Applications invited from eligible candidates for battery-powered wheelchair project
ರಾಯಚೂರು ಜ.07,(ಕರ್ನಾಟಕ ವಾರ್ತೆ):- ಇಲ್ಲಿನ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯಿಂದ 2024-25ನೇ ಸಾಲಿನ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯಿಂದ ಫಲಾನುಭವಿ ಆಧಾರಿತ ಯೋಜನೆ ಬ್ಯಾಟರಿ ಚಾಲಿತ ವ್ಹೀಲ್ ಚೇರ್‌ಯೋಜನೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಅಂಗವಿಕರ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.
ಆಸಕ್ತರು ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಮತ್ತು ಸೇವಾ ಸಿಂಧು ತಂತ್ರಾಂಶ ವಿಳಾಸ: URL:https://suvidha.karnataka.gov.in/ ನಲ್ಲಿ ಜ.21ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕಿನ ತಾಲ್ಲೂಕು ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಂ.ಆರ್.ಡಬ್ಲ್ಯೂ ಕಾರ್ಯಕರ್ತರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.