Massive protest by Koppal District Vishwakarma Samaj on January 07
ಸಾಂದರ್ಭಿಕ ಚಿತ್ರ
ಕೊಪ್ಪಳ: ಕಲಬುರಗಿ ಜಿಲ್ಲೆಯ ಸಿವಿಲ್ ಗುತ್ತಿಗೆದಾರ ಹಾಗೂ ವಿಶ್ವಕರ್ಮ ಸಮಾಜದ ಯುವಕ ಸಚಿನ್ ಪಾಂಚಾಳ ಆತ್ನಹತ್ಯೆ ಪ್ರಕರಣದ ಕುರಿತು ತನಿಖೆ ನಡೆಸಬೇಕು ಮತ್ತು ಪರಿಹಾರ ಘೋಷಿಸಬೇಕೆಂದು ಆಗ್ರಹಿಸಿ ಕೊಪ್ಪಳ ಜಿಲ್ಲಾ ವಿಶ್ವಕರ್ಮ ಸಮಾಜದ ವತಿಯಿಂದ ಜ.07 ರಂದು ಬೆಳಿಗ್ಗೆ 11.00 ಗಂಟೆಗೆ ಕೊಪ್ಪಳ ನಗರದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ವಿಶ್ವಕರ್ಮ ಸಮಾಜದ ಜಿಲ್ಲಾಧ್ಯಕ್ಷ ನಾಗೇಶಕುಮಾರ ಕಂಸಾಲೆ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎ.ಪ್ರಕಾಶತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಜ.07 ರಂದು ಅಶೋಕ ಸರ್ಕಲ್, ಬಸವೇಶ್ವರ ಸರ್ಕಲ್ ಬಳಿ ಸಾಂಕೇತಿಕ ಪ್ರತಿಭಟನೆ ನಡೆಸಿ ಪಾದಯಾತ್ರೆಯ ಮೂಲಕ ಜಿಲ್ಲಾಧಿಕಾರಿ ಕಛೇರಿಗೆ ತೆರಳಿ ಡಿಸಿ ಅವರ ಮೂಲಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಲಾಗುವುದು ಎಂದು ತಿಳಿಸಿದ ಅವರು, ಅಂದು ನಡೆಯುವ ಪ್ರತಿಭಟನೆಯಲ್ಲಿ ವಿಶ್ವಕರ್ಮ ಸಮಾಜ ಬಾಂಧವರು, ಮುಖಂಡರು, ಯುವಕರು, ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಪ್ರಕಟಣೆಯ ಮೂಲಕ ಮನವಿ ಮಾಡಿಕೊಂಡಿದ್ದಾರೆ.