Breaking News

ಶರಣ ಶ್ರೀ ಒಕ್ಕಲಿಗ ಮುದ್ದಣ್ಣ ನವರ ಸ್ಮರಣೋತ್ಸವ..

Commemoration of Sharan Sri Okkaliga Muddanna Navra..

ಜಾಹೀರಾತು
ಜಾಹೀರಾತು


ಕಾಯಕ : ಕೃಷಿ ಮಾಡುವುದು / ವ್ಯವಸಾಯ / ಬೇಸಾಯ / ಆರಂಭ
ಸ್ಥಳ : ಜೋಳದಹಾಳು, ವಿಜಯಪುರ ಜಿಲ್ಲೆ
ಜಯಂತಿ : ಎಳ್ಳು ಅಮಾವಾಸ್ಯೆಯಂದು
ಲಭ್ಯ ವಚನಗಳ ಸಂಖ್ಯೆ : ೧೨
ಅಂಕಿತ : ಕಾಮ ಭೀಮ ಜೀವ ಧನದೊಡೆಯ

ಸತ್ಯ ಶುದ್ಧ ಕಾಯಕಕ್ಕೆ ಹೆಸರಾದ ಒಕ್ಕಲಿಗ ಮುದ್ದಣ್ಣನವರು, ಬೇಸಾಯದ ಪರಿಭಾಷೆಯಲ್ಲಿ ಆಧ್ಯಾತ್ಮಿಕ ವಿಷಯಗಳನ್ನು ಪ್ರಸ್ತಾಪಿಸಿರುವರು. ಜಂಗಮ ದಾಸೋಹ ನಡೆಸುವುದು ಈತನ ನಿತ್ಯವ್ರತ. ರಾಜನು ಕೇಳಿದ ಹೆಚ್ಚಿನ ತೆರಿಗೆಯನ್ನು ಕೊಡದೆ ಆ ಹಣವನ್ನು ದಾಸೋಹಕ್ಕಾಗಿ ವಿನಿಯೋಗಿಸುತ್ತಾರೆ. ‘ಕಾಮಭೀಮ ಜೀವಧನದೊಡೆಯ’ ಅಂಕಿತದಲ್ಲಿ ರಚಿಸಿದ ೧೨ ವಚನಗಳು ದೊರೆತಿವೆ. ಒಕ್ಕಲುತನ ವೃತ್ತಿಯ ಪರಿಭಾಷೆ, ಮುಗ್ಧ ಭಕ್ತಿ, ಸರಳ-ಪ್ರಾಸಾದಿಕ ಶೈಲಿಯಿಂದ ಅವು ಕಳಕಳಿಸುತ್ತವೆ. ಚಾತುರ್ವಣ್ರ್ಯಗಳಲ್ಲಿ ಮೊದಲ ಮೂರನ್ನು ಹೇಳಿ ಕೊನೆಯದಾದ ಶೂದ್ರನನ್ನು ಹೇಳುವಾಗ, ಉಳುವ ಒಕ್ಕಲಮಗನ ತಪ್ಪ ನೋಡದೆ ಒಪ್ಪುಗೊಳ್ಳಯ್ಯ ಎಂದು ತನ್ನ ಇಷ್ಟಲಿಂಗದ ಮೂಲಕ ಪರಮಾತ್ಮನನ್ನು ಪ್ರಾರ್ಥಿಸಿಕೊಂಡಿರುವರು.

ಇವರದೊಂದು ವಚನ:
ಭಕ್ತಿಯೆಂಬ ಪೃಥ್ವಿಯಲ್ಲಿ ಗುರೂಪದೇಶವೆಂಬ ನೇಗಿಲಂ ಪಿಡಿದು, ಅಂತಃಕರಣ ಚತುಷ್ಟಯವೆಂಬ ಪಶುವಂ ಕಟ್ಟಿ ಓಂಕಾರನಾದವೆಂಬ ಸೆಳೆಕೋಲಂ ಪಿಡಿದು ಉತ್ತರ ಕ್ರೀಯೆಂಬ ಸಾಲನೆತ್ತಿ ದುಃಕರ್ಮವೆಂಬ ಕಂಟಕದ ಗುಲ್ಮವಂ ಕಡಿದು ಅರುಹೆಂಬ ರವಿಯ ಕಿರಣದಿಂದ ಒಣಗಿಸಿ ಅವಂ ಕೂಡಲೊಟ್ಟಿ, ಜ್ಞಾನಾಗ್ನಿಯೆಂಬ ಅಗ್ನಿಯಿಂದ ಸುಟ್ಟುರುಹಿ ಆ ಹೊಲನಂ ಹಸಮಾಡಿ, ಬಿತ್ತುವ ಪರಿ ಇನ್ನಾವುದಯ್ಯಾ ಎಂದಡೆ:
ನಾದ., ಬಿಂದು., ಕಳೆ., ಮಳೆಗಾಲದ ಹದಬೆದೆಯನರಿದು ಸ್ಥೂಲವೆಂಬ ದಿಂಡಿಗೆ ತ್ರಿದೇವರೆಂಬ ತಾಳ ನಟ್ಟು ಇಡಾಪಿಂಗಳ ಸುಷುಮ್ನಾನಾಳವೆಂಬ ಕೋವಿಗಳ ಜೋಡಿಸಿ,
ಮೇಲೆ ತ್ರಿಕೂಟಸ್ಥಾನವೆಂಬ ಬಟ್ಟಲಂ ಬಲಿದು,
ಕುಂಡಲೀಸರ್ಪನೆಂಬ ಹಗ್ಗವ ಸೇದಿ ಕಟ್ಟಿ, ಹಂಸನೆಂಬ ಎತ್ತಂ ಹೂಡಿ, ಪ್ರಣವನೆಂಬ ಬೀಜವ ಪಶ್ಚಿಮ ಮುಖಕ್ಕೆ ಬಿತ್ತಿ,
ಸರ್ವಶಾಂತಿ ನಿರ್ಮಲವೆಂಬ ಮೇಘ ಸುರಿಯಲ್ಕೆ ನೀಲಬ್ರಹ್ಮವೆಂಬ ಸಸಿ ಹುಟ್ಟಿತ್ತ..
ಆ ಸಸಿಯ ಮುಟ್ಟುವ ಸಪ್ತವರ್ಣದ ಸದೆಯ ಕಳೆದು ಅಷ್ಟವರ್ಣದ ಅಲಬಂ ಕಿತ್ತು, ದಶವಾಯುವೆಂಬ ಕಸಮಂ ತೆಗೆದು,
ಆ ಸಸಿ ಪಸರಿಸಿ ಪ್ರಜ್ವಲಿಸಿ ಫಲಕ್ಕೆ ಬರಲಾಗಿ ಚತುರ್ವಿಧವೆಂಬ ಮಂಚಿಗೆಯಂ ಮೆಟ್ಟಿ ಬಾಲಚಂದ್ರನೆಂಬ ಕವಣೆಯಂ ಪಿಡಿದು ಪ್ರಪಂಚುವೆಂಬ ಹಕ್ಕಿಯಂ ಸೋವಿ ಆ ಬತ್ತ ಬಲಿದು ನಿಂದಿರಲು,
ಕೊಯ್ದುಂಬ ಪರಿ ಇನ್ನಾವುದಯ್ಯಾ ಎಂದಡೆ:
ಇಷ್ಟವೆಂಬ ಕುಡುಗೋಲಿಗೆ ಪ್ರಣವವೆಂಬ ಹಿಡಿಯಂ ತೊಡಿಸಿ, ಭಾವವೆಂಬ ಹಸ್ತದಿಂ ಪಿಡಿದು, ಜನನದ ನಿಲವಂ ಕೊಯ್ದು, ಮರಣದ ಸಿವುಡ ಕಟ್ಟಿ, ಆಕಾಶವೆಂಬ ಬಣವೆಯನೊಟ್ಟಿ ಉನ್ಮನಿಯೆಂಬ ತೆನೆಯನ್ನರಿದು, ಮನೋರಥವೆಂಬ ಬಂಡಿಯಲ್ಲಿ ಹೇರಿ, ಮುಕ್ತಿಯೆಂಬ ಕೋಟಾರಕ್ಕೆ ತಂದು,
ಅಷ್ಟಾಂಗಯೋಗವೆಂಬ ಜೀವಧನದಿಂದೊಕ್ಕಿ, ತಾಪತ್ರಯದ ಮೆಟ್ಟನೇರಿ, ಪಾಪದ ಹೊಟ್ಟ ತೂರಿ, ಪುಣ್ಯದ ಬೀಜಮಂ [ತ]ಳೆದು ಷಡುವರ್ಗ ಷಡೂರ್ಮೆಯೆಂಬ ಬೇಗಾರಮಂ ಕಳೆದು ಅಂಗಜಾಲನ ಕಣ್ಣ[ಮು]ಚ್ಚಿ, ಚಿತ್ರಗುಪ್ತರೆಂಬ ಕರಣಿಕರ ಸಂಪುಟಕೆ ಬರಿಸದೆ ಯಮರಾಜನೆಂಬರಸಿಗೆ ಕೋರನಿಕ್ಕದೆ ಸುಖ ಶಂಕರೋತಿ ಶಂಕರೋತಿ ಎಂಬ ಸಯಿದಾನವನುಂಡು ಸುಖಿಯಾಗಿಪ್ಪ ಒಕ್ಕಲಮಗನ ತೋರಿ ಬದುಕಿಸಯ್ಯಾ, ಕಾಮಭೀಮ ಜೀವಧನದೊಡೆಯ ಪ್ರಭುವೆನಿಮ್ಮ ಧರ್ಮ, ನಿಮ್ಮ ಧರ್ಮ..

About Mallikarjun

Check Also

ದಮ್ಮೂರಿನಲ್ಲಿ ೩೬೯ ನೇ ಶಿವಾನುಭವ ಗೋಷ್ಠಿ

369th Shivanubhava Concert at Dammur ಯಲಬುರ್ಗಾ : ಸಜ್ಜನರ ಸಂಗದಿಂದ ಹೆಜ್ಜೆನು ಸವಿಯಬಹುದು ,ಒಳ್ಳೆಯ ಆಚಾರ, ವಿಚಾರ ನಡೆ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.