In Raichur district from January 24, Dr. Sharan Prakash R. Patil tour
ರಾಯಚೂರು ಜ.22,(ಕರ್ನಾಟಕ ವಾರ್ತೆ): ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ ಅವರು ಜನವರಿ 24ರಿಂದ ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.
ಅವರು ಜ.23ರ ರಾತ್ರಿ 8.40ಕ್ಕೆ ಬೆಂಗಳೂರಿನಿಂದ ರೈಲು ಮಾರ್ಗವಾಗಿ ಹೊರಟು ಜ.24ರ ಬೆಳಿಗ್ಗೆ 4.13ಕ್ಕೆ ರಾಯಚೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10 ಗಂಟೆಗೆ ರಾಯಚೂರಿನ ಒಪೆಕ್ ಆಸ್ಪತ್ರೆಯ ಪ್ರಗತಿ ಪರಿಶೀಲನಾ ಸಭೆ ನಡೆಸುವರು. ಬಳಿಕ 11 ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸುವರು. ಸಂಜೆ 4 ಗಂಟೆಗೆ ರಾಯಚೂರಿನಿಂದ ನಿರ್ಗಮಿಸಿ ಕಲಬುರಗಿ ಜಿಲ್ಲೆಗೆ ಪ್ರಯಾಣ ಬೆಳೆಸುವರು. ಜನವರಿ 25ರಂದು ಸಂಜೆ 7.30ಕ್ಕೆ ಕಲಬುರಗಿ ನಗರದಿಂದ ರಸ್ತೆ ಮಾರ್ಗವಾಗಿ ಹೊರಟು ರಾತ್ರಿ 10 ಗಂಟೆಗೆ ರಾಯಚೂರಗೆ ಆಗಮಿಸಿ ವಾಸ್ತವ್ಯ ಮಾಡುವರು. ಜನವರಿ 26ರಂದು ಬೆಳಗ್ಗೆ 9 ಗಂಟೆಗೆ ರಾಯಚೂರ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ರಾಯಚೂರ ಜಿಲ್ಲಾಡಳಿತ ಏರ್ಪಡಿಸಿರುವ ಗಣರಾಜ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗಿಯಾಗುವರು. ಬಳಿಕ ಮಧ್ಯಾಹ್ನ 1 ಗಂಟೆಗೆ ರಾಯಚೂರಿನಿಂದ ಕಲಬುರಗಿಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಕೃಷ್ಣಗೌಡ ತಾಯಣ್ಣವರು ತಿಳಿಸಿದ್ದಾರೆ.