Direct Interview for the post of Emergency Medical Officer on Jan 23
ರಾಯಚೂರು ಜ.16 (ಕರ್ನಾಟಕ ವಾರ್ತೆ): ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಜಿಲ್ಲೆಯ ಅಧೀನದಲ್ಲಿ ಬರುವ ತಾಲೂಕು ಸಾರ್ವಜನಿಕ ಆಸ್ಪತ್ರೆಗಳಲ್ಲಿ ಖಾಲಿಯಿರುವ ತುರ್ತು ಚಿಕಿತ್ಸಕ ವೈದ್ಯಾಧಿಕಾರಿಗಳ ಹುದ್ದೆಯನ್ನು ಭರ್ತಿ ಮಾಡಲು ಜನವರಿ 23ರ ಬೆಳಿಗ್ಗೆ 10.30ಕ್ಕೆ ನೇರ ಸಂದರ್ಶನ ಹಮ್ಮಿಕೊಳ್ಳಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಮೂಲ ದಾಖಲಾತಿಗಳೊಂದಿಗೆ ಹಾಜರಾಗಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.