Breaking News

ಶಿವಯೋಗಿ ಸಿದ್ಧರಾಮ ಜಯಂತಿ ಆಚರಣೆಗೆ ಅಗತ್ಯ ಸಿದ್ಧತೆಯಾಗಲಿ: ಶಿವಾನಂದ

Necessary preparations should be made for Shivayogi Siddharma Jayanti: Shivananda

ಜಾಹೀರಾತು


ರಾಯಚೂರು ಜ.06,(ಕರ್ನಾಟಕ ವಾರ್ತೆ):- ಜಿಲ್ಲಾಡಳಿತದ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಅದ್ದೂರಿಯಾಗಿ ಹಾಗೂ ವಿಜೃಂಭಣೆಯಿಂದ ಶಿವಯೋಗಿ ಸಿದ್ಧರಾಮ ಜಯಂತಿಯನ್ನು ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿಗಳಾದ ಶಿವಾನಂದ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜ.06ರ ಸೋಮವಾರ ದಂದು ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಶಿವಯೋಗಿ ಸಿದ್ಧರಾಮ ಜಯಂತಿಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜನವರಿ 17ರ ಶುಕ್ರವಾರ ಬೆಳಿಗ್ಗೆ 9ಗಂಟೆಗೆ ನಗರದ ಆಶಾಪೂರು ರಸ್ತೆಯಲ್ಲಿರುವ ಶಿವಯೋಗಿ ಸಿದ್ಧರಾಮ ವೃತ್ತದಿಂದ ಮೆರವಣಿಗೆ ಪ್ರಾರಂಭಿಸಿ, ಬೆಳಿಗ್ಗೆ ಗಂಟೆಗೆ ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಅಧಿಕಾರಿಗಳು ಹಾಗೂ ಸಮಾಜದ ಮುಖಂಡರು ಮತ್ತು ಶಾಲಾ ಕಾಲೇಜಿನ ಮಕ್ಕಳು ಆಗಮಿಸಿ, ಕಾರ್ಯಕ್ರಮ ಯಶಸ್ವಿಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳು ಕ್ರಮವಹಿಸಬೇಕೆಂದು ಸೂಚಿಸಿದರು.
ಭಾವಚಿತ್ರಕ್ಕೆ ಮಾಲಾರ್ಪಣೆ ಹೂದಾನಿಗಳಿಂದ ಅಲಂಕಾರ, ಕುಡಿಯುವ ನೀರು ಹಾಗೂ ಸ್ವಚ್ಛತೆ ಕಾಪಾಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿ, ಎಲ್ಲಾ ಸರಕಾರಿ, ಅರೆಸರಕಾರಿ ಕಚೇರಿಗಳಲ್ಲಿ ಕಡ್ಡಾಯವಾಗಿ ಜ.17ರಂದು ಶಿವಯೋಗಿ ಸಿದ್ಧರಾಮ ಜಯಂತಿಯನ್ನು ಆಚರಿಸಲು ಸೂಕ್ತ ಕ್ರಮಕೈಗೊಳ್ಳಬೇಕು ಎಂದರು.
ಶಿಷ್ಟಾಚಾರ ಪ್ರಕಾರ ಆಹ್ವಾನ ಪತ್ರಿಕೆ ಮುದ್ರಿಸಿ ತಲುಪಿಸಬೇಕು. ಜಯಂತಿಯ ಮೆರೆವಣಿಗೆ ವೇಳೆ ವಿವಿಧ ಕಲಾ ತಂಡಗಳು ಭಾಗಿಯಾಗಲು ಕ್ರಮವಹಿಸಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಇದೇ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ದತ್ತಪ್ಪ ಸಾಗನೂರು, ರಾಯಚೂರು ನಗರಸಭೆಯ ಸಮುದಾಯ ಸಂಘಟನಾ ಅಧಿಕಾರಿ ಕೃಷ್ಣ ಕಟ್ಟಿಮನಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಮಾಜದ ಮುಖಂಡರು ಇದ್ದರು.

About Mallikarjun

Check Also

ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಘಟನೆಯಿಂದ ಎಐಡಿಎಸ್‌ಓ ಕೊಪ್ಪಳ ಜಿಲ್ಲಾ  ಸಮಿತಿಯು  ತೀವ್ರ ಆಘಾತ ಮತ್ತು ಆಕ್ರೋಶ ವ್ಯಕ್ತಪಡಿಸಿದೆ.

The AIDSSO Koppal District Committee has expressed deep shock and outrage over the recent incident …

Leave a Reply

Your email address will not be published. Required fields are marked *