Breaking News

ವಿಶ್ವವಿದ್ಯಾಲಯಗಳನ್ನು ಮುಚ್ಚುವ ತೀರ್ಮಾನ ದುರದೃಷ್ಟಕರ: ಬಿಜೆಪಿ ಮುಖಂಡ ಹೆಚ್.ಎಂ. ಸಿದ್ದರಾಮಸ್ವಾಮಿ ಆಕ್ರೋಶ

Decision to close universities unfortunate: BJP leader H.M. Siddaramaswamy outraged

ಜಾಹೀರಾತು

ಗಂಗಾವತಿ: ರಾಜ್ಯಸರ್ಕಾರದಲ್ಲಿ ಇತ್ತೀಚೆಗೆ ನಡೆದ ಸಚಿವಸಂಪುಟದ ಉಪಸಮಿತಿಯು ಕೊಪ್ಪಳ ವಿಶ್ವವಿದ್ಯಾಲಯವನ್ನು ಒಳಗೊಂಡAತೆ ರಾಜ್ಯದಲ್ಲಿ ಒಂಭತ್ತು ವಿಶ್ವವಿದ್ಯಾಲಯಗಳನ್ನು ಮುಚ್ಚಲು ತೀರ್ಮಾನ ತೆಗೆದುಕೊಂಡಿರುವುದು ದುರದೃಷ್ಟ ಸಂಗತಿ ಎಂದು ಭಾರತೀಯ ಜನತಾ ಪಕ್ಷದ ಹಿರಿಯ ಮುಖಂಡರು ಮತ್ತು ಎಂ.ಎಸ್.ಎA.ಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಅಧ್ಯಕ್ಷರಾದ ಹೆಚ್.ಎಂ. ಸಿದ್ರಾಮಸ್ವಾಮಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಸುದ್ದಿದಾರರೊಂದಿಗೆ ಮಾತನಾಡಿದ ಅವರು ಈಗಾಗಲೇ ಜಿಲ್ಲೆಯಲ್ಲಿ ೧೫೦ಕ್ಕೂ ಹೆಚ್ಚು ಪದವಿ ಶಿಕ್ಷಣ ಕಾಲೇಜುಗಳು ಇದ್ದು, ನಮ್ಮ ಬಿಜೆಪಿ ಸರ್ಕಾರದ ಆಡಳಿತಾವಧಿಯಲ್ಲಿ ಉನ್ನತ ಶಿಕ್ಷಣಕ್ಕಾಗಿ ಗ್ರಾಮೀಣ ಭಾಗಕ್ಕೂ ವಿಶ್ವವಿದ್ಯಾಲಯವನ್ನು ಸ್ಥಾಪನೆ ಮಾಡುವ ಮೂಲಕ ಐತಿಹಾಸಿಕ ತೀರ್ಮಾನವನ್ನು ತೆಗೆದುಕೊಂಡಿತ್ತು. ನೂತನ ವಿಶ್ವವಿದ್ಯಾಲಯಗಳಿಗೆ ರಾಜ್ಯ ಸರ್ಕಾರ ಆರ್ಥಿಕ ಸಹಾಯ ಮಾಡಿ ವಿಶ್ವವಿದ್ಯಾಲಯಗಳನ್ನು ಬೆಳೆಸಲು ಉತ್ತೇಜಿಸುವ ಬದಲು, ಕುಂಟು ನೆಪವೊಡ್ಡಿ ರಾಜ್ಯದ ಒಂಭತ್ತು ವಿಶ್ವವಿದ್ಯಾಲಯಗಳನ್ನು ಮತ್ತು ಅದರಲ್ಲಿ ವಿಶೇಷವಾಗಿ ಕೊಪ್ಪಳ ಜಿಲ್ಲಾ ವಿಶ್ವವಿದ್ಯಾಲಯವನ್ನು ಮುಚ್ಚಲು ತೀರ್ಮಾನ ತೆಗೆದುಕೊಂಡಿರುವುದು ಎಷ್ಟರ ಮಟ್ಟಿಗೆ ಸರಿ? ಮತ್ತು ಯಾವ ಪುರುಷಾರ್ಥಕ್ಕಾಗಿ ವಿಶ್ವವಿದ್ಯಾಲಯಗಳನ್ನು ಸರ್ಕಾರ ಮುಚ್ಚುತ್ತದೆ ಎಂದು ಸ್ಪಷ್ಟಪಡಿಸಬೇಕೆಂದು ಅವರು ಸರಕಾರಕ್ಕೆ ಆಗ್ರಹಿಸಿದ್ದಾರೆ. ಕೊಪ್ಪಳ ವಿಶ್ವವಿದ್ಯಾಲಯ ಈಗ ತಾನೇ ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿದೆ. ೪೦ಕ್ಕೂ ಹೆಚ್ಚು ಕಾಲೇಜುಗಳನ್ನು ಹೊಂದಿರುವ ಮತ್ತು ೫೦೦೦ಕ್ಕೂ ಹೆಚ್ಚು ವಿದ್ಯಾರ್ಥಿಗಳ ಪೈಕಿ ರೈತರ ಮಕ್ಕಳು, ದೀನ ದಲಿತರ ಮಕ್ಕಳು, ಬಡ ವಿದ್ಯಾರ್ಥಿಗಳಿರುವ ಕೊಪ್ಪಳ ವಿಶ್ವವಿದ್ಯಾಲಯ ಬೆಳೆಯುವ ಹಂತದಲ್ಲಿದೆ. ಇಂತಹ ವೇಳೆಯಲ್ಲಿ ವಿಶ್ವವಿದ್ಯಾಲಯವನ್ನು ಮುಚ್ಚುವ ತೀರ್ಮಾನ ತೆಗೆದುಕೊಂಡಿರುವುದು ಅಭಿವೃದ್ಧಿಗೆ ಹಿನ್ನಡೆಯಾಗಿದೆ ಎಂದು ಹೇಳಿದರು. ರಾಜ್ಯ ಸರ್ಕಾರದಲ್ಲಿ ಹಣಕಾಸಿನ ವ್ಯವಸ್ಥೆ ಸರಿ ಇಲ್ಲ ಅನ್ನುವುದಕ್ಕೆ ಇದು ಇದೊಂದು ನಿದರ್ಶನ. ನೂತನ ಕೊಪ್ಪಳ ವಿಶ್ವವಿದ್ಯಾಲಯಕ್ಕೆ ಜಾಗದ ವ್ಯವಸ್ಥೆಯನ್ನು ಮಾಡಿ, ಆರ್ಥಿಕವಾಗಿ ಸಹಾಯ ಮಾಡಬೇಕಾಗಿದ್ದ ಸ್ಥಳಿಯ ಜನಪ್ರತಿನಿಧಿಗಳು ನಿರ್ಲಕ್ಷö್ಯವಹಿಸಿದ್ದು ಕೆಟ್ಟ ರಾಜಕಾರಣದ ದುರಂತದ ಸಂಗತಿ ಎಂದು ಅವರು ಕಿಡಿಕಾರಿದ್ದಾರೆ.
ಈ ಜಿಲ್ಲೆಯ ಅಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ರಾಜ್ಯದ ಆರ್ಥಿಕ ಸಲಹೆಗಾರರು ಎಲ್ಲರೂ ಒಗ್ಗಟ್ಟಾಗಿ ಸೇರಿಕೊಂಡು ಇಲ್ಲಿಯ ವಿಶ್ವವಿದ್ಯಾಲಯವನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಮತ್ತು ಅವಶ್ಯಕತೆ ಇದೆ ಎಂದು ಈ ಭಾಗದ ಶಿಕ್ಷಣ ಸಂಸ್ಥೆಗಳು, ವಿದ್ಯಾರ್ಥಿಗಳು, ಪ್ರಜ್ಞಾವಂತರು, ಸಾಹಿತಿಗಳು, ಅಭಿಮಾನಿ ಕನ್ನಡ ಅಭಿಮಾನಿಗಳು ಆಸೆ ಪಟ್ಟಿದ್ದಾರೆ. ಹಾಗೆಯೇ ಜಿಲ್ಲಾ ಉಸ್ತುವಾರಿ ಸಚಿವರೇ ಇದಕ್ಕೆ ಪರಿಹಾರ ಕೊಡಿ. ಉತ್ತರ ಸಿಗದಿದ್ದರೆ ಹೋರಾಟ ಅನಿವಾರ್ಯ. ಕೊಪ್ಪಳ ವಿಶ್ವವಿದ್ಯಾಲಯ ಉಳಿಸಿಕೊಳ್ಳುವುದೇ ನಮ್ಮ ಜಿಲ್ಲೆಯ ಜನತೆಯ ಮತ್ತು ನಮ್ಮೆಲ್ಲರ ಗುರಿ ಎಂದು ಬಿಜೆಪಿಯ ಹಿರಿಯ ಮುಖಂಡ ಮತ್ತು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಹೆಚ್.ಎಂ. ಸಿದ್ರಾಮಸ್ವಾಮಿ ಸರ್ಕಾರದ ವಿರುದ್ಧ ಗುಡುಗಿದ್ದಾರೆ.

About Mallikarjun

Check Also

ಕುಷ್ಟಗಿ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ: ನೋಂದಣಿಗೆ ಸೂಚನೆ

Kushtagi Taluk Level Dasara Games: Notice for registration ಕೊಪ್ಪಳ ಆಗಸ್ಟ್ 29 (ಕರ್ನಾಟಕ ವಾರ್ತೆ): 2025-26ನೇ ಸಾಲಿನ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.