Breaking News

ಡಿ. 27ಕ್ಕೆ ನಿರ್ಮಲ ತುಂಗಭದ್ರಾ ಅಭಿಯಾನ ಪಾದಯಾತ್ರೆ ಕೊಪ್ಪಳ ಜಿಲ್ಲೆ ಪ್ರವೇಶ :ಬಾಲಕೃಷ್ಣ ನಾಯ್ಡು


D. 27 Nirmala Tungabhadra Abhiyan Padayatra Koppal District Entry : Balakrishna Naidu

ಜಾಹೀರಾತು

ರಾಷ್ಟ್ರೀಯ ಸ್ವಾಭಿಮಾನ ಆಂದೋಲನ ನವದೆಹಲಿ ಹಾಗೂ ಪರ್ಯಾವರಣ ಟ್ರಸ್ಟ್ ಶಿವಮೊಗ್ಗ ಇವರ ಸಹಯೋಗದಲ್ಲಿ ಆಯೋಜಿಸಲಾಗಿರುವ ನಿರ್ಮಲ ತುಂಗಭದ್ರಾ ಅಭಿಯಾನದ ಎರಡನೇ ಹಂತದ ಪಾದಯಾತ್ರೆ ಇದೇ ಡಿಸೆಂಬರ್ 22 ರಿಂದ ಹರಿಹರದ ಹತ್ತಿರದ ಐರಣಿ ಮಠದಿಂದ  ಬೃಹತ್ ಜಲ ಜಾಗೃತಿ ಪಾದಯಾತ್ರೆ ಪ್ರಾರಂಭಗೊಂಡು,

ಇದೇ ಡಿಸೆಂಬರ್ 27 ರಂದು ನಿರ್ಮಲ ತುಂಗಭದ್ರಾ ಅಭಿಯಾನದ ಪಾದಯಾತ್ರೆ ತಂಡವು ಹುಲಿಗಿ ಗ್ರಾಮದ ಮೂಲಕ ಕೊಪ್ಪಳ ಜಿಲ್ಲೆಯನ್ನು ಪ್ರವೇಶಿಸಿ, ಡಿಸೆಂಬರ್ 30ರಂದು ಗಂಗಾವತಿಯಲ್ಲಿ ಪಾದಯಾತ್ರೆ ಸಮಾರೋಪ ಸಮಾವೇಶಗೊಳ್ಳಲಿದೆ ಎಂದು ಪರ್ಯಾವರಣ ಟ್ರಸ್ಟ್ ಮುಖ್ಯಸ್ಥರು ಹಾಗೂ ನಿರ್ಮಲ ತುಂಗಭದ್ರಾ ಅಭಿಯಾನದ ಸಂಚಾಲಕರು ಬಾಲಕೃಷ್ಣ ನಾಯ್ಡು ರವರು ತಿಳಿಸಿದರು.

ಮುಂದುವರೆದು ಮಾತನಾಡಿ, ಈ ಒಂದು ಕಾರ್ಯಕ್ರಮಕ್ಕೆ ಜಿಲ್ಲಾಡಳಿತದ ಸಹಕಾರ ಅಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಕೊಪ್ಪಳ ಜಿಲ್ಲಾಡಳಿತದ ಮಾನ್ಯ ಅಪರ ಜಿಲ್ಲಾಧಿಕಾರಿಗಳಾದ ಶ್ರೀ ಸಿದ್ದರಾಮೇಶ್ವರರನ್ನು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ರಾಹುಲ್  ರತ್ನಂ ಪಾಂಡೆಯ ಅವರನ್ನು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಾ.ರಾಮ್ ಎಲ್ ಅರಸಿದ್ಧಿ ಅವರನ್ನು ಹಾಗೂ ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ ಬಿಕೆ ರವಿ ರವರನ್ನು ಇಂದು ಆಹ್ವಾನಿಸಲಾಯಿತು. ಇದೇ ವೇಳೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪೊಲೀಸ್ ಇಲಾಖೆಯ ಸಹಕಾರ ಕೋರಲಾಯಿತು. ನಮ್ಮ ಮನವಿಗೆ ಸ್ಪಂದಿಸಿದ ಜಿಲ್ಲಾಡಳಿತ ಸಂಪೂರ್ಣ ಸಹಕಾರ ನೀಡುವುದಾಗಿ, ಕಾರ್ಯಕ್ರಮದಲ್ಲಿ ಭಾಗವಹಿಸುವುದಾಗಿ ಭರವಸೆ ನೀಡಿದರು ಎಂದು ಹೇಳಿದರು.

ಈ ವೇಳೆ ನಿರ್ಮಲ ತುಂಗಭದ್ರಾ ಅಭಿಯಾನದ ಸದಸ್ಯರು ಎಸ್ ಎಂ ಲೋಕೇಶ್ವರಪ್ಪ, ಹಾಗೂ ಗ್ರಾಮೀಣ ಭಾರತಿ 90.4FM ನ  ನಿರ್ದೇಶಕರು ರಾಘವೇಂದ್ರ ತೂನ ಇದ್ದರು.

About Mallikarjun

Check Also

ಎಸ್ಸಿ ಎಸ್ಟಿ ಮೀನುಗಾರರಿಗೆ ವಾಹನ ಖರೀದಿಸಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

Applications invited for subsidy for SC/ST fishermen to purchase vehicles ಕೊಪ್ಪಳ ಆಗಸ್ಟ್ 30 (ಕರ್ನಾಟಕ ವಾರ್ತೆ): …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.