಯಲ್ಲಿ ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಪ್ರವಾಸೋದ್ಯಮ ಕ್ಷೇತ್ರದ ಯೋಜನೆಗಳಲ್ಲಿ ಹೂಡಿಕೆ ಮಾಡಲು ಮುಂದೆ ಬರುವ ಖಾಸಗಿ ಉದ್ಯಮಿಗಳಿಗೆ ಶೇ.5 ರಷ್ಟು ಹೆಚ್ಚುವರಿ ಸಹಾಯಧನ ಸೌಲಭ್ಯಗಳನ್ನು ಒದಗಿಸಲು ಅವಕಾಶ ಕಲ್ಪಿಸಲಾಗಿದೆ. ಇದಲ್ಲದೆ, ಸದರಿ ಜಿಲ್ಲೆಗಳಲ್ಲಿನ ಪ್ರವಾಸಿ ತಾಣಗಳನ್ನು ನೂತನ ಆದ್ಯತಾ ಪ್ರವಾಸಿ ತಾಣಗಳಾಗಿ ಗುರುತಿಸಲು ಕ್ರಮವಹಿಸಲಾಗುವುದು ಎಂದರು.
ಬಾಗಲಕೋಟೆ ಜಿಲ್ಲೆಯ ಐಹೂಳೆ ಗ್ರಾಮದ ಐತಿಹಾಸಿಕ ಮತ್ತು ಪಾರಂಪರಿಕ ಸ್ಮಾರಕಗಳನ್ನು ಸಂರಕ್ಷಿಸುವ ಸಲುವಾಗಿ ಸ್ಮಾರಕಗಳನ್ನೇ ಮನೆಗಳನ್ನಾಗಿ ಪರಿವರ್ತಿಸಿಕೊಂಡು ವಾಸಮಾಡುತ್ತಿರುವ ಸುಮಾರು 135 ಕುಟುಂಬಗಳನ್ನು ಸ್ಥಳಾಂತರಿಸಿ, ಪುನರ್ ವಸತಿ ಕಲ್ಪಿಸುವ ದೃಷ್ಟಿಯಿಂದ ಐಹೊಳೆ ಗ್ರಾಮದ ಭೂ-ಮಾಲೀಕರಿಂದ ಜಮೀನನ್ನು ಖರೀದಿಸಿ ಸ್ಥಳಾಂತರಿಸಲು ರೂ. 3.50 ಕೋಟಿ ಅನುದಾನವನ್ನು ಚಾಲುಕ್ಯ ಪಾರಂಪರಿಕ ಪ್ರದೇಶ ನಿರ್ವಹಣಾ ಪ್ರಾಧಿಕಾರಕ್ಕೆ ಬಿಡುಗಡೆಗೊಳಿಸಲಾಗಿದೆ. 135 ಕುಟುಂಬಗಳು ಪುನರ್ವಸತಿಗೆ ಒಪ್ಪಿಗೆಯನ್ನು ಮತ್ತು ಈ ಕಾರ್ಯಕ್ಕೆ ರೈತರು ಜಮೀನನ್ನು ನೀಡಲು ಒಪ್ಪಿಗೆ ಸೂಚಿಸಿದ್ದು ಮುಂದಿನ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದರು.
ಈ 135 ಕುಟುಂಬಗಳನ್ನು ಸ್ಥಳಾಂತರಿಸಿ, ಪುನ‌ರ್ ವಸತಿ ಕಲ್ಪಿಸಿದ ನಂತರ ಎಂಟು ಸ್ಮಾರಕಗಳ ಸಂರಕ್ಷಣೆಯನ್ನು ಅಂದಾಜು ರೂ. 8-10 ಕೋಟಿಗಳ ವೆಚ್ಚದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ಶೇ.50 ಮತ್ತು ಸರ್ಕಾರದ ವಂತಿಗೆ ಶೇ.50 ರಷ್ಟು ಅನುಪಾತದಲ್ಲಿ ವೆಚ್ಚವನ್ನು ಭರಿಸಿ ಸದರಿ ಟ್ರಸ್ಟ್ ವತಿಯಿಂದ ಸಂರಕ್ಷಣೆಯನ್ನು ಕೈಗೊಳ್ಳಲು ಚಾಲುಕ್ಯ ಪಾರಂಪರಿಕ ಪ್ರದೇಶ ನಿರ್ವಹಣಾ ಪ್ರಾಧಿಕಾರ, ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ಗಳ ನಡುವೆ ತ್ರಿಪಕ್ಷಿಯ ಒಡಂಬಡಿಕೆ ಮಾಡಿಕೊಳ್ಳಲಾಗಿದೆ ಎಂದರು.
ಪಟ್ಟದಕಲ್ಲು ಪ್ರವಾಸಿ ತಾಣದಲ್ಲಿ ಪ್ರವಾಸಿಗರಿಗೆ ಪಾರ್ಕಿಂಗ್ ಸೌಲಭ್ಯ ಕೆಫೆಟೇರಿಯಾ, ಪ್ರವಾಸಿ ಮಾಹಿತಿ ಕೇಂದ್ರ ಕರಕುಶಲ ಮಳಿಗೆ ಇತ್ಯಾದಿ ಸೌಲಭ್ಯಗಳನ್ನು ಒಂದೇ ಸೂರಿನಲ್ಲಿ ಒದಗಿಸಲು ರೂ.29.25 ಕೋಟಿ ಅಂದಾಜು ವೆಚ್ಚದಲ್ಲಿ ಪ್ರವಾಸಿ ಪ್ಲಾಜಾ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದೆ. ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲು ಬಾಗಲಕೋಟೆ ಜಿಲ್ಲೆಯ ಬದಾಮಿಯಲ್ಲಿ 72 ಕೊಠಡಿಗಳ ತ್ರಿ-ಸ್ಟಾರ್ ಹೋಟೆಲ್ ನಿರ್ಮಾಣ ಕಾಮಗಾರಿಯನ್ನು ರೂ.1832.00 ಲಕ್ಷಗಳ ಅಂದಾಜು ವೆಚ್ಚದಲ್ಲಿ ಕೈಗೊಳ್ಳಲು ಅನುಮೋದನೆ ನೀಡಿರುತ್ತದೆ. ರೂ 987.00 ಲಕ್ಷಗಳ ಅನುದಾನವನ್ನು ಅನುಷ್ಠಾನ ಸಂಸ್ಥೆಗೆ ಬಿಡುಗಡೆ ಮಾಡಲಾಗಿದ್ದು, ಕಾಮಗಾರಿ ಪ್ರಗತಿಯಲ್ಲಿದೆ ಎಂದರು.
ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲು ವಿಜಯಪುರ ಜಿಲ್ಲೆಯ ಭೂತನಾಳ ಕೆರೆಯ ಪ್ರದೇಶದಲ್ಲಿ ರೂ.1674.00 ಲಕ್ಷಗಳ ಅಂದಾಜು ವೆಚ್ಚದಲ್ಲಿ 75 ಕೊಠಡಿಗಳ ತ್ರಿಸ್ಟಾರ್ ಹೋಟೆಲ್ ಕಾಮಗಾರಿ ಅನುಮೋದನೆ ನೀಡಿದ್ದು, ರೂ.1669.83 ಲಕ್ಷಗಳ ಅನುದಾನವನ್ನು ಅನುಷ್ಠಾನ ಸಂಸ್ಥೆಗೆ ಬಿಡುಗಡೆ ಮಾಡಲಾಗಿದ್ದು ಕಾಮಗಾರಿ ಅಂತಿಮ ಹಂತದಲ್ಲಿದೆ ಎಂದರು
ಬಾಗಲಕೋಟೆ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಸಂಬಂಧ ಬಂಡವಾಳ ವೆಚ್ಚಗಳು ಹಾಗೂ ಕೆ.ಟಿ.ವಿ.ಜಿ ಲೆಕ್ಕಶೀರ್ಷಿಕೆ ಅಡಿ ಕಳೆದ 5 ವರ್ಷಗಳಲ್ಲಿ ಇಲಾಖೆಯಿಂದ ರೂ.6793.00 ಲಕ್ಷಗಳ ಅಂದಾಜು ವೆಚ್ಚದಲ್ಲಿ 17 ಕಾಮಗಾರಿಗಳನ್ನು ಕೈಗೊಂಡಿದ್ದು, ರೂ.3688.99 ಲಕ್ಷಗಳ ಅನುದಾನವನ್ನು ಸಂಬಂಧಪಟ್ಟ ಅನುಷ್ಠಾನ ಸಂಸ್ಥೆಗಳಿಗೆ ಬಿಡುಗಡೆ ಮಾಡಲಾಗಿದ್ದು ಕಾಮಗಾರಿಗಳು ವಿವಿಧ ಹಂತದಲ್ಲಿವೆ ಎಂದರು.
ವಿಜಯಪುರ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಸಂಬಂಧ ಬಂಡವಾಳ ವೆಚ್ಚಗಳು ಹಾಗೂ ಕೆ.ಟಿ.ವಿ.ಜಿ ಲೆಕ್ಕಶೀರ್ಷಿಕೆ ಅಡಿ ಕಳೆದ 5 ವರ್ಷಗಳಲ್ಲಿ ಇಲಾಖೆಯಿಂದ ರೂ.3569.00 ಲಕ್ಷಗಳ ಅಂದಾಜು ವೆಚ್ಚದಲ್ಲಿ 26 ಕಾಮಗಾರಿಗಳನ್ನು ಕೈಗೊಂಡಿದ್ದು, ರೂ.2445.88 ಲಕ್ಷಗಳ ಅನುದಾನವನ್ನು ಸಂಬಂಧಪಟ್ಟ ಅನುಷ್ಠಾನ ಸಂಸ್ಥೆಗಳಿಗೆ ಬಿಡುಗಡೆ ಮಾಡಲಾಗಿದ್ದು ಕಾಮಗಾರಿಗಳು ವಿವಿಧ ಹಂತದಲ್ಲಿರುತ್ತವೆ ಎಂದರು.


ಪರ್ಯಾಯ ಭೂಮಿ ಗುರುತಿಸುವ ಕಾರ್ಯ ಪ್ರಗತಿಯಲ್ಲಿ: ಕೃಷ್ಣ ಭೈರೇಗೌಡ


ಬೆಳಗಾವಿ ಸುವರ್ಣಸೌಧ ಡಿ.13 (ಕ.ವಾ.):
ಡಿ-ನೋಟಿಫಿಕೇಶನ್ ಪ್ರಸ್ತಾವನೆಗಳನ್ನು ನಿರ್ವನೀಕರಣಗೊಳಿಸುವ (disforest) ಪ್ರಕ್ರಿಯೆ ಚಾಲ್ತಿಯಲ್ಲಿರುವ ಕಾರಣದಿಂದ ರೈತರ ಪಹಣಿ ಪತ್ರಿಕೆಯಲ್ಲಿ ಮಂಜೂರಿದಾರರ ಹೆಸರಿನ ಬದಲಾಗಿ ಈವರೆಗೂ ಅರಣ್ಯ ಇಲಾಖೆಯ ಹೆಸರೇ ಮುಂದುವರೆದಿರುತ್ತದೆ.
ಪ್ರಸ್ತುತ ಸರ್ಕಾರದಿಂದ ಮತ್ತು ಜಿಲ್ಲಾಧಿಕಾರಿಯವರ ಸಮಿತಿಯಿಂದ ಅಂಗೀಕೃತವಾದ 1978ರ ಪೂರ್ವದ ಅರಣ್ಯ ಒತ್ತುವರಿ ಪ್ರಕರಣಗಳನ್ನು ಕರ್ನಾಟಕ ಅರಣ್ಯ ಅಧಿನಿಯಮ, 1963ರ ಸೆಕ್ಷನ್ 28 ರಂತೆ ಡಿ-ನೋಟಿಫಿಕೇಶನ್ ಮಾಡಲು ಪರಿಹಾರಾತ್ಮಕವಾಗಿ (Compansatory Afforestation) ಉತ್ತರ ಕನ್ನಡ ಜಿಲ್ಲೆಯಲ್ಲಿ 2499 ಪ್ರಕರಣಗಳಿಗೆ 1293.253 ಹೆಕ್ಟೇರ್ ಪರ್ಯಾಯ ಭೂಮಿಯ ಅವಶ್ಯಕತೆಯಿರುತ್ತದೆ. ಪರ್ಯಾಯ ಭೂಮಿಯನ್ನು ಗುರುತಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ತಿಳಿಸಿದ್ದಾರೆ.
ವಿಧಾನಪರಿಷತ್ ಸದಸ್ಯ ಶಾಂತಾರಾಮ್ ಸಿದ್ದಿ ಅವರ ಗಮನಸೆಳೆಯುವ ಸೂಚನೆಗೆ ಕಂದಾಯ ಸಚಿವರು ಉತ್ತರ ನೀಡಿದ್ದಾರೆ.


ಪ್ರವರ್ಗ 1 ಗುಂಪಿನ ಮೀಸಲಾತಿ ಹೆಚ್ಚಳ ಕುರಿತ ಬೇಡಿಕೆ ಸಿಎಂ ಗಮನಕ್ಕೆ ತರುವೆ: ಸಚಿವ ತಂಗಡಗಿ


ಬೆಳಗಾವಿ ಸುವರ್ಣಸೌಧ, ಡಿ.13(ಕರ್ನಾಟಕ ವಾರ್ತೆ): ರಾಜ್ಯದಲ್ಲಿ ಅತ್ಯಂತ ಹಿಂದುಳಿದ ಜಾತಿಗಳನ್ನು ಒಳಗೊಂಡ ಪ್ರವರ್ಗ 1 ಗುಂಪಿಗೆ ಮೀಸಲಾತಿ ಪ್ರಮಾಣ ಹೆಚ್ಚಿಸುವ ಕುರಿತಂತೆ ಈ ವಿಷಯವನ್ನು ಮುಖ್ಯಮಂತ್ರಿ ಅವರ ಗಮನಕ್ಕೆ ತರಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ಎಸ್ ತಂಗಡಗಿ ಹೇಳಿದರು.
ಅವರು ಇಂದು ವಿಧಾನ ಪರಿಷತ್ತಿನಲ್ಲಿ ಸದಸ್ಯ ಡಾ.ತಳವಾರ ಬಾಬಣ್ಣ ಅವರ ಗಮನ ಸೆಳೆಯುವ ಸೂಚನೆಗೆ ಉತ್ತರಿಸಿದರು.
ಅತ್ಯಂತ ಹಿಂದುಳಿದ ಜಾತಿಗಳನ್ನು ಒಳಗೊಂಡ ಪ್ರವರ್ಗ-1 ಗುಂಪಿಗೆ ಜನಸಂಖ್ಯೆ,ಆರ್ಥಿಕ-ಸಾಮಾಜಿಕ-
ಶೈಕ್ಷಣಿಕ ಹಿನ್ನೆಲೆ ಪರಿಗಣಿಸದೇ ಅವೈಜ್ಞಾನಿಕವಾಗಿ ಮೀಸಲಾತಿ ಪ್ರಮಾಣವನ್ನು ನಿಗದಿಪಡಿಸಿರುವುದು ಮತ್ತು ಅದರಿಂದ ತೀರಾ ಹಿಂದುಳಿದ ಜಾತಿಗಳಿಗೆ ಮೂವತ್ತು ವರ್ಷಗಳಿಂದ ಆಗುತ್ತಿರುವ ಅನ್ಯಾಯದ ಕುರಿತು ನಿಯಮ 330ರ ಮೇರೆಗೆ ಡಾ.ತಳವಾರ ಬಾಬಣ್ಣ ಪ್ರಸ್ತಾಪಿಸಿ, ಮೀಸಲಾತಿ ಪ್ರಮಾಣವನ್ನು ಶೇ.7 ಕ್ಕೆ ಹೆಚ್ಚಿಸುವುದರ ಮೂಲಕ ನ್ಯಾಯ ಒದಗಿಸಿಕೊಡಬೇಕು ಎಂದರು.
ಈ ಕುರಿತಂತೆ ಸದಸ್ಯರಾದ ಹರಿಪ್ರಸಾದ್, ರವಿಕುಮಾರ್, ನಾಗರಾಜ್ ಮತ್ತಿತರರು ದನಿಗೂಡಿಸಿದರು.
ಪ್ರವರ್ಗ-1 ಗುಂಪಿಗೆ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡುವ ಕುರಿತ ಮುಖ್ಯಮಂತ್ರಿ ಅವರ ಗಮನಕ್ಕೆ ತರಲಾಗುವುದು ಎಂದು ಸಚಿವ ಶಿವರಾಜ ಎಸ್ ತಂಗಡಗಿ ಹೇಳಿದರು.

About Mallikarjun

Check Also

ಜೆಡಿಎಸ್ ಮೊದಲು ಬಿಜೆಪಿವಿರುದ್ಧಹೋರಾಡಲಿ : ಜ್ಯೋತಿ ಟಾಂಗ್

Let JDS fight BJP first: Jyoti Tong ಕೊಪ್ಪಳ : ಜೆಡಿಎಸ್ ನವರು ಕಾಂಗ್ರೆಸ್ ಸರಕಾರದ ಬೆಲೆ ಏರಿಕೆ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.