Breaking News

ಬಜೆಟ್ ನಲ್ಲಿ ಕೈದಾಳ ಸಮಗ್ರ ಅಭಿವೃದ್ಧಿಗೆ ಪ್ಯಾಕೇಜ್ ಘೋಷಿಸುವಂತೆ ಗೃಹ ಸಚಿವರಿಗೆ ಮನವಿ

Request to the Home Minister to announce a package for the comprehensive development of Kaidala in the budget

ಜಾಹೀರಾತು


ಬೆಂಗಳೂರು, ಫೆ,25; ತುಮಕೂರು ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಕೈದಾಳದಲ್ಲಿ ಅಮರಶಿಲ್ಪಿ ಜಕಣಾಚಾರಿ ಸ್ಮಾರಕ ಶಿಲ್ಪಕಲಾ ತರಬೇತಿ ಕೇಂದ್ರ ಹಾಗೂ ಹಿರಿಯ ಚಿತ್ರ ಕಲಾ ಶಿಕ್ಷಕ ಡಾ. ಎಚ್. ಎಂ. ಗಂಗಾಧರಯ್ಯ ಆರ್ಟ್ ಥೀಮ್ ಪಾರ್ಕ್ ಸ್ಥಾಪಿಸುವುದು ಸೇರಿದಂತೆ ಕೈದಾಳವನ್ನು ಸಮಗ್ರ ಪ್ರವಾಸಿ ತಾಣವಾಗಿ ಅಭಿವೃದ್ಧಿ ಪಡಿಸಲು 2025 – 26ನೇ ಸಾಲಿನ ಬಜೆಟ್ ನಲ್ಲಿ ಪ್ಯಾಕೇಜ್ ಘೋಷಿಸುವಂತೆ ವಿಶ್ವಕರ್ಮ ಸಮುದಾಯ ಸಂಘಟನೆಗಳ ಪ್ರತಿನಿಧಿಗಳು ಗೃಹ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ.ಪರಮೇಶ್ವರ ಅವರಿಗೆ ಮನವಿ ಸಲ್ಲಿಸಿದರು.
ರಾಜ್ಯಮಟ್ಟದ ಶ್ರೀ ವಿಶ್ವಕರ್ಮ ಸೇವಾ ಪ್ರತಿಷ್ಠಾನದ ಕಾರ್ಯಾಧ್ಯಕ್ಷರಾದ ಸಹಕಾರ ರತ್ನ ಡಾ. ಬಿ. ಎಂ. ಉಮೇಶ್ ಕುಮಾರ್ ನೇತೃತ್ವದಲ್ಲಿ ಈ ಮನವಿ ಸಲ್ಲಿಸಲಾಯಿತು.
ಈ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಗೃಹ ಸಚಿವರು, ಈ ಸಂಬಂಧ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು, ಬಜೆಟ್ಟಿನಲ್ಲಿ ಸೇರ್ಪಡೆ ಗೊಳಿಸಲು ಕ್ರಮವಹಿಸುವುದಾಗಿ ತಿಳಿಸಿದರು.
ಈ ವೇಳೆ ವಿಶ್ವಕರ್ಮ ಒಕ್ಕೂಟದ ರಾಜ್ಯಾಧ್ಯಕ್ಷ ವಿಜಯಕುಮಾರ್ ಪತ್ತಾರ್, ಜಿಲ್ಲಾ ವಿಶ್ವಕರ್ಮ ಅಭಿವೃದ್ಧಿ ನಿಗಮದ ಜಿಲ್ಲಾ ನಿರ್ದೇಶಕ ಟಿ. ಸಿ. ಡಮರುಗೇಶ್, ಕಾಳಿಕಾಂಬ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಗೋವರ್ಧನ ಆಚಾರ್, ನಿರ್ದೇಶಕ ಎಸ್. ಹರೀಶ್ ಆಚಾರ್ಯ ಹಾಗೂ ಚಿನ್ನ ಬೆಳ್ಳಿ ಕೆಲಸಗಾರರ ಸಂಘದ ಅಧ್ಯಕ್ಷ ಟಿ. ಎ. ರವಿಕುಮಾರ್ ಮುಂತಾದವರು ಉಪಸ್ಥಿತರಿದ್ದರು.

About Mallikarjun

Check Also

ಕುಷ್ಟಗಿ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ: ನೋಂದಣಿಗೆ ಸೂಚನೆ

Kushtagi Taluk Level Dasara Games: Notice for registration ಕೊಪ್ಪಳ ಆಗಸ್ಟ್ 29 (ಕರ್ನಾಟಕ ವಾರ್ತೆ): 2025-26ನೇ ಸಾಲಿನ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.