Minister Santosh S. Lad’s visit to Raichur district on January 20

ರಾಯಚೂರು ಜ.18 (ಕರ್ನಾಟಕ ವಾರ್ತೆ): ಕಾರ್ಮಿಕ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಎಸ್.ಲಾಡ್ ಅವರು ಜನವರಿ 20ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.
ಜನವರಿ 20ರ ಬೆಳಿಗ್ಗೆ 10 ಗಂಟೆಯಿಂದ 10.30ರವರೆಗೆ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ.
10.30 ರಿಂದ ನಗರದ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಜಿಲ್ಲೆಗೆ ಸಂಬಂದಿಸಿದಂತೆ ಕಾರ್ಮಿಕ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸುವವರು. ಸಂಜೆ 4 ರಿಂದ 5 ಗಂಟೆವರೆಗೆ ಮಾಲೀಕ ವರ್ಗದ ಸಂಘಟನೆಗಳು ಹಾಗೂ ಆಡಳಿತ ವರ್ಗದವರ ಸಭೆಯಲ್ಲಿ ಭಾಗಿಯಾವವರು.
ಸಂಜೆ 5 ಗಂಟೆಗೆ ರಾಯಚೂರಿನಿಂದ ನಿರ್ಗಮಿಸಿ ಬೆಳಗಾವಿಗೆ ಜಿಲ್ಲೆಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಪಿ.ಕುಮಾರ್ ಅವರು ತಿಳಿಸಿದ್ದಾರೆ.