Minister-in-charge, MLAs visit Hill Mahadeshwar hill in background of cabinet move:
ವರದಿ : ಬಂಗಾರಪ್ಪ ಸಿ
ಹನೂರು : ಪಶು ರಾಜ್ಯ ಸರ್ಕಾರದ ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ವೆಂಕಟೇಶ್ ಅವರು ಮಲೆ ಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿ ಸಚಿವ ಸಂಪುಟ ಸಭೆ ಸಂಬಂಧ ಸ್ಥಳ ಹಾಗೂ ಪೂರ್ವ ಸಿದ್ದತೆಗಳನ್ನು ಪರಿಶೀಲಿಸಿದರು.
ಹನೂರು ತಾಲ್ಲೂಕಿನ ಪ್ರಸಿದ್ದ ಯಾತ್ರ ಸ್ಥಳವಾದ ಶ್ರೀ
ಮಲೆ ಮಹದೇಶ್ವರ ಬೆಟ್ಟದ ದೀಪದ ಗಿರಿ ಒಡ್ಡುವಿನಲ್ಲಿರುವ ಮಲೆಮಹದೇಶ್ವರರ ಬೃಹತ್ ಪ್ರತಿಮೆ ಇರುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಅಧಿಕಾರಿಗಳೊಂದಿಗೆ ಚರ್ಚಿಸಿ ವಿವರ ಪಡೆದರು.
ನಂತರ
ಮಲೈಮಹದೇಶ್ವರ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಇದೇ ಸಂದರ್ಭದಲ್ಲಿ
ಶಾಸಕರಾದ ಎಂ.ಆರ್.ಮಂಜುನಾಥ್,ಪ್ರಾದೇಶಿಕ ಆಯುಕ್ತರಾದ ಡಿ.ಎಸ್.ರಮೇಶ್,ಜಿಲ್ಲಾಧಿಕಾರಿ ಶಿಲ್ಪಾ ನಾಗ್,ಡಿಐಜಿಪಿ ಡಾ.ಬೋರಲಿಂಗಯ್ಯ ,ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಕಧಿಕಾರಿ ಮೋನಾ ರೋತ್,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಟಿ.ಕವಿತ,ಉಪವಿಭಾಗಧಿಕಾರಿ ಬಿ.ಆರ್.ಮಹೇಶ್,ಮಲೈಮಹದೇಶ್ವರ ಕ್ಷೇತ್ರಾಭಿವೃದ್ದಿ ಪ್ರಾಧಿಕಾರದ ಕಾರ್ಯದರ್ಶಿಗಳಾ ಎ.ಇ.ರಘು ಇನ್ನಿತರರು ಹಾಜರಿದ್ದರು .