Ambigara Chowdaiah Jayanti on the 21st: Preparatory meeting

ರಾಯಚೂರು ಜ.07,(ಕರ್ನಾಟಕ ವಾರ್ತೆ): ನಿಜಶರಣ ಅಂಬಿಗರ ಚೌಡಯ್ಯ ಜಯಂತಿಯನ್ನು ಜನವರಿ 21ರಂದು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿಗಳಾದ ಶಿವಾನಂದ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಜನವರಿ 6ರಂದು ನಡೆದ ನಿಜಶರಣ ಅಂಬಿಗರ ಚೌಡಯ್ಯ ಜಯಂತಿಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜ.21ರ ಮಂಗಳವಾರ ಬೆಳಿಗ್ಗೆ 9 ಗಂಟೆಗೆ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಮೆರವಣಿಗೆ ಆರಂಭವಾಗಿ ಬೆಳಿಗ್ಗೆ 11 ಗಂಟೆಗೆ ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದವರೆಗೆ ಸಂಚರಿಸಲಿದೆ.
ಈ ಮೆರವಣಿಗೆ ಹೊರಡುವ ಮಾರ್ಗದಲ್ಲಿ ಮತ್ತು ರಂಗಮಂದಿರದ ಆವರಣದ ಸುತ್ತಲು ಶುಚಿತ್ವ ಕಾಯ್ದುಕೊಳ್ಳಬೇಕು. ಜೊತೆಗೆ ಕುಡಿಯುವ ನೀರಿನ ವ್ಯವಸ್ಥೆಗೆ
ಮಹಾನಗರ ಪಾಲಿಕೆಯಿಂದ ಅಗತ್ಯ ಏರ್ಪಾಡಾಗಬೇಕು.
ಮೆರವಣಿಗೆಯಲ್ಲಿ ವಿವಿಧ ಕಲಾ ತಂಡಗಳು ಭಾಗಿಯಾಗಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕೆಂದು ನಿರ್ದೇಶನ ನೀಡಿದರು.
ಅಂದು ವೇದಿಕೆ ಕಾರ್ಯಕ್ರಮ ಅಚ್ಚುಕಟ್ಟಾಗಿ ನಡೆಯಬೇಕು. ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆ ಮುದ್ರಿಸಿ ವಿತರಿಸಬೇಕು.
ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನಡೆಯುವ
ಸಮಾರಂಭದಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಮತ್ತು ಸಮಾಜದ ಮುಖಂಡರು ಹಾಗೂ ಶಾಲಾ ಕಾಲೇಜಿನ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳು ಕ್ರಮವಹಿಸಬೇಕೆಂದು ಸೂಚಿಸಿದರು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ದತ್ತಪ್ಪ ಸಾಗನೂರು, ರಾಯಚೂರು ನಗರಸಭೆಯ ಸಮುದಾಯ ಸಂಘಟನಾ ಅಧಿಕಾರಿ ಕೃಷ್ಣ ಕಟ್ಟಿಮನಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಮಾಜದ ಮುಖಂಡರು ಸಭೆಯಲ್ಲಿ ಇದ್ದರು