Breaking News

ಅಂಚೆ ಜೀವ ವಿಮೆ ಉತ್ಪನ್ನಗಳ ಮಾರಾಟಕ್ಕೆ ಅರ್ಹರಿಂದ ಅರ್ಜಿ ಆಹ್ವಾನ

Invitation of application from eligible for sale of postal life insurance products

ಜಾಹೀರಾತು


ರಾಯಚೂರು ಜ.08,(ಕರ್ನಾಟಕ ವಾರ್ತೆ): ರಾಯಚೂರು ವಿಭಾಗದಲ್ಲಿ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ನೇರ ಪ್ರತಿನಿಧಿಗಳ ನಿಯುಕ್ತಿಗಾಗಿ ಪ್ರಸ್ತಾವಿಸಿದ್ದು, ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹತಾ ನಿಯಮಗಳು: ಅಭ್ಯರ್ಥಿಗಳು 10ನೇ ತರಗತಿ ಉತ್ತೀರ್ಣರಾಗಿರುವುದು ಕಡ್ಡಾಯವಾಗಿರುತ್ತದೆ. ವಯೋಮಿತಿ 18 ರಿಂದ 50 ವರ್ಷಗಳು. ನಿರುದ್ಯೋಗಿ ಹಾಗೂ ಸ್ವಯಂ ಉದ್ಯೋಗ ನಿರತಯುವಕರು, ವಿಮಾ ಕಂಪನಿಗಳ ಮಾಜಿ ಏಜೆಂಟರು ಹಾಗೂ ಸಲಹೆಗಾರರು, ಮಾಜಿ ಸೈನಿಕರು, ಅಂಗನವಾಡಿ ಕಾರ್ಯಕರ್ತೆಯರು, ಮಹಿಳಾ ಮಂಡಳದ ಕಾರ್ಯಕರ್ತೆಯರು, ನಿವೃತ್ತ ಪ್ರಧಾನ ಮತ್ತು ಗ್ರಾಮ ಪಂಚಾಯತಿಯ ಸದಸ್ಯರು ಹಾಗೂ ಅಂಚೆ ವಿಭಾಗದ ಮುಖ್ಯಸ್ಥರಿಗೆ ಸಮಂಜಸವೆಂದು ಕಂಡುಬಂದ ಯಾವುದೇ ಅಭ್ಯರ್ಥಿಗಳು ಆಯ್ಕೆಯಾದ ಪಕ್ಷದಲ್ಲಿ ಅವಕಾಶ ನೀಡಲಾಗುವುದು. ನುರಿತ, ಸಂವಹನ ಕಲೆ ಹಾಗೂ ವಿಮಾ ಮಾರಾಟ ಕ್ಷೇತ್ರದಲ್ಲಿ ಪೂರ್ವಾನುಭವ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು.
ಆಯ್ಕೆಯಾದ ಅಭ್ಯರ್ಥಿಗಳು 5000 ರೂ.ಗಳನ್ನು ರಾಷ್ಟ್ರೀಯ ಉಳಿತಾಯ ಪತ್ರ ಅಥವಾ ಕಿಸಾನ ವಿಕಾಸ ಪತ್ರದ ರೂಪದಲ್ಲಿ ಭದ್ರತಾ ಠೇವಣಿ ಇಡಬೇಕಾಗುತ್ತದೆ. ಆಯ್ಕೆಯಾದ ನೇರ ಪ್ರತಿನಿಧಿಗಳಿಗೆ ಅವರು ಮಾಡಿದ ವ್ಯವಹಾರಕ್ಕೆ ತಕ್ಕಂತೆ ಸೂಕ್ತ ಕಮೀಶನ್ ನೀಡಲಾಗುವುದು. ಆಸಕ್ತರು ತಮ್ಮ ಇತ್ತೀಚಿನ ಭಾವಚಿತ್ರದೊಂದಿಗೆ ಸ್ವವಿವರ, ಶೈಕ್ಷಣಿಕ ಪ್ರಮಾಣ ಪತ್ರದ ನಕಲುಗಳೊಂದಿಗೆ ಜ.17ರ ಬೆಳಿಗ್ಗೆ 11 ಗಂಟೆಗೆ ಗಂಜ್ ವೃತ್ತದ ಬಳಿಯಿರುವ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ನಡೆಯಲಿರುವ ನೇರ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಅಂಚೆ ಕಚೇರಿಯನ್ನು ಸಂಪರ್ಕ ಮಾಡಬಹುದಾಗಿದೆ ಎಂದು ರಾಯಚೂರು ವಿಭಾಗದ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About Mallikarjun

Check Also

ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಘಟನೆಯಿಂದ ಎಐಡಿಎಸ್‌ಓ ಕೊಪ್ಪಳ ಜಿಲ್ಲಾ  ಸಮಿತಿಯು  ತೀವ್ರ ಆಘಾತ ಮತ್ತು ಆಕ್ರೋಶ ವ್ಯಕ್ತಪಡಿಸಿದೆ.

The AIDSSO Koppal District Committee has expressed deep shock and outrage over the recent incident …

Leave a Reply

Your email address will not be published. Required fields are marked *