Achievements are possible through persistent efforts of students: Nekkanti Suribabu

ಗಂಗಾವತಿ: ಫೆಬ್ರವರಿ-೭ ಶುಕ್ರವಾರ ಬೆಳಗ್ಗೆ ೧೧ ಗಂಟೆಗೆ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜ್ ಗಂಗಾವತಿಯಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬಿಳ್ಕೋಡುಗೆ ಸಮಾರಂಭ ಏರ್ಪಡಿಸಲಾಗಿತ್ತು.
ಈ ಕಾರ್ಯಕ್ರಮ ಉದ್ಘಾಟನೆ ಮಾಡಿ, ಉದ್ಘಾಟನಾ ಭಾಷಣ ಮಾಡಿದ ವಿದ್ಯಾನಿಕೇತನ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ನೆಕ್ಕಂಟಿ ಸೂರಿಬಾಬುರವರು ವಿದ್ಯಾರ್ಥಿಗಳಿಗೆ ಜೀವನದಲ್ಲಿ ಯಶಸ್ಸನ್ನು ಕಾಣಲು ಅನುಸರಿಸಬೇಕಾದ ಕ್ರಮಗಳ ಕುರಿತು ಮಾತನಾಡುತ್ತಾ ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸವೇ ಅಸ್ತç, ವಿದ್ಯಾರ್ಥಿಗಳು ಜೀವನದಲ್ಲಿ ನಿರ್ದಿಷ್ಟ ಗುರಿಯೊಂದಿಗೆ ಅಧ್ಯಯನ ಮಾಡಬೇಕು. ಗೆದ್ದೇ ಗೆಲ್ಲುವೆ ಎನ್ನುವ ಆತ್ಮ ವಿಶ್ವಾಸದೊಂದಿಗೆ ಮುನ್ನುಗ್ಗಬೇಕು. ನಾವು ಓದಲು ಬಂದಿದ್ದೇನೆ ಓದಬೇಕು ಎನ್ನುವ ಪ್ರಜ್ಞೆಯೊಂದಿಗೆ ನಿರಂತರ ಅಧ್ಯಯನ ನಡೆಸಿದಲ್ಲಿ ಯಶಸ್ಸಿನ ದಾರಿ ಸುಗಮವಾಗಲಿದೆ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಜೊತೆಗೆ ಜೀವನ ನಡೆಸಲು ಸ್ವ ಸಹಾಯಕ್ಕೆ ಅಗತ್ಯವಿರುವ ಕೌಶಲ್ಯಗಳನ್ನು ಕಲಿಯುವ ಮೂಲಕ ಸ್ವಾವಲಂಬಿ ಬದುಕನ್ನು ಕಟ್ಟಿಕೊಳ್ಳಬೇಕು. ಪ್ರತಿಯೊಂದು ಕೆಲಸಕ್ಕೆ ತನ್ನದೇ ಆದ ಗೌರವವಿದೆ, ಮಾಡುವ ಕಾರ್ಯಗಳಲ್ಲಿ ಶ್ರೇಷ್ಠ, ಕನಿಷ್ಠ, ಭಾವನೆಗಳನ್ನು ಇಟ್ಟುಕೊಳ್ಳಬಾರದು, ಸರ್ಕಾರಿ ಸಂಸ್ಥೆಗಳಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳ ಪಾಲಕರು ಮಾತ್ರ ಆರ್ಥಿಕವಾಗಿ ಬಡವರೇ ಹೊರತು ವಿದ್ಯಾರ್ಥಿಗಳು ಅಲ್ಲ. ಬಡವರು ಅಥವಾ ಶ್ರೀಮಂತರಾಗುವುದು ನಿಮ್ಮ ಕೈಯಲ್ಲಿದೆ ಎಂದು ನುಡಿದರು. ಈ ಸಂದರ್ಭದಲ್ಲಿ ಮುಂದಿನ ಶೈಕ್ಷಣಿಕ ವರ್ಷ ಸಂಸ್ಥೆಯಲ್ಲಿ ಆರಂಭಿಸಲು ಉದ್ದೇಶಿಸಿರುವ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರಕ್ಕೆ ಉತ್ತಮ ಗುಣಮಟ್ಟದ ೧೦೦ ಚೇರ್‌ಗಳನ್ನು ವಿದ್ಯಾನಿಕೇತನ ಸಂಸ್ಥೆಯಿAದ ನೀಡಲಾಗುವುದು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ನುಡಿಗಳನ್ನು ಉಪನ್ಯಾಸಕರಾದ ಡಾ. ಲಿಂಗಣ್ಣ ಜಂಗಮರಹಳ್ಳಿ ನೆರವೇರಿಸಿದರು. ಸ್ವಾಗತವನ್ನು ಈಶ್ವರಪ್ಪ ನಡೆಸಿಕೊಟ್ಟರು. ಇದೇ ಸಂದರ್ಭದಲ್ಲಿ ಸಂಸ್ಥೆಯಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ ಮದ್ಯದಲ್ಲಿ ಬಿಡುಗಡೆಯಾದವರಿಗೆ ಸನ್ಮಾನ ಮಾಡಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಚಾರ್ಯರಾದ ಬಸಪ್ಪ ನಾಗೋಲಿ ವಹಿಸಿಕೊಂಡಿದ್ದರು. ವೇದಿಕೆಯಲ್ಲಿ ಉಪನ್ಯಾಸಕರಾದ ಸೋಮಶೇಖರ್ ಗೌಡ, ಅಜಗರ ಪಾಶ, ಸಾವಿತ್ರಿ, ಲಕ್ಷ್ಮಿ ಜೆ. ರಮಾ, ಲಲಿತಾ ಕಂದಗಲ್, ನಾಗಪ್ಪ ಎಂ., ಚಿದಾನಂದ ಮೇಟಿ, ಶ್ರೀದೇವಿ, ರುದ್ರೇಶ್ ತಬಾಲಿ, ಹಾಗೂ ಅತಿಥಿ ಉಪನ್ಯಾಸಕರಾದ ಶ್ರೀಮತಿ ಕನಕಮ್ಮ, ಡಾ. ರವಿಚಂದ್ರ, ನಿರುಪಾದಿ ಉಪಸ್ಥಿತರಿದ್ದರು.
ಕುಮಾರಸ್ವಾಮಿ ಕಾರ್ಯಕ್ರಮದ ನಿರೂಪಣೆ ಮಾಡಿದರೆ, ಮಹೇಶ್ ವಂದನಾರ್ಪಣೆ ಮಾಡಿದರು.