Breaking News

ಸ್ವಾವಲಂಬಿ ಜೀವನಕ್ಕೆ ಸ್ವಯಂ ಉದ್ಯಮಗಳೇ ದಾರಿದೀಪ

Self-employment is the beacon for self-reliant living

ಜಾಹೀರಾತು

ರಾಯಚೂರು ಜ.23 (ಕರ್ನಾಟಕ ವಾರ್ತೆ): ಜಿಲ್ಲೆಯ ಜನರು ಆರ್ಥಿಕ ಅಭಿವೃದ್ಧಿ ಹೊಂದಲು ಬೇಡಿಕೆ ಇರುವ ಸಣ್ಣ ಸಣ್ಣ ಉದ್ಯಮಗಳನ್ನು ಸ್ಥಾಪಿಸಿ ಆರ್ಥಿಕವಾಗಿ ಮುಂದೆ ಬರಬೇಕೆಂದು ಸಿಡಾಕ್ ಜಂಟಿ ನಿರ್ದೇಶಕರಾದ ಜಿ. ಯು. ಹುಡೇದ ಅವರು ಹೇಳಿದರು.
ಜನವರಿ 22ರ ಬುಧವಾರ ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ದಿ ಮಂಡಳಿ (ಕೆ.ಕೆ.ಆರ್.ಡಿ.ಬಿ.), ಕಲಬುರಗಿ, ಕೌಶಲ್ಯಾಬೀವೃದ್ಧಿ, ಉದ್ಯಮಶಿಲತೆ ಹಾಗೂ ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ ಉದ್ಯಮ ಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್), ರಾಯಚೂರು ಇವರ ಸಂಯುಕ್ತಾಶ್ರಯದಲ್ಲಿ ಕೆ.ಕೆ.ಆರ್.ಡಿ.ಬಿ. ಉದ್ಯೋಗ ಆವಿಷ್ಕಾರ ಯೋಜನೆ ಅಡಿಯಲ್ಲಿ ಕಂಪ್ಯೂಟರ್ ಹಾರ್ಡವೇರ & ನೆಟ್‌ವರ್ಕಿಂಗ್ ಬಗ್ಗೆ 30 ದಿನಗಳ ನಿರ್ದೀಷ್ಟ ವಲಯಾಧಾರಿತ ಉದ್ಯಮಶೀಲತಾಬಿವೃದ್ಧಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ತರಬೇತಿ ಪಡೆದ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿ ಅವರು ಮಾತನಾಡಿದರು.
ಕ್ರೀಯಾಶೀಲತೆಯಿಂದ ಯಾವುದೇ ಕಾರ್ಯ ಮಾಡಿದರೆ ಅದರಲ್ಲಿ ಯಶಸ್ಸು ಕಾಣಲು ಸಾಧ್ಯವಿದೆ. ಕ್ಶೌಶಲ್ಯಾಧಾರಿತ ಸೇವಾ ವಲಯಗಳ ಉದ್ಯಮಗಳಿಗೆ ಹೆಚ್ಚು ಬೇಡಿಕೆ ಇರುತ್ತದೆ ಅದರಲ್ಲಿಯೂ ವಿಶೇಷವಾಗಿ ಕಂಪ್ಯೂಟರ್ ಹಾರ್ಡವೇರ್ ಮತ್ತು ನೆಟ್‌ವರ್ಕಿಂಗ್ ಉದ್ಯಮಗಳಿಗೆ ಯಾವಾಗಲೂ ಬೇಡಿಕೆ ಇರುತ್ತದೆ. ಇವು ಸೂಕ್ತವಾದ ತರಬೇತಿ ಕಾರ್ಯಕ್ರಮಗಳಾಗಿದ್ದು, ಪಡೆದ ತರಬೇತಿಯ ಜ್ಞಾನವನ್ನು ಸದುಪಯೋಗಪಡಿಸಿಕೊಂಡು ಉದ್ಯಮ ಪ್ರಾರಂಭಿಸಿ ಆರ್ಥಿಕವಾಗಿ ಮುಂದುವರೆಯಬೇಕು ಎಂದು ತಿಳಿಸಿ, ಸಿಡಾಕ್ ಮುಖಾಂತರ ಹಮ್ಮಿಕೊಂಡಿರುವ ಈ ತರಬೇತಿಗಳು ಉತ್ತಮ ಆಯ್ಕೆಯಾಗಿವೆ ಮತ್ತು ತರಬೇತಿಯು ವ್ಯವಸ್ಥಿತವಾಗಿ ನಡೆಸಲಾಗಿದೆ ಎಂದು ಹೇಳಿದರು.
ಸಮಾರೋಪ ಸಮಾರಂಭದಲ್ಲಿ ತಾಲೂಕು ಪರಿಶಿಷ್ಠ ವರ್ಗಗಳ ಕಲ್ಯಾಣಾಧಿಕಾರಿ ರುಕ್ಮಿಣಿ ಬಾಯಿ ಅವರು ಮಾತನಾಡಿ, ರಾಯಚೂರು ಜಿಲ್ಲೆಯಲ್ಲಿ ಕಂಪ್ಯೂಟರ್ ಹಾರ್ಡವೇರ್ ಮತ್ತು ನೆಟ್ ವರ್ಕಿಂಗ್‌ನಿಂದ ಸ್ವಯಂ ಉದ್ಯಮಗಳನ್ನು ಪ್ರಾರಂಭಿಸಲು ಸರ್ಕಾರದ ಅನೇಕ ಯೋಜನೆಗಳ ಸದುಪಯೋಗ ಮಾಡಿಕೊಳ್ಳಬೇಕೆಂದು ತಿಳಿಸಿ ಪರಿಶಿಷ್ಠ ವರ್ಗಗಳ ಇಲಾಖೆಯ ಯೋಜನೆಗಳ ಬಗ್ಗೆ ಸಮಾರಂಭದಲ್ಲಿ ವಿವರಿಸಿದರು.
ಈ ವೇಳೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಶುಪಾಲರರಾದ ಯಂಕಣ್ಣ ಅವರು ಮಾತನಾಡಿ, ಸ್ವಯಂ ಉದ್ಯಮಗಳನ್ನು ಪ್ರಾರಂಭಿಸಿ ಉದ್ಯಮಗಳನ್ನು ಸ್ವಯಂ ಉದ್ಯೋಗಿಗಳಾಗುವದರ ಜೊತೆಗೆ ಬೇರೆಯವರಿಗೂ ಕೆಲಸಕೊಡುವ ಸಾಮರ್ಥ್ಯ ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.
ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕರಾದ ಡಾ.ರವಿ., ಶಿಭಿರಾರ್ಥಿಗಳಿಗೆ ಪೇರೇಪಿಸುತ್ತಾ ಸಿಕ್ಕಿರುವಂತ ಅವಕಾಶಗಳನ್ನು ಸರಿಯಾದ ಮಾರ್ಗದಲ್ಲಿ ಉಪಯೋಗಿಸಿಕೊಂಡು ಮುಂದಿನ ದಿನದಲ್ಲಿ ಉದಯೋನ್ಮುಖ ಉದಮಶೀಲಾರಾಗಬೇಕು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಸಂಪನ್ಮೂಲವ್ಯಕ್ತಿಗಳಾದ ಆರ್.ವಿಕಾಂತನವರ್, ಬೇತುದಾರರಾದ ಶ್ರೀಸೈಯದ್, ಪೈಯಾಝ ಅಲಿ, ನಾಗರಾಜ ಕೆ, ಶಿವಕುಮಾರ ಸೇರಿದಂತೆ ಇತರರು ಇದ್ದರು.

About Mallikarjun

Check Also

ಸೆ. 2 ಮತ್ತು 3 ರಂದು ವಿವಿಧ ಇಲಾಖೆಗಳ ಗ್ರೂಪ್ ಸಿ ಹುದ್ದೆಗಳ ಪರೀಕ್ಷೆ: ನಿಷೇಧಾಜ್ಞೆ ಜಾರಿ

Exams for Group C posts of various departments on Sept. 2 and 3: Prohibitory order …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.