Breaking News

ಹೋರಾಟಗಾರರ ವಿರುದ್ಧ ಪೊಲೀಸ್ ಬಲ ಬಳಸಿರುವುದನ್ನು ಕರ್ನಾಟಕ ಜನಸೈನ್ಯ ಸಂಘಟನೆಯ ಜಿಲ್ಲಾಧ್ಯಕ್ಷ ರಮೇಶ ಕಾಳೆ ಉಗ್ರವಾಗಿಖಂಡಿಸಿದ್ದಾರೆ

Ramesh Kale, district president of Karnataka Jansainya Sangathan, strongly condemned the use of police force against the militants.

ಜಾಹೀರಾತು
ಜಾಹೀರಾತು

ಗಂಗಾವತಿ: ಕನಿಷ್ಠ ವೇತನ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಶಾಂತಿಯುತವಾಗಿ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದ ಹಾಸ್ಟೆಲ್ ಹೊರಗುತ್ತಿಗೆ ನೌಕರರ ಹೋರಾಟವನ್ನು ಹತ್ತಿಕ್ಕುವ ದುರುದ್ದೇಶದಿಂದ ಜಿಲ್ಲಾಡಳಿತ ಹೋರಾಟಗಾರರ ವಿರುದ್ಧ ಪೊಲೀಸ್ ಬಲ ಬಳಸಿರುವುದನ್ನು ಕರ್ನಾಟಕ ಜನಸೈನ್ಯ ಸಂಘಟನೆಯ ಜಿಲ್ಲಾಧ್ಯಕ್ಷ ರಮೇಶ ಕಾಳೆ ಉಗ್ರವಾಗಿ ಖಂಡಿಸಿದ್ದಾರೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆ ನೀಡಿರುವ ರಮೇಶ ಕಾಳೆ ಅವರು, ಶಾಂತಿಯುತವಾಗಿ ಮೂರು ದಿನಗಳಿಂದ ನಡೆಯುತ್ತಿದ್ದ ಪ್ರತಿಭಟನೆಗೆ ಜಿಲ್ಲಾಧಿಕಾರಿ ಸ್ಪಂದಿಸದ ಕಾರಣ ಪ್ರತಿಭಟನಾಕಾರರ ಸಹನೆಯ ಕಟ್ಟೆ ಒಡೆದಿದೆ. ಕೂಡಲೇ ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರ ಮನವಿ ಸ್ವೀಕರಿಸುವಂತೆ ಒತ್ತಾ ಯಿಸಿದ್ದಾರೆ. ಅದೇ ವೇಳೆ ಜಿಲ್ಲಾಡಳಿತ ಭವನದಿಂದ ಹೊರಟಿದ್ದ ಜಿಲ್ಲಾಧಿಕಾರಿಗಳಕಾರಿಗೆ ಅಡ್ಡಗಟ್ಟಿದ್ದಾರೆ ಮತ್ತು ತಮ್ಮ ಮನವಿಯನ್ನು ಸ್ವೀಕರಿಸುವಂತೆ ಒತ್ತಾಯಿಸಿದ್ದಾರೆ. ಇದನ್ನೇ ನೆಪ ಮಾಡಿಕೊಂಡ ಪೊಲೀಸರು ಪ್ರತಿಭಟನಾಕಾರರನ್ನು ತಡೆಯಲು ಮುಂದಾಗಿದ್ದಾರೆ. ಇದರಿಂದಾಗಿ ಪ್ರತಿಭಟನಾಕಾರರು ಮತ್ತು ಪೊಲೀಸರ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ನಡೆದ ನೂಕುನುಗ್ಗಲಾಟದಲ್ಲಿ ಕೆಲ ಪ್ರತಿಭಟ ನಾಕಾರರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಮಹಿಳೆಯೊಬ್ಬರು ಮೂರ್ಛೆ ಹೋಗಿದ್ದಾರೆ. ಶಾಂತಿಯುತವಾಗಿ ಮುಗಿಯಬೇಕಿದ್ದ ಹೋರಾಟಕ್ಕೆ ಜಿಲ್ಲಾಧಿಕಾರಿಗಳ ಬೇಜವಾಬ್ದಾರಿ ವರ್ತನೆಯಿಂದಾಗಿ ಉಗ್ರ ಸ್ವರೂಪ ಪಡೆಯುವಂತಾಗಿದೆ. ಕೂಡಲೇ ಜಿಲ್ಲಾಧಿ ಕಾರಿಗಳು ಗಾಯಗೊಂಡ ಪ್ರತಿಭಟನಾಕಾರರಿಗೆ ಸೂಕ್ತ ಚಿಕಿತ್ಸೆ ಕೊಡಿಸಿ ಪರಿಹಾರ ನೀಡಬೇಕು ಮತ್ತು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಬೀದರ್‌ನಲ್ಲಿ ಜಾರಿಗೊಂಡ ವೇತನ ನೀತಿಯನ್ನು ಇಲ್ಲಿಯೂ ಜಾರಿ ಗೊಳಿಸಬೇಕು. ಹೋರಾಟಗಾರರ ಎಲ್ಲಾ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು. ಜನವಿರೋಧಿ ನೀತಿ ಅನುಸರಿಸುತ್ತಿರುವ ಜಿಲ್ಲಾಧಿಕಾರಿಯನ್ನು ಕೂಡಲೇ ವರ್ಗಾವಣೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

About Mallikarjun

Check Also

ಎಪಿಎಂಸಿ ಆವರಣದಲ್ಲಿ ಭರದಿಂದಸಿದ್ದತೆಗೊಳ್ಳುತ್ತಿರುವ ಸಹಕಾರಿ ಜಾಗೃತ ಸಮಾವೇಶಕಾರ್ಯಕ್ರಮದ ವೇದಿಕೆ,,, ಮುತುವರ್ಜಿವಹಿಸುತ್ತಿರುವಪೋಲಿಸ್ಇಲಾಖೆ,

The platform of Co-operative Vigilance Conference program is being prepared in full swing in APMC …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.