Gram Panchayat Clerk Co. Data Entry Operator As the backbone of Gram Panchayat Executive Officer Santosh Biradar Patil
ಸರ್ಕಾರದ ಯೋಜನೆಗಳು ಜನಸಾಮಾನ್ಯರಿಗೆ ತಲುಪಿಸುವಲ್ಲಿ ಡಾ.ಟಾ ಎಂಟ್ರಿ ಅಪರೇಟರ್ ರವರ ಪಾತ್ರ ಮಹತ್ವವಾದದ್ದು ಸಹಾಯಕ ನಿರ್ದೇಶಕ ಶರಣಪ್ಪ ಕೆಳಗಿನಮನಿ
ವರದಿ : ಪಂಚಯ್ಯ ಹಿರೇಮಠ.
ಕಲ್ಯಾಣಸಿರಿ ವಾರ್ತೆ ಕೊಪ್ಪಳ.
ಕುಕನೂರ : ಕುಕನೂರ ತಾಲೂಕ ಪಂಚಾಯತಿಯಿಂದ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕಂಪ್ಯೂಟರ್ ಅಪರೇಟರ್ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಕುಕನೂರು ಇಓ ಸಂತೋಷ ಬಿರಾದರ ಪಾಟೀಲ್ ಮಾತನಾಡಿ,
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಡಿಯಲ್ಲಿ ವಿವಿಧ ಯೋಜನೆಗಳ ಅನುಷ್ಠಾನದ ಮಾಹಿತಿ ಸಾರ್ವಜನಿಕರಿಗೆ ಅಥವಾ ಸರ್ಕಾರಕ್ಕೆ ಸಲ್ಲಿಸಲು ಮತ್ತು ಸರ್ಕಾರದ ಯೋಜನೆಗಳಾದ ಮಹಾತ್ಮಗಾಂಧಿ ನರೇಗಾ ಯೋಜನೆ, ಸ್ವಚ್ಚ ಭಾರತ ಮಿಷನ್, ವಸತಿ ಯೋಜನೆ, ಪಂಚತಂತ್ರ 2.0, ಸಕಾಲ, ಸೇರಿದಂತೆ ಬಾಪೂಜಿ ಸೇವಾ ಕೇಂದ್ರದ ಮೂಲಕ ನೂರಾರು ಸೇವೆಗಳನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ಗ್ರಾಮ ಪಂಚಾಯತಿಯ ಆಪರೇಟರ್ ಪಾತ್ರ ಮಹತ್ವದ್ದಾಗಿದೆ ಎಂದರು.
ಒಬ್ಬ ಕಂಪ್ಯೂಟರ್ ಅಪರೇಟರ್ ಅದೇ ಗ್ರಾಮ ಪಂಚಾಯತಿಯಲ್ಲಿ ಹಲವಾರು ವರ್ಷಗಳಿಂದ ಇರುವುದರಿಂದ ಸ್ಥಳೀಯ ಸಮಸ್ಯೆಗಳನ್ನು ಅರ್ಥೈಸಿಕೊಂಡು ಜನ ಸಾಮಾನ್ಯರಿಗೆ ಉತ್ತಮ ಸೇವೆ ಮಾಡಲು ಸಾಧ್ಯವಾಗುತ್ತದೆ ಎಂದರು.
ಕಂಪ್ಯೂಟರ್ ಅಪರೇಟರ್ ಉತ್ತಮ ಆರೋಗ್ಯದಿಂದ ಇರಬೇಕಾದರೆ ಪ್ರತಿನಿತ್ಯ ವ್ಯಾಯಾಮವನ್ನು ಮಾಡಬೇಕು, ಆರೋಗ್ಯ ಇದ್ದರೆ ಮಾತ್ರ ನಾವು ಸರ್ಕಾರದ ಸೇವೆ ಮಾಡಬಹುದು, ಅದಕ್ಕಾಗಿ ಗ್ರಾಮ ಪಂಚಾಯತಿ ಸಿಬ್ಬಂದಿಗಳು ಪ್ರಧಾನ ಮಂತ್ರಿ ಸುರಕ್ಷ್ಯಾ ಭಿಮಾ ಯೋಜನೆ, ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಸುರಕ್ಷಾ ಭೀಮಾ ಯೋಜನೆಯಂತಹ ಇನ್ಸೂರೆನ್ಸ ಸ್ಕೀಮ್ ಗಳಲ್ಲಿ ನೋಂದಣಿ ಮಾಡಿಕೊಳ್ಳಬೇಕು ಎಂದರು.
ಎಲ್ಲಾ ಕಂಪ್ಯೂಟರ್ ಅಪರೇಟರ್ ರವರಿಗೆ ಸನ್ಮಾನ ಮಾಡಲಾಯಿತು
ಸ್ಥಳದಲ್ಲಿ ಸಹಾಯಕ ನಿರ್ದೇಶಕ ಶರಣಪ್ಪ ಕೆಳಗಿನ ಮನಿ ಮಾತನಾಡಿರು.
ಈ ಸಂದರ್ಭದಲ್ಲಿ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ನರೇಗಾ ತಾಂತ್ರಿಕ, ಎಮ್.ಐ.ಎಸ್, ಐ.ಇ.ಸಿ ಸಂಯೋಜಕರು, ತಾಪಂ ಸಿಬ್ಬಂದಿಗಳು, ರಾಜೀವ್ ಗಾಂಧಿ ಪೇಲೋ ಸಿಬ್ಬಂದಿಯವರು, ಎಲ್ಲಾ ಗ್ರಾಮ ಪಂಚಾಯತಿಯ ಕಂಪ್ಯೂಟರ್ ಅಪರೇಟರ್ ರವರು ಹಾಜರಿದ್ದರು.