Breaking News

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಡಾ.ಅಶೋಕದಳವಾಯಿ ಭೇಟಿ, ರೈತರು, ಟ್ರೇಡರ್ಸಗಳೊಂದಿಗೆ ಚರ್ಚೆ

Dr. Ashoka Dalwai visit to Agricultural Product Marketing Committee, discussion with farmers, traders

ಜಾಹೀರಾತು


ರಾಯಚೂರು ಜ.11 (ಕರ್ನಾಟಕ ವಾರ್ತೆ): ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಜನವರಿ 11ರಂದು ರಾಜ್ಯ ಕಷಿ ಬೆಲೆ ಆಯೋಗದ ಅಧ್ಯಕ್ಷರಾದ ಡಾ.ಅಶೋಕ ಎಂ.ದಳವಾಯಿ ಅವರು ಭೇಟಿ ನೀಡಿ ಟ್ರೇಡರ್ಸ, ಕಮಿಷನ್ ಏಜೆಂಟರ್ಸಗಳು ಹಾಗೂ ಪ್ರಗತಿಪರ ರೈತರೊಂದಿಗೆ ಚರ್ಚಿಸಿ ವಿವಿಧ ಬೆಳೆಗಳ ಕುರಿತು ಮಾಹಿತಿ ಪಡೆದುಕೊಂಡರು.
ಈ ವೇಳೆ ಅವರು ಮಾತನಾಡಿ, ಡಿಸೆಂಬರ್ 27ರಂದು ಕೃಷಿ ಬೆಲೆ ಆಯೋಗದ ಅಧ್ಯಕ್ಷನಾಗಿ ಅಧಿಕಾರವಹಿಸಿಕೊಂಡ ನಂತರ ಮೊದಲ ಪ್ರವಾಸವೇ ರಾಯಚೂರಿನಿಂದ ಆರಂಭಿಸಲಾಗಿದ್ದು, ರೈತರಿಗೆ ಬೇಕಾಗುವ ಅಗತ್ಯ ನೆರವನ್ನು ಆಯೋಗದಿಂದ ನೀಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತದೆ. ದೇಶ, ರಾಜ್ಯ ಪ್ರಾದೇಶಿಕ ಹಾಗೂ ಜಿಲ್ಲೆಯಲ್ಲಿ ಕೃಷಿಯಲ್ಲಿ ಆಗುವ ಹವಮಾನ ಬದಲಾವಣೆ ಕುರಿತು ಸಂಬಂಧಿಸಿ ವಿಜ್ಞಾನಿಗಳು, ಅಧಿಕಾರಿಗಳು ಹಾಗೂ ರೈತರೊಂದಿಗೆ ನಿರಂತರ ಚರ್ಚೆ ಮಾಡಲಾಗುತ್ತಿದ್ದು, ರೈತರಿಗೆ ಏನು ಮಾಡಬಹುದು ಅದನ್ನು ಕಂಡುಕೊಳ್ಳಲು ಆಯೋಗದಿಂದ ನಿರಂತರ ಪ್ರಯತ್ನ ನಡೆಯುತ್ತದೆ ಎಂದು ಹೇಳಿದರು.
ರೈತರು ಬೆಳೆಯುವ ಬೆಳೆಗಳಿಗೆ ಲಾಭದಾಯಕ ಬೆಲೆ ದೊರೆಯಬೇಕು. ಆಗ ಮಾತ್ರ ಅವರ ಪರಿಶ್ರಮಕ್ಕೆ ಪ್ರತಿಫಲ ಸಿಕ್ಕಂತಾಗುತ್ತದೆ. ಕೃಷಿ ಉತ್ಪನ್ನಗಳ ಸಾಗುವಳಿಗಾಗಿ ರೈತರು ಬೀಜ, ರಾಸಾಯನಿಕ ಗೊಬ್ಬರಗಳು, ಕೀಟನಾಶಕಗಳು ಮುಂತಾದವುಗಳಿಗಾಗಿ ಹೇರಳವಾಗಿ ಹಣ ಖರ್ಚು ಮಾಡುತ್ತಾರೆ. ಸಾಗುವಳಿ ಮಾಡಿದ ಕೃಷಿ ಉತ್ಪನ್ನಗಳು ಮಾರುಕಟ್ಟೆಯಲ್ಲಿ ಹೆಚ್ಚಿನ ಬೆಲೆಗೆ ಮಾರಾಟವಾದಾಗ ಮಾತ್ರ ಮುಂದಿನ ಬೆಳೆಯ ಸಾಗುವಳಿ, ಕುಟುಂಬದ ನಿರ್ವಹಣೆ ಹಾಗೂ ಆರ್ಥಿಕವಾಗಿ ಸದೃಢರಾಗಲು ಅನುಕೂಲವಾಗುತ್ತದೆ ಎಂದರು.
ಮಣ್ಣಿನ ವೈವಿಧ್ಯತೆ ಇರುವುದು ನಮ್ಮ ಜನರು ಬೆಳಿತಾ ಇರುವಂತಹ ಬೆಳೆಗಳ ಪದ್ಧತಿ ಹಾಗೂ ಹೈನುಗಾರಿಕೆ, ಮೀನುಗಾರಿಕೆ ಹಾಗೂ ತೋಟಗಾರಿಕೆ ಇವೆಲ್ಲವೂ ಅರ್ಥ ಮಾಡಿಕೊಳ್ಳಲು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡಿದ್ದು, ರಾಯಚೂರಿನ ಕೃಷಿ ವಿಶ್ವವಿದ್ಯಾಲಯದಲ್ಲಿ ಹಮ್ಮಿಕೊಳ್ಳಲಾದ ಕಾರ್ಯಕ್ರಮ ಒಂದರಲ್ಲಿ ದೇಶದ ವಿವಿಧ ಭಾಗಗಳಿಂದ ಬಂದ ತಜ್ಞರು ಕೃಷಿ ತಂತ್ರಜ್ಞಾನ ಬಗ್ಗೆ ಸಲಹೆಗಳನ್ನು ನೀಡಿದ್ದಾರೆ. ಅಲ್ಲದೆ ಸರ್ಕಾರದಿಂದ ಇಳುವರಿ ಇನ್ನು ಜಾಸ್ತಿ ಮಾಡಲು ಅನೇಕ ಸಲಹೆಗಳನ್ನು ನೀಡುತ್ತಿದೆ ಎಂದರು.
ರೈತರಿಂದ ಕಾಲಕಾಲಕ್ಕೆ ಸಲಹೆ ಪಡೆಯರಿ; ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯು ಕಾಲಕಾಲಕ್ಕೆ ಸುಧಾರಣೆಯಾಗಬೇಕು. ಅಲ್ಲದೆ ರೈತರಿಂದ ಸಲಹೆ ಸೂಚನೆಗಳನ್ನು ಪಡೆಯಬೇಕು. ರೈತರಿಗೆ ವಾಹನದ ವ್ಯವಸ್ಥೆಯನ್ನು ಸಮರ್ಪಕವಾಗಿ ಮಾಡಬೇಕು. ಹೆಚ್ಚಿನ ಸಂಖ್ಯೆಯಲ್ಲಿ ಟ್ರೇಡರ್ಸಗಳು ಭಾಗವಹಿಸುವಂತೆ ನೋಡಿಕೊಂಡು ರೈತರಿಗೆ ಉತ್ತಮ ದರ ದೊರಕಿಸಿಕೊಡಬೇಕೆಂದು ಸಂಬಂದಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇದೇ ಸಂದರ್ಭದಲ್ಲಿ ಎಪಿಎಮ್ ಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಗೌಡ, ಕಾರ್ಯದರ್ಶಿ ಆದಪ್ಪ, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಜಯ ಪ್ರಕಾಶ್, ಎಪಿಎಮ್ ಸಿ ಸಹಾಯಕ ಕಾರ್ಯದರ್ಶಿಗಳಾದ ಕೃಷ್ಣ ಸೇರಿದಂತೆ ಇತರರು ಇದ್ದರು.

About Mallikarjun

Check Also

ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಘಟನೆಯಿಂದ ಎಐಡಿಎಸ್‌ಓ ಕೊಪ್ಪಳ ಜಿಲ್ಲಾ  ಸಮಿತಿಯು  ತೀವ್ರ ಆಘಾತ ಮತ್ತು ಆಕ್ರೋಶ ವ್ಯಕ್ತಪಡಿಸಿದೆ.

The AIDSSO Koppal District Committee has expressed deep shock and outrage over the recent incident …

Leave a Reply

Your email address will not be published. Required fields are marked *