Application Invitation for Ophthalmic Assistant Posts
ರಾಯಚೂರು ಜ.21,(ಕರ್ನಾಟಕ ವಾರ್ತೆ): ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ರಾಷ್ಟೀಯ ಆರೋಗ್ಯ ಅಭಿಯಾನದಡಿ ರಾಷ್ಟೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದಡಿ ಹಾಗೂ ಆಯುಷ್ ವಿಭಾಗದಡಿಯಲ್ಲಿ 2024-25ನೇ ಸಾಲಿಗೆ ಮಂಜೂರಾಗಿ ಖಾಲಿ ಇರುವ ಹುದ್ದೆಗಳನ್ನು ರಾಷ್ಟೀಯ ಆರೋಗ್ಯ ಅಭಿಯಾನದ ನಿಯಮಾನುಸಾರ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹುದ್ದೆಗಳ ವಿವರ ; ನೇತ್ರ ಸಹಾಯಕರು – 5 ಹುದ್ದೆಗಳು. ಈ ಗುತ್ತಿಗೆ ಆಧಾರದ ನೇಮಕಾತಿಯನ್ನು ರಾಷ್ಟೀಯ ಆರೋಗ್ಯ ಅಭಿಯಾನದ ನಿಯಮಾನುಸಾರ ಮೇರಿಟ್ ಕಮ್ ರೋಷ್ಟರ್ ಆಧಾರದ ಮೇಲೆ ಮಾಡಿಕೊಳ್ಳಲಾಗುವುದು. ಅರ್ಹ ವಿದ್ಯಾರ್ಹತೆಯುಳ್ಳ ಅಭ್ಯರ್ಥಿಗಳು ದಿನಾಂಕ: 22-01-2025 ರಿಂದ 05.02.2025ರವರೆಗೆ ವೆಬ್‌ಸೈಟ್: https://raichur.nic.in ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಕೊನೆಯ ದಿನಾಂಕದ ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಆನ್‌ಲೈನ್ ಹೊರತುಪಡಿಸಿ ಇತರೆ ಯಾವುದೇ ಮೂಲಗಳಿಂದ ಸಲ್ಲಿಸುವ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ಈ ಗುತ್ತಿಗೆ ಆಧಾರದ ನೇಮಕಾತಿಯು ಎನ್.ಹೆಚ್.ಎಂ. ನಿಯಮಾವಳಿಯ ಷರತ್ತು ಮತ್ತು ನಿಬಂಧನೆಗಳಿಗೆ ಒಳಪಟ್ಟಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಯೋಜನಾ ನಿರ್ವಹಣಾ ಘಟಕ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಲಯ ರಾಯಚೂರು ಕಚೇರಿ ಅವಧಿಯಲ್ಲಿ ಮಾಹಿತಿಯನ್ನು ಪಡೆಯಬಹುದಾಗಿದೆ ಅಥವಾ ದೂರವಾಣಿ ಸಂಖ್ಯೆ:9449843121ಗೆ ಅಥವಾ ಕಚೇರಿಯ ಸೂಚನಾ ಫಲಕವನ್ನು ನೋಡಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…